Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಈಶಪ್ಪ ಕುರಿ ಎಂಬುವರ ಜಮೀನಿನ ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ವ್ಯಕ್ತಿಯನ್ನು ಒಳ ಉಡುಪುನಿಂದ ಕೈ ಹಾಗೂ ಪ್ಯಾಂಟ್‌ನಿಂದ ಕಾಲು ಕಟ್ಟಿ ನೀರಿನಲ್ಲಿ ಎಸೆದಿದ್ದಾರೆ. ಮುಖ, ಕುತ್ತಿಗೆ ಹಾಗೂ ತಲೆಗೆ ಗಾಯವಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆತ್ತಲೆಗೊಳಿಸಿ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಎಸ್.ಪಿ ರೋಹನ್‌ಜಗದೀಶ್, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ಸಿಪಿಐ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಬೈಕ್ ಅಪಘಾತದಲ್ಲಿ ಡೆಹ್ರಾಡೂನ್ ಮೂಲದ ದೀಪಕ್ ಸಾವನನಪ್ಪಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬಳಿ ರಾತ್ರಿ ಒಂದು ದುರ್ಘಟನೆ ಸಂಭವಿಸಿದೆ. ಮೃತ ದೀಪಕ್ ಖಾಸಗಿ ಕಂಪನಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆ ರೋಷಣಿ ಜೊತೆಗೆ ಕೋರಮಂಗಲಕ್ಕೆ ದೀಪಕ್ ಹೋಗಿದ್ದರು. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಟ್ಮೆಂಟ್ ಗೆ ಮರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಟ್ಮೆಂಟ್ ಗೆ ದೀಪಕ್ ತೆರಳುತ್ತಿದ್ದರು ಈ ವೇಳೆ ವಿಂಡ್ಸರ್ ಮ್ಯಾನರ್ ಬಳಿ ಸ್ಟೆಪ್ಸ್ ಮೇಲೆ ದೀಪಕ್ ಬೈಕ್ ಇಳಿಸಿದ್ದಾರೆ. ಆಯತಪ್ಪಿ ಬುಲೆಟ್ ಬೈಕ್ ನಿಂದ ದೀಪಕ್ ಬಿದ್ದು ತಲೆಗೆ ಪೆಟ್ಟಾಗಿತ್ತು. ದೀಪಕ್ ಗೆಳತಿ ರೋಷಣಿಗೆ ಕಾಲು ಮುರಿದು ಬಿದ್ದು ಒದಾಡುತ್ತಿದ್ದರು. ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡೆಹರಾಡೂನ್ ಮೂಲಕ ದೀಪಕ್ ಸಾವನಪ್ಪಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸತತ 17 ವರ್ಷಗಳ ಬಳಿಕ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದುಕೊಂಡಿತ್ತು. ಬಳಿಕ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಗೊಂಡು 11 ಜನರು ಸಾವನ್ನಪ್ಪಿದ್ದು, ದುಃಖದ ಸಂಗತಿಯಾಗಿದ್ದು, ಅದರ ಬೆನ್ನಲ್ಲೇ ಇದೀಗ ಆರ್‌ಸಿಬಿ ಅಭಿವಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು. ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್‌ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಅಷ್ಟೆ ಅಲ್ಲದೇ ಕಾಲ್ತುಳಿತ ದುರಂತ ಪ್ರಕರಣ ಈಗ ಆರ್‌ಸಿಬಿ ತವರು ನೆಲವನ್ನ ತೊರೆಯುವಂತೆ ಮಾಡಿದೆ. ವರದಿಗಳ ಪ್ರಕಾರ, ಆರ್‌ಸಿಬಿ ತನ್ನ ಎಲ್ಲಾ ತವರು ಪಂದ್ಯಗಳನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (MCA) ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತು MCA ಕಾರ್ಯದರ್ಶಿ ಕಮಲೇಶ್ ಪೈ ಮಾತನಾಡಿ, ಪುಣೆಯಲ್ಲಿ RCB ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದು…
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ. ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ‘ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಎಸ್‌ಐಟಿ ಪರ ವಕೀಲರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ…
ಮೈಸೂರು : ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದು, ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ ಇದು ಬಹಳ ಅಪಾಯಕಾರಿ ಮುಸ್ಲಿಮರ ಸಮಸ್ಯೆ ಬಡತನ ಅಲ್ಲ ಅವರ ಒಳಗಿನ ಧರ್ಮಂದತೆ ಹಾಗೂ ಅವರ ಮನಸ್ಥಿತಿಯ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದರು. ಮೈಸೂರಲ್ಲಿ ಮಾತನಾಡಿದ ಅವರು, ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸವಾಗಿದೆ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರನ್ನು ಹೇಗೆ ಪತ್ತೆಹಚ್ಚುವುದು? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ದೇಶವನ್ನು ಮುಸ್ಲಿಂ ರಾಷ್ಟ್ರ ಏನಾದರೂ ಮಾಡುತ್ತಾರ? ಇಂತಹ ನಾಯಕರು ಇರುವವರೆಗೂ ಈ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಮೈಸೂರಿನಲ್ಲಿ ಬಿಜೆಪಿಯ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ
ಮಂಡ್ಯ : ಕನ್ನಡದ ತಿಥಿ ಸಿನಿಮಾ ಮೂಲಕ ಖ್ಯಾತಿಯಾಗಿದ್ದ ಗಡ್ಡಪ್ಪ ನಿಧನರಾಗಿದ್ದಾರೆ. ನೋದೇಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ವಿಧಿವಶರಾಗಿದ್ದಾರೆ. ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಅಂತಾನೆ ಚನ್ನೇಗೌಡ ಫೇಮಸ್ ಆಗಿದ್ದರು. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ನಿವಾಸಿಯಾಗಿರುವ ಗಡ್ಡಪ್ಪ ಅಸ್ತಮ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ತಿಥಿ, ತರಲೇ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ ಸುಮಾರು 8 ಸಿನಿಮಾಗಳಲ್ಲಿ ಚೆನ್ನೇಗೌಡ ನಟನೆ ಮಾಡಿದ್ದರು. ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಗಡ್ಡಪ್ಪ ಬಳಲುತ್ತಿದ್ದರು. ತಿಂಗಳ ಹಿಂದೆ ಬಿದ್ದು ಸೊಂಟಕ್ಕೆ ಕೂಡ ಪೆಟ್ಟಾಗಿತ್ತು. ಸೊಂಟದ ಆಪರೇಷನ್ ಆಗಿತ್ತು ಇದೀಗ ಇಂದು ಗಡ್ಡಪ್ಪ ನಿಧನರಾಗಿದ್ದಾರೆ.
ಚಿಕ್ಕಬಳ್ಳಾಪುರ : ಹದಿಹರೆಯದ ವಯಸ್ಸಿನಲ್ಲಿ ಪೋಷಕರಾದವರು ತಮ್ಮ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸದೆ ಹೋದರೆ ಇಂತಹ ಘಟನೆಗಳು ಸಂಭವಿಸುತ್ತವೆ. ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಯುವಕನ ಕುಟುಂಬಸ್ಥರು ಶಾಕ್ ನೀಡಿದ್ದಾರೆ. ವರಸೆಯಲ್ಲಿ ನೀವು ಅಣ್ಣ-ತಂಗಿಯಾಗಬೇಕು ಎಂದು ತಿಳಿಸಿದ್ದಾರೆ. ಹೌದು ಪ್ರೀತಿಸಿ ಮದುವೆಯಾಗಿ ಮನಗೆ ಬಂದ ಜೋಡಿಗೆ ಯುವಕನ ಮನೆಯವರು ಶಾಕ್ ಕೊಟ್ಟಿದ್ದಾರೆ. ವರಸೆಯಲ್ಲಿ ನೀವಿಬ್ಬರು ಅಣ್ಣ-ತಂಗಿ ಆಗಬೇಕು, ಮದುವೆಗೆ ನಾವ್ ಒಪ್ಪಲ್ಲ ಅಂತ ಶಾಕ್ ಕೊಟ್ಟಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ನಡೆದಿದೆ. ಮದುವೆಯಾಗಿ ಸಿಕ್ಕಿಬಿದ್ದ ಜೋಡಿ ಮನೆಗೆ ಬಂದಾಗ ಯುವಕನ ಮನೆಯವರು ʻನೀವಿಬ್ಬರು ವರಸೆಯಲ್ಲಿ ಅಣ್ಣ ತಂಗಿ ಆಗಬೇಕು. ಇದು ತಪ್ಪು ನಿಮ್ಮ ಮದುವೆ ಸರಿ ಅಲ್ಲʼ. ಸಂಬಂಧಿಕರೆಲ್ಲಾ ಬೈಕೊಳ್ತಾರೆ. ಅಂತ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಮನನೊಂದ ಸುಕನ್ಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅಂದಹಾಗೆ ಗೋಪಲ್ಲಿ ಗ್ರಾಮದ ನಿತಿನ್ (23) ಹಾಗೂ ಸುಕನ್ಯಾ…
BREAKING : ಬೆಂಗಳೂರಲ್ಲಿದೆ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ : ಹರಾಜಿಗೆ ಮುಂದಾದ ಕೇಂದ್ರ ಸರ್ಕಾರ
ಬೆಂಗಳೂರು : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಶತ್ರು ರಾಷ್ಟ್ರದ ಪ್ರಜೆಗಳ ಆಸ್ತಿ ಪತ್ತೆಯಾಗಿದೆ. ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಮಾಡಲು ಇದೀಗ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎನಿಮಿ ಪ್ರಾಪರ್ಟಿ ಹರಾಜು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತದಿಂದ ಪಾಕಿಸ್ತಾನ ಹಾಗೂ ಚೀನಾ ಗೆ ಹೋಗಿ ಅಲ್ಲಿನ ನಾಗರಿಕತ್ವ ಪಡೆದವರ ಆಸ್ತಿ ಕಸ್ಟೋಡಿಯನ್ ಆಫ್ ಎನಿಮಿ ಪ್ರಾಪರ್ಟಿ ಫಾರ್ ಇಂಡಿಯಾ ದಿಂದ ಆಸ್ತಿ ಗುರುತಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲಾಡಳಿತದಿಂದ ಎನಿಮಿ ಪ್ರಾಪರ್ಟಿಗೆ ದರ ನಿಗದಿ ಮಾಡಲಾಗಿದೆ. ಸರ್ಕಾರಿ ದರ ಹಾಗೂ ಮಾರುಕಟ್ಟೆ ದರ ನಿಗದಿ ಮಾಡಿದ ಬೆಂಗಳೂರು ಜಿಲ್ಲಾಡಳಿತ. ಬೆಂಗಳೂರು ನಗರದಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ಪಾಕಿಸ್ತಾನ ಪ್ರಜೆಗಳ ಆಸ್ತಿ ಗುರುತು ಪತ್ತೆ ಮಾಡಿದೆ. ಇದೇ ತಿಂಗಳು ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಹರಾಜಿನಿಂದ ಸರ್ಕಾರಕ್ಕೆ ಸಾವಿರಾರು ಕೋಟಿ…
ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಹೈಡ್ರಾಮಾ ಮಾಡಿದ್ದು, ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ವರದಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿಗೆನಲ್ಲಿ ಕೈದಿಗಳಿಗೆ ರಾಜಾತಿತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್ ಬಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ ತಕ್ಷಣ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಠಾಣೆಗೆ ಕರೆದೋಯ್ದಿದ್ದಾರೆ.
ಬೆಂಗಳೂರು : ಮುಡಾ ಸೈಟ್ ಹಂಚಿಗೆ ಪ್ರಕರಣದ ತನಿಖೆಗೆ ರಾಜಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ಜನವರಿ 8 ಕ್ಕೆ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿತು. ಮುಡಾ ಪ್ರಕರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು ಏಕ ಸದಸ್ಯ ಪೀಠ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಏಕ ಸದಸ್ಯ ಪೀಠದ ಆದೇಶವನ್ನು ರದ್ದು ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆದು ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿ ಆದೇಶ ಹೊರಡಿಸಿತು.













