Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಅವರ ಹೆಸರು ಇಡುತ್ತೇವೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಗ್ರಾಮಗಳು ಸ್ವಾವಲಂಬನೆ ಆಗದಿದ್ದರೆ ದೇಶವು ಪ್ರಗತಿ ಆಗುವುದಿಲ್ಲ. ಭಾರತ ಹಳ್ಳಿಗಳ ದೇಶ, ಹಳ್ಳಿಗಳ ಉದ್ಧಾರ ಆಗಬೇಕೆಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಕರ್ನಾಟಕ ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿಗಳು ಇವೆ. ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಹೆಸರು ಇಡಲು ತೀರ್ಮಾನ ಮಾಡಿದ್ದೇವೆ. ಗ್ರಾಮಸ್ವರಾಜ್ಯ ಕಲ್ಪನೆಯ ಕೊಟ್ಟಿದ್ದು ಮಹಾತ್ಮ ಗಾಂಧೀಜಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತ ಬಲಿದಾನವನ್ನು ಸ್ಮರಿಸಬೇಕು. ಗಾಂಧೀಜಿಯವರು ಸ್ವಾತಂತ್ರ್ಯ ಚಳುವಳಿಯ ನೇತೃತ್ವವನ್ನು ವಹಿಸಿದ್ದರು. ಈ ದಿನವನ್ನು ದೇಶದ ಜನರು ಸ್ಮರಿಸಿಕೊಳ್ಳುತ್ತಾರೆ. ಅವರು ಸಮಾಜಕ್ಕೆ ಮಾಡಿರುವ ಸೇವೆಯನ್ನು ಸ್ಮರಿಸಿಕೊಳ್ಳಬೇಕು, ಗಾಂಧೀಜಿ ಅವರು ಎಲ್ಲಾ ತ್ಯಾಗ ಮಾಡಿದರು ಜೈಲಿಗೆ ಸಹ ಹೋಗಿದ್ದರು. ಮಹಾತ್ಮ ಗಾಂಧೀಜಿಯವರು ಇಡೀ ದೇಶವನ್ನು ಸುತ್ತಿದ್ದರು.ಕಾಂಗ್ರೆಸ್ ಪಕ್ಷ ಗಾಂಧೀಜಿ ನೇತೃತ್ವದಲ್ಲಿ ಹೋರಾಟ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ಬೆಂಗಳೂರು : ಇತ್ತೀಚಿಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ಕ್ಷುಲ್ಲಕ ವಿಚಾರವಾಗಿ ಶಿಕ್ಷಕ ಶಿಕ್ಷಕಿಯರು ಮಕ್ಕಳ ಮೇಲೆ ತೀವ್ರವಾಗಿ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆದಿದೆ. ಇದೀಗ ಬೆಂಗಳೂರಿನಲ್ಲಿ ಕೇವಲ ಹೋಮವರ್ಕ್ ಮಾಡಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನಿಗೆ ಬಾಸುಂಡೆ ಬರುವಂತೆ ಶಿಕ್ಷಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ಹೋಂವರ್ಕ್ ಮಾಡಿಲ್ಲ ಎಂದು ಬಾಲಕನ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ವೀಣಾ ವಿದ್ಯಾಸಂಸ್ಥೆಯಲ್ಲಿ ಒಂದು ಘಟನೆ ನಡೆದಿದ್ದು, ಬಾಲಕನಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಶಾಲಾ ಶಿಕ್ಷಕಿ ವಿರುದ್ಧ ಇದೀಗ ಬಿಇಒಗೆ ಪೋಷಕರು ದೂರು ಸಹ ನೀಡಿದ್ದಾರೆ. ಬೆಂಗಳೂರು ಉತ್ತರ ವಲಯದ ರಾಜಾಜಿನಗರ ಬಿಇಒಗೆ ಬಾಲಕನ ಪೋಷಕರು ಇದೀಗ ದೂರು ಸಲ್ಲಿಸಿದ್ದಾರೆ. ಈ ಒಂದು ಘಟನೆಗೆ ಸಂಬಂಧಪಟ್ಟಂತೆ ಬಾಲಕನ ಮೇಲೆ ಹಲ್ಲೆ ಮಾಡಿದ ಕೆಸ್ ವಿಚಾರವಾಗಿ ತ್ರೀಮನ್ ಕಮಿಟಿ ಮಾಡಿ ತನಿಖೆ ನಡೆಸುತ್ತೇವೆ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಬಿಇಓ ತಾರಾನಾಥ ಮಾಹಿತಿ ನೀಡಿದ್ದಾರೆ.…

Read More

ಗದಗ : ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 13ನೇ ದಿನಕ್ಕೆ ಉತ್ಖನನ ಕಾರ್ಯ ಮುಂದುವರೆದಿದ್ದು, ಇದೀಗ ನಿಧಿ ಶೋಧ ನಡೆಸುವ ವೇಳೆ ನಿಜವಾಗಿಯೂ ಒಂದು ಹಾವು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಇದೀಗ ಆತಂಕ ಮನೆ ಮಾಡಿದೆ. ಹೌದು ಲಕ್ಕುಂಡಿಯಲ್ಲಿ ಇಂದು 13ನೇ ದಿನದ ಉತ್ಖನನ ಕಾರ್ಯ ನಡೆಯುತ್ತಿದ್ದು ಉತ್ಖನನ ನಡೆಯುತ್ತಿರುವ ಸ್ಥಳದಲ್ಲಿ ಹಾವು ಕಾಣಿಸಿಕೊಂಡಿತು. ನಿನ್ನೆ ಮೂರು ಹೆಡೆ ನಾಗರಿಕ ಶಿಲೆ ಪತ್ತೆಯ ಬೆನ್ನಲ್ಲೇ, ಇಂದು ನಿಜವಾದ ಹಾವು ಪತ್ತೆಯಾಗಿದೆ. ನಿಜವಾದ ಹಾವು ಕಂಡ ಕೂಡಲೇ ಸ್ಥಳೀಯರಲ್ಲಿ ಭಯ ಹೆಚ್ಚಿದೆ.

Read More

ಮೈಸೂರು : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಮ್ಮ ಪೊಲೀಸರು ಈ ಒಂದು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಮಾತನಾಡಿದ ಗ್ರಹ ಸಚಿವ ಪರಮೇಶ್ವರ್ ಅವರು ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಇನ್ನೂ ಹೆಚ್ಚಿನ ಮಾಹಿತಿ ಎಸ್ಐಟಿ ವರದಿ ಬಂದವಳಿಗೆ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. 400 ಕೋಟಿ ರಾಬರಿ ಪ್ರಕರಣದಲ್ಲಿ ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ತನಿಖೆ. ಮುಂದುವರೆದಿದೆ.

Read More

ಕೊಡಗು : ಕಾಡಾನೆ ಜೊತೆಗೆ ಶಾಲಾ ವಾಹನ ಚಾಲಕ ಹುಚ್ಚಾಟ ನಡೆಸಿದ್ದಾನೆ. ವಿಡಿಯೋ ಮಾಡುತ್ತಿದ್ದಾಗ ಕಾಡಾನೆ ಶಾಲಾ ಬಸ್ ಅನ್ನು ಅಟ್ಟಾಡಿಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರಿ ಬಳಿ ಈ ಒಂದು ಘಟನೆ ನಡೆದಿದೆ. ಮಗಳ ಕೈಯಲ್ಲಿ ಚಾಲಕ ಸುನಿಲ್ ವಿಡಿಯೋ ಮಾಡಿಸಿದ್ದಾನೆ. ಆನೆ ಹಿಮ್ಮುಖವಾಗಿ ಶಾಲಾ ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾನೆ. ಶಾಲಾ ಮಕ್ಕಳನ್ನು ಬಿಟ್ಟು ಬರುವಾಗ ಒಂಟಿ ಸಲಗ ಎದುರಾಗಿತ್ತು. ವಾಹನ ನಿಲ್ಲಿಸಿ ಸುನಿಲ್ ಮಗಳಿಗೆ ವಿಡಿಯೋ ಮಾಡುವಂತೆ ಸೂಚನೆ ನೀಡಿದ್ದಾನೆ. ಸಿದ್ದಾಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದ್ದು ಚಾಲಕನ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅನಧಿಕೃವಾಗಿ ಬಾಂಗ್ಲಾ ನುಸುಳುಕೋರರ ವಿರುದ್ಧ ವಿಳಂಬವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿತ್ತು. ಈ ಬೆನ್ನಲ್ಲೇ, ಬಾಂಗ್ಲಾದೇಶ ಸೇರಿ ವಿವಿಧ ದೇಶಗಳಿಂದ ಬಂದು ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಕ್ರಮ ವಲಸಿಗರ ಪತ್ತೆ, ಗಡಿಪಾರು ಹಾಗೂ ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಿಂದ ಅಕ್ರಮವಾಗಿ ರಾಜ್ಯದಲ್ಲಿ ನೆಲೆಯೂರಿದ್ದ 432 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 255 ಮಂದಿಯನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ. ಇದರ ಪೈಕಿ 370 ಮಂದಿ ಬಾಂಗ್ಲಾದೇಶದವರಾಗಿದ್ದಾರೆ. ಅಲ್ಲದೆ, ಪಾಕಿಸ್ತಾನದ 16 ಹಾಗೂ ಶ್ರೀಲಂಕಾದ 42 ಮಂದಿ ಇದ್ದಾರೆ. ಮೂರು ವರ್ಷಗಳಲ್ಲಿ 255 ಮಂದಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ. 178 ಜನರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರ ವಿರುದ್ದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನದಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ಯುವಕರಿಗೆ ಮದುವೆ ಆಗಬೇಕು ಅಂದರೆ ಯುವತಿಯರು ಡಿಮ್ಯಾಂಡ್ ಹೆಚ್ಚುತ್ತಿದೆ ಹಾಗಾಗಿ ಯುವಕರು ಮದುವೆಯ ಮೇಲೆ ಆಸಕ್ತಿಯನ್ನು ಕಳೆದುಕೊಂಡಿದ್ದಾರೆ ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಖತರ್ನಾಕ್ ಮಹಿಳೆ ಒಬ್ಬಳು ಮೂರ್ಮುರು ಮದುವೆಯಾಗಿ ಲಕ್ಷ ಲಕ್ಷ ಹಣ ಲೂಟಿ ಮಾಡಿದ್ದಾಳೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ಎಂಬ ಖತರ್ನಾಕ್ ಲೇಡಿ ಎಂದು ತಿಳಿದು ಬಂದಿದ್ದು, ಈಕೆ ಒಂದಲ್ಲ ಎರಡಲ್ಲ ಮೂರು ಮದುವೆಯಾಗಿ ಆ ಯುವಕರಿಂದ ಲಕ್ಷ ಲಕ್ಷ ಹಣ ಪಡೆದುಕೊಂಡು ಇದೀಗ ತಲೆಮರೆಸಿಕೊಂಡಿದ್ದಾಳೆ. ಈ ಕುರಿತು ಇಬ್ಬರು ಗಂಡಂದಿರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೊದಲನೇ ಗಂಡ ವೀರೇಗೌಡ ಎರಡನೇ ಗಂಡ ಅನಂತಮೂರ್ತಿ ಠಾಣೆಗೆ ದೂರು ಕೊಟ್ಟಿದ್ದಾರೆ.

Read More

ಬೆಂಗಳೂರು : 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವಾಗಲೇ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ಕೆಪಿ ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಇದೀಗ ಲೋಕಾಯುಕ್ತ ಅಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾರೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವ್ಯಕ್ತಿಯನ್ನು ಕೇಸ್ನಲ್ಲಿ ಸೇರಿಸುವುದಾಗಿ ಬೆದರಿಸಿದ್ದಾರೆ ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಪೊಲೀಸರು ಆಪರೇಷನ್ ನಡೆಸಿದ್ದರು. ಈ ವೇಳೆ ಫ್ಲಾಟ್ ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಮತ್ತು ವಿಡಿಯೋ ರೆಕಾರ್ಡ್ ಮಾಡಲಾಗಿತ್ತು. ನೋಟಿಸ್ ಕೊಡದೆ ಬಂದಿದ್ದೀರಾ ಅಂತ ಆರೋಪಿಗಳು ಪ್ರಶ್ನೆ ಮಾಡಿದ್ದಾರೆ ನಾವು ಲಾಯರ್ ಬಳಿ ಮಾತನಾಡುತ್ತೇವೆ ಅಂತ ಗಲಾಟೆ ಮಾಡಿದ್ದಾರೆ. ಬಳಿಕ ಆರೋಪಿಗಳನ್ನ ಠಾಣೆಗೆ ಕರೆದುಕೊಂಡು ಹೋದ ಮೇಲೆ ಮೇಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡೀಲ್ ನಡೆಯುತ್ತದೆ. ಕೇಸ್ ಇಂದ ಕೈ ಬಿಡಲು ಬರೋಬ್ಬರಿ 5 ಲಕ್ಷಕ್ಕೆ…

Read More

ಚಾಮರಾಜನಗರ : ಇನ್ನೇನು ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಿ ಮದುವೆ ಆಗಬೇಕಿದ್ದ ವರನಿಗೆ, ವಧುವಿನ ಮಾಜಿ ಲವರ್ ಚಾಕು ಇರಿದಿರುವ ಘಟನೆ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಬ್ಬಳ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿತವಾಗಿದೆ. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು ರಸ್ತೆಯ ಬಳಿ ವರ ತೆರಳುತ್ತಿದ್ದ ಕಾರನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಎಲ್. ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೊಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ.ಸದ್ಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರವೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರತಕ್ಷತೆಗೆ ತೆರಳುವ ವೇಳೆ ವರನನ್ನು ಅಡ್ಡಗಟ್ಟಿ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ…

Read More

ನವದೆಹಲಿ : ಇನ್ಸ್ಟಾಗ್ರಾಮ್ ನಲ್ಲಿ ಸುಮಾರು 274 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಶ್ರೇಷ್ಠ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯು ಜನವರಿ 30ರ ರಾತ್ರಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದೆ. ಇದು ಅವರ ಫಾಲೋವರ್ಸ್ ಅನ್ನು ಗೊಂದಲಕ್ಕೀಡು ಮಾಡಿದ್ದಲ್ಲದೇ ಆನ್‌ಲೈನ್‌ನಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ ಡಿ-ಆಕ್ಟಿವೇಟ್ ಆಗ್ತಿದ್ದಂತೆ ಸೋಶಿಯಲ್ ಮೀಡಿಯಾದ ಎಲ್ಲಾ ಪ್ಲಾಟ್‌ಫಾರಂಗಳಲ್ಲಿ ಇದರ ಬಗ್ಗೆಯೇ ಬಿಸಿಬಿಸಿ ಚರ್ಚೆ ಆರಂಭವಾಗಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಏನೋ ಮಿಸ್ ಆಗಿದೆ ಎಂದು ಅನುಮಾನ ವ್ಯಕ್ತವಾಗಿದೆ. ವಿರಾಟ್ ಕೊಹ್ಲಿ ಈಗ ಕ್ರೀಸ್‌ನಲ್ಲಿ ಇಲ್ಲದಿರಬಹುದು, ಆದರೆ ಇನ್‌ಸ್ಟಾಗ್ರಾಮ್‌ನಲ್ಲಿ ಅವರ ಅನುಪಸ್ಥಿತಿಯು ಅಭಿಮಾನಿಗಳನ್ನು ದುಃಖಿತರನ್ನಾಗಿ ಮಾಡಿದೆ. ಆದರೆ ಇದೀಗ ಕೊಹ್ಲಿ ಅಕೌಂಟ್ ಆಕ್ಟಿವೇಟ್ ಆಗಿದ್ದು ಅಭಿಮಾನಿಗಳಿಗೆ ಖುಷಿ ತಂದಿದೆ. ಹೌದು ಜನವರಿ 30 ರಂದು 274 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ ಅವರ ಖಾತೆಯು ಇನ್‌ಸ್ಟಾಗ್ರಾಮ್‌ನಿಂದ ಕಣ್ಮರೆಯಾಗಿತ್ತು. ಸ್ವಲ್ಪ ಸಮಯದ ನಂತರ, ಖಾತೆಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ಎಲ್ಲವೂ ಸಾಮಾನ್ಯ…

Read More