Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಜಿಬಿಎ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆ ಏಳು ವರ್ಷದ ಅವಧಿಗೆ 46 ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರಗಳು ಈ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಕಸಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲಾಗಿದೆ 613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಇನ್ನು ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ ಮುಂದಿನ ಹೆಜ್ಜೆ ಇಡುವುದಕ್ಕಾಗಿ ತೋರಿಸಿದಂತಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪುಟ ಅಭಿನಂದನೆ ಸಲ್ಲಿಸಿತು ಎಂದು ಸಚಿವ ಪಾಟೀಲ್ ತಿಳಿಸಿದರು. 3 ನಮ್ ಪುಟ್ಟ ಉಪ ಸಮಿತಿಗಳು ಆರು ತಿಂಗಳು ಆದರೂ ವರದಿ ಸಲ್ಲಿಸಲಿಲ್ಲ ಆದಷ್ಟು ಬೇಗ…
ಮೈಸೂರು: ಮುಂಬೈ ಪೊಲೀಸ್ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ವಾತಾವರಣ ಸೃಷ್ಟಿಸಿ ಕೇರಳದ ವ್ಯಕ್ತಿಯೊಬ್ಬರಿಂದ 20.50 ಲಕ್ಷ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೈಸೂರಿನ 21 ವರ್ಷದ ಯುವತಿಯನ್ನು ಕೇರಳದ ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅಶೋಕಪುರಂ ನಿವಾಸಿ ಚಂದ್ರಿಕಾ (21) ಬಂಧಿತ ಯುವತಿ. ಅಶೋಕಪುರಂ ಠಾಣೆ ಇನ್ಸ್‌ಪೆಕ್ಟರ್ ಸಿ.ರೋಹಿತ್ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯೆ ನೀಡಿ, ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಆರೋಪಿಯ ನಿವಾಸ ಪತ್ತೆ ಹಚ್ಚಲು ಮತ್ತು ಬಂಧಿಸಲು ನಮ್ಮ ಸಹಕಾರ ಪಡೆದಿದ್ದಾರೆ ಎಂದು ತಿಳಿಸಿದರು. ಉದ್ಯೋಗಿಯನ್ನು ಸಂಪರ್ಕಿಸಿ ಮುಂಬೈ ಪೊಲೀಸ್ ಪ್ರಧಾನ ಕಚೇರಿಯ ನೆಹಶರ್ಮ ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಮ್ಮ ಹೆಸರಿನಲ್ಲಿ ಹಲವು ನಕಲಿ ಬ್ಯಾಂಕ್ ಖಾತೆಗಳು ಹಾಗೂ ಮೊಬೈಲ್ ಸಂಖ್ಯೆಗಳನ್ನು ತೆರೆಯಲಾಗಿದೆ. ಅವುಗಳನ್ನು ಕೋಟ್ಯಂತರ ರೂ. ಅಪರಾಧಗಳಿಗೆ ಬಳಸಲಾಗುತ್ತಿದೆ. ನೀವು 25 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ ಎಂದು ದೂರುದಾರನಿಗೆ ಹೆದರಿಸಿದ್ದರು. ಅಲ್ಲದೆ ನಾವು ಹೇಳಿದಂತೆ ಕೇಳದಿದ್ದರೆ ಬಂಧಿಸುವುದಾಗಿ ಬೆದರಿಕೆ…
ಬೆಂಗಳೂರು ನಗರ ಜಿಲ್ಲೆ, ನವೆಂಬರ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ (ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳಿಗೆ ದಂಡ ವಿಧಿಸಿ ಪ್ರಕರಣ ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರು ಆದೇಶಿಸಿದ್ದಾರೆ.ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕೆಪಿಎಂಇ ಮತ್ತು ಕುಂದು ಕೊರತೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಒಟ್ಟು 57 ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್ ಗಳು ಹಾಗೂ ಪುನರ್ವಸತಿ ಕೇಂದ್ರಗಳಲ್ಲಿ ಕೆಪಿಎಂಇ ಕಾಯ್ದೆ ಅನ್ವಯ ನಿಯಮವನ್ನು ಉಲ್ಲಂಘನೆ ಮಾಡಿರುವ ತಾವರೆಕೆರೆಯಲ್ಲಿರುವ ಸುಶ್ರತ ಕ್ಲಿನಿಕ್, ಶ್ರೀ ಸಾಯಿ ಕ್ಲಿನಿಕ್ , ಮಾತೃಶ್ರೀ ಕ್ಲಿನಿಕ್ ಮತ್ತು ಮಾತಾ ಕ್ಲಿನಿಕ್, ಕನಕಪುರ ಮುಖ್ಯ ರಸ್ತೆಯ ಕಗ್ಗಲೀಪುರದಲ್ಲಿರುವ ಸಪ್ತಗಿರಿ ಕ್ಲಿನಿಕ್ , ಕೆಂಗೇರಿ ಸ್ಯಾಟಲೈಟ್ ಟೌನ್ ನ ಶಿರ್ಕೆ ಅಪಾರ್ಟ್ಮೆಂಟ್ ಬಳಿ ಇರುವ ಶ್ರೀ ಫೌಂಡೇಶನ್,,…
ಬೆಂಗಳೂರು : ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಗೆ ಬಂಧನದ ಭೀತಿ ಹಿನ್ನೆಲೆಯಲ್ಲಿ, ಅನಾರೋಗ್ಯ ಕಾರಣಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸತೀಶ್ ಸೈಲ್ ಅವರ ಮಧ್ಯಂತರ ಜಮೀನು ಅನ್ನು ನವೆಂಬರ್ 20ರವರೆಗೆ ವಿಸ್ತರಿಸಿತು. ವಿಚಾರಣೆ ವೇಳೆ ಸತೀಶ್ ಸೈಲ್ ಆರೋಗ್ಯ ಸ್ಥಿತಿ ಬಗ್ಗೆ ಸ್ವತಂತ್ರ ಪರಿಶೀಲನೆ ನಡೆಸಲಾಗಿದ್ದು, ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯಲ್ಲಿ ಆರೋಗ್ಯ ಸ್ಥಿತಿ ಪರಿಶೀಲಿಸಲಾಗಿದೆ. ಎಂದು ಇಡಿ ಪರ ಎಎಸ್ಜಿ ಅರವಿಂದ್ ಕಾಮತ್ ಹೈಕೋರ್ಟ್ ಗೆ ಮಾಹಿತಿ ನೀಡಿದರು. ಸತೀಶ್ ಸೈಲ್ ರ ವೈದ್ಯಕೀಯ ದಾಖಲೆಗಳನ್ನು ಒದಗಿಸಲಾಗುವುದು. ಲಿವರ್ ಕಸಿಯ ಅಗತ್ಯವಿದೆ ಎಂಬ ವೈದ್ಯಕೀಯ ವರದಿ ಇದೆ. ಎಂದು ಹೈಕೋರ್ಟ್ ಗೆ ಸತೀಶ್ ಸೈಲ್ ಪರ ವಕೀಲರು ಮಾಹಿತಿ ನೀಡಿದರು. ನ.15 ರಂದು ಬೆಳಿಗ್ಗೆ 11.30ಕ್ಕೆ ಆಸ್ಪತ್ರೆಗೆ ಸತೀಶ್ ಸೈಲ್ ಗೆ ಹಾಜರಾಗಲು ಹೈಕೋರ್ಟ್ ಸೂಚನೆ ನೀಡಿತು. ಬಳಿಕ ನವೆಂಬರ್…
ನವದೆಹಲಿ : ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಹೌದು ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿದೆ. ಮೇಕೆದಾಟು ಯೋಜನೆ ಇನ್ನು ಆರಂಭಿಕ ಹಂತದಲ್ಲಿ ಇದೆ. ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸಲ್ಲಿಸಿದ್ದ ಪರಿಟ್ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.
ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಓರ್ವ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗಣಪತಿ ಬತ್ತಿ (32) ಹಾಗೂ ತಾಪಸ್ ಕುಮಾರ್ (46) ಎಂದು ತಿಳಿದುಬಂದಿದ್ದು ಪೊಲೀಸರು ಮೃತ ಪಾದಚಾರಿ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಕಾರು ಚಾಲಕ ಸುಭಾಷ್ ರಾಮತೀರ್ಥಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇತ್ತೀಚಿಗೆ AI ತಂತ್ರಜ್ಞಾನ ಬಳಸಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೇ ಹುಲಿ ಮನುಷರ ಮೇಲೆ ಅಟ್ಯಾಕ್ ಮಾಡುವ ವಿಡಿಯೋ ಸಹ ಹರಿದಾಡಿತ್ತು. ಇದೀಗ AI ತಂತ್ರಜ್ಞಾನ ಬಳಸಿ ಹುಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಬಿಟ್ಟರೆ, ಫೋಟೋ, ವಿಡಿಯೋ ಶೇರ್ ಮಾಡಿದ್ರೆ ಕಠಿಣ ಕ್ರಮ ಕೈಗೊಳಲಾಗುತ್ತೆ. ಹುಲಿ ಬಂತು ಎಂದು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹುಲಿ ಬಂತು ಎಂದು ಸುಳ್ಳು ಫೋಟೋ ಹಂಚುವುದರಿಂದ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ. AI ಹಾವಳಿಯಿಂದ ಕೆಲಸ ನಿರ್ವಹಿಸಲು ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಹಣಕಾಸಿನ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಟೇಶ್ ಕಳೆದ 2 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ ಅಂತ ಹೇಳಲಾಗ್ತಿದೆ. ಹಣಕಾಸು ನಷ್ಟದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಮೃತದೇಹವನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ನವದೆಹಲಿ : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ತಿರುವ ಸಿಕ್ಕಿದ್ದು, ದೆಹಲಿ ಸ್ಫೋಟಕ್ಕೆ ಬಳಕೆ ಮಾಡಿದ್ದು ಎರಡು ಕಾರು ಅಲ್ಲ ಮೂರು ಕಾರು ಎಂದು ತನಿಖೆಯಲ್ಲಿ ಬಯಲಾಗಿದೆ. ಹೌದು ದೆಹಲಿ ಸ್ಫೋಟಕ್ಕೆ ಬಳಕೆ ಮಾಡಿದ್ದು ಮೂರು ಕಾರು ಎಂದು ತನಿಖೆಯಲ್ಲಿ ಬಯಲಾಗಿದೆ. ಕುಮಾರ್ ಗೆ ಸಂಬಂಧಿಸಿದ ಮೂರು ಕಾರುಗಳ ಜಾಲ ಈಗ ಬೆಳಕಿಗೆ ಬಂದಿದ್ದು, ಇಕೋ ಸ್ಪೋರ್ಟ್ಸ್ ಕಾರು ಸಿಕ್ಕ ಬಳಿಕ ಮತ್ತೊಂದು ಕಾರಿಗೆ ಶೋಧ ಕಾರ್ಯ ಮುಂದುವರಿದಿದೆ. ಸದ್ಯ ಇಕೋ ಸ್ಪೋರ್ಟ್ಸ್ ಕಾರು ಫರಿದಾದಾಬಾದ್ ನಲ್ಲಿ ಸಿಕ್ಕಿದ್ದು ಬಿಳಿ ಬಣ್ಣದ ಬ್ರಿಜಾ ಕಾರಿಗಾಗಿ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ. ಉಗ್ರ ಚಟುವಟಿಕೆಗೆ ಬಳಸಿರುವ ಹಿನ್ನೆಲೆ ಬಿಳಿ ಕಾರಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟಗೊಂಡು ಕುರಿಗಾಹಿ ಮಹಿಳೆಯ ಕೈ ಬೆರಳು ಛಿದ್ರಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸಿಡಿಮದ್ದು ಸ್ಫೋಟಗೊಂಡು ಗುಮ್ಮನಹಳ್ಳಿ ಗ್ರಾಮದ ರಂಗಮ್ಮ (50) ಗೆ ಗಾಯವಾಗಿದೆ. ಕಾಡು ಹಂದಿ, ಇತರೆ ಪ್ರಾಣಿಗಳು ಹೊಲಕ್ಕೆ ಬರದಂತೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡಿದೆ. ಈ ವೇಳೆ ಸಿಡಿಮದ್ದಿನ ವೈರ್ ಮೇಕೆಗೆ ಸುದ್ದಿಕೊಂಡಿದೆ. ಅದನ್ನು ತೆಗೆದು ಮೇಕೆ ಬಿಡಿಸಲು ಹೋದಾಗ ದುರ್ಘಟನೆ ಸಂಭವಿಸಿದೆ. ಸದ್ಯ ರಂಗಮ್ಮಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಗಾಯಳು ರಂಗಮ್ಮ ರವಾನಿಸಲಾಗಿದೆ.














