Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದಲ್ಲಿ ಜೂನ್ 22 ರಂದು ಸಂಚಾರದಲ್ಲಿ ವ್ಯತ್ಯಯ ಇರಲಿದೆ. ಭಾನುವಾರ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಇರಲಿದ್ದು, ಎಂ. ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಜೂನ್ 22 ರಂದು ಟ್ರಿನಿಟಿ ಸರ್ಕಲ್, ಹಲಸೂರು ನಡುವೆ ನಿರ್ವಹಣಾ ಕಾಮಗಾರಿ ಹಿನ್ನಲೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ.ಆದರೆ ಬೈಯಪ್ಪನಹಳ್ಳಿಯಿಂದ ಕಾಡುಗೋಡಿಯವರೆಗೂ ಮೆಟ್ರೋ ಸಂಚಾರ ಇರುತ್ತದೆ. ಅಲ್ಲದೇ ಚಲಘಟ್ಟದಿಂದ ಎಂ. ಜಿ ರಸ್ತೆ ಅವರಿಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ. ಆದರೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿಯ ನಡುವೆ ಮಾತ್ರ ಸಂಚಾರ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಸುವ ವೇಳೆ ಕಾಲ್ತುಳಿತದಿಂದ 11 ಜನರು ಸಾವನಪ್ಪಿದ್ದರು. ಈ ಒಂದು ಪ್ರಕರಣದಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅಮಾನತುಕೊಂಡಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಗದೀಶ್ ಅವರು ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ. ಹೌದು ಕಳೆದ ಜೂನ್ 4 ರಂದು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ಬಿ.ದಯಾನಂದ್ ಅವರಿಗೆಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ದಯಾನಂದ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಒಂದು ಕಾಲ್ತುಳಿದ ಪ್ರಕರಣದಲ್ಲಿ ಸದ್ಯ ಬಿ.ದಯಾನಂದ ಅವರು ಅಮಾನತ್ತಿನಲ್ಲಿದ್ದಾರೆ.
ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಗೆ ಏಕಾಏಕಿ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದಾನೆ. ಏರ್ಪೋರ್ಟ್ ಟರ್ಮಿನಲ್ ಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ತಕ್ಷಣ CISF ಸಿಬ್ಬಂದಿಗಳು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.ಪಾಸ್ ಪೋರ್ಟ್ ಇಲ್ಲದೆ ಏಕಾಏಕಿ ಟರ್ಮಿನಲ್ ಗೆ ನುಗ್ಗಿದ್ದಾನೆ. ಸದ್ಯ ವಶಕ್ಕೆ ಪಡೆದ ವ್ಯಕ್ತಿಯನ್ನು ಸದಾದ್ ಮಹಮ್ಮದ್ ಬಾಬಾ ಎಂದು ತಿಳಿದುಬಂದಿದೆ. ಮಹಮದ್ ಬಾಬಾ ಜಮ್ಮು ಕಾಶ್ಮೀರದ ಶ್ರೀನಗರ ಮೂಲದ ನಿವಾಸಿ ಎನ್ನಲಾಗಿದ್ದು, ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಮೈಸೂರು : ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಜುನ್ (40) ಮೃತ ದುರ್ದೈವಿ.ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎಸ್. ಇಂಡಸ್ಟ್ರೀಸ್ ಎಂಬ ಕಾರ್ಖಾನೆ ನಡೆಸುತ್ತಿದ್ದರು. ಹಲವಾರು ದಿನಗಳಿಂದ ಅರ್ಜುನ್ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.ಮುಂಜಾನೆ ಮನೆಯಿಂದ ಹೊರನಡೆದ ಅರ್ಜುನ್ ತಮ್ಮ ಇಂಡಸ್ಟ್ರೀಸ್ ಸಮೀಪ ನೇಣಿಗೆ ಶರಣಾಗಿದ್ದಾರೆ. ಮುಂಜಾನೆಯೇ ಮನೆಯಲ್ಲಿ ಅರ್ಜುನ್ ಕಂಡು ಬಂದಿಲ್ಲ.ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದಾಗ ಮನೆಯಿಂದ ಹೊರಗೆ ತೆರಳಿರುವುದು ಕಂಡುಬಂದಿದೆ. ಇದಾದ ಕೆಲಸಮಯದ ನಂತರ ಅರ್ಜನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಸಂಬಂಧ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಳೆದ ಜೂನ್ 15 ರಂದು ಕೆಆರ್ ಪುರಂನ ಸ್ವಾತಂತ್ರ್ಯ ನಗರದಲ್ಲಿ ಆಟವಾಡುತ್ತಾ ಬಾಲಕನೊಬ್ಬ ಪೋರಕೆಯನ್ನು ಹೈಟೆನ್ಶನ್ ವಿದ್ಯುತ್ ಬಳಿ ಎಸೆದಾಗ ಈ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕ ಗಂಭೀರವಾಗಿ ಗಾಯಗೊಳ್ಳುತ್ತಾನೆ. ನಂತರ ಆತನನ್ನು ಸ್ಥಳಿಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಆದರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ. ಹೌದು ಹೈಟೆನ್ಷನ್ ವಿದ್ಯುತ್ ತಗುಲಿ ಗಾಯಗೊಂಡಿದ್ದ ಬಾಲಕ ಇದೀಗ ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ವರ್ಷದ ಅನಂತ್ ಕೊನೆಯುಸಿರೆಳಿದಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ನ ಸ್ವಾತಂತ್ರ್ಯ ನಗರದಲ್ಲಿ ಘಟನೆ ನಡೆದಿದ್ದು, ನೇಪಾಳದಿಂದ ಬಂದು ಅನಂತ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಜೂನ್ 15ರಂದು ಪೊರಕೆ ಎಸೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಅನಂತ್ ಗಾಯಗೊಳ್ಳುತ್ತಾನೆ. ವಿಕ್ಟೊರಿಯ ಆಸ್ಪತ್ರೆಯಲ್ಲಿ ಅನಂತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 12:30 ಸುಮಾರಿಗೆ ಸಾವನ್ನಪ್ಪಿದ್ದಾನೆ ಘಟನೆ ಸಂಭಂದ ಕೆಆರ್ ಪುರಂ ಠಾಣೆಯಲ್ಲಿ ಪ್ರಕರಣ…
ಕಲಬುರಗಿ : ಕಲಬುರ್ಗಿಯಲ್ಲಿ ಭೀಕರ ಕೊಲೆಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಗಂಡನನ್ನೆ ಪತ್ನಿ ಹಾಗೂ ಆಕೆಯ ಪ್ರೀಯಕರ ಸೇರಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಕಬ್ಬಲಿಗ ಸಮಾಜದ ತಿಪ್ಪಣ್ಣ ಕುಪೇಂದ್ರ (30) ಎಂದು ತಿಳಿದುಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದೆಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ತಿಪ್ಪಣ್ಣ ಕುಪೇಂದ್ರ ಎನ್ನುವವರನ್ನು ತಲೆದಿಂಬ್ಬಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸಿ ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ. ತಲೆ ದಿಂಬಿನಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸುತ್ತಿರುವಾಗ ತಿಪ್ಪಣ್ಣ ಜೋರಾಗಿ ಕಿರುಚಿದ್ದು ಅಕ್ಕ ಪಕ್ಕದವರು ಬಂದು ಮನೆಯ ಬಾಗಿಲು ಬಡಿದಾಗ ಯಾರೂ ಮನೆಯ ಬಾಗಿಲು ತೆರೆಯಲಿಲ್ಲ ಇದರಿಂದ ಅನುಮಾನಗೊಂಡು 112 ಗೆ ಕರೆ ಮಾಡಿ ಪೊಲೀಸರನ್ನು ಕರೆಸಿದಾಗ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇತ್ತ ಪೊಲೀಸರು ಬರುವ ವಿಚಾರ ಗೊತ್ತಾಗುತ್ತಿದ್ದಂತೆ ಪ್ರಿಯಕರ ಅಟ್ಟದ ಮೇಲೆ ಹೋಗಿ ಅಲ್ಲಿನ ಕಿಟಕಿಯಿಂದ ಜಿಗಿದು ಪರಾರಿಯಾಗಿದ್ದಾನೆ. ಶಾಂತಮ್ಮನನ್ನು…
ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಯುವ ನಟ ಶಬರೀಶ್, ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದು, ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಅಲ್ಲದೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹೌದು ಸುದೀಪ್ ನಟನೆಯ ರನ್ನ, ವಿಕ್ಟರಿ, ಅಧ್ಯಕ್ಷ, ಪೊಗರು, ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ನಂದ ಕಿಶೋರ್ ವಿರುದ್ಧ ಯುವ ನಟ ಶಬರಿಶ್ ಹಣಕಾಸು ವಂಚನೆ ಆರೋಪ ಮಾಡಿದ್ದಾರೆ. ನಿರ್ದೇಶಕ ನಂದ ಕಿಶೋರ್, ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಟ ಶಬರಿಶ್ ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶರಬೀಶ್ ಅವರನ್ನು ಸಿಸಿಎಲ್ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ…
ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ಷಯ್ ಸಹೋದರ ಬೆನಕ ರಾಜ್ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. RFO, ACF, DFO ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿ ಏನ್ ಎಸ್ ಕಾಯಿದೆ 105ರ ಅಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಕ್ಷಯ್ ಸಾವಿನ ನಂತರ ಕುಟುಂಬಸ್ಥರು ಸಾರ್ಥಕ ಮೆರೆದಿದ್ದು, ಅಕ್ಷಯ್ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಘಟನೆ ಹಿನ್ನೆಲೆ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿತ್ತು. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ…
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಲಾರಿಯಿಂದ ಗ್ರಾನೈಟ್ ಇಳಿಸುವಾಗ ಕಾರ್ಮಿಕನನ್ನು ರಕ್ಷಿಸಲು ಹೋಗಿ ಮಾಲೀಕನ ತಲೆಯ ಮೇಲೆ ಗ್ರಾನೆಟ್ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹೊಸಾಳಿ ಕ್ರಾಸ್ ಸಮೀಪದ ಬಿಡ್ತುಲಬಾಗದಲ್ಲಿ ನಡೆದಿದೆ. ಗ್ರಾನೈಟ್ ತಲೆ ಮೇಲೆ ಬಿದ್ದು ಉದ್ಯಮಿ ಮುದ್ದಣ್ಣ ಹನಮಪ್ಪ ಹಾಲುಂಡಿ (53) ಮೃತಪಟ್ಟಿದ್ದಾರೆ.ನಗರದ ಬಾಂಡಿಶಿಟ್ಟಾದ ಮುದ್ದಣ್ಣ ಅವರು ಮೂರು ತಾಲ್ಲೂಕಿನ ಮೂರು ಕಡೆ ಟೈಲ್ಸ್ ಮತ್ತು ಸಿರಾಮಿಕ್ಸ್ ಮಳಿಗೆ ನಡೆಸುತ್ತಿದ್ದರು.ದುರ್ಘಟನೆ ನಡೆದ ಬಿಡ್ತುಲಭಾಗದಲ್ಲಿ ಈಚೆಗಷ್ಟೆ ಹೊಸ ಮಳಿಗೆ ತೆರೆದಿದ್ದರು. ಮಲ್ಲಿಕಾರ್ಜುನ ಟೈಲ್ಸ್ ಹಾಗೂ ಸೆರಾಮಿಕ್ ಮಾಲೀಕರಾಗಿದ್ದ ಮುದ್ದಣ್ಣ, ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದರು. ಕೆಲವು ವರ್ಷಗಳಿಂದ ಬಾಂಡಿಶೆಟ್ಟಾದಲ್ಲಿ ವಾಸ ಮಾಡುತ್ತಿದ್ದರು. ಗ್ರಾನೈಟ್ ಕಲ್ಲುಗಳನ್ನು ಆಟೋ ಗೆ ತುಂಬುತ್ತಿದ್ದ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಗ್ರಾನೈಟ್ ಕಲ್ಲಿಗೆ ಹಗ್ಗ ಬಿಗಿಯುವಾಗ ತಲೆಯ ಮೇಲೆ ಗ್ರಾನೈಟ್ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ಜೂನ್ 20 ಮತ್ತು 21 ರಂದು ಏರ್ಪೋರ್ಟ್ ರಸ್ತೆಯಲ್ಲಿರುವ ಹೆಬ್ಬಾಳ ಫ್ಲೈಓವರ್ ಬಳಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಲಾಗಿದೆ. ಹಾಗಾಗಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆ ಎರಡು ದಿನ ಬಂದ್ ಇರಲಿದೆ. ಜೂನ್ 20 ಮತ್ತು 21ರ ರಾತ್ರಿಯ ವೇಳೆ ಹೆಬ್ಬಾಳ ಬಂದ್ ಇರಲಿದೆ ರಾತ್ರಿ 11:30 ರಿಂದ ಮುಂಜಾನೆ 5 ಗಂಟೆಯ ವರೆಗೆ ಹೆಬ್ಬಾಳ್ ಫ್ಲೈ ಓವರ್ ಬಂದ್ ಇರಲಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.














