Author: kannadanewsnow05

ಪ್ರೀತಿ ನಿರಾಕರಿಸಿದಕ್ಕೆ ಗರ್ಭಿಣಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಯುವಕನ ಮನೆಯ ಮುಂದೆ ಇದೀಗ ಯುವತಿಯ ಕುಟುಂಬಸ್ಥರು ಶವ ಇಟ್ಟು ಧರಣಿ ನಡೆಸುತ್ತಿದ್ದಾರೆ. ಕುದುರಿಹಾಳ ಗ್ರಾಮದ ಯುವಕನ ಮನೆ ಮುಂದೆ ಕುಟುಂಬ ಪ್ರತಿಭಟನೆ ನಡೆಸುತ್ತಿದೆ. ಹೌದು ಪ್ರೀತಿ ನಿರಾಕರಿಸಿದ ಕ್ಕೆ ಗರ್ಭಿಣಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕುದುರಿಹಾಳ ಗ್ರಾಮದ ಸಿಂಧು ಅದೇ ಗ್ರಾಮದ ಶರತ್ ನೀಲಪ್ಪನವರನ್ನ ಪ್ರೀತಿಸುತ್ತಿದ್ದಳು. ಆದರಿಂದ ಗರ್ಭಿಣಿಯಾದ ಬಳಿಕ ಶರತ್ ಪ್ರೀತಿ ನಿರಾಕರಿಸಿದನಂತೆ ಇದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ಸದ್ಯ ಯುವಕನ ಮನೆಯ ಮುಂದೆ ಶವ ಇಟ್ಟು ಕುಟುಂಬದವರು ಧರಣಿ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಕಳೆದ 9 ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಪ್ರತಿ ಟನ್ ಕಬ್ಬಿಗೆ ದರ ಹೆಚ್ಚಿಸುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರಾಜ್ಯ ಸರ್ಕಾರವು ಟನ್ ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿ ಆದೇಶ ಹೊರಡಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಕಬ್ಬಿಗೆ ಬೆಲೆ ಹೆಚ್ಚಳ ಘೋಷಣೆ ಮಾಡುವಂತೆ ಆಗ್ರಹಿಸಿ ಗುರ್ಲಾಪುರ ಗ್ರಾಮ ಸೇರಿದಂತೆ ಬೆಳಗಾವಿ ಜಿಲ್ಲೆ ಸೇರಿದಂತೆ ಹಲವೆಡೆ ಕಳೆದ ಒಂಭತ್ತು ದಿನಗಳಿಂದ ಕಬ್ಬು ಹೋರಾಟಗಾರರು ಹೋರಾಟ ನಡೆಸುತ್ತಿದ್ದರು. ರೈತರ ಈ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, 11.25 ರಿಕವರಿ ದರಕ್ಕೆ ಪ್ರತಿ ಟನ್​ಗೆ ಸಾಗಾಟ ಹಾಗೂ ಕಟಾವು ವೆಚ್ಚ ಹೊರತಾಗಿ 3,300 ರೂ. ಕೊಡಲು ತೀರ್ಮಾನಿಸಲಾಗಿದೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 81 ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಮಾಡಿದ್ದೇನೆ. ಕೇಂದ್ರ ಸರ್ಕಾರ ಹಾರ್ವೆಸ್ಟಿಂಗ್ ಮತ್ತು ಸಾಗಾಟ ವೆಚ್ಚ ಸೇರಿಸಿ 11.25…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಒಂದು ವರ್ಷದ ಎಂಟು ತಿಂಗಳಿನ ಮಗು ಬಲಿಯಾಗಿದೆ. ಪ್ರಣವ್ ಎನ್ನುವ ಮಗು ದಾರುಣವಾಗಿ ಸಾವನಪ್ಪಿದೆ. ನವೆಂಬರ್ 7ರಂದು ಕುಂದಲಹಳ್ಳಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೋಲ್ಡಿಂಗ್ ಮುಗಿಸಿ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಿದ್ಯುತ್ ತಂತಿ ಎಳೆದಿದ್ದು, ವೈರಿಂಗ್ ಕಂಬ ಕಿತ್ತು ಬಂದು ಮನೆ ಗೋಡೆ ಕುಸಿದಿದೆ. ಆಟ ಆಡುತ್ತಿದ್ದ ಮಗು ಮೇಲೆ ಮನೆಯ ಗೋಡೆ ಅವಶೇಷ ಬಿದ್ದಿದೆ. ತಕ್ಷಣ ಆಸ್ಪತ್ರೆಗೆ ಕರೆದೋಯುವಷ್ಟರಲ್ಲಿಯೇ ಪ್ರಣವ್ ಸಾವನ್ನಪ್ಪಿದ್ದಾನೆ. ಘಟನೆಯ ಬಳಿಕ ಕಾಂಕ್ರೀಟ್ ಮಿಕ್ಸರ್ ಚಾಲಕ ಪರಾರಿಯಾಗಿದ್ದಾನೆ.

Read More

ಬೆಂಗಳೂರು : ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರದ ಆರು ಪ್ರಾದೇಶಿಕ ಸಾರಿಗೆ ಕಚೇರಿಗಳ(ಆರ್‌ಟಿಓ) ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಯಶವಂತಪುರ, ರಾಜಾಜಿನಗರ, ಕೆ.ಆರ್.ಪುರ, ಜಯನಗರ, ಯಲಹಂಕ, ಕಸ್ತೂರಿನಗರ ಆರ್‌ಟಿಓ ಕಚೇರಿಗಳ ಮೇಲೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಹಚ್ಚಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಖುದ್ದು ಯಶವಂತಪುರ ಮತ್ತು ರಾಜಾಜಿನಗರ ಆರ್‌ಟಿಒ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಲವು ಲೋಪ ದೋಷಗಳು ಕಂಡು ಬಂದಿವೆ. ಆರ್‌ಟಿಒ ಕಚೇರಿ ಆವರಣದಲ್ಲಿ 32 ಸ್ಟೇಷನರಿ ಹಾಗೂ ಜೆರಾಕ್ಸ್ ಅಂಗಡಿ ಗಳಿದ್ದು, ಲೋಕಾಯುಕ್ತ ಅಧಿಕಾರಿಗಳು ತಪಾಸಣೆಗೆ ಮುಂದಾದಾಗ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಸಂಬಂಧ ಕೂಲಂಕಷವಾಗಿ ಪರಿಶೀಲಿಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಸೂಚಿಸಿದ್ದಾರೆ. ಇದೇ ವೇಳೆ ಕೆಲ ನೌಕರರು ಕರ್ತವ್ಯಕ್ಕೆ ಗೈರಾಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಅಧಿಕಾರಿಯನ್ನು ಪ್ರಶ್ನೆ ಮಾಡಿದಾಗ…

Read More

ಬೆಂಗಳೂರು : ರಾಜ್ಯ ಸರ್ಕಾರ ಜಾತಿ ಗಣತಿ ಜಾರಿಗೆ ಸಂಬಂಧಪಟ್ಟಂತೆ, ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಯನ್ನು ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಅವಧಿ (ಪೀರಿಯಡ್) ತರಗತಿ ಬೋಧನೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸೆ.22ರಿಂದ ಅ.7ರವರೆಗೆ ಇದ್ದ ದಸರಾ ರಜೆ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ದಸರಾ ರಜೆ ಅವಧಿಯನ್ನು ಅ.18ರವರೆಗೆ ವಿಸ್ತರಿಸಲಾಗಿತ್ತು. ಇದರಿಂದ ಶಾಲಾಮಕ್ಕಳಿಗೆ ಅ.12ರ ಭಾನುವಾರ ರಜಾ ದಿನ ಹೊರತುಪಡಿಸಿ ಉಳಿದ 10 ದಿನಗಳ ಬೋಧನಾ ಅವಧಿ ಕೊರತೆಯಾಗಿದೆ. ಪ್ರೌಢಶಾಲಾ ಮಕ್ಕಳಿಗೆ ಈ 10 ದಿನಗಳ ಪೈಕಿ ಎಂಟು ಪೂರ್ಣ ದಿನ, ಎರಡು ಅರ್ಧ ದಿನ ಸೇರಿ ಒಟ್ಟು 66 ಬೋಧನೆ ಪೀರಿಯಡ್ ಕೊರತೆಯಾಗಿದೆ. ಅದೇ ರೀತಿ ಪ್ರಾಥಮಿಕ ಶಾಲಾ ಮಕ್ಕಳಿಗೆ 74 ಪೀರಿಯಡ್ ಪಾಠದ ಕೊರತೆಯಾಗಿದೆ. ಹಾಗಾಗಿ ಇದನ್ನು ಸರಿದೂಗಿಸಲು ಫೆ.5ರವರೆಗಿನ 74…

Read More

ಬೆಂಗಳೂರು : ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್ ಎನ್ನುವಂತೆ ಬೆಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ್ದಂತ ಮಧ್ಯಂತ ಜಾಮೀನನ್ನು ರದ್ದುಗೊಳಿಸಲಾಗಿದೆ. ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್.25ರಂದು ಹೈಕೋರ್ಟ್ ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು ಮಾಡಿತ್ತು. ಅನಾರೋಗ್ಯಕ್ಕೆ ಚಿಕಿತ್ಸೆ ಕಾರಣಕ್ಕಾಗಿ ಈ ಜಾಮೀನು ಮಂಜೂರು ಮಾಡಲಾಗಿತ್ತು. ಇಂದಿನವರೆಗೆ ಜಾಮೀನು ವಿಸ್ತರಣೆ ಕೂಡ ಆಗಿತ್ತು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಅವರಿಗೆ ನೀಡಿದ್ದಂತ ಮಧ್ಯಂತರ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಮತ್ತೆ ಜೈಲುಪಾಲಾಗಲಿದ್ದಾರೆ ಎನ್ನಲಾಗುತ್ತಿದೆ.

Read More

ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…

Read More

ಮಂಗಳೂರು : ಮಂಗಳೂರಿನ ಉದ್ಯಮಿಯ ಪುತ್ರನ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ಒಂದು ಘಟನೆ ನಡೆದಿದೆ. ಮುಲ್ಕಿ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನವೀನ್ ಚಂದ್ರ ಆಳ್ವಪುತ್ರ ಅಭಿಷೇಕ ಆಳ್ವ ಮೃತದೇಹ ಪತ್ತೆಯಾಗಿದೆ. ನವೆಂಬರ್ 5ರಂದು ಮುಲ್ಕಿ ಬಪ್ಪನಾಡು ಬ್ರಿಡ್ಜ್ ಬಳಿ ಕಾರು ನಿಲ್ಲಿಸಿ ಅಭಿಷೇಕ್ ನಾಪತ್ತೆಯಾಗಿದ್ದ. ಇಂದು ಬೆಳಿಗ್ಗೆ ಬಪ್ಪನಾಡು ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ಅಭಿಷೇಕ್ ತನ್ನ ತಂದೆಯ ಉದ್ಯಮವನ್ನು ಮುನ್ನಡೆಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದ್ದು, ತಿರುವೈಲು ಗುತ್ತು ಕರಾವಳಿ ಕಂಬಳದಲ್ಲಿ ಈ ಒಂದು ಮನೆತನ ಗುರುತಿಸಿಕೊಂಡಿದ್ದು, ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಇದೀಗ ಮೃತದೇಹ ಪತ್ತೆಯಾಗಿದ್ದು ಮಂಗಳೂರಿನ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಳೆ ಹೆಗ್ಗೋಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿಯಾಗಿದ್ದಾನೆ. 8ತಿಂಗಳ ಹಿಂದೆ ಆನೆ ದಾಳಿಯಿಂದ ತಪ್ಪಿಸಿಕೊಂಡಿದ್ದ ರೈತ ಇಂದು ಹುಲಿ ದಾಳಿಗೆ ಬಲಿಯಾಗಿದ್ದಾನೆ. ಹುಲಿ ದಾಳಿಯಿಂದ ಚೌಡಯ್ಯ (58) ಎನ್ನುವ ರೈತ ಸ್ಥಳದಲ್ಲಿ ಸಾವನಪ್ಪಿದ್ದು, ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಹುಲಿ ದಾಳಿಗೆ ರೈತನೊಬ್ಬ ಬಳಿ ಹಾಕಿದ್ದ ಘಟನೆ ನಡೆದಿತ್ತು ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತ ಹುಲಿ ದಾಳಿಗೆ ಸಾವನಪ್ಪಿದ್ದಾನೆ.

Read More

ಚಾಮರಾಜನಗರ : ಇತ್ತೀಚಿಗೆ ರೈತನೊಬ್ಬನನ್ನು ಕೊಂದ ಹುಲಿ ಸೆರೆಗಾಗಿ ಇದೀಗ ನಾಗರಹೊಳೆ ಬಂಡಿಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸೂಚಿಸಿದ್ದಾರೆ. ಇಂದು ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಚೌಡಯ್ಯ ನಾಯ್ಕ (35) ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ…

Read More