Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 3 ರ ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ. ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ.ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : ಮಹಿಳೆ ನಾಪತ್ತೆ ವಿಚಾರವಾಗಿ ವ್ಯಕ್ತಿಗೆ ಪೊಲೀಸರ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಪೊಲೀಸರ ಕಿರುಕುಳದಿಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೆಲಸ ಮಾಡುತ್ತಿದ್ದ ತೋಟದಲ್ಲಿಯೇ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೈಲಾಪುರ ಗ್ರಾಮದ ಮಂಜುನಾಥ್ (44) ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಳೆದ ಎಂಟು ದಿನಗಳಿಂದ ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ವಿನಿ ಎನ್ನುವ ಮಹಿಳೆ ನಾಪತ್ತೆಯಾಗಿರುವ ಪ್ರಕರಣ ಸಂಬಂಧ ಪೊಲೀಸರು ಮಂಜುನಾಥನನ್ನು ವಿಚಾರಣೆಗೆ ಕರೆದಿದ್ದರು. ಮಹಿಳೆ ಜೊತೆ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಮಂಜುನಾಥನನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ವೇಳೆ ಮಂಜುನಾಥ ಪೊಲೀಸರ ವಿಚಾರಣೆ ಮುಗಿಸಿ ಬಂದಿದ್ದು ನಂತರ ತೋಟದ ಬಳಿಯ ನೇಣು ಬಿಗಿದೆ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಂದೆ ಸಾವಿಗೆ ಪೊಲೀಸರೇ ಕಾರಣ ಎಂದು ಮಕ್ಕಳು ಆರೋಪಿಸಿದ್ದಾರೆ. ಕಾನ್ಸ್ಟೇಬಲ್ ಅಂಬರೀಶ್ ವಿರುದ್ಧ ಕಿರುಕುಳ ಆರೋಪ ಕೇಳಿ…
ಬೆಂಗಳೂರು : ಬೆಂಗಳೂರಲ್ಲಿ ಪ್ರಿಯಕರನ ಮನೆಯಲ್ಲಿ ಪ್ರೇಯಸಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಬೆಂಗಳೂರು ಉತ್ತರ ತಾಲೂಕಿನ ಪಿಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಹಾಸನದ ಅರಸೀಕೆರೆ ಮೂಲದ ನಿಕಿತಾ (19) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಿಯಕರ ರಾಘವೇಂದ್ರ ವಿರುದ್ಧ ನಿಕಿತಾ ಪೋಷಕರು ಆರೋಪಿಸಿದ್ದು. ಐದರಿಂದ ಆರು ವರ್ಷ ನಿಕಿತಾ ಹಾಗೂ ರಾಘವೇಂದ್ರ ಪ್ರೀತಿಸುತ್ತಿದ್ದರು. ಹೊಸ ವರ್ಷದ ದಿನ ನಿಕಿತಾ ರಾಘವೇಂದ್ರ ಮನೆಗೆ ತೆರಳಿದಾಗ ತಾಳಿ ಕಟ್ಟಿ ಮದುವೆಯಾಗು ಎಂದು ಒತಾಯಿಸಿದ್ದರಂತೆ ಪ್ರಿಯಕರ ಹಾಗೂ ಮನೆಯವರು ಇಲ್ಲದ ವೇಳೆ ನಿಕಿತಾ ನೇಣಿಗೆ ಶರಣಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಚಾಪಲಗಡ್ಡದಲ್ಲಿ ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ ಗಂಡನಿಂದ ದೂರವಿದ್ದ ವಿವಾಹಿತ ಮಹಿಳೆ ಉಮಾ ಎನ್ನುವವರ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಉಮಾ ಗಂಡನಿಂದ ದೂರವಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ರಘುಮೂರ್ತಿಯಿಂದ ಆರು ವರ್ಷಗಳಿಂದ ದೂರವಿದ್ದರು. ಚಿತ್ತವಾಡಗಿ ಠಾಣೆಯಲ್ಲಿ ಕೊಲೆ ಕುರಿತಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು ಘಟನಾ ಸ್ಥಳಕ್ಕೆ SP ACP ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೊಲೆ ಆಗಿದ್ದು ಯಾವ ಕಾರಣಕ್ಕೆ ಉಮಾ ಅವರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೈಸೂರು : ಮಹಿಳೆಯನ್ನು ಹಿಂಬಾಲಿಸಿ ಬಂದ ರೌಡಿಶೀಟರ್ ಗೆ ಧರ್ಮದೇಟು ಬಿದ್ದಿದೆ. ಮೈಸೂರಿನ ಹೂಟಗಹಳ್ಳಿಯಲ್ಲಿ ರೌಡಿಶೀಟರ್ ಗೆ ಮಹಿಳೆಯರೇ ಥಳಿಸಿದ್ದಾರೆ. ಎಚ್ ಡಿ ಕೋಟೆ ತಾಲೂಕಿನ ಅಗತ್ತೂರಿನ ರೌಡಿಶೀಟರ್ ರಾಜೇಶ್ ಎಂಬಾತನಿಗೆ ಥಳಿಸಿದ್ದಾರೆ. ಮಹಿಳೆ ಫೋನ್ ನಂಬರ್ ಪಡೆದು ಅಸಭ್ಯವಾಗಿ ರಾಜೇಶ್ ವರ್ತಿಸಿದ್ದಾನೆ. ಹುಣಸೂರು ಮುಖ್ಯ ರಸ್ತೆಯಲ್ಲಿ ಸಿಕ್ಕ ರಾಜೇಶನಿಗೆ ಮಹಿಳೆಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಫೋನ್ ನಂಬರ್ ಪಡೆದು ಅಸಭ್ಯ ವರ್ತನೆ ತೋರಿದ್ದಾನೆ. ಹುಣಸೂರು ಮುಖ್ಯ ರಸ್ತೆಯಲ್ಲಿ ರಾಜೇಶ್ ಸಿಕ್ಕಾಗ ಮಹಿಳೆಯರೇ ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ ಈಗ ಈ ಒಂದು ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮೆಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಚಾಲಕ ಬಸವಂತ ಕಡಲೇಕರ್ (32) ಎನ್ನುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿಯಾಗಿರುವ ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ ಆಗಿದ್ದಾರೆ. ಬೈಕ್ ಮೇಲೆ ಬಂದು ಇಬ್ಬರೂ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಬಸವಂತನ ಮೇಲೆ ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ. ಎದೆ ಪೂಜಾ ಸಿರಿಗಂತೆ 4 ಕಡೆ ಚಾಕು ಇರಿದು ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ. ತಕ್ಷಣ ಬಸವಂತ ನಾನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಕ್ಷಣ ಬಸವಣ್ಣನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸಿಪಿ ನಾರಾಯಣ ಬರಮಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಭೇಟಿ…
ತುಮಕೂರು : ರಾಜ್ಯದ ಇತಿಹಾಸದಲ್ಲಿ ಡಿ. ದೇವರಾಜು ಅರಸು ಅವರ ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದೇವರಾಜ್ ಅರಸು ಅವರ ದಾಖಲೆ ಸರಿಗಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಗಂಭೀರವಾದ ಆರೋಪ ಮಾಡಿದ್ದು ಅಭಿವೃದ್ಧಿಗೆ ಹಣ ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಾ ಅಂತ ಸಿಎಂ ಸಿದ್ದರಾಮಯ್ಯ ಅವಾನಿಸಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಗೆ ಹಣ ಕೇಳಿದರೆ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಕರೆಯುತ್ತಾರೆ. ಕಾಂಗ್ರೆಸ್ ಗೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಡುತ್ತೇನೆ ಅಂತಾರೆ ತುಮಕೂರಿನಲ್ಲಿ ತುರುವೇಕೆರೆ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಮಾತನಾಡಿ ಬೆಳಗಾವಿ ಅಧಿವೇಶನದಲ್ಲಿ ಚೇಂಬರ್ ಗೆ ಕರೆದು ನನ್ನನ್ನು ಪಕ್ಷಕ್ಕೆ ಆಹ್ವಾನಿಸಿದರು. ತುರುವೇಕೆರೆಗೆ ಒಂದು ಲಾ ಕಾಲೇಜು ಹಾಗು ಪಾಲಿಟೆಕ್ನಿಕ್ ಕಾಲೇಜು ಕೇಳಿದ್ದೆ ಆ ಕಾಲೇಜು ಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತ ಹೇಳುತ್ತಾರೆ ಇಂತಹ ಸಿದ್ದರಾಮಯ್ಯ ಈಗ…
ಬೆಂಗಳೂರು : ಬೆಂಗಳೂರಲ್ಲಿ ಪ್ರೀತಿಯ ವಿಚಾರಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ (17) ಎನ್ನುವ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ಮೃತದೇಹವನ್ನು ನೆಲಮಂಗಲದ ಆಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತ ಬಾಲಕಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾರೆ. ಪ್ರಕರಣದ ಕಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ಬೆಳಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನದ ವೇಳೆಗೆ ರಾಜಶೇಖರ್ ಮನೆಗೆ ಭೇಟಿ ನೀಡಿದ ಡಿಸಿಎಂ, ಮೃತ ರಾಜಶೇಖರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿರುವೆ. ಘಟನೆ ಅಗಬಾರದಾಗಿತ್ತು. ಮೃತ ವ್ಯಕ್ತಿಯ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುವೆ. ಕುಟುಂಬ ಜೊತೆಗೆ ಪಕ್ಷ ಇದೆ ಎಂದು ತಿಳಿಸಲು ಬಂದಿದ್ದೇನೆ. ಮೃತ ವ್ಯಕ್ತಿಯ ಕುಟುಂಬ ಸರ್ಕಾರಿ ಉದ್ದೋಗಕ್ಕಾಗಿ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ವಿಚಾರ ಮಾಡಲಾಗುತ್ತದೆ. ಪ್ರೊಸೀಜರ್ ನೋಡಿಕೊಂಡು ಕಾನೂನು ಚೌಕಟ್ಟಿನ ಅಡಿ ನೌಕರಿ ಕೊಡುವ ಪ್ರಯತ್ನ ಮಾಡುವೆ ಎಂದು ತಿಳಿಸಿದರು.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು : ಡಿ ದೇವರಾಜು ಅರಸು ಅವರ ನಂತರ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ದೇವರಾಜ್ ಅವರ ದಾಖಲೆ ಮುರಿದಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಷ್ಟು ವರ್ಷದ ರಾಜಕಾರಣ ನನಗೆ ತೃಪ್ತಿ ತಂದಿದೆ. ಮುಖ್ಯಮಂತ್ರಿ ಆಗಿ ಪೂರ್ಣಾವಧಿಯಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ. ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ…














