Subscribe to Updates
Get the latest creative news from FooBar about art, design and business.
Author: kannadanewsnow05
ಪರಮೇಶ್ವರನು ಅಡ್ಡ ನಾಮಗಳನ್ನು ಧರಿಸುತ್ತಾನೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಶಿವನು ಅಡ್ಡ ನಾಮಗಳನ್ನು ಇಡುತ್ತಾನೆ. ಅದೇ ರೀತಿ, ವಿಷ್ಣುನು ನಿಲುವು ನಾಮಗಳನ್ನು ಧರಿಸುತ್ತಾನೆ. ಶಿವ–ಕೇಶವರಲ್ಲಿ ಭೇದವಿಲ್ಲವೆಂದಾಗ, ಈ ನಾಮಗಳಲ್ಲಿ ಮಾತ್ರ ಏಕೆ ಭೇದ? ಶಿವನು ಅಡ್ಡ ನಾಮಗಳನ್ನು, ವಿಷ್ಣುನು ನಿಲುವು ನಾಮಗಳನ್ನು ಏಕೆ ಧರಿಸುತ್ತಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,…
ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜುವೆಲ್ಲರಿ ಶಾಪ್ ನಲ್ಲಿ ಕೇಜಿ ಕಟ್ಟಲೆ ಬಂಗಾರ ಹಾಗು ವಜ್ರ ಕಳ್ಳತನ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹುಣಸೂರಿನ ಸ್ಕೈಗೋಲ್ಡ್ ಅಂಡ್ ಡೈಮಂಡ್ ಶಾಪ್ ನಲ್ಲಿ ದರೋಡೆ ನಡೆದಿದ್ದು, ದರೋಡೆಕೋರರು ಪರಾರಿಯಾಗಿರುವ ದೃಶ್ಯ ಇದೀಗ ಸೆರೆಯಾಗಿದೆ. ದರೋಡೆಕೋರರು ಎಸ್ಕೇಪ್ ಆಗುತ್ತಿರುವ ದೃಶ್ಯ ಇದೀಗ ಲಭ್ಯವಾಗಿದೆ. ಲೂಟಿ ನಂತರ ಪಲ್ಸರ್ ಬೈಕ್ ನಲ್ಲಿ ದರೋಡೆಕೋರರು ಪರಾರಿಯಾಗಿದ್ದಾರೆ. ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಮೂವರು ಹಾಗೂ ಮತ್ತೊಂದು ಬೈಕ್ನಲ್ಲಿ ಇಬ್ಬರು ಒಟ್ಟು ಐವರು ಒಳಗೊಂಡ ಈ ಗ್ಯಾಂಗ್ ಕೆ ಆರ್ ನಗರ ಮಾರ್ಗವಾಗಿ ಪರಾರಿಯಾಗಿದ್ದಾರೆ. ದರೋಡೆಕೋರರು ಪಲ್ಸರ್ ಬೈಕ್ ನಲ್ಲಿ ಅತ್ಯಂತ ವೇಗವಾಗಿ ತೆರಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಘಟನೆ ಹಿನ್ನೆಲೆ? ಭಾನುವಾರ ಮಧ್ಯಾಹ್ನ 12.30ಕ್ಕೆ 2 ಬೈಕ್ನಲ್ಲಿ ಆಗಮಿಸಿದ 5 ದರೋಡೆ ಕೋರರು ಕೃತ್ಯ ಎಸಗಿದ್ದಾರೆ. ಎಲ್ಲರ ಕೈಯಲ್ಲೂ ಗನ್ ಇತ್ತು. ಒಬ್ಬ ಹೆಲೈಟ್ ಧರಿಸಿದ್ದರೆ, ಮಿಕ್ಕವರು ಮಳಿಗೆಯೊಳಗೆ ಬಂದ ನಂತರ ಮಾಸ್ಕ್…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸ್ ಹೆಸರು ಆರೋಪಿ ಮುತ್ತು ಅಭಿಮನ್ಯುವನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಗೀತಾ ಮತ್ತು ಆಕೆಯ ಪುತ್ರಿ ಜೊತೆಗೆ ಆರೋಪಿ ಮುತ್ತು ವಾಸವಿದ್ದ. ಪುತ್ರಿ ಮದುವೆ ಮಾಡಿ ಕೊಡುವಂತೆ ಗೀತಾಗೆ ಮುತ್ತು ಒತ್ತಾಯಿಸಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ಗೀತಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಸದ್ಯ ತಮಿಳುನಾಡಿನಲ್ಲಿ ಆರೋಪಿ ಮುತ್ತು ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಇದೀಗ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜು ಕುಮಾರ್ ಸೂಗೂರೆ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಉದ್ಯಮಿ ಸಂಜುಕುಮಾರ ಸುಗುರೆ 99 ಲಕ್ಷ ಹಣ ಕೊಟ್ಟಿದ್ದರು. ಚುನಾವಣೆ ಸಮಯದಲ್ಲಿ ಶರಣು ಸಲಗರ 99 ಲಕ್ಷ ಹಣ ಪಡೆದಿದ್ದಾರೆ. ಖಾಲಿ ಚಕ್ ಪಡೆದು ಸಂಜು ಕುಮಾರ್ 99 ಲಕ್ಷ ರೂಪಾಯಿ ಹಣ ಕೊಟ್ಟಿದ್ದಾರೆ. ಆದರೆ ಹಣ ವಾಪಸ್ ಕೊಡದ ಹಿನ್ನೆಲೆಯಲ್ಲಿ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.
ಉತ್ತರಕನ್ನಡ : ಕಾರವಾರದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿಯನ್ನು ಪ್ರವಾಸೋದ್ಯಮ ಹಬ್ ಆಗಿ ಅಭಿವೃದ್ಧಿಪಡಿಸುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿದರು. ನಿನ್ನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ಇದೆ ವೇಳೆ ಕರಾವಳಿ ಉತ್ಸವದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ, ಜಿಲ್ಲಾಡಳಿತ ವತಿಯಿಂದ ಶಾಸಕ ಸತೀಶ್ ಸೈಲ್, ವಿಷ್ಣುವಿನ ವಿಶ್ವರೂಪ ದರ್ಶನ ಬಿಂಬಿಸುವ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧದ ವಿಗ್ರಹ ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆ ಈಡೇರಲೆಂದು ಆಶಿಸುವುದಾಗಿ…
ಮೈಸೂರು : ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಯುವತಿಯ ಪ್ರೀತಿಯ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಮನನೊಂದ ಯುವಕ ನಾಗೇಂದ್ರ (23) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಾಗೇಂದ್ರ ಯುತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಈ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಯುವತಿಯ ಕುಟುಂಬದ ಜಯಕುಮಾರ್ ಮಂಜು ಸೇರಿ ಐವರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನ ಆಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ ಈ ಕುರಿತು ನಾಗೇಂದ್ರ ಪೋಷಕರು ಬನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸುತ್ತಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ಹೋಟೆಲ್ ಒಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ ಕೆಲವೇ ನಿಮಿಷದಲ್ಲಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಜಯಪುರ ನಗರದ BLDE ರಸ್ತೆಯಲ್ಲಿರುವ ಕೃಷ್ಣ ಹೋಟೆಲ್ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಹೋಟೆಲಲ್ಲಿ ಇದ್ದಂತಹ ಸಿಲಿಂಡರ್ ಗಳು ಬೆಂಕಿ ಇಂದ ಸ್ಪೋಟಗೊಂಡಿದ್ದು ಇಬ್ಬರು. ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಒಂದು ಘಟನೆ ನಡೆದಿದೆ ಐದಾರು ಪುಡಿ ರೌಡಿಗಳು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದಂತಹ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರಿಬ್ಬರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಸಿಸಿಟಿವಿಯಲ್ಲಿ ದಾಳಿಯ ದೃಶ್ಯ ಲೈವ್ ಸೆರೆಯಾಗಿದೆ. ಬಶೀರ್ ಎಂಬಾತನ ಮನೆಗೆ ನುಗ್ಗಿ ಈ ಒಂದು ಗ್ಯಾಂಗ್ ಹಲ್ಲೆ ಮಾಡಿದೆ. ಅಲ್ಲದೇ ಪಾನ್ ಶಾಪ್ ಗೆ ನುಗ್ಗಿ ಬಾಟಲ್ ಗಳನ್ನು ಪುದಿಗಟ್ಟಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 9 ಗಂಟೆಗೆ ಈ ಒಂದು ಘಟನೆ ನಡೆದಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ಬೆಂಗಳೂರು : ನಗರದ ಮಾಲ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದ ಕಾಮುಕನನ್ನ ಪೊಲೀಸರು ಒದ್ದು ಒಳಗಡೆ ಹಾಕಿದ್ದಾರೆ. ಡಿಸೆಂಬರ್.25ರಂದು ಕ್ರಿಸ್ ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಮಾಲ್ ನಲ್ಲಿ ಸ್ನೇಹಿತೆಯರೊಂದಿಗೆ ಕ್ರಿಸ್ ಮಸ್ ಆಚರಿಸುತ್ತಿದ್ದ ವೇಳೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿಯನ್ನು ಮೆರೆದಿದ್ದನು.ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಮಹದೇವಪುರ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ವಿಚಾರಣೆ ಮಾಡಿದಾಗ ಗುವಾಹಟಿ ಮೂಲದ ಮನೋಜ್(27) ಎಂಬುದಾಗಿ ತಿಳಿದು ಬಂದಿದೆ. ಡೆಲಿವರಿ ಬಾಯ್ ಆಗಿ ಕೆಲಸವನ್ನು ಆರೋಪಿ ಮನೋಜ್ ಶಾ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.
ಆಂಧ್ರಪ್ರದೇಶ : ಕೇರಳದ ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ಅನಕಾಪಲ್ಲಿಯಲ್ಲಿ ಯಲಮಂಚಿಯಲ್ಲಿ ಈ ಒಂದು ಘಟನೆ ನಡೆದಿದೆ. ಎಕ್ಸ್ಪ್ರೆಸ್ ರೈಲಿನ ಬಿ1 ಬೋಗಿಯಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ಇದರಲ್ಲಿ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ದುರಂತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಆಂಧ್ರಪ್ರದೇಶದ ವಿಜಯವಾಡ ನಿವಾಸಿ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














