Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ಪೊಲೀಸರಿಂದ ಮೂವರು ಡ್ರಗ್ಸ್ ಪೆಡ್ಲರ್ಗಳ ಬಂಧನವಾಗಿದ್ದು, ಸಂದೀಪ್ (23) ಅಖಿಲ್ (22) ಆಕಾಶ (21) ಬಂಧಿತ ಗಾಂಜಾ ಪೆಡ್ಲರ್ ಗಳು ಎಂದು ತಿಳಿದುಬಂದಿದೆ. ಬಂಧಿತರಿಂದ 6 ಕೆಜಿಗು ಹೆಚ್ಚು ಗಾಂಜಾ, ಹಾಗೂ 20 ಗ್ರಾಂ. ಹೈಡ್ರೋ ಗಾಂಜಾ ಮತ್ತು ನಗದು ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕೇರಳದಿಂದ ರೈಲಿನ ಮುಖಾಂತರ ಬೆಂಗಳೂರಿಗೆ ಈ ಗ್ಯಾಂಗ್ ಗಾಂಜಾ ಸಪ್ಲೈ ಮಾಡುತ್ತಿತ್ತು. ಹೊರ ರಾಜ್ಯದವರನ್ನೇ ಟಾರ್ಗೆಟ್ ಮಾಡಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಇದೀಗ ಮತ್ತೊಬ್ಬ ಪ್ರಮುಖ ಆರೋಪಿ ಅಲ್ತಾಫ್ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದೀಗ ಒಂದು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಗುತ್ತಿಗೆದಾರರು ಆಗಮಿಸಬೇಕು ಎಂದು ಉಳಿದ ಕಾರ್ಮಿಕರು, ಮೃತರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಗುತ್ತಿಗೆದಾರ ಬರುವವರೆಗೂ ಮೃತ ದೇಹಗಳನ್ನು ಸ್ಥಳಾಂತರಿಸದಿರಲು ನಿರ್ಧಾರ ಕೈಗೊಂಡಿದ್ದಾರೆ. ಸ್ಥಳದಲ್ಲಿಯೇ ಮೃತ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಲು ಒತ್ತಾಯಿಸುತ್ತಿದ್ದಾರೆ. ಬಿಗುವಿನ ವಾತಾವರಣ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿದ್ದಾರೆ.ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಪುತ್ರ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಮುಡಾ ಹಣ ಬಳಕೆಯಾಗುತ್ತಿದೆ ಅದರಲ್ಲಿ ತಪ್ಪೇನು?ಎಂದು ಪ್ರಶ್ನಿಸಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳಲ್ಲಿ ಯಾವುದೇ ಲೋಪಗಳಿಲ್ಲ. ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೀಮಿತಕ್ಕೆ ಒಳಪಡುವ ಪ್ರದೇಶಗಳಲ್ಲಿಯೇ ಅಭಿವೃದ್ಧಿಗೆ ಕಾಮಗಾರಿ ಆರಂಭಿಸಲಾಗಿದೆ. ಹೀಗಾಗಿ ಪ್ರಾಧಿಕಾರದ ಹಣವನ್ನು ಜನರ ಅಭಿವೃದ್ಧಿಗೆ ಬಳಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಮೇಲೆ ಆರೋಪ ಮಾಡಲು ಹಾಗೂ ಮಾತನಾಡಲು ಯಾವ ವಿಷಯಗಳೂ ಸಿಗುತ್ತಿಲ್ಲ. ಜನರ ಖಾತೆಗಳಿಗೆ ಗ್ಯಾರಂಟಿ ಯೋಜನೆ ಮೂಲಕ ಹಣ ಹಾಕುತ್ತಿರುವ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನ ಸಹಿಸಲು ಆಗದವರು ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಅದು ಅಲ್ಲದೆ ನಮ್ಮ ತಂದೆಯ ರಾಜೀನಾಮೆ ಕೇಳುತ್ತಿದ್ದಾರೆ. ಎಲ್ಲ ಆರೋಪಗಳಿಗೂ ರಾಜೀನಾಮೆ ಕೊಡುತ್ತಾ ಹೋದರೆ ಇದರಲ್ಲಿ ಅರ್ಥ ಏನು? ಆದ್ದರಿಂದ ನಮ್ಮ…
ತಿರುಪತಿ ಲಡ್ಡುಗೆ ಬಳಸುತ್ತಿದ್ದ ‘ಕಲಬೆರಕೆ’ ತುಪ್ಪ, ಪಳನಿಯ ಪ್ರಸಿದ್ದ ದೇವಸ್ಥಾನಕ್ಕೂ ಪೂರೈಕೆ : ಯತ್ನಾಳ್ ಹೊಸ ಬಾಂಬ್!
ಬೆಂಗಳೂರು : ತಿರುಪತಿಯ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ, ಹಂದಿಯ ಮಾಂಸ ಬಳಸಲಾಗುತ್ತದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಅದರ ಬೆನ್ನಲ್ಲೆ ಲ್ಯಾಬ್ ಟೆಸ್ಟ್ ವರದಿಯಲ್ಲಿ ಕೂಡ ಲಡ್ಡು ತಯಾರಿಕೆಯಲ್ಲಿ ಇವುಗಳೆಲ್ಲವನ್ನು ಬಳಸಲಾಗಿದೆ ಎಂಬ ಸ್ಪೋಟಕ ಮಾಹಿತಿ ಹೊರಬಂದಿತ್ತು. ಇದೀಗ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪ ಏನೆಂದರೆ, ತಿರುಪತಿ ಲಡ್ಡು ತಯಾರಿಕೆಗೆ ಪೂರೈಸಿದ್ದ ಕಂಪನಿಯೇ ಇದೀಗ ತಮಿಳುನಾಡಿನ ಪಳೀನಿಯ ಪ್ರಸಿದ್ಧ ಮುರುಗನ ದೇವಸ್ಥಾನಕ್ಕೂ ಕಲಬೆರಕೆ ತುಪ್ಪವನ್ನು ಪೂರೈಸುತ್ತಿತ್ತು ಎಂದು ಶಾಸಕ ಯತ್ನಾಳ್ ಅವರು ಆರೋಪಿಸಿದ್ದಾರೆ.ಈ ಬಗ್ಗೆ ತಮಿಳುನಾಡು ಬಿಜೆಪಿ ಕೈಗಾರಿಕಾ ಘಟಕದ ಉಪಾಧ್ಯಕ್ಷ ಸೆಲ್ವ ಕುಮಾರ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಟಿಟಿಡಿಗೆ ತುಪ್ಪ ಪೂರೈಕೆ ಮಾಡಿದ್ದ ಕಂಪನಿಯ ಮಾಲೀಕ ರಾಜಶೇಖರ್ ಅವರನ್ನು ಡಿಎಂಕೆ ಸರ್ಕಾರವು ಪಳನಿ ಮುರುಗನ್ ದೇವಸ್ಥಾನ…
ಬೆಂಗಳೂರು : ದಿನಗೂಲಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿ ಅನ್ವಯ ಸೆಪ್ಟೆಂಬರ್ 1 ರಿಂದ ಪೂರ್ವನ್ವಯವಾಗುವಂತೆ ಆರ್ಥಿಕ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಾಲ ಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆ ಶೇ.90 ರಷ್ಟು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂಧುವರಿಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಟ ವೇತನದ ಮೇಲೆ ತುಟ್ಟಿಭತ್ಯೆಯಾಗಿ ಮಂಜೂರು ಮಾಡಬೇಕು. 2024ರ ಪರಿಷ್ಕೃತ ವೇತನ ಶ್ರೇಣಿಗಳ ಅನ್ವಯ ಅವರುಗಳ ಸೇವೆಯಲ್ಲಿ ಮುಂದುವರಿಸಿದ ಹುದ್ದೆಯ ಕಾಲಿಕ ಶ್ರೇಣಿಯ ಕನಿಷ್ಟ ವೇತನ ನಿಗದಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಕಾಲ ಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆ ಸಾಮಾನ್ಯದರಗಳ ಶೇ.90 ರಷ್ಟಟನ್ನು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರಿಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಟ ವೇತನದ…
ಶಿವಮೊಗ್ಗ : ಈಗಾಗಲೇ ಮಂಡ್ಯ ಜಿಲ್ಲೆಯ ನಾಗಮಂಗಲ ಹಾಗೂ ದಾವಣಗೆರೆಯಲ್ಲಿ ಕೋಮು ಗಲಭೆ ಪ್ರಕರಣ ನಡೆದಿದ್ದು, ಹೀಗಾಗಿ ನಾಳೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು. ಹೌದು ನಾಳೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯಿಂದ ಬಂದೋಬಸ್ತ್ ಮಾಡಲಾಗಿದೆ. ನಾಳೆ ಭದ್ರತೆಗೆ 25 ಡಿವೈಎಸ್ಪಿ, 60 ಇನ್ಸ್ಪೆಕ್ಟರ್, 110 ಪಿಎಸ್ಐ ಗಳು, ಭದ್ರತೆಗೆ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಹಾಗೂ ಹೋಂ ಗಾರ್ಡ್ಸ್ ಗಳು ಸೇರಿದಂತೆ 3500 ಪೊಲೀಸ್ ಸಿಬ್ಬಂದಿ, 8 ಕೆ ಎಸ್ ಆರ್ ಪಿ ತುಕಡಿ, 1 ಆರ್.ಎ. ಎಫ್.ತುಕಡಿ, ನಿಯೋಜನೆ ಮಾಡಲಾಗಿದೆ. ಶಾಂತಿಭಂಗ ಮಾಡುವವರನ್ನು ಗುರುತಿಸಿ ಎಂದು ಸೂಚನೆ ನೀಡಲಾಗಿದೆ ಶಾಂತ ರೀತಿಯಲ್ಲಿ ಮೆರವಣಿಗೆ ನಡೆಯಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಇಡೀ ನಗರದಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ. ಈ ಮೊದಲು 2009 ರಿಂದಲೂ ಮುನಿರತ್ನ ವಿರುದ್ಧ ಹಲವು ಸ್ವರೂಪದ ಪ್ರಕರಣಗಳು ವಿವಿಧ ಹಂತದಲ್ಲಿವೆ. ಬಿಬಿಎಂಪಿಯ ಕಡತಗಳನ್ನು ತಮ ಮನೆಯಲ್ಲಿ ಇಟ್ಟುಕೊಂಡಿರುವುದು, ಕಾಮಗಾರಿಗಳಲ್ಲಿ ನೂರಾರು ಕೋಟಿ ರೂ. ಅಕ್ರಮ ಸೇರಿದಂತೆ ಹಲವು ದೂರುಗಳಿವೆ. ಮುನಿರತ್ನ ಅವರು ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಯಾವ ಹಂತಕ್ಕಾದರೂ ತಲುಪುತ್ತಾರೆ ಎಂಬ ಆರೋಪಗಳಿವೆ. ಗುತ್ತಿಗೆದಾರ ಚೆಲುವರಾಜು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಬಳಿಕ ಮುನಿರತ್ನ ಅವರ ಗ್ರಹಚಾರ ಕೆಟ್ಟಂತಾಗಿದೆ. ಜಾತಿನಿಂದನೆ ಸೇರಿದಂತೆ ವಿವಿಧ ಆರೋಪಗಳಡಿ ಬಂಧನಕ್ಕೊಳಗಾಗಿ ಜೈಲುಪಾಲಾಗಿದ್ದಾರೆ. ಅದರ ಬೆನ್ನಲ್ಲೇ ಮಹಿಳೆಯೊಬ್ಬರು ಅತ್ಯಾಚಾರದ ಆರೋಪದಡಿ ದೂರು ದಾಖಲಿಸಿದ್ದಾರೆ. ಹೀಗಾಗಿ ಜಾಮೀನು ದೊರೆತರೂ ಮುನಿರತ್ನ ಮತ್ತೆ ಜೈಲಿನಲ್ಲೇ ಉಳಿಯುವಂತಾಗಿದೆ.
ಬೆಂಗಳೂರು : ಚನ್ನಪಟ್ಟಣದಲ್ಲಿ ಜೆಡಿಎಸ್ ನಗರ ಸಭೆ ಸದಸ್ಯರು ಕಾಂಗ್ರೆಸ್‌ಗೆ ಆಪರೇಷನ್ ಆಗಿರೋ ವಿಚಾರದ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ಕುರಿತು ಸಭೆಯೊಂದನ್ನು ಕರೆದಿದ್ದೇನೆ. ಅತೀ ಶೀಘ್ರದಲ್ಲೇ ಕೆಲವು ಗುಡ್ ನ್ಯೂಸ್ ಕೊಡುತ್ತೇನೆ. ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿ, ಶುಕ್ರವಾರ ನಾನು ನಗರಪಾಲಿಕೆ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದೇನೆ. ಸಾಕಷ್ಟು ಮಂದಿ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅವರು ಆಮಿಷವೊಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇವೆಲ್ಲವನ್ನು ಸರಿ ಮಾಡೋಕೆ ಶುಕ್ರವಾರ ತೋಟದ ಮನೆಯಲ್ಲಿ ಸಭೆ ನಡೆಸಿದ್ದೇನೆ. ಅತೀ ಶೀಘ್ರದಲ್ಲೇ ಕೆಲವು ಗುಡ್ ನ್ಯೂಸ್ ಕೊಡುತ್ತೇನೆ. ತಲೆ ಕೆಡಿಸಿಕೊಳ್ಳಬೇಡಿ ಎಂದರು. ಚನ್ನಪಟ್ಟಣಕ್ಕೆ ‘NDA’ ಅಭ್ಯರ್ಥಿ! ಇನ್ನೂ ಚನ್ನಪಟ್ಟಣ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಟಿಕೆಟ್ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗುತ್ತಾರೆ. ಈ ಕುರಿತು ಬಿಜೆಪಿ-ಜೆಡಿಎಸ್ ನಾಯಕರು ದೆಹಲಿಯಲ್ಲಿ ಮಾತನಾಡಿದ್ದಾರೆ. ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು…
ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಅನ್ಯ ರಾಜ್ಯದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಕೊಲೆ ಮಾಡಿದ ಬಳಿಕ ಹಂತಕ, ಯುವತಿಯ ಮೃತದೇಹವನ್ನು ಸುಮಾರು 30 ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.ಕೊಲೆಯಾದಂತ ಯುವತಿಯನ್ನು ಮಹಾಲಕ್ಷ್ಮಿ (26) ಎಂದು ತಿಳಿದುಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಅವರು ಭೇಟಿ ನೀಡಿದ್ದು, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇವಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯುವತಿ ಬೇರೆ ರಾಜ್ಯದವರಾಗಿದ್ದು ಕರ್ನಾಟಕದಲ್ಲಿ ಕೆಲಸ ಮಾಡಿಕೊಂಡಿದ್ದು ಹಲವು ವರ್ಷಗಳ ಹಿಂದೆ ಇಲ್ಲಿಯೇ ಸೆಟ್ಲ್ ಆಗಿದ್ದರು. ಸುಮಾರು 26 ವಯಸ್ಸಿನ ಯುವತಿ ಎಂದು ತಿಳಿದುಬಂದಿದೆ. ಯುವತಿಯನ್ನು ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟಿದ್ದರು ಹೊರ ರಾಜ್ಯದ ಯುವತಿ ಬೆಂಗಳೂರಿನಲ್ಲಿ ಸೆಟಲ್ ಆಗಿದ್ದರು. ಯುವತಿಯ ಕೊಲೆ ಸುಮಾರು ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ನಡೆದಿದೆ. ಮೊದಲ ಮಹಡಿಯಲ್ಲಿರುವ 1 BHK ಮನೆಯಲ್ಲಿ ಒಂದು…
ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲರಿಗೂ ಹೃದಯಾಘಾತ ಎನ್ನುವ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಬೆಳಗಾವಿಯಲ್ಲಿ ಗಣೇಶೋತ್ಸವ ಬಂದೋಬಸ್ತ್ ಮುಗಿಸಿ ಮನೆಗೆ ಬಂದ ಪಿಎಸ್ಐ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದಿದೆ. ಹೌದು ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿಎಸ್ಐ ಹೃದಯಘಾತದಿಂದ ಸಾವನ್ನಾಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಪಿಎಸ್ಐ ಸುರೇಶ್ ಖೋತ್ ಎನ್ನುವವರು ಠಾಣೆಯ ಹೆಚ್ಚುವರಿ ಪಿಎಸ್ಐ ಆಗಿದ್ದರು. ರಾಯಭಾಗದಲ್ಲಿ ಗಣೇಶೋತ್ಸವದ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಸುರೇಶರನ್ನು ಕೂಡಲೇ ಮಿರಾಜ್‍ನ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪಿಎಸ್ಐ ಸುರೇಶ್ ಖೋತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ.