Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ ಆ ಮೂಲಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು ಒಂದು ವೇಳೆ ತನಿಖೆಯಲ್ಲಿ ತಪ್ಪು ಕೊಂಡು ಬಂದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ. ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ನಗರದಲ್ಲಿ ಪ್ರತಿಕ್ರಿಯೆ ನೀಡಿದರು. ಆದರೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ಕಾನೂನು ಹೋರಾಟ ಮಾಡುತ್ತೇವೆ.ಮುಡಾ ಪ್ರಕರಣ ತನಿಖೆ ಸಮಗ್ರವಾಗಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬೆಂಗಳೂರಿನ ಯಲಹಂಕದಲ್ಲಿ ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆಗಾ ವ್ಯಾಟ್ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ ಕೊಡಬೇಕ? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ನಾನು ಫೈಟ್ ಮಾಡುತ್ತೇನೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಣೆ ನೀಡಿದರು. ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ.ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ತಿಳಿಸಿದರು. ನಾನು ಹೋರಾಟದ ಹಿನ್ನೆಲೆಯಿಂದ ಬಂದಿರುವಂತಹವನು.ಸುಳ್ಳು ಆರೋಪಗಳಿಗೆ…
ಬೆಂಗಳೂರು : ಬೆಂಗಳೂರಿನ ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಸಿಕ್ಕಿದ್ದು ಈ ಒಂದು ಕೊಲೆಯು ಕೇವಲ ಒಬ್ಬನಿಂದ ನಡೆದಿಲ್ಲ. ಇದರ ಹಿಂದೆ ಹಲವರ ಪಾತ್ರ ಇದೆ ಎಂದು ಪೊಲೀಸರ ಪರಿಶೀಲನೆ ವೇಳೆ ತಿಳಿದುಬಂದಿದೆ. ಹೌದು ವೈಯ್ಯಾಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಸುಮಾರು 50 ತುಂಡುಗಳಾಗಿ ಮೃತದೇಹವನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿ ಇರಿಸಲಾಗಿತ್ತು. ಕೊಲೆಯ ಹಿಂದೆ ಮಹಾಲಕ್ಷ್ಮಿ ಜೊತೆಗೆ ಸಲುಗೆಯಿಂದ ಇದ್ದ ಅಶ್ರಫ್ ನ ಮೇಲೆ ಶಂಕೆ ವ್ಯಕ್ತಪಡಿಸಲಾಗಿತ್ತು. ಆದರೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಬಹಿರಂಗವಾಗಿದೆ. ಮಹಾಲಕ್ಷ್ಮಿ ಕೊಲೆಯಾದ ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುವ ವೇಳೆ ಹಲವರ ಫಿಂಗರ್ ಪ್ರಿಂಟ್ ಇದೀಗ ಲಭ್ಯವಾಗಿದೆ. ಹಾಗಾಗಿ ಈ ಒಂದು ಕೊಲೆಯ ಹಿಂದೆ ಕೇವಲ ಒಬ್ಬ ವ್ಯಕ್ತಿಯದಲ್ಲದೆ ಹಲವು ವ್ಯಕ್ತಿಗಳ ಪಾತ್ರ ಇರುವುದು ತನಿಖೆಯ ವೇಳೆ ತಿಳಿದು ಬಂದಿದೆ.ಈಗಾಗಲೇ ಜಾರ್ಖಂಡ್ ಮೂಲದ ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರು…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆಅವರಲ್ಲಿರುವ ಅಪೌಷ್ಟಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು, ಆರೋಗ್ಯಕರ ದೈಹಿಕ, ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಲು, ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಶಾಲಾ ತರಗತಿ ದಾಖಲಾತಿಯನ್ನು ಹೆಚ್ಚಿಸಲು ಮಧ್ಯಾಹ್ನ ಬಿಸಿಯೂಟ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸಲಾಗುತ್ತಿದೆ. ಪೂರಕ ಪೌಷ್ಟಿಕ ಆಹಾರವಾಗಿ ಬಿಸಿಹಾಲು, ಮೊಟ್ಟೆ ಬಾಳೆಹಣು/ಶೇಂಗಾ ಚಿಕ್ಕಿಯನ್ನು ಹಾಗೂ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಜೀಂ ಪ್ರೇಮ್ ಜಿ ಪೌಂಡೇಶನ್ ರವರ…
ಬೆಂಗಳೂರು : ಬೆಂಗಳೂರಿನ IISC ಕ್ಯಾಂಪಸ್ ಹೊರಗೆ ಪ್ಯಾಲೇಸ್ಥಿನ ಧ್ವಜ ಪ್ರದರ್ಶನ ಮಾಡಲಾಗಿದೆ. PUCL ಸುದ್ದಿಗೋಷ್ಠಿಯ ವೇಳೆ ಧ್ವಜ ಪ್ರದರ್ಶನ ಮಾಡಲಾಯಿತು. PUCL (ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್) ಸಂಸ್ಥೆ ಸುದ್ದಿಗೋಷ್ಠಿ ನಡೆಸುತ್ತಿತ್ತು. ಈ ವೇಳೆ ಪ್ಯಾಲಿಸ್ಥಿನ್ ಧ್ವಜ ನೋಡುತ್ತಿದ್ದಂತೆ ಪೊಲೀಸರು ಸುದ್ದಿಗೋಷ್ಠಿಯನ್ನು ತಡೆದಿದ್ದಾರೆ. ಧ್ವಜವನ್ನು ವಶಕ್ಕೆ ಪಡೆದ ನಂತರ ಸುದ್ದಿಗೋಷ್ಠಿಗೆ ಅನುಮತಿ ನೀಡಿದ್ದಾರೆ. IISC ಕ್ಯಾಂಪಸ್ ನಲ್ಲಿ ನಿನ್ನೆ ಇಸ್ರೇಲ್ ಭಾರತ ವ್ಯಾಪಾರ ಶೃಂಗಸಭೆ ನಡೆಸಿತ್ತು. ಈ ಒಂದು ಸಭೆಗೆ PUCL ವಿದ್ಯಾರ್ಥಿ ಸಂಘಟನೆಯಿಂದ ವಿರೋಧ ವ್ಯಕ್ತಪಡಿಸಲಾಗಿತ್ತು. IISC ಕ್ಯಾಂಪಸ್ ಒಳಗೆ ಒಂದು ಕಡೆ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದರೆ. PUCL ಸಂಸ್ಥೆಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿತ್ತು.ಸುದ್ದಿಗೋಷ್ಠಿಯ ವೇಳೆ ಭಾರತ ಪ್ಯಾಲೆಸ್ಥಿನ್ ಬಾವುಟ ಒಟ್ಟಿಗೆ ಪ್ರದರ್ಶನ ಮಾಡಲಾಯಿತು. ಈ ವೇಳೆ ಪ್ಯಾಲೇಸ್ಥಿನ ಬಾವುಟ ಹಾರಿಸಿದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಪೊಲೀಸರು ಮತ್ತು ಸರ್ಕಾರದ ವಿರುದ್ಧ PUCL ಸದಸ್ಯರು ಕಿಡಿ ಕಾರಿದ್ದಾರೆ.
ಬೆಂಗಳೂರು :ಬೆಂಗಳೂರಿನ ಅಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿವೆ. ಹೌದು ಅ ಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದ್ದು, ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ. ಬಿ.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಖುದ್ದು ಪರಿಶೀಲನೆಗೆ ವಾರೆಂಟ್ ಹೊರಡಿಸಲಾಗಿತ್ತು. ಅದರಂತೆ ಸಂಜೆ ವೇಳೆ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿವೆ. ಯಶವಂತಪುರ, ಬ್ಯಾಟರಾಯನಪುರ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಗಳು ನಡೆದು ಜಗಳಗಳು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.ಇದೀಗ ಬೆಂಗಳೂರಿನ ಹನುಮಂತನಗರದಲ್ಲಿ ಕಾರ್ಮಿಕರ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕನ ಬರ್ಬರ ಕೊಲೆ ಮಾಡಲಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಅಜಿತ್ (30) ಎನ್ನುವ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ಅಜಿತ್ ನ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹನುಮಂತನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಕಲಬುರಗಿ : ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಮಾಜಿ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಒತ್ತಾಯಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುಖ್ಯಮಂತ್ರಿಗಳು ಕೂಡಲೇ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು.ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಗುಲ್ಬರ್ಗ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣಗಳನ್ನು ಖರೀದಿಸಿದ್ದು, 176.70 ಕೋಟಿ ಖರ್ಚು ಮಾಡಿದ್ದಾರೆ ಎಂದರು. ಟೆಂಡರ್ ಕರೆಯಲು ಕಂಪೆನಿ ಹೆಸರನ್ನು ಬದಲಿಸಿದ್ದು, ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವರು, ಈ ಹಗರಣದಲ್ಲಿ ಭಾಗವಹಿಸಿದ ಸುದ್ದಿ ಇದೆ. ಸರಕಾರವು ಶೇ 60 ಮತ್ತು ಸಂಬಂಧಿತ ಸಂಸ್ಥೆಯು ಆಂತರಿಕ ಸಂಪನ್ಮೂಲದಿಂದ ಶೇ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ SIT ಕಸ್ಟಡಿಗೆ ನೀಡಿ ಬೆಂಗಳೂರಿನ 42ನೇ ACMM ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮುನಿರತ್ನ ಅವರನ್ನು ಅಕ್ಟೋಬರ್ 5ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮುನಿರತ್ನ ಅವರು ಅಟ್ರಾಸಿಟಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಬಿಡುಗಡೆಯಾಗಿದ್ದರು. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲು ಪಾಲಾಗಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಮೇಲೆ ಜೈಲು ಸೇರಿದ ಬಳಿಕ ರಾಜ್ಯ ಸರ್ಕಾರ ಈ ಒಂದು ಪ್ರಕರಣದ ತನಿಖೆಗಾಗಿ ಎಸ್ಐಟಿ ತಂಡ ರಚನೆ ಮಾಡಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಎಸ್ಐಟಿ ಅಧಿಕಾರಿಗಳು, ತನಿಖೆ ಕೈಗೊಂಡಿದ್ದರು. ಇಂದು ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್ 5 ರವರೆಗೆ SIT ಕಸ್ಟಡಿಗೆ ನೀಡಿ ಕೋರ್ಟ್…
ಗದಗ : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಂಗಿಯನ್ನು ಅಣ್ಣನೊಬ್ಬ ಭೀಕರವಾಗಿ ಕೊಂದು ಠಾಣೆಗೆ ಬಂದು ಶರಣಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದ ಖುರ್ಷಿದಾ (35) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.ಮೃತ ಮಹಿಳೆ 14 ವರ್ಷದ ಹಿಂದೆ ಕಟಿಂಗ್ ಸಲೂನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ 2020 ರಲ್ಲಿ ಮೈಬೂಬ್ ಬೆಟಗೇರಿ ಎಂಬಾತನ ಜೊತೆ ಎರಡನೇ ಮದುವೆಯಾಗಿ ಜೀವನ ನಿರ್ವಹಣೆಗಾಗಿ ಅಣ್ಣನ 15 ಎಕರೆ ಜಮೀನಿನಲ್ಲಿ ಪಾಲು ಕೇಳಿದ್ದ ಖುರ್ಷಿದಾ, ಕೋರ್ಟ್ ಮೆಟ್ಟಿಲೇರಿದ್ದಳು. ಈ ಹಿನ್ನಲೆ ಇಂದು ಮನೆಗೆ ಬಂದು ಕೇಸ್ ವಾಪಸ್ ಪಡೆಯವಂತೆ ಅಣ್ಣ ಒತ್ತಾಯ ಮಾಡಿದ್ದಾನೆ. ಆದರೆ, ಅಣ್ಣನ ಮಾತು ಕೇಳದೆ ವಾಗ್ವಾದಕ್ಕಿಳಿದಿದ್ದ ತಂಗಿಯನ್ನು ಸಿಕ್ಕ ಸಿಕ್ಕಲ್ಲಿ ಮನಬಂದಂತೆ ಚಾಕು ಇರಿದು ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ತಾನೇ ಮುಂಡರಗಿ ಠಾಣೆಗೆ ಬಂದು ಶರಣಾಗಿದ್ದಾನೆ . ಸದ್ಯ ಸ್ಥಳಕ್ಕೆ ಗದಗ…