Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಸಂಬಂಧ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ 40 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಗಲಾಟೆ ನಡೆದ ವಿಡಿಯೋ ಆಧರಿಸಿ ವಶಕ್ಕೆ ಪಡೆದುಕೊಂಡಿದ್ದು, ಎರಡು ಕಡೆಯ ಒಟ್ಟು 40 ಜನರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಇದೀಗ ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಗುಂಡು ಹಾರಿಸಿದರು. ಗನ್ ಮ್ಯಾನ್ ಗಳು ಐದು ಗನ್ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನಾರ್ಧನ ರೆಡ್ಡಿ ಸತೀಶ ರೆಡ್ಡಿ ಗೆ ಸಂಬಂಧಿಸಿದಂತೆ ಎಲ್ಲಾ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ.
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಲಕನ ನಿರ್ಲಕ್ಷದಿಂದ ಬಸ್ ಹರಿದು, ಸ್ವಲ್ಪದರಲ್ಲೇ 13 ವರ್ಷದ ಬಾಲಕಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇದೀಗ ವರದಿಯಾಗಿದೆ. ಶಾಲಾ ಬಾಲಕಿ ಸೈಕಲ್ ಮೇಲೆ ತೆರಳುವಾಗ ಖಾಸಗಿ ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿದೆ. ಸಾವಿನ ಮನೆ ಕದ ತಟ್ಟಿ ವಾಪಸ್ ಬಂದ 13 ವರ್ಷದ ಬಾಲಕಿ, ಬೆಳಗಾವಿ ಜಿಲ್ಲೆಯ ಗೋಕಾಕ್ನ ಮಲ್ಲಾಪುರ ಪಿಜಿ ಬಳಿ ಇ ಒಂದು ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಗುದ್ದಿದ ಬಳಿಕ ಬಾಲಕಿ ಬಸ್ ಕೆಳಗೆ ಇದ್ದಾಳೆ ಆದರೆ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ಮೈಸೂರು : ವಿದ್ಯುತ್ ಅವಘಡದಲ್ಲಿ ಗಾಯಗೊಂಡಿದ್ದ ಇಂಜಿನಿಯರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಇಂಜಿನಿಯರ್ ಆನಂದ್ (43) ಸಾವನ್ನಪ್ಪಿದ್ದರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಇ ಆಗಿರುವ ಆನಂದ್ ಹುಣಸೂರು ಪಟ್ಟಣದ KPTCL ವಿದ್ಯುತ್ ಕೇಂದ್ರದಲ್ಲಿ ಎಇ ಆಗಿ ಕೆಲಸ ಮಾಡುತ್ತಿದ್ದರು. ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಆನಂದ್ ಗಾಯಗೊಂಡಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನಂದ್ ಸಾವನ್ನಪ್ಪಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ಕಾಮಣ್ಣನರ ಕಾಟ ಹೆಚ್ಚಾಗಿದ್ದು ಕಳೆದ ಒಂದು ತಿಂಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯೆಗೆ ಕಾಮುಕನೊಬ್ಬ ಬಂದು ವೈದ್ಯೆಗೆ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿ ರಾಕೇಶ್ (24) ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ವೈದ್ಯೆ ಒಬ್ಬರು ರಸ್ತೆಯ ಬದಿ ಫುಟ್ ಪಾತ್ ನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ಬಂದ ಕಾಮುಕನೊಬ್ಬ ವೈದ್ಯೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಕ್ಷಣ ಎಚ್ಚೆತ್ತು ವೈದ್ಯ ಆತನಿಂದ ಬಿಡಿಸಿಕೊಂಡಿದ್ದಾರೆ.ಅಲ್ಲಿಂದ ಕಾಮುಕ ಪರಾರಿಯಾಗಿದ್ದಾನೆ. ಕಳೆದ ಡಿಸೆಂಬರ್ 17ರಂದು ನಡೆದ ಘಟನೆ ಇದೀಗ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿದೆ. ಬೆಂಗಳೂರಿನ ಚಿಕ್ಕಬಾಣಾವರದ ಎಜಿಬಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕೆಲಸ ಮುಗಿಸಿ…
ಬೆಂಗಳೂರು : ಬೆಂಗಳೂರಲ್ಲಿ ಭೀಕವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮುಖ್ಯಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಆಕಾಶವಾಣಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಾಲೆಕ ಮುಖ್ಯ ಶಿಕ್ಷಕ ಜಗದೀಶಯ್ಯ (57) ಸಾವನ್ನಪ್ಪಿದ್ದರೆ. ನೆಲಮಂಗಲದ ಬಸವನಹಳ್ಳಿ ಶಿಕ್ಷಕ ಜಗದೀಶಯ್ಯ ವಾಸವಾಗಿದ್ದರು.ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಲು ಬರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಗದಗ : ಗದಗದ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗದಗದ ಬೆಟಿಗೇರಿಯಲ್ಲಿರುವ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೊರಗುತ್ತಿಗೆ ನೌಕರ ಮೈಲಾರಲಿಂಗೇಶ್ವರ ರಂಗಪ್ಪ (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಲಾರ ಲಿಂಗೇಶ್ವರ ರಂಗಪ್ಪ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರ ಗ್ರಾಮದ ನಿವಾಸಿಯಾಗಿದ್ದು ಈ ಒಂದು ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಮೈಲಾರ ಲಿಂಗೇಶ್ವರ ರಂಗಪ್ಪ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಬೆಟಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ಕಾಮಣ್ಣನರ ಕಾಟ ಹೆಚ್ಚಾಗಿದ್ದು ಕಳೆದ ಒಂದು ತಿಂಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯೆಗೆ ಕಾಮುಕನೊಬ್ಬ ಬಂದು ವೈದ್ಯೆಗೆ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ವೈದ್ಯೆ ಒಬ್ಬರು ರಸ್ತೆಯ ಬದಿ ಫುಟ್ ಪಾತ್ ನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ಬಂದ ಕಾಮುಕನೊಬ್ಬ ವೈದ್ಯೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಕ್ಷಣ ಎಚ್ಚೆತ್ತು ವೈದ್ಯ ಆತನಿಂದ ಬಿಡಿಸಿಕೊಂಡಿದ್ದಾರೆ.ಅಲ್ಲಿಂದ ಕಾಮುಕ ಪರಾರಿಯಾಗಿದ್ದಾನೆ. ಕಳೆದ ಡಿಸೆಂಬರ್ 17ರಂದು ನಡೆದ ಘಟನೆ ಇದೀಗ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿದೆ. ಬೆಂಗಳೂರಿನ ಚಿಕ್ಕಬಾಣಾವರದ ಎಜಿಬಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ ಕೆಲಸ ಮುಗಿಸಿ ವೈದ್ಯೆ ತನ್ನ ಪಿಜಿ ಒಳಗೆ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್ ನಲ್ಲಿ ಅಪರಿಚಿತ ಒಬ್ಬ ಹಿಂಬಾಲಿಸಿಕೊಂಡು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಗೌಡಗೆ ಜೈಲಿನಲ್ಲಿ ಇಂದಿನಿಂದ ಮನೆ ಊಟ ಸಿಗುವ ಸಾಧ್ಯತೆ ಇದೆ. ಪವಿತ್ರಗೌಡಗೆ ಮನೆ ಊಟದ ಭಾಗ್ಯ ಕೋರ್ಟ್ ನೀಡಿದೆ. ಹಾಗಾದರೆ ಯಾವಾಗ ಊಟ ಬರುತ್ತದೆ ಯಾರು ಊಟ ತರುತ್ತಾರೆ ಇದೆಲ್ಲಾ ಮಾಹಿತಿಗಳನ್ನು ಜೈಲಾಧಿಕಾರಿಗಳಿಗೆ ಪವಿತ್ರಾ ಪರ ವಕೀಲರು ಮಾಹಿತಿ ನೀಡಿದ್ದಾರೆ. ನಾಲ್ವರು ಊಟ ತರುವುದಾಗಿ ವಕೀಲರು ಮಾಹಿತಿ ನೀಡಿದ್ದು ನಿನ್ನೆ ಪವಿತ್ರ ಗೌಡ ಪರವಕೀಲರು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಹೀಗಾಗಿ ಇಂದಿನಿಂದ ಪವಿತ್ರ ಗೌಡಗೆ ಮನೆ ಊಟ ಸಿಗುವ ಸಾಧ್ಯತೆ ಇದೆ. ಇನ್ನು ಪವಿತ್ರ ಗೌಡಗೆ ಮನೆ ಊಟ ಸಿಗುವ ವಿಷಯ ತಿಳಿದ ಬೆನ್ನಲ್ಲೆ ನಟ ದರ್ಶನ್ ಕೂಡ ನನಗೂ ಮನೆ ಊಟ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನ ಊಟ ನನಗೆ ಅಡ್ಜಸ್ಟ್ ಆಗುತ್ತಿಲ್ಲ ಎಂದು ಕೋರ್ಟ್ ಗೆ ಮನವಿ ಮಾಡಲಿದ್ದಾರೆ. ಕಳೆದ ಬಾರಿಗೂ ದರ್ಶನ್ ಕೋರ್ಟಿಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ದರ್ಶನ್ ಅವರ ಅರ್ಜಿಯನ್ನು…
ಬೆಂಗಳೂರು : ಇವಿಎಂ ಬಗ್ಗೆ ಮಾಡಿದ ಸಮೀಕ್ಷೆ ವರದಿ ವೆಬ್ಸೈಟ್ ನಿಂದ ಡಿಲೀಟ್ ಮಾಡಲಾಗಿದೆ. ಮತಗಳ್ಳತನ ಆರೋಪ ಸುಳ್ಳು ಎಂದು ಪರೋಕ್ಷ ವರದಿ ನೀಡಿದ ಸಂಸ್ಥೆಯು ಇದೀಗ ಬ್ಯಾಕ್ ಫೈರ್ ಆಗುತ್ತಿದ್ದಂತೆ ವೆಬ್ಸೈಟ್ ನಿಂದ ವರದಿಯನ್ನು ಇದೀಗ ಸಂಸ್ಥೆ ಡಿಲೀಟ್ ಮಾಡಿದೆ. ಇವಿಎಂ ಸಮೀಕ್ಷೆ ಈಗ ರಾಜಕೀಯ ಸಮರಕ್ಕೆ ನಾಂದಿ ಹಾಡಿತ್ತು. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಈ ಒಂದು ಸರ್ವೇ ನಡೆಸಲಾಗಿತ್ತು. ಇವಿಎಂ ಮೇಲೆ ನಂಬಿಕೆ ಇದೆ ಎಂದು 83.61% ಜನ ಅಭಿಪ್ರಾಯ ವ್ಯಕ್ತಪಡಿಸಿದ್ದರು. ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು. ಈಗ ಆ ವರದಿಯನ್ನೇ ವೆಬ್ಸೈಟ್ ನಿಂದ ಸರ್ಕಾರ ತೆಗೆದುಹಾಕಿದೆ. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ (KMEA) ಈ ಒಂದು ಸಮೀಕ್ಷೆ ನಡೆಸಿತ್ತು. ರಾಜ್ಯದ 5100 ಮಂದಿಯನ್ನು ಸಂದರ್ಶಿಸಿ ಸಮೀಕ್ಷೆ ನಡೆಸಿದರು. ಶೇಕಡ 83.61 ರಷ್ಟು ಜನ ಇವಿಎಂ ಕಾರ್ಯವೈಖರಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದರು ಓಟ್ ಚೂರಿ ಅಭಿಯಾನಕ್ಕೆ ವಿರುದ್ಧವಾಗಿ ಸಮೀಕ್ಷೆ ವರದಿ ಬಂದಿತ್ತು. ಸಮೀಕ್ಷೆಯಿಂದ ಸಿದ್ದರಾಮಯ್ಯ…
ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಲೇಔಟ್ ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರೇಟರ್ ಬೆಂಗಳೂರು ಅಥಾರಿಟಿ ಕೈ ಸೇರಿದ ನಿರಾಶ್ರಿತರ ಮಾಹಿತಿ ಒಟ್ಟು 188 ಮನೆಗಳನ್ನು ಗುರುತಿಸಿ ಜಿಬಿಎಗೆ ವರದಿ ಸಲ್ಲಿಸಲಾಗಿದೆ. ಕಂದಾಯ ಇಲಾಖೆ ಮತ್ತು ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಯಿತು. ಮತ್ತೊಮ್ಮೆ ಪರಿಶೀಲನೆ ಬಳಿಕ ಜಿಬಿಎ ಸರ್ಕಾರಕ್ಕೆ ಈ ವರದಿಯನ್ನು ಸಲ್ಲಿಸಲಿದೆ. ಬೆಂಗಳೂರಿನ ಯಲಹಂಕ ಬಳಿಯ ಫಕೀರ ಲೇಔಟ್, ಹೊಸ ಫಕಿರ್ ಲೇಔಟ್, ವಾಸಿಂ ಲೇಔಟ್ ನಿರಾಶ್ರಿತರ ಮಾಹಿತಿ ಈ ಒಂದು ವರದಿಯಲ್ಲಿದೆ. 167 ಮನೆಗಳ ತೆರವಿನಲ್ಲಿ 188 ಕುಟುಂಬಗಳು ನಿರಾಶ್ರಿತರಾಗಿದ್ದಾರೆ. 188 ಕುಟುಂಬಗಳ ಒಟ್ಟು 1007 ಜನ ಸದಸ್ಯರು ಸದ್ಯದ ಅಧಿಕೃತ ನಿರಾಶ್ರಿತರಾಗಿದ್ದಾರೆ. 188 ಕುಟುಂಬದ ಮುಖ್ಯಸ್ಥರು 475 ಜನ ವಯಸ್ಕರು, 34 ಮಕ್ಕಳು ಮುಸ್ಲಿಂ ಕುಟುಂಬಗಳು 156, ಹಿಂದೂ 31 ಹಾಗೂ ಕ್ರಿಶ್ಚಿಯನ್ 1 ಕುಟುಂಬ ನಿರಾಶ್ರಿತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.














