Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಪೊಲೀಸರು ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಮುಖಂಡನ ಮತ್ತೆ ಇಬ್ಬರು ಪುತ್ರರನ್ನ ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. (26) ಹಾಗೂ ಹಮ್ಝ (24) ಎನ್ನುವವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಜನವರಿ 31ರಂದು ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಾಯತ್ರಿ ಹಾಗೂ ಕಾನ್ಸ್ಟೇಬಲ್ಗಳಾದ ಹರೀಶ್ ಮತ್ತು ಕೆಂಚಪ್ಪ ಮೇಲೆ ಹಲ್ಲೆ ಮಾಡಿದ್ದರು ಪೊಲೀಸರ ಮೇಲೆ ಹಲ್ಲೆ ಮಾಡಿ ತಲೆಮರಿಸಿಕೊಂಡಿದ್ದರು ಇದೀಗ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು , ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಚಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ಬಳಿ ನಡೆದಿದೆ. ಮೃತ ಚಾಲಕನನ್ನು ಬೆಂಗಳೂರು ಮೂಲದ ಚಾಲಕ ನಿಸ್ಸಾರ್ (52) ಈ ಒಂದು ಅಪಘಾತದಲ್ಲಿ ಸಾವನಪ್ಪಿದ್ದಾನೆ. ಡಿಕ್ಕಿ ಹೊಡೆದ ರಬ್ಬಸಕ್ಕೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ ಪಾನ್ ಮಸಾಲ ಹಾಗೂ ತಂಬಾಕು ಜಾಹೀರಾತುಗಳನ್ನು ಪ್ರಕಟಿಸದಂತೆ ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಗುಟ್ಕಾ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳ ಕುರಿತು ರಾಜ್ಯ ಸರ್ಕಾರದ ಸಾರಿಗೆ ಬಸ್ಗಳಲ್ಲಿ ಸ್ಟಿಕರ್ ಅಂಟಿಸಿ ಜಾಹೀರಾತು ಪ್ರಚಾರ ಕೈಗೊಳ್ಳಲಾಗಿತ್ತು. ಇದೀಗ ಸಚಿವ ರಾಮಲಿಂಗ ರೆಡ್ಡಿ ಅವರು ರಾಜ್ಯದ ಸರ್ಕಾರಿ ಬಸವನ ಮೇಲೆ ಗುಟ್ಕಾ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರಕಟಿಸಿದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಿಶೋರ್ ಸಾಳ್ವೆ ಎಸ್ಐಟಿ ಕಸ್ಟಡಿ ಇಂದಿಗೆ ಮುಕ್ತಾಯ ಆಗಲಿದೆ. ಇಂದಿನವರೆಗೂ ಕಿಶೋರ ಸಾಳ್ವೆಯನ್ನು ಕೋರ್ಟ್ ಎಸ್ಐಟಿ ಕಸ್ಟಡಿಗೆ ನೀಡಿತ್ತು. ಅಧಿಕಾರಿಗಳು ಕಿಶೋರ್ ಸಾಳ್ವೆ ಬಂಧಿಸಿ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಸಂದೀಪ್ ಪಾಟೀಲ್ ದೂರು ಆಧರಿಸಿ ಎಸ್ಐಟಿ ಅಧಿಕಾರಿಗಳು ಇದೀಗ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದುವರೆಗೂ ಪ್ರಕರಣದಲ್ಲಿ 8 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಜನವರಿ 31 ಶನಿವಾರ ಸಂಜೆ ಪ್ರಮುಖ ಆರೋಪಿ ಕಿಶೋರ್ನನ್ನು sit ಅಧಿಕಾರಿಗಳು ಅರೆಸ್ಟ್ ಮಾಡಿದರು. ನಾಸಿಕ್ ತಾಲೂಕಿನ ಗೋಟಿ ಠಾಣೆಗೆ ಹೋಗಿ ಕಿಶೋರ್ ಶರಣಾಗಿದ್ದ. ಬಳಿಕ ಆತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆಗಾಗಿ SIT ಅಧಿಕಾರಿಗಳು ಆತನನ್ನು ಕಸ್ಟಡಿಗೆ ಪಡೆದಿದ್ದರು. ಮತ್ತೋರ್ವ ಆರೋಪಿ ಮಚೆಂದ್ರ ಕೂಡ ಎಸ್ಐಟಿ ಅಧಿಕಾರಿಗಳ ವಶದಲ್ಲಿದ್ದಾನೆ. ಇನ್ನು ಕಿಶೋರ್ ಮ್ಯಾನೇಜರ್ ವಿರಾಟ್ ಗಾಂಧಿ ನ್ಯಾಯಂಗ ಬಂಧನದಲ್ಲಿ ಇದ್ದಾನೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಆ‌ರ್.ಆ‌ರ್ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಾಲಕ ಖಾಸಗಿ ಶಾಲೆಯಲ್ಲಿ 10 ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿ ಸಿದ್ದ ಬಾಲಕನನ್ನು ಆತನ ಸ್ನೇಹಿತ ವಿಷ್ಣು ವರ್ಧನ್ ಸಮಾಧಿ ರಸ್ತೆಯಲ್ಲಿರುವ ಅಪಾಟ್೯ಮೆಂಟ್‌ವರೆಗೂ ಬಿಟ್ಟು ಹೋಗಿದ್ದ. ಆದರೆ ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್‌ ಮಹಡಿಯಿಂದ ಹೀಗಾಗಿ 7ನೇ ಹಾರಿ ಮೃತಪಟ್ಟಿದ್ದ. ಜಿಜೆ-ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು: ತನಿಖೆ ವೇಳೆ ಬಾಲಕ ಪಬ್‌ನಲ್ಲಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ…

Read More

ಬೆಂಗಳೂರು : ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿರುವ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೇರಿದಂತೆ 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್‌, ಅರ್ಜಿದಾರನಿಗೆ 10 ಲಕ್ಷ ರು. ದಂಡ ಹಾಕುವುದಾಗಿ ಎಚ್ಚರಿಸಿತು. ನೇಲೋಗಿಯ ‘ಭ್ರಷ್ಟಾಚಾರ ವಿರೋಧ ಪಕ್ಷ’ದ ರಾಷ್ಟ್ರೀಯ ಅಧ್ಯಕ್ಷ ಕಲ್ಲಾಲಿಂಗ ಈ. ಹೂಗಾರ ಎಂಬುವರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಈ ಅರ್ಜಿಯಲ್ಲಿ ಮೆರಿಟ್ ಇಲ್ಲದಿರುವುದರಿಂದ ವಜಾಗೊಳಿಸಲಾಗುತ್ತಿದೆ. ಅರ್ಜಿ ದಾರರಿಗೆ 10 ಲಕ್ಷರು. ದಂಡ ವಿಧಿಸಬೇಕಿತ್ತು. ಆದರೆ, ಅರ್ಜಿದಾರ ಕೆಪಿಟಿಸಿಎಲ್ ನಿಂದ(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ವಜಾಗೊಂಡ ನೌಕರನಾಗಿದ್ದಾನೆ. ಆದ ಕಾರಣ ದಂಡ ಹಾಕದೆ ಸುಮ್ಮನೇ ಬಿಡುತ್ತಿದ್ದೇನೆ ಎಂದು ಎಚ್ಚರಿಸಿದರು. ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊ ಳ್ಳುವ ಮೂಲಕ ಸಂವಿಧಾನ ಅವಮಾನಿಸಿರುವ ಮತ್ತು ಭ್ರಷ್ಟಾಚಾ ರದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರ ಕಳೆದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರನ್ನು ಗಡೀಪಾರು ಮಾಡಿದೆ. ಇಡೀ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಜನರನ್ನು ಗುರುತಿಸಿ ಗಡೀಪಾರು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಾಂಗ್ಲಾದವರು ಇಡೀ ದೇಶದಲ್ಲಿ ಇದ್ದಾರೆ. ಅವರು ಎಲ್ಲಿಂದ‌ ಬರುತ್ತಾರೆ?, ಅವರು ಬರದಂತೆ ಬಿಎಸ್​​ಎಫ್ ತಡೆಯಬೇಕು. ಅವರು ಕೇವಲ ಕರ್ನಾಟಕಕ್ಕೆ ಮಾತ್ರ ಬರುವುದಿಲ್ಲ. ದೇಶದಾದ್ಯಂತ ಬೇರೆ ಬೇರೆ ಕಡೆ ಹೋಗಿ ವಾಸವಾಗಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಬಾಂಗ್ಲಾದವರು ಬಂದಿದ್ದಾರೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. 2021ರಲ್ಲಿ 15 ಜನರನ್ನು ಗಡೀಪಾರು ಮಾಡಲಾಗಿದೆ. 2022ರಲ್ಲಿ 21 ಅಕ್ರಮ ಬಾಂಗ್ಲಾದವರನ್ನು ಗಡೀಪಾರು ಮಾಡಲಾಗಿದೆ ಎಂದರು. ನಮ್ಮ ಸರ್ಕಾರ ಬಂದ ಬಳಿಕ 2023ರಲ್ಲಿ 47 ಜನ, 2024ರಲ್ಲಿ 64 ಜನ, 2025ರಲ್ಲಿ 87 ಜನ ಸೇರಿ ಒಟ್ಟು 196 ಜನರನ್ನು ಗಡೀಪಾರು ಮಾಡಿದ್ದೇವೆ. ಇನ್ನು…

Read More

ಬೆಂಗಳೂರು : ಸರ್ಕಾರ, ಸಚಿವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ವಿಚಾರವಾಗಿ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೆಂದಲೇ ಭ್ರಷ್ಟಾಚಾರದ ಡಿಲ್ ನಡೆಸಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಭ್ರಷ್ಟಾಚಾರದ ಡೀಲ್ ಗೆ ಸಂಬಂಧಿಸಿದ ಆಡಿಯೋ ಈಗ ವೈರಲಾಗಿದ್ದು, ಆಡಿಯೋದಲ್ಲಿ ಗುತ್ತಿಗೆದಾರರ ಸಂಘದ ಪದಾಧಿಕಾರಿಯ ಡೀಲ್ ಕುರಿತು ಮಾಹಿತಿ ಇದೆ. ಗುತ್ತಿಗೆದಾರರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸಂಘದ ಪದಾಧಿಕಾರಿಗಳು ಅಂತ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಗುತ್ತಿಗೆದಾರರ ಸಂಘದ ಬಗ್ಗೆಯೇ ಅನುಮಾನ ಶುರುವಾಗಿದೆ. ಬಡ ಗುತ್ತಿಗೆದಾರರಿಂದ ಕಮಿಷನ್ ಗೌರವಾಧ್ಯಕ್ಷ ಮತ್ತು ನಿರ್ದೇಶಕ ಸರ್ಕಾರಿ ಯೋಜನೆಗಳ ಕಾಮಗಾರಿಗೆ ಬಿಡ್ ಮಾಡುವ ಗುತ್ತಿಗೆದಾರರ ಜೊತೆಗೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮತ್ತು ಸಂಘಟನೆಗಳಿಂದಲೂ ಬಿಡ್ ಮಾಡಲಾಗಿದ್ದು ಲೋಕೋಪಯೋಗಿ, ಇಂಧನ ಇಲಾಖೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಇಲ್ಲ ಇಲಾಖೆಗಳ ಟೆಂಡರ್ ನಲ್ಲಿ ಭಾರಿ ಗೋಲ್ಮಾಲ್ ನಡೆದಿದೆ. ಬಿಡ್…

Read More

ಬೆಂಗಳೂರು : ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿದೆ.ರಾಜ್ಯದ ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ನಿರ್ದೇಶನದ ಪ್ರಕಾರ, ಶಾಲೆಗಳು ಈಗ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:45 ರವರೆಗೆ ಕಾರ್ಯನಿರ್ವಹಿಸುತ್ತವೆ. ಇದು ರಂಜಾನ್ ಆರಂಭದಿಂದ ಮಾರ್ಚ್ 20 ರವರೆಗೆ ಜಾರಿಯಲ್ಲಿರುತ್ತದೆ ಎನ್ನಲಾಗಿದೆ. 2002ರಲ್ಲಿ ಹೊರಡಿಸಲಾದ ಹಿಂದಿನ ಸರ್ಕಾರಿ ಆದೇಶವನ್ನು ಪರಿಶೀಲಿಸಿದ ನಂತರ ಮತ್ತು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಾತಿನಿಧ್ಯಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನಿಗದಿತ ಪಠ್ಯಕ್ರಮ ಪೂರ್ಣಗೊಳಿಸಲು ಇತರ ಕೆಲಸದ ದಿನಗಳು ಅಥವಾ ರಜಾದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ ಎಂದು…

Read More

ಬೆಂಗಳೂರು : ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಲೂ ಅರ್ಜಿ ಸಲ್ಲಿಸಿದವರಿಗೆ ಹಣ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ವಿಧಾನ ಪರಿಷತ್‌ ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು. ಬಿಜೆಪಿಯ ಪಿ.ಎಚ್.ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲ ವೊಂದುವ್ಯವಹಾರನಡೆಸುವಾಗಜಿಎಸ್‌ಟಿ, ಆದಾಯತೆರಿಗೆವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ…

Read More