Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ. ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಲ್ಲದೇ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ…
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಇದೀಗ ಬಿರುಗಾಳಿಗೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರನೋಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಯಳೇಕಲ್ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬಗೆರೆ ಬಳಿಯ ಬಿಳುಕೊಪ್ಪ ಗ್ರಾಮದ ಅನಿಲ್ (53) ಎಂದು ಗುರುತಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಜೊತೆಗೆ ಭಾರಿ ಮಳೆ ಆಗುತ್ತಿದ್ದು , ಇದೀಗ ಭಟ್ಕಳ ತಾಲೂಕಿನ ಅಗ್ಗ ಗ್ರಾಮದ ಸೇತುವೆ ಸಂಪೂರ್ಣವಾಗಿ ಜಲಪ್ರಳವಾಗಿದೆ. ಮಳೆ ನೀರಿನಿಂದ ರಸ್ತೆ ನದಿಯಂತೆ ಆಗಿದ್ದು, ಜನ ತತ್ತರಿಸಿದ್ದಾರೆ. ಕಳೆದ 24 ಗಂಟೆಯಲ್ಲಿ ಭಟ್ಕಳದಲ್ಲಿ ದಾಖಲೆಯ ಮಳೆಯಾಗಿದೆ. ಒಂದೇ ದಿನದಲ್ಲಿ 218.4 ಮಿಲಿ ಮೀಟರ್ ಮಳೆ ಸುರಿದಿದೆ. ಇನ್ನು ಜಿಲ್ಲೆಯಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಜೋಯಿಡ ತಾಲೂಕಿನ ಸಾಂಗವೇ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಭಾವತಿ ಎನ್ನುವವರ ಮೇಲೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರಳಿ ಬಿದ್ದಿದೆ. ಇನ್ನು ಹೊನ್ನಾವರ, ಜೋಯಿಡಾದಲ್ಲಿ ಬಿರುಗಾಳಿ ಸಮೇತ ಭಾರಿ ಮಳೆ ಸುರಿಯುತ್ತಿದೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಉತ್ತರಪ್ರದೇಶ : ಜೂನ್ 12ರಂದು ಗುಜರಾತ್ನ ಅಹ್ಮದಾಬಾದ್ ನಲ್ಲಿ ವಿಮಾನ ಪಥನ ಕೊಂಡು 275 ಜನರು ಇದುವರೆಗೂ ಸಾವನಪ್ಪಿದ್ದಾರೆ. ಈ ಒಂದು ಘಟನೆ ಮಾಸುವ ಮುನ್ನವೇ ನಿನ್ನೆ ಕೇದಾರನಾಥನಲ್ಲಿ ಹೆಲಿಕ್ಯಾಪ್ಟರ್ ಪತನಗೊಂಡು 7 ಜನರು ಸಜೀವ ದಹನ ಹೊಂದಿದ್ದರು. ಇದೀಗ ಉತ್ತರ ಪ್ರದೇಶದ ಲಕ್ನೌ ನಲ್ಲಿ ಏರ್ಪೋರ್ಟ್ ಲ್ಯಾಂಡಿಂಗ್ ವೇಳೆ ವಿಮಾನ ಚಕ್ರದಲ್ಲಿ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಇದೀಗ ಉತ್ತರ ಪ್ರದೇಶದ ಲಕ್ನೌ ಏರ್ಪೋರ್ಟಲ್ಲಿ ಭಾರಿ ದುರಂತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ಸೌದಿ ಏರ್ ಲೈನ್ಸ್ ನ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಕಂಡುಬಂದಿತ್ತು. ವಿಮಾನದ ಎಡ ಭಾಗದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕಿಡಿ ಹೊತ್ತಿಕೊಂಡಿದೆ. ತಕ್ಷಣ ಪೈಲೆಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಏರ್ಪೋರ್ಟ್ ನಲ್ಲಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದೆ. ತಕ್ಷಣ ಬೆಂಕಿಯನ್ನು ನಂದಿಸಿದೆ ವಿಮಾನದಲ್ಲಿದ 250 ಹಜ್ ಯಾತ್ರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೌದಿ ಅರೇಬಿಯಾದ ಜಡ್ಡದಿಂದ ಈ ಒಂದು ವಿಮಾನ ಆಗಮಿಸಿತ್ತು. ಹೈಡ್ರಾಲಿಕ್ ಅವರಿಗೆ…
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಬಂಧಿಸಲ್ಪಟ್ಟು ಸೆರೆಮನೆಗೆ ಹೋಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಿರುವ ಅಧ್ಯಕ್ಷ ಸ್ಥಾನದಿಂದ ಕೂಡಲೇ ತೆಗೆದು ಹಾಕುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎನ್.ರಮೇಶ್ ಕುಮಾರ್ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷರಾಗಿರುವ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿನಯ್ ಕುಲಕರ್ಣಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಡೆ ಇದ್ದವರನ್ನು ಸರ್ವೋಚ್ಛ ನ್ಯಾಯಾಲಯವು ಅವರ ಜಾಮೀನನ್ನು ರದ್ದುಗೊಳಿಸಿ, ಕೂಡಲೇ ಒಂದು ವಾರದೊಳಗೆ CBI ಪೋಲೀಸರ ಎದಿರು ಶರಣಾಗುವಂತೆ ಆದೇಶ ಮಾಡಿರುವುದು ಸರಿಯಷ್ಟೇ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ವಿನಯ್ ಕುಲಕರ್ಣಿ ಅವರು ದಿನಾಂಕ 12/06/2025 ರ ಗುರುವಾರದಂದು ಬೆಂಗಳೂರಿನ “ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ”ಕ್ಕೆ ಹಾಜರಾದ ನಂತರ, ನ್ಯಾಯಾಲಯವು ಅವರನ್ನು CBI ವಶಕ್ಕೆ ನೀಡಿ…
ಹಾಸನ : ಹಾಸನದ 3 ಖಾಸಗಿ ಶಾಲಾ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹಾಸನದ ಮೂರು ಶಾಲೆಗಳಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಗೆ ಇಮೇಲ್ ಸಂದೇಶ ಬಂದಿದೆ. ಹಾಸನದ ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಮತ್ತು ಕೆ ಆರ್ ಪುರಂ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಒಂದು ಗಂಟೆಗೆ ಕಟ್ಟಡ ಸ್ಪೋಟಿಸುವುದಾಗಿ ದುಷ್ಕರ್ಮಿಯೋಬ್ಬ ಇ-ಮೇಲ್ ಸಂದೇಶ ಕಳುಹಿಸಿದ್ದಾನೆ. ವಿದ್ಯಾಸೌಧ ಶಾಲೆ ಹಾಗು ಕಿಡ್ಸ್ ಶಾಲೆ ಮಂಜೇಗೌಡ ಎಂಬವರಿಗೆ ಸೇರಿದೆ. ಹಾಸನ ನಗರ ಗ್ರಾಮಾಂತರ ಠಾಣೆಗೆ ಇದೀಗ ಪ್ರಾಂಶುಪಾಲರು ಈ ಕುರಿತು ದೂರು ನೀಡಿದ್ದಾರೆ. ತಡರಾತ್ರಿಯೆ ಪೊಲೀಸರು ಮತ್ತು ಬಾಂಬಬ್ ನಿಷ್ಕ್ರಿಯದಳ ಪರಿಶೀಲನೆ ನಡೆಸಿದ್ದಾರೆ.
ಕೆಂಪು ದಾಸವಾಳದಿಂದ ಹಣ ಕೈಗೆ ಸಿಗುವ ಪರಿಹಾರ ನಮ್ಮ ಜೀವನದಲ್ಲಿ ಹಣವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಹಣದಿಂದ ಮಾತ್ರ ನಾವು ನಮ್ಮ ಜೀವನವನ್ನು ನಡೆಸಬಹುದು. ಆ ಜೀವನವನ್ನು ನಡೆಸಲು ನಮಗೆ ಬೇಕಾದ ವಸ್ತುಗಳನ್ನು ನಾವು ಖರೀದಿಸಬಹುದು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅನೇಕ ರೀತಿಯಲ್ಲಿ ಹಣವನ್ನು ಗಳಿಸುವವರು, ಆದರೆ ಅವರು ಗಳಿಸಿದ ಹಣವು ಅವರ ಕೈಯಲ್ಲಿ ಉಳಿಯುವುದಿಲ್ಲ ಮತ್ತು ವ್ಯರ್ಥವಾಗುತ್ತದೆ ಮತ್ತು ಅವರು ತೆಗೆದುಕೊಂಡ ಸಾಲಗಳನ್ನು ಮರುಪಾವತಿಸಲು ಹೆಣಗಾಡುತ್ತಿರುವವರು ಮಾಡಬೇಕಾದ ಸರಳ ಪರಿಹಾರವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ,…
ಶಿವಮೊಗ್ಗ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಚಿಕ್ಕಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಇದೀಗ ಶಿವಮೊಗ್ಗದಲ್ಲಿ ಘೋರ ದುರಂತ ನಡೆದಿದ್ದು, ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. ಗೋಡೆ ಕುಸಿದು ಮೃತಪಟ್ಟ ವೃದ್ಧೆಯನ್ನು ಶತಾಯುಷಿ ಸಿದ್ದಮ್ಮ (100) ಎಂದು ತಿಳಿದುಬಂದಿದೆ. ಇವರು ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಹೇಮಾವತಿ ಎಂಬುವರಿಗೆ ಗಾಯವಾಗಿದ್ದು, ಅವರುನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಅವರ ಕುಟುಂಬ ಸದಸ್ಯರಾದ ಪಲ್ಲವಿ, ಪರಶುರಾಮ್, ಚೇತನ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ. ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು ಚಾಲಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಭೀಕರ ಗುಂಡಿನ ದಾಳಿಗೆ 25 ಅಮಾಯಕರು ಬಲಿಯಾಗಿದ್ದರು. ಅದಾದ ಬಳಿಕ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಮೂಲಕ 100ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದು ಸೇಡು ತೀರಿಸಿಕೊಂಡಿತು. ಇದೀಗ ಬಾಲಿವುಡ್ ನಟ ಅಮೀರ್ ಖಾನ್ ಭಯೋತ್ಪಾದಕರು ಮುಸ್ಲಿಮರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಮೀರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಚಿತ್ರ ಬಿಡುಗಡೆಗೆ ಸಿದ್ಧತೆಯಾಗಿದ್ದು, ಸಿನಿಮಾ ಪ್ರಚಾರದಲ್ಲಿರುವ ಅವರು ಇತ್ತೀಚಿಗೆ ನೀಡಿದ ಸಂದರ್ಶನ ಒಂದರಲ್ಲಿ ಹೇಳಿಕೆ ನೀಡಿದ್ದು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆಯೂ ಆಮಿರ್ ಖಾನ್ ಮುಕ್ತವಾಗಿ ಮಾತನಾಡಿದ್ದಾರೆ. ಆಮಿರ್ ಖಾನ್ ರಜತ್ ಶರ್ಮಾ ಅವರ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂದರ್ಶನದ ಸಮಯದಲ್ಲಿ ಆಮಿರ್ ಖಾನ್ ಅವರಿಗೆ ಪಹಲ್ಗಾಮ್ ದಾಳಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಅಮೀರ್ ಖಾನ್ ಮತ್ತಷ್ಟು ಹೇಳುತ್ತಾ, ಯಾವುದೇ ಧರ್ಮವು ನಮಗೆ…













