Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : 2028ಕ್ಕೆ ರಾಜ್ಯದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬರುತ್ತೆ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಎಲ್ಲರೂ ಕನಸು ಕಾಣುತ್ತಾರೆ ನಾವು 2028ಕ್ಕೆ ನಮ್ಮದೇ ಸರ್ಕಾರ ಅಂತೀವಿ ಅದೇ ರೀತಿ ಬಿಜೆಪಿ ಜೆಡಿಎಸ್ ನವರು ಕನಸು ಕಾಣುತ್ತಿದ್ದಾರೆ ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು. ಎಲ್ಲರಂತೆ ಬಿಜೆಪಿ ಮತ್ತು ಜೆಡಿಎಸ್ ನವರು 2028ಕ್ಕೆ ಸರ್ಕಾರ ಬರುತ್ತೆ ಅಂತ ಕನಸು ಕಾಣುತ್ತಿದ್ದಾರೆ ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ಅವರು ಅಧಿಕಾರಕ್ಕೆ ಬರುತ್ತಾರೆ. ನನ್ನ ಪ್ರಕಾರ 2028ಕ್ಕೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ನಮಗೆ ಮತ ಕೊಡುತ್ತಾರೆ. ಬಿಜೆಪಿ ಅವಧಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಯ್ತು ಜನರು ಇದೆಲ್ಲವನ್ನು ನೋಡಿದ್ದಾರೆ. ಬಿಜೆಪಿ ಆಡಳಿತವೇ ನೋಡಿ ಜನ ನಮಗೆ ಮೆಜಾರಿಟಿ ಕೊಟ್ಟರು. ಮುಂದೆಯೂ ಅದೇ ರೀತಿಯಲ್ಲಿ ನಮ್ಮದೇ ಸರ್ಕಾರ ಬರುತ್ತೆ ಎಂದು ಬೆಂಗಳೂರಿನ ಜಿಲ್ಲೆಯ ರಾಮನಗರದಲ್ಲಿ ರಾಮಲಿಂಗರೆಡ್ಡಿ ಹೇಳಿಕೆ…

Read More

ಬೆಳಗಾವಿ : ಬೆಳಗಾವಿ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು 400 ಕೋಟಿ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನಿಲ್ಲ ಎಲ್ಲರೂ ಇರುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಸಹಕರಿಸುತ್ತಿಲ್ಲ. ಪ್ರಕರಣ ಸಂಬಂಧಪಟ್ಟಂತೆ ಈಗಾಗಲೇ ಪತ್ರ ಬರೆದಿದ್ದಾರೆ. ಯಾರಾದರೂ ದೂರು ನೀಡಿದರೆ ನಮ್ಮವರು ತನಿಖೆ ಮಾಡುತ್ತಾರೆ. ಚೋರ್ಲ ಘಾಟ್ ಪ್ರದೇಶದ ವ್ಯಾಪ್ತಿ ದೊಡ್ಡದಿದೆ. ದರೋಡೆ ನಡೆದ ಸ್ಥಳ ಮಹಾರಾಷ್ಟ್ರ ಗೋವಾ ಅಥವಾ ಕರ್ನಾಟಕಕ್ಕೆ ಸೇರಿದೆಯೋ ಅನ್ನೋ ಬಗ್ಗೆ ಗೊಂದಲವಿದೆ ತನಿಖೆ ಮಾಡುತ್ತಾರೆ ಎಂದರು. 400 ಕೋಟಿ ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪದ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಇದರಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನು ಇಲ್ಲ ಎಲ್ಲರೂ ಇರುತ್ತಾರೆ. ದರೋಡೆ ಪ್ರಕರಣದಲ್ಲಿ ಎಲ್ಲಿ ನಡೆದಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸ್ರಿಗೆ ಸಹಕಾರ…

Read More

ಬೆಂಗಳೂರು : ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ, ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ. ಕರ್ನಾಟಕ ಸರ್ಕಾರವು ಸಂವಿಧಾನ ಪ್ರಸ್ತಾಪಿಸಿರುವ ಭಾತೃತ್ವ, ಸ್ವಾತಂತ್ರ ಹಾಗೂ ಸಮಾನತೆಯನ್ನು ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸಿದೆ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿ ಸಮುದಾಯಗಳ ಜನರ ಧ್ವನಿಗಳನ್ನು ಆಲಿಸಿ, ಅವುಗಳಿಗೆ ನ್ಯಾಯೋಚಿತ ಪರಿಹಾರ ನೀಡುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಅಲಕ್ಷಿತರಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿವಿಧ ಜನಸಮುದಾಯಗಳ ಪರಿಸ್ಥಿತಿಗಳನ್ನು ಅರ್ಥ…

Read More

ಬೆಂಗಳೂರು : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ. ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು. ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Read More

ಚಾಮರಾಜನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹೆಣ್ಣು ಮಗುವನ್ನು ಸಾಕಲು ಇಷ್ಟವಿಲ್ಲದೇ 50 ಸಾವಿರ ರೂ.ಗೆ ಮಾರಾಟ ಮಾಡಿದ್ದ ಘಟನೆ ಬೆಳಕಿಗೆ ಬಂದಿದ್ದು, ತಂದೆ, ತಾಯಿ ಸೇರಿ ಐವರನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ರಾಮಸಮುದ್ರ ಟೌನಿನ ಕುರುಬರ ಬೀದಿಯಲ್ಲಿ ವಾಸವಿದ್ದ ಸಿಂಧು ಮತ್ತು ಮಂಜುನಾಯಕ ಬಂಧಿತ ಪೋಷಕರಾಗಿದ್ದಾರೆ. ಜೊತೆಗೆ, ಮಧ್ಯವರ್ತಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಡಿ ಗ್ರೂಪ್ ಸಿಬ್ಬಂದಿ ಶಾಂತಾ, ಮಗು ಖರೀದಿ ಮಾಡಿದ್ದ ಹಾಸನದ ಅರಕಲಗೂಡು ತಾಲೂಕು ಕೋಣನೂರಿನ ಜವರಯ್ಯ ಮತ್ತು ನೇತ್ರಾ ದಂಪತಿ ಜೈಲು ಸೇರಿದ್ದಾರೆ. ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಶಾಂತಾ ಮೂಲಕ ಹಾಸನದ ಕೊಣನೂರು ಗ್ರಾಮದ ಮಕ್ಕಳಿಲ್ಲದ ಜವರಯ್ಯ ಮತ್ತು ನೇತ್ರಾ ದಂಪತಿಗೆ 50 ಸಾವಿರ ರೂ.ಗೆ ಮಾರಾಟ ಮಾಡಿರುವುದಾಗಿ ತಿಳಿದುಬಂತು. ಬಳಿಕ ಸಿಂಧು ಮತ್ತು ಮಂಜುನಾಯಕ, ಶಾಂತ, ಜವರಯ್ಯ ಮತ್ತು ನೇತ್ರಾ ಅವರನ್ನು ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು…

Read More

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ನಂದಿನಿದೇವಿ ಕೆ. ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ರವರು ಧ್ವಜಾರೋಹಣವನ್ನು ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಗಣರಾಜ್ಯೋತ್ಸವ ದಿನವು ನ್ಯಾಯ, ಸಮಾನತೆ ಮತ್ತು ಹಿರಿಮೆಯನ್ನು ನೀಡಿದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ ಜೊತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ. ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು. ನಮ್ಮ ಸಾರಿಗೆ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡ್ಯೊಯುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸಬೇಕು ಎಂದು ಕರೆ‌ ನೀಡಿದರು. ಕಾರ್ಯಕ್ರಮದಲ್ಲಿ, ನಿಗಮದ…

Read More

ನವದೆಹಲಿ : ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆಚರಿಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ 77ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಏಳು ಸುತ್ತಿನ ಕೋಟೆಯಾಗಿದೆ. ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಗೀತೆ ವಂದೇ ಮಾತರಂ ಗೆ 150 ವರ್ಷ, ಒಂದೇ ಮಾತರಂ ಪರಿಕಲ್ಪನೆಯಡಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, 26 ಯುದ್ಧ ವಿಮಾನಗಳಿಂದ ವೈಮಾನಿಕ ಪ್ರದರ್ಶನ, 17 ರಾಜ್ಯ, 10 ಇಲಾಖೆಗಳ ಸ್ತಬ್ಧ ಚಿತ್ರಗಳ ಅನಾವರಣ ಪಥಸಂಚಲಕ್ಕೆ ಎಐ ತಂತ್ರಜ್ಞಾನದ ಕ್ಯಾಮೆರಾ ಕಣ್ಗಾವಲು ಹಾಗೂ ಆಪರೇಷನ್ ಸಿಂಧೂರ ಯುದ್ಧ ಅಭಿಮಾನಿಗಳ ಪ್ರದರ್ಶನ ನಡೆಯಲಿದೆ.

Read More

ತುಮಕೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ವಾಪಸ್‌ ತೆರಳುವಾಗ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗ್ತಿದೆ. ಅಪಘಾತದಲ್ಲಿ ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದರು. ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಸಂವಿಧಾನವನ್ನು ದುರ್ಬಲಗೊಳಿಸುವ ನಿರಂತರ ಪ್ರಯತ್ನ ನಡೆಯುತ್ತಿದೆ. ಸಂವಿಧಾನವನ್ನ ನಾವು ರಕ್ಷಿಸಿದರೆ ಅದು ನಮ್ಮನ್ನ ರಕ್ಷಣೆ ಮಾಡುತ್ತದೆ ಎಂದು ತಿಳಿಸಿದರು. ಸಂವಿಧಾನ ಜಾರಿಗೆ ಬಂದು 76 ವರ್ಷಗಳು ಪೂರ್ಣಗೊಂಡಿದೆ. ಗ್ಯಾರಂಟಿ ಇಂದ ಸಮಾಜದಲ್ಲಿ ಭದ್ರತೆಯ ಭಾವನೆ ಮನೆ ಮಾಡಿದೆ ಸಂವಿಧಾನದ ಆಶಯ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಆಗಿದೆ ಸಂವಿಧಾನ ವಿರೋಧಿಸುವವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು ಅಂಬೇಡ್ಕರ್ ಅವರು ಸಂವಿಧಾನ ಅರ್ಪಿಸಿದಾಗಲು ಅದನ್ನು ವಿರೋಧಿಸಿದ್ದರು. ಈಗಲೂ ಸಂವಿಧಾನ ಬದಲಾಯಿಸುವ ಕೂಗುಗಳು ಅಲಲ್ಲಿ ಕೇಳಿ ಬರುತ್ತಿವೆ. ಆದರೆ ಇದು ಸುಲಭದ ಕೆಲಸ ಅಲ್ಲ ಎಂದು ಅರ್ಥ ಮಾಡಿಕೊಂಡವರು ಅದನ್ನು ನಿಧಾನವಾಗಿ ದುರ್ಬಲಗೊಳಿಸುವ ಪ್ರಯತ್ನದಲ್ಲಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಬೇಕಾಗಿದೆ. ಸರ್ಕಾರದ ಯೋಜನೆಗಳು ನೂರಾರು. ಆದರೆ ಅವುಗಳ ಹಿಂದಿನ ಸದಾಶಯ ಮಾತ್ರ ಒಂದೇ. ಅದು ಸಮ ಸಮಾಜದ ನಿರ್ಮಾಣ, ಸರ್ವರಿಗೂ…

Read More

ಬೆಂಗಳೂರು : ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಪಿಎಸ್ (KPS) ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಆಹಾರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಲಾ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮಹತ್ವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರು ಶಿವಮೊಗ್ಗದಿಂದಲೇ ಅಧಿಕೃತ ಚಾಲನೆ ನೀಡಲಿದ್ದಾರೆ ಎಂಬುದನ್ನೂ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. 1995ರಿಂದ ಹತ್ತು ವರ್ಷಗಳ ಕಾಲ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಬಲವರ್ಧನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಈ ಕುರಿತು ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆಯನ್ನು ಕರೆಯಲಾಗಿದೆ ಎಂದು ಅವರು ಹೇಳಿದರು.

Read More