Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ, ತಿಣುಕಾಡಿ ಮತ್ತೆ ಅಧಿಕಾರಕ್ಕೆ ಬಂದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 5 ವರ್ಷ ಪೂರೈಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕವಾದ ಭವಿಷ್ಯ ನುಡಿದರು. ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ, ಮಾತನಾಡಿದ ಅವರು ಸೆಪ್ಟೆಂಬರ್ 16ರಂದು ಏಕನಾಥ ಶಿಂಧೆ ಬಣದ ಶಿವಸೇನೆಯವರು ಹೇಳಿದ್ದಾರೆ. ರಾಹುಲ್ ನಾಲಿಗೆ ಕತ್ತರಿಸಿದರೆ 11 ಲಕ್ಷ ಕೊಡುತ್ತೇವೆ ಎಂದು ಘೋಷಿಸಿದ್ದಾರೆ. ಶಿವ ಸೇನೆ ನಾಯಕ ಸಂಜಯ್ ಗಾಯಕ್ವಾಡ್ ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿ ಸಂಜಯ್ ನನ್ನು ಬಂಧಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ಅಲ್ಲದೆ ಯುಪಿ ಸಚಿವ ರಘುರಾಜ್ ಸಿಂಗ್ ಸಹ ಒಂದು ಹೇಳಿಕೆ ಕೊಟ್ಟಿದ್ದರು.ರಾಹುಲ್ ಗಾಂಧಿ ದೇಶದ ನಂಬರ್ ಒನ್ ಉಗ್ರ ಅಂತ ಹೇಳಿಕೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 16ರಂದು ಯುಪಿ ಸಚಿವ ರಘುರಾಜ್ ಸಿಂಗ್ ಹೇಳಿಕೆ…
ಬೆಂಗಳೂರು : ಇತ್ತೀಚಿಗೆ ಈದ್ ಮಿಲಾದ್ ಹಬ್ಬದ ಅಂಗವಾಗಿ ಮೂರು ಜಿಲ್ಲೆಗಳಲ್ಲಿ ಕೆಲವು ಕಿಡಿಗೇಡಿಗಳು ಪ್ಯಾಲೆಸ್ಥಿನ್ ಪರ ಧ್ವಜ ಹಾರಾಟ ನಡೆಸಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ.ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ್ಮ ತಪ್ಪೇನಿದೆ ಎಂದು ವಾದಿಸಿದ್ದಾರೆ. ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ ಎಂದು ಅವರು ತಿಳಿಸಿದರು. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ ಎಂದರು. ಚಿತ್ರದುರ್ಗ, ಕೋಲಾರ ಜಿಲ್ಲೆಗಳಲ್ಲಿ ಹಬ್ಬದಂದು ಕೆಲವು ಕಿಡಿಗೇಡಿಗಳು ಪ್ಯಾಲೆಸ್ತೀನ್ ಪರ ಧ್ವಜ ಹಾರಾಟ ನಡೆಸಿದ್ದರು. ಹಾಗಾಗಿ ಧ್ವಜ…
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಆರೋಪದ ಅಡಿಯಲ್ಲಿ ಬಂಧಿತರಾಗಿರುವ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಾಯ್ಸ್ ಸ್ಯಾಂಪಲ್ ಎಫ್ ಎಸ ಎಲ್ ಗೆ ಕಳಿಸಲಾಗಿದ್ದು ಒಂದು ವೇಳೆ ಮುನಿರತ್ನ ವೈಸ್ ಮ್ಯಾಚ್ ಆದರೆ ಅವರ ವಿರುದ್ಧ ಸೂಕ್ತವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಪ್ರಕರಣದ ಕುರಿತಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ ಪರಮೇಶ್ವರ್,ಮುನಿರತ್ನ ಅವರನ್ನ ಏಕಾಏಕಿ ಬಂಧನ ಮಾಡಿಲ್ಲ. ದೂರು ದಾಖಲಾದ ಹಿನ್ನೆಲೆ ಬಂಧನ ಮಾಡಲಾಗಿದೆ. ವಾಯ್ಸ್ ರೆಕಾರ್ಡ್ ಕೂಡ ಪಡೆದಿದ್ದಾರೆ. ಮುನಿರತ್ನ ವಾಯ್ಸ್ ಸ್ಯಾಂಪಲ್ ಕೂಡ ಪಡೆದು ತನಿಖೆ ಆಗ್ತಿದೆ. ಪ್ರೂವ್ ಆದ್ರೆ ಶಿಕ್ಷೆ ಆಗುತ್ತೆ. ಅಲ್ಲದೇ ಶಾಸಕ ಚೆನ್ನಾರೆಡ್ಡಿ ಮೇಲೆ ಆರೋಪ ಕೇಳಿಬಂದಿದ್ದು, ಅವರ ಮೇಲೂ ಕ್ರಮ ಆಗುತ್ತೆ ಎಂದಿದ್ದಾರೆ. ಇನ್ನೂ ನಾಗಮಂಗಲ ಗಲಭೆ ವಿಚಾರ ಕುರಿತು ಮಾತನಾಡಿದ ಪರಮೇಶ್ವರ್, ನಾಗಮಂಗಲ ಪ್ರಕರಣವನ್ನೇ ದೊಡ್ಡ ವಿಷಯ ಮಾಡಲು ಬಿಜೆಪಿಯವ್ರು ಮಾತಾಡಿಕೊಂಡಿದ್ದಾರೆ. ನಾವು ಕಾನೂನು ಪ್ರಕಾರ…
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈಗಾಗಲೇ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ. ಇದೀಗ ಎರಡನೇ ಕೇಸಿನಲ್ಲೂ ಕೂಡ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ. ಹೌದು ಇಂದು ಬೆಂಗಳೂರು 82ನೇ ಸಿಸಿಎಚ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ವಿಚರಣೆ ನಡೆಯಿತು. ಸದ್ಯ ಎರಡನೇ ಕೇಸಿನಲ್ಲಿ ಕೂಡ ನ್ಯಾಯಾಲಯ ಮುನಿರತ್ನ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಮೊದಲ…
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ವಿಚಾರವಾಗಿ ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತಾಗಿ, ಬೆಂಗಳೂರಿನಲ್ಲಿ ಆದಿಚುಂಚನಗಿರಿಯ ಮಹಾಸಂಸ್ಥಾನದ ಪೀಠಾಧ್ಯಕ್ಷರಾದಂತಹ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಆಡಿಯೋದಲ್ಲಿ ಮುನಿರತ್ನ ಧ್ವನಿ ನಿಜವಾಗಿದ್ದರೆ, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಉರಿ ಗೌಡ ನಂಜೇಗೌಡ ವಿಚಾರವಾಗಿ ಕರೆದು ಮುನಿರತ್ನಗೆ ಬುದ್ಧಿ ಹೇಳಿದ್ದೆ. ಆಗ ಮಾಜಿ ಸಚಿವ ಮುನಿರತ್ನ ಸ್ಟಾಪ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಮುದ್ರಣದಲ್ಲಿ ನಿಜ ಆಯ್ತು ಅಂದರೆ. ಮಾತನಾಡಿರೋವರನ್ನು ಕ್ಷಮಿಸಲು ಆಗುವುದಿಲ್ಲ. ಯಾರೇ ಮಾತಾಡಿದರೂ ನಾಗರಿಕ ಸಮಾಜ ಒಪ್ಪುವುದು ಖಂಡನೀಯ ಎಂದರು. ಆಧುನಿಕತೆ ಬೆಳೆದಿದೆ ಅಂತ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ಕೇವಲ ಒಕ್ಕಲಿಗ ದಲಿತರಿಗೆ ಮಾತಾಡಿದ್ದಾರೆ ಅನ್ನೋದು ಎಷ್ಟು ಮುಖ್ಯವೋ, ಅದೇ ರೀತಿ ಸಮಾಜದಲ್ಲಿನ ಎಲ್ಲಾ ಸಮುದಾಯಗಳು ಕೂಡ ಅಷ್ಟೇ ಮುಖ್ಯವಾಗಿವೆ. ಪ್ರತಿಯೊಂದು ಸಮುದಾಯವನ್ನು ನಮ್ಮ ಸಂವಿಧಾನ ಒಪ್ಪಿಕೊಂಡಿದೆ. ನಮ್ಮ ದೇಶದ ಅಸ್ಮಿತೆ ತಾಯಂದಿರು,…
ಬೆಂಗಳೂರು : ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಶಾಸಕ ಮುನಿರತ್ನ ಜೈಲುಪಾಲಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ನಾಳೆ ಮುನಿರತ್ನ ವಿರುದ್ಧ ಧರಣಿ ಹಮ್ಮಿಕೊಳ್ಳಲಾಗಿದೆ. ಹೌದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕ್ಷೇತ್ರ ಯಶವಂತಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಭಾಗಿಯಾಗಲಿದ್ದಾರೆ.ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಗಣೇಶ ಮೈದಾನದವರೆಗೆ ರ್‍ಯಾಲಿ ನಡೆಯಲಿದೆ. ಮೆರವಣಿಗೆಯಲ್ಲಿ ಎಸ್.ಟಿ ಸೋಮಶೇಖರ್ ಪಾಲ್ಗೊಳ್ಳುತ್ತಿದ್ದಾರೆ.ಕಾಂಗ್ರೆಸ್ ಮುಖಂಡರ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 14 ದಿನ ನ್ಯಾಯಾಂಗ ಬಂಧನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ಇಂದು ಬೆಂಗಳೂರಿನ 84ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧಿಶರು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್, ಜೈಲಿನಲ್ಲಿ ರೌಡಿಶೀಟರ್ ಗಳೊಂದಿಗೆ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ವೈರಲಾಗಿತ್ತು. ಇದರ ಬೆನ್ನಲ್ಲೇ ದರ್ಶನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಅದಾದ ಬಳಿಕ ಇದೀಗ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಹೌದು ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇಂದು ಕೊಲೆ ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ದರ್ಶನ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ…
ಕಲಬುರ್ಗಿ : ಮಿನಿ ವಿಧಾನಸೌಧಗಳನ್ನು ಇನ್ನು ಮುಂದೆ ಪ್ರಜಾಸೌಧಗಳು ಎಂದು ಹೆಸರು ಬದಲಾವಣೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಮಿನಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತುಂಗಭದ್ರ ಡ್ಯಾಮ್ ನ ಕ್ರಸ್ಟ್ ಗೇಟ್ ಅಳವಡಿಸಿ ನೀರು ಉಳಿಸಿದ್ದೇವೆ. ಕೇವಲ ಐದು ದಿನಗಳಲ್ಲಿ ಕ್ರಸ್ಟ್ ಗೇಟ್ ಅಳವಡಿಸಿ ನೀರು ಸಂಗ್ರಹಣೆ ಮಾಡಲಾಗಿದೆ.ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟ್ ದುರಸ್ತಿಗಾಗಿ 108 ಜನ ದುಡಿದಿದ್ದಾರೆ.ಗಂಗಾ ಪೂಜೆ ಜೊತೆಗೆ 108 ಜನರಿಗೂ ಸನ್ಮಾನ ಇಟ್ಟುಕೊಂಡಿದ್ದೇವೆ. ಸೆಪ್ಟೆಂಬರ್ 22ರಂದು ತುಂಗಭದ್ರಾ ಜಲಾಶಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ಬಸವಕಲ್ಯಾಣದ ಅನುಭವ ಮಂಟಪದಿಂದ ಅಂಜನಾದ್ರಿ ಬೆಟ್ಟದ ವರೆಗೆ ಎಲ್ಲಾ ಪ್ರವಾಸಿ ತಾಣಗಳ ಪುನರುಜ್ಜೀವನ, ಪುನಶ್ಚೇತನ ಮಾಡಲಾಗುತ್ತದೆ. ಎಲ್ಲ ಸ್ಮಾರಕಗಳ ರಕ್ಷಣೆಗೆ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ ಎಂದು ಕಲಬುರ್ಗಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತೇವೆ ಎಂದು ಕಲ್ಬುರ್ಗಿಯಲ್ಲಿ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ತಿಳಿಸಿದರು.ಕಲ್ಬುರ್ಗಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿ, ಬಳಿಕ ಮಿನಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 5,000 ಕೋಟಿ ಅನುದಾನ ಕೊಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದರು. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕೇಂದ್ರ ಸರ್ಕಾರ ಯಾವುದೇ ಅನುದಾನವನ್ನು ಕೊಟ್ಟಿಲ್ಲ.ಕೃಷಿ ಇಲಾಖೆಗೆ 100 ಕೋಟಿ ರೂಪಾಯಿ ಅನುದಾನ ಮೀಸಲು ಇಟ್ಟಿದ್ದೇವೆ. ಬಜೆಟ್ ಅಲ್ಲಿ ಘೋಷಿಸಿದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಎಂದು ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಚಿವರು ಈ ಭಾಗದ ಶಾಸಕರು ಸಂಪುಟ ಸಭೆಗೆ ಒತ್ತಾಯಿಸಿದರು.ಹೀಗಾಗಿ ಕಲಬುರಗಿಯಲ್ಲಿಯೇ ಸಂಪುಟ ಸಭೆ ಮಾಡೋಣ ಎಂದಿದ್ದೆ. ಯುಪಿಎ ಸರ್ಕಾರ…
ತುಮಕೂರು : ಡೀಸೆಲ್ ಟ್ಯಾಂಕರ್ ಹಾಗೂ ಲಾರಿಯ ಮಧ್ಯ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 33 ರ ದೊಡ್ಡಮಾವತ್ತೂರು ಟೋಲ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಿಬ್ಬಂದಿಗಳು ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ.ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡೀಸೆಲ್ ತುಂಬಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೊಡ್ಡಮಾವತ್ತೂರು ಟೋಲ್‌ಗೆ ಗುದ್ದಿ ಸಿಬ್ಬಂದಿ ವಿಶ್ರಾಂತಿ ಕೊಠಡಿಗೆ ಲಾರಿ ನುಗ್ಗಿದ್ದು, ಟೋಲ್ ಸಂಪೂರ್ಣ ಜಖಂ ಆಗಿದೆ. ಡೀಸೆಲ್ ಟ್ಯಾಂಕರ್ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೃತೂರು ಪೊಲೀಸರು, ಹುಲಿಯೂರುದುರ್ಗ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಧಾವಿಸಿದ್ದಾರೆ.ಡಿಸೆಲ್ ತುಂಬಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದು, ಬಕೆಟ್, ಬಿಂದಿಗೆಗಳಲ್ಲಿ ಡೀಸೆಲ್ ತುಂಬಿಕೊಂಡು ಹೋಗಿದ್ದಾರೆ.