Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮೂರನೇ ಮಹಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಹೌದು ಇಂದು ಮದ್ಯಾಹ್ನ 1 ಗಂಟೆ ಸುಮಾರಿಯೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಇದೀಗ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರೋಗಿಗಳನ್ನು ಆಸ್ಪತ್ರೆಯ ಸಿಬ್ಬಂದಿಗಳು ಹೊರಗಡೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಕಾರ್ಡಿಯಾಕ್ ಐಸಿ ವಾರ್ಡ್ ನ ACಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ನರ್ಸ್ಗಳ ಸಮಯ ಪ್ರಜ್ಞೆಯಿಂದ ಸುಮಾರು 7 ರೋಗಿಗಳು ಪಾರು ಮಾಡಿದ್ದಾರೆ. ಈ ವೇಳೆ ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

Read More

ಬೆಂಗಳೂರು : ಸಂಸತ್ತಿನ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ FIR ದಾಖಲಾಗಿದೆ. ಹೌದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಇದೀಗ FIR ದಾಖಲಾಗಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರಿನ ಮೇರೆಗೆ FIR ದಾಖಲಾಗಿದೆ. ರಾಹುಲ್ ಗಾಂಧಿ ಜನನದ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಹಾಗಾಗಿ ಮನೋಹರ ಯತ್ನಾಳ್ ವಿರುದ್ಧ ದೂರು ಸಲ್ಲಿಸಿದ್ದಾರೆ.

Read More

ಬೆಂಗಳೂರು : ಕೇವಲ ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಜಗಳಗಳು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಅನೇಕ ಘಟನೆಗಳನ್ನು ನೋಡಿದ್ದೇವೆ. ಇದೀಗ ಇಂತಹದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕೇವಲ ಬಟ್ಟೆ ಒಗೆಯುವ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬ ಸ್ನೇಹಿತನ ತಲೆಯ ಮೇಲೆ ಕಲ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ಭಾಗದ ಸಿದ್ದನಪಾಳ್ಯದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಬಿಹಾರ ಮೂಲದ ಗಯಾ ಜಿಲ್ಲೆ ನಿತೀಶ್ ಕುಮಾರ್ (23) ಎಂದು ತಿಳಿದುಬಂದಿದೆ. ಸಿದ್ದನಪಾಳ್ಯದ ಮದರ್ ಇಂಡಿಯಾ ಎನ್ನುವ ಜೆಸಿಬಿ ಬಿಡಿ ಭಾಗಗಳನ್ನು ತಯಾರಿಸುವ ಕಂಪನಿಯಲ್ಲಿ ಕೂಲಿ ಕಾರ್ಮಿಕನಾಗಿದ್ದ ಎಂದು ಹೇಳಲಾಗುತ್ತಿದ್ದು, ಇನ್ನೊಬ್ಬ ಸ್ನೇಹಿತ ಸೋಮನಾಥ ರಾತ್ರಿ ಎಲ್ಲರೂ ಮಲಗಿದ್ದಂತಹ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದಂತಹ ಕಲ್ಲನ್ನು ಮಲಗಿದ್ದ ನಿತೀಶ್​ ಕುಮಾರ್​ ತಲೆ ಮೇಲೆ ಎತ್ತಿ ಹಾಕಿ ಪರಾರಿಯಾಗಿದ್ದ. ಭಾನುವಾರ ದಿವಸ ಕೊಲೆಯಾದ ವ್ಯಕ್ತಿ ಹಾಗೂ ಕೊಲೆ ಮಾಡಿದ ವ್ಯಕ್ತಿಗೆ ಬಟ್ಟೆ ಒಗೆಯುವ ವಿಚಾರಕ್ಕೆ ವಾಗ್ವಾದವಾಗಿದೆ. ರಾತ್ರಿ…

Read More

ವಿಜಯಪುರ : ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು ಆ ಕಾರಣದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಪುಟ ಸಭೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಹೇಳಿಕೆ ನೀಡಿದ್ದರು. ಇವರ ಒಂದು ಹೇಳಿಕೆಗೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯನವರು ಕಟ್ಟಿದ್ದಾರೆ ಅವರ ಕುರ್ಚಿಯು ಕಟ್ಟಿ ಇದೆ ಈಗ ಅಲಗಾಡುತ್ತಿರುವುದು ಬಿವೈ ವಿಜಯೇಂದ್ರ ಕುರ್ಚಿ ಎಂದು ತಿರುಗೇಟು ನೀಡಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂಬಿ ಪಾಟೀಲ್, ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿದ್ದಾರೆ. ಅವರ ಕುರ್ಚಿಯು ಕೂಡ ಗಟ್ಟಿ ಇದೆ. ಆದರೆ ಈಗ ಅಲುಗಾಡುತ್ತಿರುವುದು ಬಿ ವೈ ವಿಜಯೇಂದ್ರ ಕುರ್ಚಿ ಎಂದು ಬಿ ವೈ ವಿಜಯೇಂದ್ರ ಹೇಳಿಕೆಗೆ ತಿರುಗೇಟು ಕೊಟ್ಟರು. ಈಗ ಬಿವೈ ವಿಜಯೇಂದ್ರ ಕುರ್ಚಿ ಅಲುಗಾಡುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕುರ್ಚಿ ಅಲಗಾಡುತ್ತಿದೆ ಹೀಗಾಗಿ ವಿಜಯೇಂದ್ರ ಮೊದಲು ತಮ್ಮ ಕುರ್ಚಿ ಕಟ್ಟಿ…

Read More

ರಾಮನಗರ : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ರಾಮನಗರ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಲು ಮುಂದಾಗಿದ್ದಾರೆ. ಹೌದು ದೂರು ನೀಡಲು ಆಗಮಿಸಿರುವ ಬೆಂಗಳೂರು ಮೂಲದ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಲು ಆಗಮಿಸಿದ್ದಾಳೆ. ಮಹಿಳೆಯರ ಜೊತೆ ಮುನಿರತ್ನ ನಾಯ್ಡು ಅನುಚಿತ ವರ್ತನೆ ಆರೋಪ ಕೇಳಿ ಬಂದಿದ್ದು, ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ಮುನಿರತ್ನ ನಾಯ್ಡು, ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಸದ್ಯ ಮಾತುಕತೆ ನಡೆಸುತ್ತಿದ್ದಾರೆ. ಶಾಸಕ ಮುನಿರತ್ನ ನಾಯ್ಡು ವಿರುದ್ಧ ದೂರು ಸ್ವೀಕರಿಸುವಂತೆ ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ.ಸದ್ಯ ಕಗ್ಗಲೀಪುರ ಪೊಲೀಸ್ ಠಾಣೆಗೆ ರಾಮನಗರ ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಬಿಯರ್ ದರ ಹೆಚ್ಚಿಗೆ ಮಾಡಲು ಚಿಂತನೆ ನಡೆಸಿದೆ. ಬಿಯ‌ರ್ ದರವನ್ನು 10 ರಿಂದ 15 ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಕಳೆದಾಗ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದ್ದು, ಅಕ್ಟೋಬರ್ ಆರಂಭದಿಂದ ಈ ಹೊಸ ದರ ಜಾರಿಗೆ ಬರುವ ಸಾಧ್ಯತೆಯಿದೆ. ಬುಲೆಟ್, ಪವರ್ ಕೂಲ್, ಲೆಜೆಂಡ್, ಆರ್.ಸಿ.ಸ್ಟ್ರಾಂಗ್, ನಾಕೌಟ್ ಮತ್ತಿತರ ಬ್ಯಾಂಡ್‌ಗಳ ಬೆಲೆಯಲ್ಲಿ ಶೇ.10 ರಿಂದ ಶೇ.15ರಷ್ಟು ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ಬಾಟಲಿ ಬಿಯರ್ ಮೇಲಿನ ದರವನ್ನ 10ರಿಂದ 15 ರೂಪಾಯಿ ಏರಿಸಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Read More

ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡ್ರಗ್ಸ್ ತಡೆಗಟ್ಟಲು ಹೊಸ ಕಾನೂನು ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡ್ರಗ್ಸ್ ತಡೆಗಟ್ಟಲು ಟಾಸ್ಕ್ ಪೋಸ್ ರಚಿಸಿದ ರಾಜ್ಯ ಸರ್ಕಾರ, ಸಮಿತಿಯಲ್ಲಿ 7 ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಜಿ ಪರಮೇಶ್ವರ್ ನೇಮಕ ಮಾಡಲಾಗಿದೆ. ಇನ್ನುಳಿದ 6 ಸಚಿವರು ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂಸಿ ಸುಧಾಕರ್ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಿದೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೆ ಒಂದು ಬಾರಿ ಸಭೆ ನಡೆಸುವಂತೆ ಸಮಿತಿ ಸದಸ್ಯರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.…

Read More

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಅಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ನಾಗಮಂಗಲದ ಟೌನ್ ಠಾಣೆಯಲ್ಲಿ ದಾಖಲಾಗಿದೆ. ಹೌದು ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನು ಹಂಚಿದ್ದಾರೆ ಎಂದು ಆರೋಪ ಬದಲಾಗಿದ್ದು, ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಮೇಲೆ ಇದೀಗ ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಇದೀಗ ನಾಗಮಂಗಲದ ಟೌನ್ ಠಾಣೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ‘FIR’ ದಾಖಲಾಗಿದೆ.

Read More

ದಕ್ಷಿಣಕನ್ನಡ : ನಟ ನಿರ್ದೇಶಕರಾದ ಉಪೇಂದ್ರ ಅವರ ಸಿನೆಮಾಗಳು ಒಂದು ಸಲ ನೋಡಿದ್ರೆ ಅರ್ಥವಾಗಲ್ಲ. ಇದೀಗ ಅವರ ನಟನೆಯ ಬುದ್ಧಿವಂತ ಸಿನೆಮಾ ಸ್ಟೈಲ್ ನಲ್ಲಿ ಮಹಿಳೆಯರಿಗೆ ವಂಚಿಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ ಕಿಲಾಡಿ ಕಳ್ಳನೊಬ್ಬ ಕೊನೆಗೂ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಹೌದು ಮಹಿಳೆಯರಿಗೆ ವಂಚನೆ ಮಾಡಿ ಕೋರ್ಟ್​ನಲ್ಲಿ ನಾನವನಲ್ಲ. ನಾನವನಲ್ಲ ಎಂದು ಪ್ರೇಕ್ಷಕರನ್ನು ರಂಜಿಸಿದ್ದ ಉಪೇಂದ್ರ ಅವರ ಬುದ್ದಿವಂತ ಸಿನಿಮಾದಂತೆ ಇಲ್ಲೊಬ್ಬ ರಿಯಲ್ ಲೈಫ್​ನಲ್ಲಿ ಇದೇ ರೀತಿ ಸಾಕಷ್ಟು ಮಹಿಳೆಯರಿಗೆ ವಂಚನೆ ಮಾಡಿ ಎಸ್ಕೇಫ್​ ಆಗುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರೋಹಿತ್ ಮಥಾಯೀಸ್ ಎಂಬಾತ 2019 ರಲ್ಲಿ ಪಕ್ಕದ ಮನೆಯಲ್ಲಿ ವಾಸವಿದ್ದ ನಿವೃತ್ತ ಪಿಡಿಓ ಭರತಲಕ್ಷ್ಮಿ ಎಂಬವವರನ್ನು ಕೊಂದು ಅವರ ಮನೆಯಲ್ಲಿ ಚಿನ್ನಾಭರಣವನ್ನು ಲೂಟಿ ಮಾಡಿದ್ದ. ನಂತರ ಶವವನ್ನು ಬಾವಿಗೆ ಬಿಸಾಕಿದ್ದ. ಬಂಧನವಾಗಿ ಜಾಮೀನಿನ ಮೇಲೆ ಹೊರಬಂದು ಮುಂಬೈ ಸೇರಿಕೊಂಡಿದ್ದ. ಬಳಿಕ ಫೇಸ್ ಬುಕ್​ನಲ್ಲಿ ಕರಾವಳಿ ಭಾಗದ ಅದರಲ್ಲೂ ಕ್ರಿಶ್ಚಿಯನ್ ಧರ್ಮದ ಮಹಿಳೆಯರನ್ನು ಸಂಪರ್ಕ…

Read More

ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್‌ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರವನ್ನು ಪ್ರಸ್ತಾಪಿಸಿದರು. ಹೌದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮಂತ್ರಿ ಇದ್ದಾಗಲೇ ಮೋದಿಜಿಯವರು ಅನಂತ್ ಕುಮಾರ್ ಅವರನ್ನು ಪಾರ್ಲಿಮೆಂಟಿಗೆ ಕರೆಸಿ ದೇಶದ ಜನರ ಕ್ಷಮೆ ಕೇಳಿಸಿದ್ದರು. ಆದ್ರೆ, ಅವರು ಪುನಃ ಸಂವಿಧಾನ ಬದಲಾವಣೆ ಮಾತನಾಡಿದರು. ಹಾಗಾಗಿ ನಾನೇ ನಮ್ಮ ಮುಖಂಡರಿಗೆ ಖಡಕ್ ಆಗಿ ಹೇಳಿದ್ದೆ. ಯಾವುದೇ ಕಾರಣಕ್ಕೂ ಅನಂತ್ ಕುಮಾರ್‌ ಅವರಿಗೆ ಟಿಕೆಟ್ ಕೊಡಬೇಡಿ ಎಂದಿದ್ದೆ ಎಂದರು. ಅಂದು ನಾವು ಸಂವಿಧಾನದ ಕುರಿತು…

Read More