Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಕಳ್ಳತನ ಒಂದು ನಡೆದಿದ್ದು ತಂದೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳ ಕಾಲೇಜು ಪೀಸ್ ಗಾಗಿ ಎಂದು ಕಷ್ಟಪಟ್ಟು ಕೂಡಿಟ್ಟಿದಂತಹ ಹಣ ಮತ್ತು ಚೀನಾ ಭರಣವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಬೆಂಗಳೂರಿನ ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಶ್ರೀನಿವಾಸ್ ಎಂಬ ಕಾರ್ಮಿಕರ ಮನೆಯಲ್ಲಿ ಕಳ್ಳತನ ನಡೆದಿದೆ. ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕಾಗಿ ಸಾಲದ ಮೂಲಕ ಸಂಗ್ರಹಿಸಿದ್ದ 65,000 ರೂಪಾಯಿ ನಗದು ಮತ್ತು 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ನಿನ್ನೆ ಮಧ್ಯಾಹ್ನದ ವೇಳೆ, ಶ್ರೀನಿವಾಸ್ ಮತ್ತು ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು, ಮತ್ತು ಅವರ ಮೂವರು ಮಕ್ಕಳು ಕಾಲೇಜಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆ ಖಾಲಿಯಾಗಿತ್ತು. ಅಪರಿಚಿತ ವ್ಯಕ್ತಿಗಳು ಮನೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕಳೆದ ವಾರ ಸಾಲದ ಮೂಲಕ ಸಂಗ್ರಹಿಸಿದ್ದ 65,000 ರೂಪಾಯಿ ನಗದು ಮತ್ತು 5 ಗ್ರಾಂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾರೆ. ಘಟನೆಯ ಬಗ್ಗೆ…

Read More

ವಿಜಯನಗರ : ರಾಜ್ಯದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಪಾಪಿಗಳು ನವಜಾತ ಹೆಣ್ಣು ಶಿಶುವನ್ನು ಚರಂಡಿಯಲ್ಲಿ ಬಿಸಾಡಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ದಶಮಾಪುರ ಗ್ರಾಮದ ಆಶಾ ಕಾರ್ಯಕರ್ತೆ ಮಲ್ಲಮ್ಮ ಅವರು ನೀಡಿರುವ ಪ್ರಕರಣದ ಪ್ರಕಾರ, ಗ್ರಾಮದ ಕಣಿವೆಹಳ್ಳಿ ಕೃಷ್ಣಪ್ಪನವರ ಗಣದ ಪಕ್ಕದಲ್ಲಿರುವ ಚರಂಡಿಯಲ್ಲಿ ನವಜಾತ ಅಪರಿಚಿತ ಹೆಣ್ಣು ಶಿಶುವಿನ ಶವ ಅಂಗಾತವಾಗಿ ತೇಲುತ್ತಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿಕೊಳ್ಳುತ್ತಿದ್ದನ್ನು ತಿಳಿದುಕೊಂಡು ಕೂಡಲೇ ಗ್ರಾಮ ಅಭಿವೃದ್ಧಿ ಅಧಿಕಾರಿ ನವೀನ್ ಅವರಿಗೆ ದೂರವಾಣಿ ಮೂಲಕ ತಿಳಿಸಿ ಗ್ರಾಮ ಪಂಚಾಯತ್‌ ಸಿಬ್ಬಂದಿಯೊಂದಿಗೆ ಶಿಶುವನ್ನು ಚರಂಡಿಯಿಂದ ಹೊರ ತೆಗೆದು ನೋಡಿದಾಗ ಶಿಶು ಸುಮಾರು 2-3 ದಿನಗಳ ಹಿಂದೆ ಜನಿಸಿದ ನವಜಾತ ಶಿಶು ಎಂದು ತಿಳಿದು ಬಂದಿದೆ. ಕಚೇರಿಯ ಮೇಲ್ವಿಚಾರಕಿಯರಾದ ನಾಗರತ್ನಮ್ಮ, ಲಲಿತಮ್ಮ ಸ್ಥಳಕ್ಕೆ ಬಂದು ನೋಡಿ ವಿಷಯವನ್ನು ಪೊಲೀಸ್ ಠಾಣೆಯಲ್ಲಿ ತಿಳಿಸಿ ನವಜಾತ ಮೃತ ಹೆಣ್ಣು ಶಿಶುವಿನ ವಾರಸುದಾರರನ್ನು ಪತ್ತೆ ಮಾಡಿ ಅವರ ವಿರುದ್ಧ…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಇಂದು ಘೋರ ದುರಂತ ನಡೆದಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಬಳೂಟಗಿ ಗ್ರಾಮದ ನಿವಾಸಿ ಮಂಜುನಾಥ ಬಾಲಪ್ಪ ಬಂಡಿ(13) ಚಿಕನಾಳ ಗ್ರಾಮದ ನಿವಾಸಿ ಷಣ್ಮುಖಪ್ಪ ನಿಲಪ್ಪ ತಿಪ್ಪಣ್ಣವರ (30) ಎಂದು ತಿಳಿದು ಬಂದಿದೆ. ಈ ಸಂಬಂಧ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳ್ಳದಲ್ಲಿ ಕಾಲು ಜಾರಿ ಬಿದ್ದ ಬಾಲಕನ್ನು ರಕ್ಷಿಸಲು ಹೋಗಿ ಯುವಕ ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದೆ. ನೀರುಪಾಲಾದ ಇಬ್ಬರ ಮೃತ ದೇಹವನ್ನು ಹೂರಗೆ ತೆಗೆದು, ಗುಡೂರ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಗಿದೆ.

Read More

ಕೊಪ್ಪಳ : ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಹಾಗಾಗಿ ಕಳೆದ ಐದು ವರ್ಷದಿಂದ ಯಾವುದೇ ನೇಮಕಾತಿ ಆಗಿಲ್ಲ. ಇದೀಗ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಎಂಟು ಸಾವಿರ ಕಾನ್​ಸ್ಟೇಬಲ್​ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್​ ಪೊಲೀಸ್ ಸ್ಟೇಷನ್ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್​ನಲ್ಲಿ ಅನುದಾನ ಮೀಸಲಿಡಲಾಗುವುದು‌ ಎಂದರು. ಆಳಂದ ಶಾಸಕ ಬಿ.ಆರ್. ಪಾಟೀಲ್, ಸಚಿವ ಹೆಚ್. ಕೆ. ಪಾಟೀಲ್ ಆರೋಪದ ಬಗ್ಗೆ ಪ್ರತ್ರಿಕ್ರಿಯಿಸಿ, ಅವರು ಆರೋಪ ಮಾಡಿದ್ದು ಸರ್ಕಾರದ ವಿರುದ್ಧವಲ್ಲ ಬಿ.ಆರ್. ಪಾಟೀಲ್​ ಹಿರಿಯರು, ಅವರ ಸಲಹೆಯನ್ನು ಕೂಡ ಸರ್ಕಾರ ಸ್ವೀಕರಿಸಲಿದೆ. ಸರ್ಕಾರ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೊಂದು ಘೋರವಾದ ದುರಂತವೊಂದು ನಡೆದಿದ್ದು, ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮೃತ ಯುವಕರನ್ನು ಯಡವಾಲ ಗ್ರಾಮದ ನಿವಾಸಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಬಡಾವಣೆ ನಿವಾಸಿ ಚಿರಂಜೀವಿ (22) ಎಂದು ತಿಳಿದುಬಂದಿದೆ.ಘಟನೆಯಲ್ಲಿ ಹೊಂಡಕ್ಕೆ ಬಿದ್ದಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂದು ತಿಳಿದುಬಂದಿದೆ. ಮೃತ ಗೌತಮ್ ಅವರ ಕುಟುಂಬಕ್ಕೆ ಸೇರಿದ ತೋಟದ ಪಕ್ಕದ ಜಮೀನೊಂದರ ಬಳಿ ಘಟನೆ ನಡೆದಿದೆ. ರಾತ್ರಿ ಗೌತಮ್ ಸುಮಾರು 10 ಜನ ಸ್ನೇಹಿತರ ಜೊತೆಗೂಡಿ ತೋಟಕ್ಕೆ ಹೋಗಿದ್ದರು. ಈ ವೇಳೆ ಕೃಷಿ ಹೊಂಡದಿಂದ ನೀರು ತರಲು ಹೋದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು ಈತನ ರಕ್ಷಣೆಗೆ ಹೋದ ಮತ್ತೋರ್ವನು ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ ಆಗಮಿಸಿದೆ. ಕೃಷಿ ಹೊಂಡದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.…

Read More

ರಾಮನಗರ : ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್​ ಆಡಿಯೋ ವೈರಲ್ ಆದ ಬಳಿಕ ಸರ್ಕಾರಕ್ಕೆ ಬಿಗ್ ಡ್ಯಾಮೇಜ್ ಆಗಿದೆ. ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ ಎನ್ನುವ ಆರೋಪವನ್ನ ಅವರದ್ದೇ ಪಕ್ಷದ ಶಾಸಕರು ಮಾಡ್ತಿದ್ದು, ಸರ್ಕಾರ ಮುಜುಗರ ಉಂಟು ಮಾಡ್ತಿದೆ. ಈಗ ಈ ವಿಚಾರವಾಗಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಮಾತನಾಡಿದ್ದು ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು ಎಂದು ತಿಳಿಸಿದರು. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಸತಿ ಯೋಜನೆ ಅಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು. ಗ್ರಾಮ ಸಭೆಯಲ್ಲಿ ಯಾರೋ ಒಬ್ಬರು ಹೇಳಿದರೆ ಅದು ಆಗುತ್ತಾ? ಗ್ರಾಮ ಪಂಚಾಯಿತಿಯವರೇ ಈ ಬಗ್ಗೆ ತೀರ್ಮಾನ ಮಾಡುವುದು. ಮಂತ್ರಿ ಹಾಗೂ ಸರ್ಕಾರಕ್ಕೂ ಏನು ವ್ಯತ್ಯಾಸ ಇದೆ ಅದೆಲ್ಲ ಸುಳ್ಳು. ಬಿ ಆರ್ ಪಾಟೀಲ್ ಗೆ ಸಂಪೂರ್ಣ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಶಾಸಕ ಬಿ ಆರ್ ಪಾಟೀಲ್ ಜೊತೆಗೆ ನಾನು ಈ ಕುರಿತು ಮಾತನಾಡುತ್ತೇನೆ ಎಂದು…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾದ ಘಟನೆ ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ಶನಿವಾರ ನಡೆದಿದೆ. ಕೊಲೆಯಾದ ರೌಡಿ ಶೀಟರ್ ನನ್ನು ಅವಿನಾಶ್ (32) ಎಂದು ತಿಳಿದುಬಂದಿದೆ. ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದ ಅವಿನಾಶ್, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ ಆನಂತರ ಮೇಲಿನ ಕೋರ್ಟ್‌ನಿಂದ ಜಾಮೀನು ಪಡೆದು ಹೊರಗಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಾಹಿತಿ ತಿಳಿದ ಕೂಡಲೇ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಯರಿನಾರಾಯಣಪುರಕ್ಕೆ ಮೂಲಸೌಕರ್ಯ ಕಲ್ಪಿಸದೆ ಪಿಡಿಓ ಕರ್ತವ್ಯ ಲೋಪ ಎಸಗಿದ್ದಾರೆ. ಯರಿನಾರಾಯಣಪುರ ಗ್ರಾಮದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟಿದ್ದರು. ಸಚಿವ ಸಂತೋಷ್ ಲಾಡ್ ಭೇಟಿಯ ವೇಳೆ ಗ್ರಾಮದ ನಿವಾಸಿಗಳು ದೂರು ನೀಡಿದ್ದರು. ಜನರ ಸುರಕ್ಷತೆಗೆ ಪಿಡಿಓ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಚಿವರು ಅಮಾನತಿಗೆ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಯೋಗದ ಕುರಿತು ಜಾಗೃತಿ ಮೂಡಿಸಲು ಯೋಗ ಮಂದಿರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ‘ಯೋಗ ಮಂದಿರ’ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುತ್ತದೆ. ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ಮಾಡುವ ಯೋಜನೆ ಇದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದರು. ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ.‌ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ.…

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ಆಗಿದ್ದು, ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ನಗರದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಯಾಸಿನ್ ಜಾತಗಾರ (22) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ರೋಹಿತ್ ಜಾಧವ್, ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಚಾಕುವಿನಿಂದ ಚುಚ್ಚಿ ಆರೋಪಿಯು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More