Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ ವಕೀಲರಾದ ಸುನಿಲ್ ಅವರು, ಅಚ್ಚರಿಯ ಹೇಳಿಕೆ ಒಂದನ್ನು ನೀಡಿದ್ದು ನಮಗೆ ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ನಟ ದರ್ಶನ್ ಭೇಟಿ ಬಳಿಕ ಮಾತನಾಡಿದ ವಕೀಲ ಸುನೀಲ್, ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 27ರಂದು ನಡೆಯಲಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಸಮಯ ತೆಗೆದುಕೊಂಡಿದ್ದಾರೆ. ಬೇಲ್ ಅರ್ಜಿ ರಿಜೆಕ್ಟ್ ಆದರೆ ಹೈಕೋರ್ಟ್ಗೆ ಹೋಗುತ್ತೇವೆ. ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ. ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದೆ. ನಮಗೆ ಕೆಲವೊಂದು ಡೌಟ್ಸ್ ಇತ್ತು, ಎಲ್ಲಾ ಕ್ಲಾರಿಫಿಕೇಷನ್ ತಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಹೊಸ ಮ್ಯಾನುವಲ್ ಪ್ರಕಾರ ಸೌಲಭ್ಯ ನೀಡಲು ಜೈಲಾಧಿಕಾರಿಗೆ ಮನವಿ ಮಾಡಲಾಗಿದೆ. ಹೊಸ ಮ್ಯಾನುವಲ್ ಪ್ರಕಾರ ಮೆಡಿಕಲ್ ಬೆಡ್ ಮತ್ತು ದಿಂಬು ಕೊಡಲು ಅವಕಾಶ ಇದೆ. ಎರಡು ದಿನದಲ್ಲಿ ಮೂಲ ಸೌಲಭ್ಯ ನೀಡದಿದ್ದರೆ ಮಾನವ ಹಕ್ಕುಗಳ ಆಯೋಗಕ್ಕೆ ದೂರು…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಸಿಕ್ಯೂಶನ್ ಗೆ ನೀಡಿದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಆರ್ ಅಶೋಕ್ ಹಾಗೂ ಬಿ ವೈ ವಿಜಯೇಂದ್ರ ಭಾವಚಿತ್ರ ಇರುವ ಪೋಸ್ಟರ್ ಸುಟ್ಟು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ರಾಜ್ಯದ ಹಲವು ಕಡೆಗಳಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಇದಕ್ಕೆ ಕೌಂಟರ್ ಎಂಬಂತೆ ಇದೀಗ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು, ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾವಚಿತ್ರ ಇರುವ ಪೋಸ್ಟರ್ ಸುಟ್ಟು ಹಾಕಿ ನಿಮಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಇದೆಯ ಎಂದು ಕಿಡಿ ಕಾರಿದ್ದಾರೆ. ಬಿಜೆಪಿ ಪ್ರತಿಭಟನೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ…
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ಹೈಕೋರ್ಟ್ ವಜಾಗೋಳಿಸಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ತೆರುಗೇಟು ನೀಡಿದ್ದು ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಹಲೋ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದರು. ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಬೆಂಗಳೂರಿನ ಗ್ರಾಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾಕೆ ಸಮಸ್ತಾನಕ್ಕೆ ರಾಜಿನಾಮೆ ಕೊಡಬೇಕು,? ರಾಜೀನಾಮೆಯ ಮಾತೆ ಬರುವುದಿಲ್ಲ ಎಂದು ಅವರು ತಿಳಿಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಜಾಮೀನುನ ಮೇಲೆ ಇಲ್ವಾ? ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ ಬೇಕಾದರೆ ಅವರನ್ನು ಕೇಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.ಸದ್ಯ ನಾನು ತೀರ್ಪು ಏನಿದೆ ಅಂತ ಓದಿಲ್ಲ. ತೀರ್ಪು ಓದಿದ ಬಳಿಕ ಮತ್ತಷ್ಟು ಈ ಕುರಿತು ಮಾತನಾಡುತ್ತೇನೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು 18ನೇ NFIRTW ರಾಷ್ಟ್ರೀಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು ಈ ಒಂದು ಸಮ್ಮೇಳನವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಸಮ್ಮೇಳನವನ್ನು ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸೈನಿಕರು ಮೃತಪಟ್ಟರೂ 60 ಲಕ್ಷ ಮಾತ್ರ ಸಿಗುತ್ತದೆ. ನಮ್ಮ ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿವಿಮೆ ಸಿಗುವಂತೆ ಮಾಡಿದ್ದೇವೆ. ಅಪಘಾತವಲ್ಲದ ಕಾರಣಕ್ಕೆ ಮೃತಪಟ್ಟರೆ ರೂ. 10 ಲಕ್ಷ . ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ನೌಕರರ ಹೃದಯ ತಪಾಸಣೆ, ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಾರಿಗೆ ನಿಗಮಗಳ ಬಸ್ಸುಗಳು ದಿನಕ್ಕೆ 1.65 ಲಕ್ಷ ಟ್ರಿಪ್ ಮಾಡುತ್ತವೆ. ವಿರೋಧ ಪಕ್ಷದವರು ಅಧಿಕಾರದಲ್ಲಿ ಇರುವಾಗ ಹೊಸ ಬಸ್ ಖರೀದಿ ಮಾಡಲಿಲ್ಲ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿಲ್ಲ ಎಂದು ಟೀಕಿಸಿದರು. ನಿಗಮದ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುವುದು. ಅಲ್ಲದೇ ವಾಣಿಜ್ಯ ಸಾರಿಗೆ ನಡೆಸುವ ಟ್ಯಾಕ್ಸಿ, ಆಟೊ ಸಹಿತ ಖಾಸಗಿ ವಾಹನಗಳ ನೌಕರರ ಬೇಡಿಕೆಗಳಿಗೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಈಗಲೂ ಹೇಳುತ್ತಿದ್ದೇನೆ ಈ ಒಂದು ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಆದೇಶ ಕೊಟ್ಟ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೀನಿ ಅಂತ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಯಾವುದೇ ತಪ್ಪು ಮಾಡಿಲ್ಲ ಎನ್ನುವ ಮೂಲಕ ಸ್ಪಷ್ಟನೆ ನೀಡಿದರು. ಇಂದು ಹೈ ಕೋರ್ಟ್ ತೀರ್ಪಿನ ಬಳಿಕ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನಮ್ಮ ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನಿಸಿದ್ದರು ನಮ್ಮ ಶಾಸಕರು ದುಡ್ಡಿನ ಹಿಂದೆ ಬಿದ್ದಿಲ್ಲ ಹೇಗಾದರೂ ಮಾಡಿ ಸರ್ಕಾರಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸಿದ್ದಾರೆ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ. ನಾವು 136 ಸ್ಥಾನ ಗೆದ್ದರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದ್ದಾರೆ.ದುಡ್ಡು ಕೊಟ್ಟು ಶಾಸಕರನ್ನು ಸೆಳೆಯುಕ್ಕೆ ಪ್ರಯತ್ನ ಮಾಡಿದ್ದರು ಆದರೆ ನಮ್ಮ ಶಾಸಕರು ಬಿಜೆಪಿಯವರ ಆಮಿಷಕ್ಕೆ ಒಳಗಾಗಲಿಲ್ಲ .ಅಲ್ಲದೆ ನಮ್ಮ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಇಡೀ ದೇಶದಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ನಾನು ಸಲ್ಲಿಸಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ತೀರ್ಪು ನೀಡಿದ್ದಾರೆ. ಹೈ ಕೋರ್ಟ್ ಆದೇಶವನ್ನು ಮಾಧ್ಯಮಗಳ ಮೂಲಕ ನೋಡಿದ್ದೇನೆ. ನನಗೆ ಪೂರ್ಣ ಜಡ್ಜ್ಮೆಂಟ್ ಓದಲು ಆಗಿಲ್ಲ. ಬಿಎನ್ಎಸ್ 218 ರ ಪ್ರಕಾರ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿಲ್ಲ. ಹೈಕೋರ್ಟ್ ಇದನ್ನು ಸಂಪೂರ್ಣ ತಿರಸ್ಕಾರ ಮಾಡಿದೆ. 17 ಎ ಪ್ರಕಾರ ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಅನುಮತಿ ನೀಡಿಲ್ಲ. ಪ್ರಾಥಮಿಕ ತನಿಖೆಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ. ಬಿಜೆಪಿ ಜೆಡಿಎಸ್ ನಾಯಕರ ಒಳಸಂಚಿಗೆ ನಾನು ಹೆದರುವುದಿಲ್ಲ. ರಾಜಭವನ ದುರ್ಬಳಕೆಗೆ ನಾವು ಹೆದರಲ್ಲ. ರಾಜ್ಯದ ಜನರ ಆಶೀರ್ವಾದ ನಮ್ಮ ಮೇಲೆ ಇದೆ.. ಬಿಜೆಪಿ ಜೆಡಿಎಸ್ ನ ಒಳಸಂಚು, ರಾಜ್ಯಪಾಲರ ದುರುಪಯೋಗಕ್ಕೆ ಹೆದರಲ್ಲ. ಕರ್ನಾಟಕದ ಜನ ನಮ್ಮ ಪಕ್ಷ ಹಾಗೂ ನನ್ನ ಪರವಾಗಿ…
ರಾಯಚೂರು : ವಸತಿ ನಿಲಯದಲ್ಲಿ ಬೆಳಿಗ್ಗೆ ನೀಡುವಂತಹ ಉಪಹಾರವನ್ನ ಸೇವಿಸಿ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಆಲ್ಕೋಡ ಗ್ರಾಮದ ವಸತಿ ನಿಲಯವೊಂದರಲ್ಲಿ ನಡೆದಿದೆ. ಹೌದು ಬೆಳಿಗ್ಗೆ ಉಪಹಾರ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾಗಿದ್ದು, ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ಆಗಮಿಸಿದ್ದು, ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ಈ ವೇಳೆ ಘಟನೆಯ ಕುರಿತು ಸತ್ಯಾಂಶ ಹೊರ ಬರಬೇಕಾದರೆ ಇಲಾಖೆಯ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. ಘಟನೆ ಕುರಿತಂತೆ ಅರಕೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಮುಡಾ ಹಗರಣದ ಕುರಿತು ಹೈಕೋರ್ಟ್ ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿದ್ದಾರೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ…
ಹುಬ್ಬಳ್ಳಿ : ಮುಡಾ ಅದ್ರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಸಿಕ್ಯೂಶನ್ ಗೆ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಹೌದು ಮುಡಾದಲ್ಲಿ ಹಗರಣ ನಡಿದಿದೆ ಎಂದು ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ, ಆ ಮೂಲಕ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದೆ. ಹಾಗಾಗಿ ಇದೀಗ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭಾರಿ ಹಿನ್ನಡೆಯಾಗಿದ್ದು, ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಇದೀಗ ಈ ಒಂದು ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯನವರು ಯಾವಾಗಲೂ ರಾಮಕೃಷ್ಣ ಹೆಗಡೆ ಅವರ ಶಿಷ್ಯ ಅಂತಾರಲ್ಲ ಅವರ ಮೇಲೆ ಆಪಾದನೆ ಬಂದಾಗ, ಅವರು ಒಂದು ಕ್ಷಣ ಯೋಚಿಸದೆ ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಕೂಡ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈ ಆದೇಶವನ್ನು ಗೌರವಿಸಿ ಸ್ವಾಗತ ಮಾಡುತ್ತಿದ್ದೇನೆ. ಸತ್ಯಕ್ಕೆ ಜಯ ಸಿಕ್ಕೆ ಸಿಗುತ್ತದೆ ನಾವು ವಿಧಾನಸಭೆ ಒಳಗಡೆ ನಿಲುವಳಿ ಸೂಚನೆ ಮೂಲಕ ಹೋರಾಟ ಪ್ರಾರಂಭಿಸಿದ್ದೇವೆ. ಸರ್ಕಾರ ಅದಕ್ಕೆ ಮಣಿಯದೆ ಇದ್ದಾಗ ಅಹೋರಾತ್ರಿ ಧರಣೆ ಮಾಡಿ ಒತ್ತಡ ಹಾಕಿದ್ದೇವೆ. ಅಲ್ಲದೆ ಪಾದಯಾತ್ರೆ ಕೂಡ ಮಾಡಿದ್ದೇವೆ ಈಗ ಹೈಕೋರ್ಟ್ ಮುಖಾಂತರ ನಮಗೆ ನ್ಯಾಯ ದೊರಕಿದೆ ಸತ್ಯ ಗೆದ್ದಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಿಗಳ ಸರ್ಕಾರ. ಒಂದೇ ವರ್ಷದಲ್ಲಿ…