Author: kannadanewsnow05

ದಾವಣಗೆರೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ  ನಡೆದ ಗಲಭೆ ಘಟನೆ ಮಾಸುವ ಮುನ್ನವೇ ಇದೀಗ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಈ ಒಂದು ಕಲ್ಲುತೂರಾಟ ಘಟನೆ ನಡೆದಿದೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ಪೋಲಿಸ್ ಸಿಬ್ಬಂದಿ ಓಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ

Read More

ಬೆಳಗಾವಿ :  ರೋಗಿಯ ಕೈಗೆ ಕೊಳಲು ಕೊಟ್ಟು, ರೋಗಿ ಕೊಳಲು ಊದುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ ಮಾಡಿಸುವ ಮೂಲಕ ಅಪರೂಪದ ದಾಖಲೆಗೆ ಕೊಲ್ಲಾಪುರದ ಕನೇರಿ ಮಠದ ಸಿದ್ದಗಿರಿ ಆಸ್ಪತ್ರೆಯ ವೈದ್ಯರು ಪಾತ್ರವಾಗಿದ್ದಾರೆ. ಹೌದು ಮೆದುಳಿನಲ್ಲಿ ಬೆಳೆದ ಟ್ಯೂಮರ್ ಆಪರೇಷನ್ ಮಾಡಿದ ಸಿದ್ದಗಿರಿ ಆಸ್ಪತ್ರೆ ವೈದ್ಯರು ಗಡ್ಡೆಯನ್ನು ಹೊರ ತೆಗೆದಿದ್ದಾರೆ. ರೋಗಿ ಕೈಗೆ ಕೊಳಲು ಕೊಟ್ಟು ಮೆದುಳು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಿದ್ದಾರೆ. ಕನ್ಹೆರಿ ಮಠದ ಆಸ್ಪತ್ರೆ ವೈದ್ಯರಿಂದ ಇದೀಗ ಈ ಒಂದು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ರೋಗಿ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ. ಶಿವಶಂಕ‌ರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯ ಲೋಕ ಅಚ್ಚರಿಯಿಂದ ತಮ್ಮತ್ತ ನೋಡುವಂತೆ ಮಾಡಿದ್ದಾರೆ. ರೋಗಿಗೆ ಯಾವುದೇ ತೊಂದರೆ ಆಗದಂತೆ, ಆರಾಮವಾಗಿ ಕೊಳಲು ಊದುತ್ತಾ ಮಲಗಿರುವಾಗಲೇ ಶಸ್ತ್ರಚಿಕಿತ್ಸೆ ಮಾಡಿದ್ದು, ಎಲ್ಲರ ಗಮನ ಸೆಳೆದಿದೆ. ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಚಿಕ್ಕಮಂಗಳೂರಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೌದು 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ದುರುಳರು ಬಾಲಕಿಯ ಮೃತದೇಹ ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಹೋಗಿದ್ದಾರೆ. ಬಾಲಕಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾರೆ. ಜ್ವರ ಹಿನ್ನೆಲೆಯಲ್ಲಿ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿ ಇದ್ದಳು. ತಾಯಿ ಜಮೀನು ಕೆಲಸ ಮುಗಿಸಿ ಮನೆಗೆ ಬಂದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಥ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ, ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್, ಯತ್ನಾಳ್ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಪ್ರಕರಣಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಖಾರವಾಗಿ ತಿಳಿಸಿತು. ಗಾಂಧಿನಗರ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ರಾವ್ ಅವರು ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ, ಪತ್ನಿ ಮುಸ್ಲಿಂ ಎಂದ ಮಾತ್ರಕ್ಕೆ ಈ ರೀತಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿರುವ ಪೀಠ, ನಿರ್ದಿಷ್ಟ ಸಮುದಾಯವನ್ನು ನೀವು ಹಾಗೆ ವ್ಯಾಖ್ಯಾನಿಸಲಾಗದು ಎಂದು ತಿಳಿಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಾಧೀಶರು ನಿಮಗೆ ಎಷ್ಟು ಬಾರಿ ಹೇಳಲಾಗಿದೆ? ಇದೆಲ್ಲಾ ಏಕೆ…

Read More

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಮುನಿರತ್ನಾಗೆ ಬೆಂಗಳೂರಿನ 82ನೇ ಸಿಸಿಹೆಚ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರಲಿದ್ದಾರೆ. ಆದರೆ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಜಾಮೀನು ಮಂಜೂರು ಮಾಡಿದ ಬಳಿಕ ಮುನಿರತ್ನ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಆದರೆ ಬಿಡುಗಡೆಯಾದ ತಕ್ಷಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಪೊಲೀಸರು ಮತ್ತೆ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ನಿನ್ನೆ ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾರೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಸಂತ್ರಸ್ಥ ಮಹಿಳೆಯ ದೂರಿನ ಅನ್ವಯ ಪೊಲೀಸರು ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಮುನಿರತ್ನ ಖಾಸಗಿ ರೆಸಾರ್ಟ್ ನಲ್ಲಿ ನನ್ನ ಮೇಲೆ…

Read More

ಕಲಬುರ್ಗಿ : ಇತ್ತೀಚಿಗೆ ಚಿತ್ರದುರ್ಗ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ದಿನದಂದು ಕೆಲವು ಕಿಡಿಗೇಡಿಗಳು ಪ್ಯಾಲೇಸ್ಥಿನ್ ಧ್ವಜ ಹರಾಟ ನಡೆಸಿದ್ದರು. ಈ ವಿಚಾರವಾಗಿ ಇಂದು ಕಲಬುರ್ಗಿಯಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿ, ಪ್ಯಾಲೇಸ್ಥಿನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ಯಾಲೇಸ್ಥಿನ್ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ವಿ ಆರ್ ವಿತ್ ಪ್ಯಾಲೇಸ್ಥಿನ್ ಎಂದು ಕೇಂದ್ರ ಸರ್ಕಾರ ಹೇಳಿದೆ. ಹಾಗಾಗಿ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ ಅಂತ ಅನಿಸುತ್ತದೆ ಎಂದು ಅವರು ತಿಳಿಸಿದರು. ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ…

Read More

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದ ಅಡಿ ಜೈಲು ಸೇರಿದ್ದ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದ್ದು, ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ACMM ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಅಟ್ರಾಸಿಟಿ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, 2, ಲಕ್ಷ ಬಾಂಡ್ ಇಬ್ಬರು ಶೂರಿಟಿ ಒದಗಿಸುವಂತೆ ಷರತ್ತು ವಿಧಿಸಿ ಶಾಸಕ ಮುನಿರತ್ನಗೆ 42ನೇ ACMM ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಾಕ್ಷಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಸದ್ಯ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಮುನಿರತ್ನ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಗುತ್ತಿಗೆದಾರ ಚೆಲುವರಾಜು ಮುನಿರತ್ನ ಅವರು ನನಗೆ ಜೀವ ಬೆದರಿಕೆ ಹಾಕಿ ಅಲ್ಲದೆ ಜಾತಿ ನಿಂದನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದರು ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಇತ್ತೀಚಿಗೆ ಬಂಧಿಸಿದ್ದರು. ಇಂದು ಈ…

Read More

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನಗೆ ರಜಾತಿಥ್ಯ ನೀಡಿದ ಪ್ರಕರಣಕ್ಕೆ ಸಬಂಧಿಸಿದಂತೆ ಇದೀಗ ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ ವೇಲುಗೆ 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 9ನೇ ಅಪರ ಮುಖ್ಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬೆಂಗಳೂರಿನ 9ನೇ ACMM ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರು ನಮಗೆ ಇನ್ನು ಸ್ವಲ್ಪ ದಿನ ಆರೋಪಿಗಳ ವಿಚಾರಣೆ ನಡೆಸೋದಿದೆ. ಹಾಗಾಗಿ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ಶಾಸಕ ಮುನಿರತ್ನ ಅವರನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಜಡ್ಜ್ ವಿಚಾರಣೆಯನ್ನು ನಾಳೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಹೌದು ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಆಗಿದ್ದಾನೆ ಎಂದು ನಿನ್ನೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನೆಲೆಯಲ್ಲಿ ಇಂದು ರಾಮನಗರ ಪೊಲೀಸರು ಬೆಂಗಳೂರಿಗೆ ಆಗಮಿಸಿ ಮುನಿರತ್ನ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು . ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ಜಡ್ಜ್ ನಾಳೆ ಮುಂದೂಡಿ 42ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಇತ್ತೀಚೆಗೆ ರಾಜ್ಯ ಸರ್ಕಾರ ಹಾಲು ಪೆಟ್ರೋಲ್ ಹಾಗೂ ತರಕಾರಿ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರು ಸಹಜವಾಗಿ ಆಕ್ರೋಶ ಹೊರಹಾಕಿದ್ದರು. ಇದರ ಮಧ್ಯ ಇದೀಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆ ಮಾಡಿ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಹೌದು ಸದ್ಯ ಅಡುಗೆ ಎಣ್ಣೆ ಬೆಲೆ ಲೀಟರ್ ಗೆ 20 ರೂಪಾಯಿ ಹೆಚ್ಚಳ ಮಾಡಿದ್ದೂ, ಇದರಿಂದ ಗ್ರಾಹಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈಗಾಗಲೇ ಹಾಲು, ಪೆಟ್ರೋಲ್ ಏರಿಕೆಯಿಂದ ಕಂಗಾಲಾಗಿದ್ದೇವೆ, ಇದೀಗ ಅಡುಗೆ ಬೆಲೆ ಏರಿಕೆ ಆದರೆ ನಾವು ಎಲ್ಲಿ ಹೋಗಬೇಕು ಎಂದು ಗ್ರಾಹಕರು ಒಬ್ಬರು ಆಕ್ರೋಶ ಹೊರಹಾಕಿದ್ದಾರೆ. ಗೃಹಿಣಿ ಒಬ್ಬರು ಕೇವಲ ದಿನ ಬಳಕೆ ವಸ್ತುಗಳ ಬೆಳೆ ಏರಿಕೆ ಆಗುತ್ತಿದೆ ಹೊರತು ನಮ್ಮ ವೇತನ ಮಾತ್ರ ಅಷ್ಟೇ ಇದೆ ಹೀಗಾದರೆ ನಾವು ಜೀವನ ನಡೆಸುವುದಾದರೂ ಹೇಗೆ? ಕೂಡಲೇ ದಿನಬಳಕೆ ವಸ್ತುಗಳ ಮೇಲೆ ಹೆಚ್ಚಳ ಮಾಡಿರುವಂತಹ ದರ ಇಳಿಸಬೇಕು ಎಂದು ಅವರು ಆಗ್ರಹಿಸಿದರು. ಹಳೆ ಮತ್ತು…

Read More