Author: kannadanewsnow05

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೀರ್ಪು ಏನಿದೆ ಅಂತ ಮೊದಲು ತಿಳಿಯಬೇಕು. ಮುಖ್ಯಮಂತ್ರಿಗಳ ಮೇಲೆ ದೊಡ್ಡ ಷಡ್ಯಂತರ ನಡೆದಿದೆ. ನನ್ನ ಮೇಲೆ ಯಾವ ರೀತಿ ಷಡ್ಯಂತರ ಮಾಡಿ ಕೇಸ್ ಹಾಕಿದ್ದರು. ಆ ಸಂದರ್ಭದಲ್ಲಿ ನಾನು ಜೈಲಿಗೆ ಹೋಗಿ ಬಂದೆ.ಅದೇ ರೀತಿ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಷಡ್ಯಂತರ ಮಾಡಿದೆ. ಅವರ ಕುಟುಂಬದ ಮೇಲೆ ಕೂಡ ಷಡ್ಯಂತರ ಮಾಡಿದೆ. ಯಾವುದೇ ತನಿಖೆಗೆ ಆದೇಶ ಮಾಡಲಿ ಏನೇ ಆದರೂ ಕೂಡ ಅವರು ಕ್ಲೀನ್ ಆಗಿ ಹೊರಬರುತ್ತಾರೆ. ನನ್ನ ಪ್ರಕಾರ ಅವರದ್ದು ಯಾವುದೇ ತಪ್ಪು ಇಲ್ಲ ತಪ್ಪು ಕೂಡ ಮಾಡಿಲ್ಲ. ಮುಖ್ಯಮಂತ್ರಿ ಬದ್ಧತೆಯ ಪ್ರಕಾರವಾಗಿ ನಾವು ಎಲ್ಲ ಅವರ ಜೊತೆಗೆ ಇದ್ದೇವೆ.ರಾಜ್ಯಕ್ಕೆ ಕೊಟ್ಟಂತಹ ಕೊಡುಗೆ ಅವರು ಮಾಡಿರುವಂತಹ ಕಾರ್ಯಗಳನ್ನು ಬಿಜೆಪಿ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇದೀಗ ಈ ಒಂದು ತೀರ್ಪಿನ ಬಗ್ಗೆ ಸಿದ್ಧರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ತಿಳಿಸಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17A ಗೆ ಮಾತ್ರ ಸೀಮಿತವಾಗಿದೆ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬುವುದರ ಕುರಿತು ಚರ್ಚಿಸಲಾಗುತ್ತದೆ. ಈ ಬಗ್ಗೆ ತಜ್ಞರ ಜೊತೆ ಸಮಾಲೋಚನೆ ಮಾಡುತ್ತೇನೆ.ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಹೋರಾಟದ ರೂಪರೇಷೆ ನಿರ್ಧರಿಸುತ್ತೇನೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು ತನಿಖೆ ರದ್ದಾಗುವ ವಿಶ್ವಾಸವಿದೆ. 17A ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ…

Read More

ಬೆಂಗಳೂರು : ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಟ್ವೀಟ್ ನಲ್ಲಿ “ಕಪ್ಪು ಚುಕ್ಕೆ”ಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ” ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ.ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದೆ. https://twitter.com/JanataDal_S/status/1838484443121750342?t=AvbCzAM7-i4s7pPqvtEj2A&s=19

Read More

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ ಗೇಟ್ ಬಿದ್ದು 10 ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಹಾಯಕ ಅಭಿಯಂತರ ಟಿ ಶ್ರೀನಿವಾಸ್ ರಾಜು ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಡಳಿತ ವಿಭಾಗದ ಉಪಯುಕ್ತರು ಆದೇಶ ಹೊರಡಿಸಿದ್ದಾರೆ. ಹೌದು ಸಹಾಯಕ ಅಭಿಯಂತರ ಟಿ ಶ್ರೀನಿವಾಸ್ ರಾಜುರನ್ನು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. 2022 ರಲ್ಲಿ ದತ್ತಾತ್ರೇಯ ವಾರ್ಡ್ ನ AE ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ ರಾಜು, ಪ್ರಸ್ತುತ ರಾಜಾಜಿನಗರದ ವಾರ್ಡ್ ನ AE ಕಾರ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ಲಕ್ಷದ ಆರೋಪದ ಅಡಿ ಇದೀಗ ಟಿ.ಶ್ರೀನಿವಾಸ್ ರಾಜು ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆ ಹಿನ್ನೆಲೆ? ನಿನ್ನೆ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದರು. ಅಲ್ಲದೆ ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಆದೇಶ ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು. ಹಾಗಾಗಿ ನಾಳೆ ಹೈ ಕೋರ್ಟ್ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗಲಿದೆ. ಇದೆಲ್ಲದರ ಮಧ್ಯ ರಾಜ್ಯಪಾಲರ ವಿರುದ್ಧ ಇದೀಗ ರಾಷ್ಟ್ರಪತಿಗಳಿಗೆ ದೂರು ನೀಡುವ ಕುರಿತು ದೂರು ನೀಡುವ ಮೂಲಕ ಸಿದ್ದರಾಮಯ್ಯ ಹೊಸ ದಾಳ ಉರುಳಿಸಲಿದ್ದಾರೆ. ರಾಜ್ಯಪಾಲರು ಸಣ್ಣ ಕಾರಣಕ್ಕೂ ರಿಪೋರ್ಟ್ ಕೇಳುತ್ತಿದ್ದಾರೆ. ಅವರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರೋ ಒಬ್ಬ ವ್ಯಕ್ತಿ ದೂರು ನೀಡಿದ್ದಾನೆ ಎಂದರೆ ಪ್ರತಿಯೊಂದಕ್ಕೂ ವರದಿ ಕೇಳುತ್ತಾರೆ. ಸಿದ್ದರಾಮಯ್ಯ ಯಾವಾಗಲೂ ಕನ್ನಡದಲ್ಲಿ ಸಹಿ ಹಾಕುತ್ತಾರೆ. ಆದರೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿದ್ದಾರೆ. ಅದಕ್ಕೆ ತನಿಖೆ ಮಾಡಿ ಅಂತ ದೂರು ಕೊಟ್ಟಿದ್ದಾನೆ. ಇದು…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗಂಗಾವಳಿ ನದಿಯಲ್ಲಿ 3ನೇ ಹಂತದ ಶೋಧ ಕಾರ್ಯ ನಡೆಯುತ್ತಿದೆ. ನಿನ್ನೆ ಕೇರಳ ಮೂಲದ ಅರ್ಜುನ್ ಓಡಿಸುತ್ತಿದ್ದ ಲಾರಿಯ ಕಟ್ಟಿಗೆ ತುಂಡು ಪತ್ತೆ ಆಗಿತ್ತು. ಇಂದು ಆತನ ಲಾರಿಗೆ ಅಳವಡಿಸಿದ್ದ ಕ್ರ್ಯಾಶ್ ಕಾರ್ಡ್ ಪತ್ತೆ ಆಗಿದೆ. ಡ್ರೆಜ್ಜರ್ ಯಂತ್ರದ ಮೂಲಕ ಕಾರ್ಯಾಚರಣೆ ವೇಳೆ ಲಾರಿ ಕಾರ್ಡ್ ಪತ್ತೆ ಆಗಿದೆ. ಎಸ್.ಪಿ ಎಂ ನಾರಾಯಣ ಹೇಳಿದ್ದೇನು? ಉತ್ತರ ಕನ್ನಡ ಜಿಲ್ಲೆಯ ಎಸ್.ಪಿ ಎಂ ನಾರಾಯಣ ಪ್ರತಿಕ್ರಿಯೆ ನೀಡಿದ್ದು, ನಾಲ್ಕು ದಿನದಿಂದ ಕಾರ್ಯಾಚರಣೆ ನಡೆದ ವೇಳೆ ಹಲವು ವಸ್ತುಗಳು ಸಿಕ್ಕಿವೆ. ಸಿಕ್ಕ ವಸ್ತುಗಳೆಲ್ಲ ಹೋಟೆಲ್, ಲಾರಿ ಟ್ಯಾಂಕರ್ ಗೆ ಸಂಬಂಧಿಸಿವೆ. ಹಾಗಗಿ ಇನ್ನು ಆರು ಸ್ಥಳಗಳಲ್ಲಿ ಕಾರ್ಯಾಚರಣೆಯನ್ನು ಮಾಡಬೇಕಿದೆ.ಅರ್ಜುನ್ ಲಾರಿ ಇದೆ ಎಂದು ಗುರುತಿಸಿದ್ದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆಯಲಿದೆ. ಆದರೆ ಆ ಸ್ಥಳದಲ್ಲಿ ಯಾವುದೇ ಕಬ್ಬಿಣದ ವಸ್ತು ಪತ್ತೆಯಾಗಿಲ್ಲ. ನದಿ ಒಳ ಹರಿವಿನ ರವಸಕೆ ಲಾರಿ ಮುಂದೆ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ.ಈಗ…

Read More

ದಕ್ಷಿಣಕನ್ನಡ : ಧರ್ಮಸ್ಥಳದಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಪಲ್ಟಿಯಾಗಿರುವ ಪರಿಣಾಮ 13 ಪ್ರಯಾಣಿಕರು ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದ್ದು 13 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಳ ತಾಲೂಕಿನ ವಗ್ಗ ಸಮೀಪ ಈ ಒಂದು ಅಪಘಾತ ನಡೆದಿದೆ. ಕಸ್ತೂರಿ, ಹೇಮಲತಾ, ವಿಶ್ವ, ಶಿಲ್ಪ, ಸ್ವಾತಿ, ತನುಶ್ರಿಗೆ, ಪವನ್,ನಿಕಿತಾ, ಸುಧಾಮ, ಹೇಮಾವತಿ, ರಾಜಶ್ರೀ,ಶೋಭಾ ಶೆಟ್ಟಿ ಎನ್ನುವವರಿಗೆ ಗಂಭೀರ ಗಾಯವಾಗಿದ್ದು ಎಲ್ಲರಿಗೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಸ್ ಪಲ್ಟಿಯಾಗಿದೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಸುದ್ದಿಯಾಗಿರುವ ಬೆಂಗಳೂರಿನ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಗಾಗಿ ಕೇಂದ್ರ ವಿಭಾಗದ ಪೊಲೀಸರು ಹೊರರಾಜ್ಯಗಳಿಗೆ ತೆರಳಿ ಹಂತಕನ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.ಇದರ ಮಧ್ಯ ಮಹಾಲಕ್ಷ್ಮಿಯ ದೇಹ ತುಂಡು ಮಾಡಿ ಇಟ್ಟಿದ್ದ ಫ್ರಿಜ್ ಅನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಪತ್ತೆಗಾಗಿ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು, ಮಹಾಲಕ್ಷ್ಮೀ ಪತಿ ಹೇಮಂತ್ ದಾಸ್ ಶಂಕೆ ವ್ಯಕ್ತಪಡಿಸಿರುವ ವ್ಯಕ್ತಿ ಸೇರಿದಂತೆ ಮೃತಳ ಸಂಪರ್ಕದಲ್ಲಿದ್ದ ಕೆಲವರ ಮೊಬೈಲ್ ಸ್ವಿಚ್ಡ್​ ಆಫ್ ಆಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮತ್ತೊಂದೆಡೆ, ಆಕೆಯ ಸಂಪರ್ಕದಲ್ಲಿದವರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹರಿತವಾದ ಆಯುಧದಿಂದ ಮಹಾಲಕ್ಷ್ಮೀ ಮೃತದೇಹವನ್ನು ಸುಮಾರು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟು ಹಂತಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಎಫ್ಎಸ್​​ಎಲ್ ಅಧಿಕಾರಿಗಳು ಬಂದು ತಪಾಸಣೆ ನಡೆಸಿದ್ದರು. ಎಲ್ಲ ರೀತಿಯ ಸ್ಯಾಂಪಲ್​, ಸಾಕ್ಷ್ಯಾಧಾರ ಸಂಗ್ರಹಿಸಿದ್ದ ಅಧಿಕಾರಿಗಳು ಮೃತದೇಹವಿಟ್ಟಿದ್ದ ಫ್ರಿಡ್ಜ್​ನ್ನು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯವು ನಟ ದರ್ಶನ್ ಹಾಗೂ ಪವಿತ್ರಗೌಡ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ಬಳಿಕ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಇದರ ಬೆನ್ನಲ್ಲೇ ನಟ ದರ್ಶನ್ ಗೆ ಐಟಿ ಸಂಕಷ್ಟ ಎದುರಾಗಿದೆ. ಹೌದು ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 84 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದೀಗ ಐಟಿ ಅಧಿಕಾರಿಗಳು ನಟ ದರ್ಶನ್ ಮನೆಯ ಮೇಲೆ ದಾಳಿ ಮಾಡಲು ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ನಟ ದರ್ಶನ್ ಗೆ ಕೊಲೆ ಪ್ರಕರಣ ಸೇರಿ ಇದೀಗ ಐಟಿ ಸಂಕಷ್ಟ ಕೂಡ ಎದುರಾಗಿದೆ. ಅಲ್ಲದೆ ಇಂದು ಬಳ್ಳಾರಿ ಜೈಲಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಬೇಟೆ ವೇಳೆ ನಟ ದರ್ಶನ್ ಜೈಲಲ್ಲಿ ನನಗೆ ತುಂಬಾ ಸಮಸ್ಯೆಯಾಗುತ್ತಿದೆ ದಿಂಬು, ಬೆಡ್ ಹಾಗೂ ಕುರ್ಚಿಯ ವಿಚಾರವಾಗಿ ಪತ್ನಿಯ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ…

Read More

ಕೊಪ್ಪಳ : ಈ ವರ್ಷದ ಒಳಗಾಗಿ ತುಂಗಭದ್ರಾ ಜಲಾಶಯಕ್ಕೆ ನೂತನ ವಾದಂತಹ ಕ್ರಸ್ಟ್ ಗೇಟ್ ಅಳವಡಿಕೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ನಿನ್ನೆ ಕೊಪ್ಪಳ ಜಿಲ್ಲೆಯ ತಾಲೂಕಿನ ಮುನಿರಾಬಾದ್‌ನಲ್ಲಿ ನಡೆದ ಕ್ರಸ್ಟ್ ಗೇಟ್ ದುರಸ್ತಿಗೆ ಶ್ರಮಿಸಿದವರಿಗೆ ಸನ್ಮಾನಸಮಾರಂಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಚ್ ಗೇಟ್ ಅಳಡಿಸಲು ತಜ್ಞರ ಸಮಿತಿ ಶಿಫಾರಸು ಮಾಡಿರುವ ಹಿನ್ನೆಲೆ ವರ್ಷದೊಳಗಾಗಿಯೇ ಅಳವಡಿಸಲಾಗುವುದು ಎಂದರು. ಆ. 10ರಂದು ಕ್ರಸ್ಟ್ ಗೇಟ್ ಮುರಿದು ಹೋಗಿದ್ದನ್ನು ರಾತ್ರಿಯೇ ಸಚಿವ ಶಿವರಾಜ ತಂಗಡಗಿ ಹಾಗೂ ಎಂಡಿ ಗಮನಕ್ಕೆ ತಂದಾಗ ನಾವು ನೀರು ಖಾಲಿಯಾದರೂ ಪರವಾಗಿಲ್ಲ ಜಲಾಶಯವನ್ನು ಕಾಪಾಡಿಕೊಳ್ಳಬೇಕು ಎಂದು ಚರ್ಚಿಸಿದ್ದೆವು.ಅದರಂತೆ ಮರುದಿನವೇ ಸ್ಥಳಕ್ಕೆ ಭೇಟಿ ನೀಡಿ, ಎಂಜಿನಿಯರ್ ಅವರೊಂದಿಗೆ ಚರ್ಚೆ ಮಾಡಿ, ದುರಸ್ತಿ ಕಾರ್ಯವನ್ನು ವಾರದೊಳಗೆ ಪೂರ್ಣಗೊಳಿಸಿದೆವು ಎಂದರು.

Read More