Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣದ ಆರೋಪಿ ರಾಜೀವ್ ಗೌಡ ಬಂಧನ ವಿಳಂಬಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಗೃಹ ಸಚಿವರು ಆರೋಪಿಯ ಶೀಘ್ರ ಬಂಧನದ ಭರವಸೆ ನೀಡಿದ್ದು, ಕಳೆದ ಕೆಲ ದಿನಗಳಿಂದ ರಾಜೀವ್ ಮಂಗಳೂರಿನಲ್ಲಿದ್ದ ಬಗ್ಗೆ ಮಾಹಿತಿ ದೊರೆತಿದೆ. ಆದರೆ ಆತ ಈಗ ಅಲ್ಲಿಂದಲೂ ಎಸ್ಕೇಪ್ ಆಗಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಮಂಗಳೂರಿನಿಂದ ಬೆಂಗಳೂರಿನಲ್ಲಿರುವ ಸಹೋದರಿಗೆ ಕರೆ ಮಾಡಿದ್ದ. ಕಳೆದ 3 ದಿನಗಳಿಂದ ರಾಜೀವ್ ಗೌಡ ಮಂಗಳೂರಲ್ಲಿದ್ದ…
ರಾಮನಗರ : 2028ಕ್ಕೆ ರಾಮರಾಜ ರೈತರ ಸರ್ಕಾರ ಬರುತ್ತದೆ ಅದಕ್ಕಾಗಿಯೇ ಭಗವಂತ ಆರನೇ ಬಾರಿ ನನ್ನನ್ನು ಬದುಕಿಸಿದ್ದಾನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ರಾಮನಗರದಲ್ಲಿ ಮಾತನಾಡಿದ ಅವರು, 2028 ರಲ್ಲಿ ರಾಜ್ಯದಲ್ಲಿ ಜನತೆಯ ಸರ್ಕಾರ, ನಿಜವಾದ ರಾಮರಾಜ್ಯ ಸರ್ಕಾರ ತರಬೇಕು ಅಂತಲೇ ಆ ಭಗವಂತ ನನಗೆ 6ನೇ ಬಾರಿ ಬದುಕುಳಿಸಿದ್ದಾನೆ. ಕಾಂಗ್ರೆಸ್ ಮಹಾನುಭಾವನಿಗೂ ಬುದ್ಧಿ ಹೇಳುತ್ತೇನೆ ಮನೆಹಾಳು ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಾನು ಡಿಸಿಎಂ ಡಿಕೆ ಶಿವಕುಮಾರ್ ರೀತಿ ಕಲ್ಲು ಬಂಡೆ ಒಡೆದು ಬಂದಿಲ್ಲ. ನಾನು ಮನಸ್ಸು ಮಾಡಿದರೆ ಅವರಪ್ಪನ ರೀತಿ ಮಾಡುತ್ತಿದ್ದೆ ನಿಮ್ಮ ಒಂದಿಂಚು ಭೂಮಿ ತೆಗೆದುಕೊಳ್ಳಲು ನಾನು ಬಿಡಲ್ಲ ನನಗೆ ಬೇಕಿರುವುದು ಜನಗಳ ಪ್ರೀತಿ ಎಂದು ರಾಮನಗರದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ನಡೆದಿದೆ. ಪ್ರತಿಭಾ (29) ಮೃತ ಮಹಿಳೆ ಎಂದು ತಿಳಿದುಬಂದಿದೆ. ಪ್ರತಿಮಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರೋ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರತಿಮಾ ಬಾಬುಗೆ ಎರಡನೇ ಪತ್ನಿಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಗಲಾಟೆಯಾಗಿ ಪತಿ ಬಾಬು ಕೊಲೆ ಮಾಡಿದ್ದಾನೆ ಎಂದು ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರತಿಮಾ ಕುಟುಂಬಸ್ಥರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.
ಮೈಸೂರು : ಸದನದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ಆರೋಪದ ವಿಚಾರವಾಗಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಘಟನೆ ಯ ಬಗ್ಗೆ ವಿವರಣೆ ನೀಡಿದ್ದಾರೆ. ಕೊಡಲಿ ಬಿಡಿ ಅಂದು ಏನು ನಡೆಯಿತು ಎಂಬುದರ ಬಗ್ಗೆ ವಿವರಿಸಬಹುದು, ರಾಷ್ಟ್ರಪತಿಗಳಿಗೆ ರಾಜ್ಯಪಾಲರು ವಿವರಣೆ ನೀಡಬಹುದು ನಾವೇನು ಈ ಬಗ್ಗೆ ವಿವರಣೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾಳೆ ಗಣರಾಜ್ಯೋತ್ಸವದಲ್ಲೂ ರಾಜ್ಯಪಾಲರು ಭಾಷಣ ಮಾಡಬೇಕಿದೆ ನಾವು ಬರೆದುಕೊಟ್ಟ ಭಾಷಣವನ್ನು ರಾಜ್ಯಪಾಲರು ಗಣರಾಜ್ಯೋತ್ಸವ ಭಾಷಣದಲ್ಲಿ ಓದಬೇಕು ಎಂಬ ನಿಯಮ ಇಲ್ಲ. ಅದರಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಿಕೊಳ್ಳಬಹುದು. ರಾಜ್ಯಪಾಲರು ನಾಳೆ ಏನು ಮಾಡುತ್ತಾರೋ ನಮಗೆ ಗೊತ್ತಿಲ್ಲ. ಜಂಟಿ ಅಧಿವೇಶನದಲ್ಲಿ ಮಾತ್ರ ಸರ್ಕಾರದ ಭಾಷಣ ಓದುವ ನಿಯಮವಿದೆ. ಸರ್ಕಾರ ಬರೆದುಕೊಟ್ಟ ಭಾಷಣ ಓದಬೇಕು ಅನು ನಿಯಮ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವ ಎಚ್ ಡಿ ರೇವಣ್ಣ ಬಂಧನ ಪ್ರಕರಣದ ವಿಚಾರವಾಗಿ ನಾವು ಯಾವತ್ತೂ ಯಾರ ಪ್ರಕರಣದಲ್ಲೂ ತಲೆಹಾಕುವುದಿಲ್ಲ ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಸುಮ್ಮನೆ…
ಮೈಸೂರು : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ. ಸುಮ್ಮನೇ ರಾಜಕೀಯವಾಗಿ ಭಾಷಣ ಮಾಡಿದ್ದಾರೆ ಅಷ್ಟೇ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಿಜೆಪಿ ಜೊತೆ ಮೈತ್ರಿಯಿಂದ ಅಧಿಕಾರಕ್ಕೆ ಬರಬಹುದು ಅಂತ ಜೆಡಿಎಸ್ ನವರು ಅಂದುಕೊಂಡಿದ್ದಾರೆ. ಬಹುಮತ ಬಂದರೆ ಬಿಜೆಪಿ ಅವರು ಜೆಡಿಎಸ್ ಗೆ ಯಾಕೆ ಅಧಿಕಾರ ಬಿಟ್ಟು ಕೊಡುತ್ತಾರೆ? ಜೆಡಿಎಸ್ ಬಿಜೆಪಿ ಇಬ್ಬರಿಗೂ ಬಹುಮತ ಬರುವುದಿಲ್ಲ.ಒಂದು ವೇಳೆ ಬಂದರೂ ಕೂಡ ಬಿಜೆಪಿಯವರು ಜೆಡಿಎಸ್ಗೆ ಅಧಿಕಾರ ಕೊಡುವುದಿಲ್ಲ. 2028ರಲ್ಲೂ ರಾಜ್ಯದಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ನಾಯಕತ್ವ ಯಾರದ್ದು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ತುಮಕೂರು : ಹಿಂಬದಿಂದ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ದುರ್ಮರಣ ಹೊಂದಿರುವ ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮಂಜುನಾಥ ನಗರ ಬೈಪಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮಂಜುನಾಥ ನಗರ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಯುವಕ ವಿನಯ್ , ಮೃತಪಟ್ಟ ಸವಾರ ಎಂದು ತಿಳಿದುಬಂದಿದೆ ವಿರೂಪಾಕ್ಷ ಗ್ರಾಮದ ನಿವಾಸಿಯಾಗಿದ್ದ ಎಂದು ತಿಳಿದು ಬಂದಿದ್ದು ಈ ಕುರಿತು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿತ್ತು. ಈ ವೇಳೆ ಅವರು ನಿರೀಕ್ಷಣಾ ಜಾಮೀನು ಕೋರಿ ಕೋಕಾ ಅರ್ಜಿ ಸಲ್ಲಿಸಿದ್ದರು.ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಪ್ರಿಲ್ 15ರಂದು ತೀರ್ಪು ಪ್ರಕಟಿಸಲಾಗುತ್ತೆ ಎಂದು ಆದೇಶ ಹೊರಡಿಸಿದೆ. ಹೌದು ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧದ ಕೋಕಾ ಕೇಸ್ ಅರ್ಜಿ ವಿಚಾರಣೆ ನಡೆಯಿತು. ಎಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ಸಿಕ್ಕಿದ್ದು ವಾದ ಪ್ರತಿವಾದ ಅಲಿಸಿ ಸುಪ್ರೀಂ ಕೋರ್ಟ್ ಇದೀಗ ತೀರ್ಪು ಮುಂದೂಡಿದೆ. ಏಪ್ರಿಲ್ 15ರವರೆಗೂ ನಿರೀಕ್ಷಣಾ ಜಾಮೀನು ಆದೇಶ ಮುಂದುವರಿಯಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 5.15 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಆಂಟಿ ನಾರ್ಕೊಟಿಕ್ ಈ ಒಂದು ಕಾರ್ಯಾಚರಣೆ ನಡೆಸಿದ್ದು, ಮಾರತ್ತಹಳ್ಳಿ ಬಾಡಿಗೆ ಮನೆಯಲ್ಲಿ ವಿದೇಶಿ ಪ್ರಜೆಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 5.15 ಕೋಟಿ ಮೌಲ್ಯದ ಎರಡುವರೆ ಕೆಜಿ MDMA ಹಾಗು 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಿಂದೆ ಈ ಆರೋಪಿ ಕಾಡುಗೋಡಿ, ಹೆಣ್ಣೂರು ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ. ಈ ಪ್ರಕರಣದಲ್ಲಿ ಬಂಧನವಾಗಿ ಬಿಡುಗಡೆಯಾಗಿದ್ದ. ಹೊರಬಂದ ಬಳಿಕ ಮತ್ತೆ ಅದೇ ಹಳೆಯ ಜಾಳಿ ಮುಂದುವರೆಸಿದ ವಶಕ್ಕೆ ಪಡೆದಿದ್ದಾರೆ.
ಗದಗ : ಗದಗದ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೆ, ರಾಜ್ಯ ಸರ್ಕಾರ ಉತ್ಖನನಕ್ಕೆ ಮುಂದಾಗಿದ್ದು, ಕಳೆದ ನಾಲ್ಕು ದಿನಗಳಿಂದ ಉತ್ಖನನ ಕಾರ್ಯ ನಡೆದಿದೆ. ಈ ವೇಳೆ ಹಲವು ಪುರಾತನ ವಸ್ತುಗಳು ಪತ್ತೆಯಾಗಿವೆ. ಇದೀಗ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ಈಶ್ವರ ದೇವಸ್ಥಾನ ಪತ್ತೆಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ.
ಬೆಂಗಳೂರು : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ. ಪಕ್ಷ ತಾಳ್ಮೆಯಿಂದ ಇರಿ ಎಂದು ಹೇಳಿದೆ. ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಅಂದಿದ್ದಾರೆ. ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಬಂದಿದ್ದಾಗ ಹೇಳಿದ್ದಾರೆ. ಪಕ್ಷದ ಆದೇಶಕ್ಕಾಗಿ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಹಾಗೂ ಶಾಸಕರು ಹಿತದೃಷ್ಟಿಯಿಂದ ಕಾಯುತ್ತಿದ್ದೇವೆ. ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ. ಕುರ್ಚಿಯನ್ನು ಯಾರು ಅಷ್ಟೊಂದು ಸುಲಭವಾಗಿ ಬಿಡಲ್ಲ. ಗ್ರಾಮ ಪಂಚಾಯತಿ ಅಧ್ಯಕ್ಷರೇ ಕುರ್ಚಿಯನ್ನು ಸುಲಭವಾಗಿ ಬಿಡಲ್ಲ. ಎಂದಮೇಲೆ ಸಿಎಂ ಕುರ್ಚಿ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.














