Author: kannadanewsnow05

ಕಲಬುರ್ಗಿ : ಮಹಾರಾಷ್ಟ್ರದ ಕಲ್ಯಾಣದಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಮುಖಂಡ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಲಿಂಗರಾಜ್ ಕಣ್ಣಿ ವಿರುದ್ಧ NDPS ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಪ್ರಾಥಮಿಕ ಸದಸ್ಯತ್ವದಿಂದ ಲಿಂಗರಾಜ ಕಣ್ಣಿ ಉಚ್ಚಾಟನೆ ಮಾಡಿ ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಅದೇಶಿಸಿದ್ದಾರೆ. ಹೌದು ಕಲ್ಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿಯನ್ನು ಉಚ್ಚಾಟನೆ ಮಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಆದೇಶ ಹೊರಡಿಸಿದ್ದಾರೆ. ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಮುಖಂಡ ಲಿಂಗರಾಜ್ ಮಹಾರಾಷ್ಟ್ರದ ಠಾಣೆ ನಗರದಲ್ಲಿ ಪೊಲೀಸರು ಇಂದು ಅರೆಸ್ಟ್ ಮಾಡಿದ್ದರು. ಅಲ್ಲದೇ ಬಂಧಿತ ಆರೋಪಿ ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಆಪ್ತ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಇಂದು ಅರೆಸ್ಟ್ ಮಾಡಿದ್ದರು. ಈ ಹಿನ್ನೆಲೆ ಇಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಲಿಂಗರಾಜ ಕಣ್ಣೀಯನ್ನು ಉಚ್ಚಾಟನೆಗೊಳಿಸಿ ಜಗದೇವ…

Read More

ಮೈಸೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಆದರೆ ಯಾವಾಗ ಅಂತ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ನಾನೇನು ಹೇಳುವ ಅವಶ್ಯಕತೆ ಇಲ್ಲ ಎಂದರು. ಪವರ್ ಶೇರಿಂಗ್ ಬಗ್ಗೆ ಪಕ್ಷದಲ್ಲಿ ಏನು ಚರ್ಚೆ ಆಗಿತ್ತು ಎನ್ನುವುದು ಗೊತ್ತಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಶಾಸಕರ ಅಹವಾಲು ಕೇಳಿದ್ದಾರೆ. ಯಾವ ಸಚಿವ ಸಚಿವರ ಬಗ್ಗೆ ಕೂಡ ದೂರು ಬಂದಿದೆ ಅವು ಗೊತ್ತಿಲ್ಲ. ಎಲ್ಲವನ್ನು ಹೈಕಮಾಂಡ್ ಸರಿ ಮಾಡುತ್ತದೆ ಹೊರಗಿನಿಂದ ಬಂದ ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ ಎನ್ನುವ ವಿಚಾರವಾಗಿ ಸಿದ್ದರಾಮಯ್ಯ ಈಗ ಕಾಂಗ್ರೆಸ್ ನಾಯಕರು ಅವರು ಜನಪ್ರಿಯ ನಾಯಕರು ಹಾಗಾಗಿ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

Read More

ವಿಜಯಪುರ : ವಿಜಯಪುರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರದ ಅಮರಾವರ್ಷಣೆ ಸಹಕಾರಿ ಬ್ಯಾಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ. ನಗರದ ಎಸ್ಎಸ್ ರಸ್ತೆಯ ಎಸ್ ಎಸ್ ಕಾಂಪ್ಲೆಕ್ಸ್ ನಲ್ಲಿ ಇರುವಂತಹ ಅಮರವರ್ಷಿಣಿ ಎಂಬ ಸಹಕಾರಿ ಬ್ಯಾಂಕ್ ನಲ್ಲಿ ಸುಶೀಲ್ ಕಾಳೆ ಎನ್ನುವ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸದ್ಯ ಗಾಯಾಳು ಸುಳಿಸಬ್ ಕಾಳೆಗೆ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗಾಂಧೀ ಚೌಕ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

Read More

ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ: ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು…

Read More

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ವಿಚಾರವಾಗಿ ಪ್ರಸ್ತಾಪಿಸಲಾಯಿತು. ಅಸುರಕ್ಷಿತ ಆಹಾರ ಸೇವನೆಯೇ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು. ಹೃದಯಾಘಾತ ಸಂಬಂಧಪಟ್ಟಂತೆ ಸರಣಿ ಹೃದಯಾಘಾತ ಸಾವುಗಳಿಗೆ ಅಸುರಕ್ಷಿತ ಆಹಾರ ಸೇವನೆ ಕಾರಣವಾಗಿದೆ. ಬೀದಿ ಬದಿಯ ಆಹಾರಗಳ ಬಗ್ಗೆ ಸರಿಯಾದ ಪರಿಶೀಲನೆ ನಡೆಸಬೇಕಿದೆ. ಗೋಬಿ ಮಂಚೂರಿಯಲ್ಲಿ ಅತಿ ಹೆಚ್ಚು ಹಾನಿಕಾರಕ ಅಂಶಗಳು ಇರುತ್ತವೆ. ಹೂಕೋಸು ಬೆಳೆಯುವಾಗ ಭಾರಿ ಪ್ರಮಾಣದ ಕ್ರಿಮಿನಾಶಕ ಬಳಸುತ್ತಾರೆ. ಇದನ್ನು ಅಡಿಗೆ ತಯಾರಿ ಮಾಡುವಾಗ ಸರಿಯಾಗಿ ಬೇಯಿಸುವುದಿಲ್ಲ. ಗೋಬಿ ಮಂಚೂರಿಯನ್ನು ಕೂಡ ಅರ್ಧಂಬರ್ಧ ಬೇಯಿಸಿ ಕೊಡುತ್ತಾರೆ ಇದನ್ನು ತಿಂದ ಜನರ ಹೊಟ್ಟೆಗೆ ಹೋಗಿ ರೋಗಕ್ಕೆ ಕಾರಣವಾಗುತ್ತದೆ. ಜೊತೆಗೆ ನೀರಿನ ಘಟಕಗಳ ಬಗ್ಗೆಯೂ ಗಮನ ನೀಡಬೇಕು ಸುರಕ್ಷಿತ ನೀರು ಕುಡಿಯದಿದ್ದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗಾಗಿ ಶುದ್ಧ…

Read More

ಬೆಂಗಳೂರು : ಸಿಗಂದೂರಿನ ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲು ಕೇಂದ್ರ ಸಚಿವರು ಸಮ್ಮತಿಸಿದ್ದರೂ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತರದೇ ಇಂದೇ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಗಾಗಿ ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು. ಹೀಗಿದ್ದರೂ ಸಹ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತರದೇ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದರು. ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರ. ಇಲ್ಲಿ ಶಿಷ್ಟಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ…

Read More

ಬೆಂಗಳೂರು : ಬೆಂಗಳೂರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸರ್ಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿದ್ದು, ಈ ವಿಚಾರವಾಗಿ ಇದೀಗ ಹೈಕೋರ್ಟಿಗೆ ಮುಜರಾಯಿ ಇಲಾಖೆ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಹೌದು ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ ಪಿ.ಪ್ರಸನ್ನ ಕುಮಾರ್‌ ಅವರು ನ್ಯಾಯಮೂರ್ತಿ ಸುನಿಲ್‌ ದತ್ತ ಯಾದವ್‌ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠ, ನಾಳೆ ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.

Read More

ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಹೌದು ನಾಳೆ ಹಿರಿಯ ನಟಿ ಬಿ ಸರೋಜಾ ದೇವಿ ಅಂತ್ಯಕ್ರಿಯೆ ನೆರವಿರಲಿದೆ, ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಬೆಳಿಗ್ಗೆ 11:30 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಹಾಗಾಗಿ ನಾಳೆವರೆಗೂ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ನಟಿ ಸರೋಜಾದೇವಿ ಪುತ್ರ ಗೌತಮ್ ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇದೀಗ ಬಿ.ಸರೋಜದೇವಿ ಅವರು ನಿಧನರಾಗೋದಕ್ಕು ಮುನ್ನ ಅಂತಿಮ ಕ್ಷಣ ಹೇಗಿತ್ತು ಅನ್ನೋದು, ಅವರ ಮ್ಯಾನೇಜರ್​ ವಿಜಯ್​ ಕುಮಾರ್​ ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ನಟಿ ಎಂದಿನಂತೆ ಪೂಜೆ ಸಲ್ಲಿಸಿ ಕುಳಿತುಕೊಂಡಾಗ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ನಿಧನರಾಗಿರುವುದು ತಿಳಿಯಿತು ಎಂದಿದ್ದಾರೆ. ‘ಸರೋಜಾದೇವಿ ಅವರು ದಿನವೂ ಎದ್ದ ತಕ್ಷಣ ಪತ್ರಿಕೆ ಓದುತ್ತಿದ್ದರು. ಬಳಿಕ ಸ್ನಾನ ಮಾಡಿ ಪೂಜೆ ಮಾಡುತ್ತಿದ್ದರು. ಅದಾದ ಮೇಲಷ್ಟೇ ಉಪಾಹಾರ ಸೇವಿಸುತ್ತಿದ್ದರು. ಇಂದು ಕೂಡ ಪೂಜೆ ಮಾಡಿ ಟಿವಿ ಆನ್…

Read More

ಬೆಂಗಳೂರು : ಈಗಾಗಲೇ ರಾಜು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಅಲ್ಲದೆ ಇಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಈವರೆಗೆ ಒಟ್ಟು 500 ಕೋಟಿ ಪ್ರಯಾಣ ಮಾಡಿದರು. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿತರಣೆ ಮಾಡಿದರು. ಇದೀಗ ಸಾರಿಗೆ ಇಲಾಖೆ ಕೆಎಸ್‌.ಆರ್.ಟಿ.ಸಿ ಲಗೇಜ್‌ ರೂಲ್ಸ್‌ ನಲ್ಲಿ ಒಂದಿಷ್ಟು ಹೊಸ ಮಾರ್ಪಾಡು ಮಾಡಿದೆ. ದೂರದೂರಿಗೆ ಸರ್ಕಾರಿ ಬಸ್ಸುಗಳಲ್ಲಿ ತೆರಳುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಗುಡ್‌ ನ್ಯೂಸ್‌ ಕೊಟ್ಟಿದೆ. ಇದೀಗ ಪ್ರಯಾಣಿಕರ ಜೊತೆಗೆ ಪ್ರಾಣಿ ಪಕ್ಷಿ ಸಾಗಿಸಲೂ ಅವಕಾಶ ನೀಡಿ ಸಾರಿಗೆ ಇಲಾಖೆ ಅವಕಾಶ ಮಾಡಿದೆ. ಹೌದು ನಿರ್ದಿಷ್ಟ ಹಣ ಪಾವತಿಸಿದರೆ ಪ್ರಾಣಿ ಪಕ್ಷಿ, ಟಯರ್, ಟ್ಯೂಬ್, ಫ್ರಿಡ್ಜ್, ವಾಷಿಂಗ್ ಮಿಷಿನ್ ಸಾಗಿಸುವುದಕ್ಕೂ ಕೂಡ ಸಾರಿಗೆ ಇಲಾಖೆ ಅವಕಾಶ ಮಾಡಿದೆ. 30 ಕೆಜಿಯವರೆಗೆ ಯಾವುದೇ ಹಣ ಪಾವತಿ ಮಾಡುವಂತಿಲ್ಲ. ಅದಕ್ಕಿಂತ ಮೇಲಿನ ಲಗೇಜ್ ಗೆ ಪ್ರಯಾಣಿಕರು…

Read More