Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಶಿವಮೊಗ್ಗ : ರಾಜ್ಯದಲ್ಲಿ ಕೆಎಫ್ಡಿಗೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕಟ್ಟೆಹಕ್ಲು ಗ್ರಾಮದ ಕಿಶೋರ್ (29) ಎಂಬ ಯುವಕ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಕಳೆದ ಹಲವು ದಿನಗಳಿಂದ ಯುವಕ ಕಿಶೋರ್ ಕೆಎಫ್ಡಿ ಕಾಯಿಲೆಯಿಂದ ಬಳಲುತ್ತಿದ್ದ. ಈ ಹಿನ್ನಲೆ ಕಿಶೋರ್ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಕಿಶೋರ್ ಸಾವನಪ್ಪಿದ್ದಾನೆ. ಕಟ್ಟೆಹಕ್ಲು ಗ್ರಾಮದ ಕಿಶೋರ್ ಕೆಎಫ್​ಡಿ ಪಾಸಿಟಿವ್ ಬಂದಿತ್ತು. ಜನವರಿ‌ 21ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜನವರಿ‌ 22ಕ್ಕೆ ಕೆಎಫ್​ಡಿ ಪಾಸಿಟಿವ್ ವರದಿ ಬಂದಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್​ಗೆ ರವಾನೆ ಮಾಡಲಾಗಿತ್ತು. ಅಲ್ಲಿಯೂ ಕೂಡ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗಿನಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯುವಕನ ಗ್ರಾಮದಲ್ಲಿ ಇದುವರೆಗೂ ಯಾರಲ್ಲೂ ಸಹ ಕೆಎಫ್​ಡಿ ಲಕ್ಷಣಗಳು ಹಾಗೂ ಜ್ವರ ಕಂಡು ಬಂದಿಲ್ಲ.‌ ಆದರೆ, ಇವರಿಗೆ ಹೇಗೆ ಜ್ವರ ಬಂತು ಎಂಬುದು ಇನ್ನೂ ಪತ್ತೆಯಾಗಬೇಕಿದೆ.

Read More

ಬೆಂಗಳೂರು : ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಅಜಿತ್ ಅವರ ನಿಧನಕ್ಕೆ ಇಂದು ಸದನದಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಜಿತ್ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಐವರು ಸಹ ಪ್ರಯಾಣಿಕರು ಇಂದಿನ ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ನಿಧನರಾಗಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ತಿಳಿಸ ಬಯಸುತ್ತೇನೆ ಎಂದು ಸಂತಾಪ ಸೂಚಿಸಿದರು. ಅಜಿತ್ ಪವಾರ್ ಜುಲೈ 7 1959 ರಂದು ಅಹಮದ್ ನಗರದಲ್ಲಿ ಜನಿಸಿದ್ದು, 1982 ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಿದರು. ಪುಣೆ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ 14 ವರ್ಷಗಳ ಕಾಲ ಸೇವೆ ಸಲ್ಲಿಸಿದರು. 1991ರಲ್ಲಿ ಬಾರಾಮತಿ ಕ್ಷೇತ್ರದಿಂದ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು ಕೇಂದ್ರ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಭಾರಮಾತಿ ವಿಧಾನ ಪರಿಷತ್ ಕ್ಷೇತ್ರದಿಂದ ಎರಡು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ…

Read More

ಮುಂಬೈ : ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭೀಕರ ವಿಮಾನ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಈ ಕುರಿತು ವಿಮಾನ ರನ್‌ವೇ ಬಳಿಯೇ ಹಾರುತ್ತಿತ್ತು.ರನ್‌ವೇ ಸಮೀಪಿಸಲು ಇನ್ನೇನು 100 ಅಡಿ ಇದ್ದಾಗ ಪತನಗೊಂಡು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತ್ಯಕ್ಷ ದರ್ಶಿ ಒಬ್ಬರು, ವಿಮಾನ ನೆಲಕ್ಕೆ ಬಿದ್ದ ಕೂಡಲೇ ದೊಡ್ಡ ಸ್ಫೋಟಗೊಂಡಿತು. ನಂತರ 4-5 ಹೆಚ್ಚಿನ ಸ್ಫೋಟಗಳು ಸಂಭವಿಸಿದವು. ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ನಮಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು. ಅಜಿತ್ ಪವಾರ್ ಇಂದು ಬೆಳಿಗ್ಗೆ 8:10ಕ್ಕೆ ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. 8:45ರ ವೇಳೆಗೆ ಅವರ ವಿಮಾನ ಬಾರಾಮತಿಯಲ್ಲಿ ಲ್ಯಾಂಡ್‌ ಆಗಬೇಕಿತ್ತು. ಲ್ಯಾಂಡ್‌ ಆಗುವ ಕೆಲ ಸೆಕೆಂಡ್‌ ಮೊದಲು ವಿಮಾನ ಪತನವಾಗಿದೆ. ಅಜಿತ್ ವಾರ್ ಜೊತೆಗೆ ಅವರ ಆಪ್ತ ಸಹಾಯಕ, ಇಬ್ಬರು ಪೈಲೆಟ್…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬ್ಯಾಂಕ್ ಎಟಿಎಂ ಮನೆಗಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಮತ್ತೊಂದು ದರೋಡೆಯಾಗಿದ್ದು ಕೇವಲ 20 ದಿನಗಳ ಹಿಂದೆ ಮನೆ ಕೆಲಸಕ್ಕೆ ಎಂದು ಸೇರಿದ ನೇಪಾಳ ಮೂಲದ ದಂಪತಿ ಮನೆಯಲ್ಲಿದ್ದ 18 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಮಾರತಹಳ್ಳಿಯಲ್ಲಿರುವ ಉದ್ಯಮಿ ಶಿವಕುಮಾರ್ ಎಂಬುವರ ಮನೆಯಲ್ಲಿ ಜನವರಿ 25ರಂದು ಹಾಡಹಗಲೇ ಘಟನೆ ನಡೆದಿದೆ. ನೇಪಾಳ ಮೂಲದ ದಿನೇಶ್ (32) ಹಾಗೂ ಕಮಲಾ (25) ಎಂಬ ದಂಪತಿ ಕೃತ್ಯವೆಸಗಿ ಪರಾರಿಯಾಗಿರುವ ಆರೋಪಿಗಳು ಎಂದು ತಿಳಿದುಬಂದಿದೆ. ಶಿವಕುಮಾರ್ ಅವರ ಮನೆಯ ಹೌಸ್‌ ಕೀಪಿಂಗ್ ಹಾಗೂ ಸಣ್ಣಪುಟ್ಟ ಕೆಲಸಗಳಿಗಾಗಿ ದಿನೇಶ್ ಹಾಗೂ ಕಮಲಾ ದಂಪತಿಯನ್ನು ಕೇವಲ 20 ದಿನಗಳ ಹಿಂದಷ್ಟೆ ಸೇರಿಸಿಕೊಳ್ಳಲಾಗಿತ್ತು. ಜನವರಿ 25ರಂದು ಸಂಬಂಧಿಕರೊಬ್ಬರ ಮನೆಯಲ್ಲಿ ಭೂಮಿ ಪೂಜೆ ಇದ್ದುದರಿಂದ ಶಿವಕುಮಾರ್ ಅವರ ಕುಟುಂಬ ಬೆಳಗ್ಗೆಯೇ ಹೆಚ್.ಕ್ರಾಸ್‌ಗೆ ತೆರಳಿತ್ತು. ಆ ಸಂದರ್ಭ ಬಳಸಿಕೊಂಡ ಆರೋಪಿಗಳು ನೆಲಮಹಡಿ, ಮೊದಲ ಮಹಡಿಯಲ್ಲಿದ್ದ ಬೆಡ್ ರೂಮ್…

Read More

ನವದೆಹಲಿ : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಕುಮಾರ್ ಸಾವನಪ್ಪಿದ್ದು, ಇವರ ಈ ಒಂದು ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಭೀಕರ ವಿಮಾನ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಅಜಿತ್ ಪವಾರ್ ಜನ ಸೇವೆ ಸಲ್ಲಿಸುವ ಸಲ್ಲಿಸುವ ಕಠಿಣ ಪರಿಶ್ರಮಿ ಬಡವರ ಸಬಲೀಕರಣದಲ್ಲಿ ಅವರ ಉತ್ಸಾಹ ಗಮನಾರ್ಹವಾಗಿದೆ. ಅಜಿತ್ ಪವಾರ್ ಅಕಾಲಿಕ ನಿಧನ ತುಂಬಾ ಆಘಾತಕಾರಿಯಾಗಿದೆ. ಅವರ ಕುಟುಂಬ ಅಭಿಮಾನಿಗಳಿಗೆ ಸಂತಪ್ಪ ಸೂಚಿಸುತ್ತೇನೆ ಮೃತರ ಕುಟುಂಬಗಳಿಗೆ ದೇವರು ಶಕ್ತಿ ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ. https://twitter.com/narendramodi/status/2016378092802187363?t=I4jkHY2yH2RHneGP7DhldQ&s=19 ಇನ್ನೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಜಿತ್ ಪವರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು…

Read More

ಬೆಂಗಳೂರು : ಕಾಲ್ತುಳಿತ ದುರಂತ ನಡೆದ ಬಳಿಕ ಬೆಂಗಳೂರಿನಲ್ಲಿ ಇದುವರೆಗೂ ಯಾವುದೇ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿಲ್ಲ. ಇದೀಗ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಆದರೆ ಆರ್‌ಸಿಬಿ ಮ್ಯಾನೇಜ್ಮೆಂಟ್ ಇದೀಗ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ನಡೆಸಲು ಹಿಂದೇಟು ಹಾಕುತ್ತಿದೆ. ಆದರೆ, ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಪಿಎಲ್ (IPL) ಪಂದ್ಯ ನೋಡೋ ಆಸೆಯಲ್ಲಿರುವ ಆರ್‌ಸಿಬಿ ಅಭಿಮಾನಿಗಳ ಕನಸು ನನಸಾಗುವ ಸಣ್ಣ ಸೂಚನೆ ಸಿಕ್ಕಿದೆ. ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನಿಂದಲೇ ಅಂಥದೊಂದು ಸುಳಿವು ಸಿಕ್ಕಿದೆ. ಇಂದು ಅಥವಾ ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ (RCB) ಪಂದ್ಯಗಳನ್ನು ಆಡುತ್ತಾ, ಅಥವಾ ಬೇರೆಡೆಗೆ ಹೋಗುತ್ತಾ ಅನ್ನೋ ಅಧಿಕೃತ ವಿಚಾರ ಹೊರಬೀಳಲಿದೆ. ಹೌದು, ಕೆಎಸ್‌ಸಿಎ ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ಆಡುವ ನಿರ್ಧಾರ ಆರ್‌ಸಿಬಿ ಮ್ಯಾನೇಜ್‌ಮೆಂಟ್ ನಿರ್ಧಾರ ಮಾಡಲಿದೆ, ನಮ್ಮದೇನು ಇಲ್ಲ ಅನ್ನೋ ಮಾತನ್ನ ಹೇಳಿ ಆರ್‌ಸಿಬಿ ಕಡೆ ಬೊಟ್ಟು ಮಾಡಿತ್ತು.…

Read More

ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟುಗಳಂಥ ಚಟುವಟಿಕೆಗಳಲ್ಲಿ ಎಲ್ಲ ಪಕ್ಷಗಳ ಪ್ರಭಾವಿಗಳೂ ಶಾಮೀಲಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು. ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಅಕ್ರಮ ಚಟುವಟಿಕೆಗಳಲ್ಲಿ ಯಾವ ನಾಯಕರು ಭಾಗಿ ಆಗಿದ್ದಾರೆ. ಯಾವ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ ಅಂತ ವಿವರಣೆ ಕೊಡಲ್ಲ. ಇದರ ಹಿಂದೆ ದೊಡ್ಡವರೇ ಇದ್ದಾರೆ. ಎಲ್ಲ ಪಕ್ಷದವರೂ ಇದರಲ್ಲಿ ಇದ್ದಾರೆ. ಹಾಗಾಗಿ ಇದರ ಬಗ್ಗೆ ನಾನು ವಿವರಣೆ ಕೊಡುವುದಿಲ್ಲ ಎಂದರು.‌ ಇದಕ್ಕೂ ಮುಂಚೆ ಮಾತನಾಡಿದ ಶಾಸಕಿ ಕರೆಮ್ಮ ನಾಯಕ್, ಅಕ್ರಮ ಮರಳು ದಂಧೆ, ಮಟ್ಕಾ, ಜೂಜು ಚಟುವಟಿಕೆ ಗಳಿಗೆ ಕಡಿವಾಣ ಹಾಕಿ. ರಾಯಚೂರು ಜಿಲ್ಲೆಯಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗಿವೆ. ಕಳ್ಳತನ ಪ್ರಕರಣಗಳು ಕೂಡ ಜಾಸ್ತಿ ಆಗಿವೆ. ನಾನು ಶಾಸಕಿ ಅದ ಮೇಲೆ ನನ್ನ ಕ್ಷೇತ್ರ ದಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದೆ. ಆದರೆ ಸದ್ಯ ಆಗ್ತಾ ಇಲ್ಲ. ಗೃಹ…

Read More

ಮುಂಬೈ : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಮಹಾರಾಷ್ಟ್ರ DCM ಅಜಿತ್ ಪವಾರ್ ಇದ್ದರು ಎಂದು ವರದಿಯಾಗಿದೆ.ಅಜಿತ್ ಪವಾರ್ ಭದ್ರತಾ ಅಧಿಕಾರಿ, ಓರ್ವ ಸಹಾಯಕ, ಇಬ್ಬರು ಪೈಲಟ್ ಗಳು, ಓರ್ವ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/ANI/status/2016360094838190589?t=UocwgvaGN2mj4gyVxMf8yg&s=19

Read More

ಶಿವಮೊಗ್ಗ : ಇತ್ತೀಚಿಗೆ ಚಿತ್ರದುರ್ಗದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಸಾವನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭಾರಿ ಬಸ್ ಅನಾಹುತ ಒಂದು ತಪ್ಪಿದೆ, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 36 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿಗಲ್ಲಿನ ಬಳಿ ಬಸ್​ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್​ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು‌‌. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್​ಪೇಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಸ್ಥಳಕ್ಕೆ ರಿಪ್ಪನ್​ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹೊಸನಗರ ಹಾಗೂ ರಿಪ್ಪನ್​ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಸವಾರರಾದ ಅಭಿ (18) ಹಾಗು ಹಿಂಬದಿ ಕುಳಿತಿದ್ದ ಶಿವಲಿಂಗಮ್ಮ (18) ಸಾವನಪ್ಪಿದ್ದಾರೆ. ಮೃತ ಶಿವಲಿಂಗಮ್ಮ ಬಿಎ ಓದುತ್ತಿದ್ದೂ, ಇನ್ನು ಅಭಿ ಡಿಪ್ಲೋಮ ವ್ಯಾಸಂಗ ಮಾಡುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More