Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಇತ್ತೀಚಿಗೆ ಶಿಡ್ಲಘಟ್ಟ ನಗರ ಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ನಡೆದಿತ್ತು. ಅದಾದ ಬಳಿಕ ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ತಹಸಿಲ್ದಾರ್ ಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಜಿಬಿಎ ಮಹಿಳಾ ಅಧಿಕಾರಿಗೆ ಗುತ್ತಿಗೆದಾರನೊಬ್ಬ ಅವಾಚ್ಯ ಪದಗಳಿಂದ ನಿಧಿಸಿದ್ದು ಅಲ್ಲದೆ ದಬ್ಬಾಳಿಕೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಜಿಬಿಎ ಅಧಿಕಾರಿ ಮೇಲೇನೆ ಗುತ್ತಿಗೆದಾರ ದಬ್ಬಾಳಿಕೆ ನಡೆಸಿರುವ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಟೆಂಡರ್ ಫೈಲ್ ಮೂವ್ ಮಾಡುವಂತೆ ಧಮ್ಕಿ ಹಾಕಿದ್ದಾನೆ. ನೆಲಮಂಗಲದ ಬಾಗಲಕುಂಟೆ ಜಿಬಿಎ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಾಗಲಕುಂಟೆ ಜಿಬಿಎ ಇಇ ಸಂಗೀತ ಅವರಿಗೆ ನಿಂದನೆ ಮಾಡಿದ್ದಾನೆ. ಗುತ್ತಿಗೆದಾರ ನಂದೀಶ್ ಎಂಬಾತನಿಂದ ದಬ್ಬಾಳಿಕೆ ನಡೆದಿದೆ. ದಾಖಲೆ ಪತ್ರಗಳನ್ನು ಹರಿದು ಆವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾನೆ. ಕಾಮಗಾರಿ ಕೆಲಸ ನಮಗೆ ಬರಬೇಕು ಅಂತ ಕಿರಿಕ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Read More

ಮೈಸೂರು : ಮೈಸೂರಿನಲ್ಲಿ ಭೀಕರ ಕೊಲೆ ನಡೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶಹಾಬಾಜ್ (26) ಎನ್ನುವ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.  ಉದಯಗಿರಿ ಬಿಡಿ ಕಾಲೋನಿ ಬಳಿ ಈ ಒಂದು ಕೊಲೆ ನಡೆದಿದೆ.  ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಯಾಗಿ ಶಹಬಾಜ್ ಕೊಲೆಯಾಗಿದ್ದಾನೆ. ಜುಬೆರ್ ಎಂಬಾತ ತನ್ನ ಸ್ನೇಹಿತರ ಜೊತೆಗೆ ಸೇರಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಕೊಲೆಯ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗಲಿ ಎಂದು ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಇದನ್ನು ದುರುಪಯೋಗಪಡಿಸಿಕೊಂಡು ಸಾರಿಗೆ ಸಂಸ್ಥೆ ಅಳವಡಿಸಿದ ಸ್ಕ್ಯಾನರ್ ತೆಗೆದು ತಮ್ಮದೇ ಸ್ಕ್ಯಾನರ್ ಹಾಕಿ ಲಕ್ಷಾಂತರ ರೂಪಾಯಿ ನುಂಗಿ ನೀರು ಕುಡಿದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ರಾಜ್ಯದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು  ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಆರೋಪಗಳ ಕುರಿತು ತನಿಖೆ ನಡೆಸಿದಾಗ ತನಿಖೆ ವೇಳೆ ಕೂಡ, ಕಂಡಕ್ಟರ್​​ಗಳ ಕಳ್ಳಾಟ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್​ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ಬಯಲಿಗೆ ಬಂದಿದೆ.ಈ ಕಿಲಾಡಿ ಕಂಡಕ್ಟರ್​​ಗಳು ಡಿಪೋದಿಂದ ಬಸ್​ಗಳು…

Read More

ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ ಸ್ಥಳದಲ್ಲಿ ಇದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕಾನೂನುಗಿಂತ ಯಾರು ದೊಡ್ಡವರಲ್ಲ ರಾಮಚಂದ್ರರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದರು ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ಬಾದಾಮಿ : ನಿನ್ನೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಈ ವರ್ಷ ಚಾಲುಕ್ಯ ಉತ್ಸವ ನಡೆಯಲೇಬೇಕೆಂದು ಈ ಭಾಗದ ಶಾಸಕರ ಒತ್ತಾಸೆಯಾಗಿತ್ತು. ಇದರ ಮೇರೆಗೆ ಬಜೆಟ್ ನಲ್ಲಿಯೇ ಚಾಲುಕ್ಯ ಉತ್ಸವವನ್ನು ಘೋಷಣೆ ಮಾಡಲಾಯಿತು. ಮೂರು ಕೋಟಿ ರೂ.ಗಳನ್ನೂ ಇದಕ್ಕಾಗಿ ಒದಗಿಸಲಾಗಿದೆ. ಉತ್ಸವಕ್ಕೆ ಒಂದು ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಘೋಷಿಸಿದರು. ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ನಿನ್ನೆ ಸಂಜೆ ಆಯೋಜಿಸಿದ್ದ “ಚಾಲುಕ್ಯ ಉತ್ಸವ -2026” ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು ಚಾಲುಕ್ಯ ಉತ್ಸವ ಹೊಂದಿದೆ. ಬಾದಾಮಿ, ಐಹೊಳೆ, ಪಟ್ಟದಕಲ್ಲುಗಳ ವೈಭವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಬರುತ್ತಾರೆ. ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ ಸಮನ್ವಯತೆಯನ್ನು ಪಾಲಿಸುತ್ತದೆ. ನಾನು ಮುಖ್ಯಮಂತ್ರಿಯಾಗಿ ಈ ಎರಡು ವರ್ಷದಲ್ಲಿ ಬಾದಾಮಿ ಕ್ಷೇತ್ರಕ್ಕೆ ಸುಮಾರು 2 ಸಾವಿರ ಕೋಟಿ ರೂ.ಗಳ ಅನುದಾನವನ್ನು ನೀಡಿದ್ದೇನೆ. ಕ್ಷೇತ್ರದಲ್ಲಿ 1,400 ಕೋಟಿ ರೂ.ಗಳ ಏತನೀರಾವರಿ ಯೋಜನೆ…

Read More

ಬೆಂಗಳೂರು : ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಧ್ಯರಾತ್ರಿ ಸ್ವಿಜರ್‌ಲೆಂಡ್‌ನ ದಾವೋಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಜ.18ರಂದು ಶಿವಕುಮಾರ್‌ ಅವರು ದಾವೋಸ್‌ ಪ್ರವಾಸ ನಿಗದಿಯಾಗಿತ್ತು.  ಆದರೆ, ದೆಹಲಿಯಲ್ಲಿ ವರಿಷ್ಠರೊಂದಿಗಿನ ಸಭೆ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರು ಕೂಡ ದಾವೋಸ್‌ಗೆ ಹೋಗಲು ಹೇಳಿದ್ದಾರೆ. ವಿರೋಧ ಪಕ್ಷದ ಸ್ನೇಹಿತರೂ ನನಗೆ ಅದೇ ಸಲಹೆ ನೀಡುತ್ತಿದ್ದಾರೆ. ರಾಜ್ಯದ ಹಿತ ವಿಚಾರದಲ್ಲಿ ಕೆಲವೊಮ್ಮೆ ಅವರ ಸಲಹೆಗಳನ್ನು ಸ್ವೀಕರಿಸಬೇಕು ಎಂದರು.

Read More

ಯಾದಗಿರಿ : ಯಾದಗಿರಿಯಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಬೆಳಗುಂದಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಬೇಳೆ ಬಾತ್ ಸೇವಿಸಿದ್ದರು. ಊಟ ಮಾಡಿದ ಕೆಲ ಹೊತ್ತಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿ ಭೇದಿ ಕಾಣಿಸಿಕೊಂಡ ಹಿನ್ನೆಲೆ ತಕ್ಷಣ ವಿದ್ಯಾರ್ಥಿಗಳನ್ನು ಸೈದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಚಿಕ್ಕಬಳ್ಳಾಪುರ : ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಭೀಕರ ಹಬ್ಬದ ಸಂಭವಿಸಿದ್ದು, ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಅಪಘಾತಕ್ಕೆ ಈಡಾಗಿದೆ. ಟ್ರಕ್ಕಿಗೆ ಖಾಸಗಿ ಸ್ಲಿಪ್ಪರ್ ಬಸ್ ಒಂದು ಡಿಕ್ಕಿ ಹೊಡೆಡಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಬಳಿ ಈ ಒಂದು ಭೀಕರ ಬಘಾತ ಸಂಭವಿಸಿದ್ದು. 11 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ.  ಬಸ್ನೊಳಗೆ ಸಿಲುಕಿದ್ದ ಶಿವಪ್ಪ ಎಂಬಾತನನ್ನು ತಕ್ಷಣ ರಕ್ಷಿಸಲಾಗಿದೆ. ಬಸ್ ಕ್ಲೀನರ್ ಸೇರಿದಂತೆ ಇಬ್ಬರಿಗೆ ಗಂಭೀರವಾದ ಗಾಯಳಾಗಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನಿಂದ ಮಂತ್ರಾಲಯಕ್ಕೆ ಬಸ್ ತೆರಳುತ್ತಿತ್ತು. ಸುಗಮ ಸಂಸ್ಥೆಯ ಬಸ್ ಅಪಘಾತ ಆಗಿದ್ದು,  ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿ ಷ್ಕರಣೆ(ಎಸ್‌ಐಆರ್)ಯ ಪೂರ್ವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ತಿಂಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದೆ. ರಾಜ್ಯದಲ್ಲಿ ಎಸ್‌ಐಆರ್‌ಪೂರ್ವಭಾವಿ ಪ್ರಕ್ರಿಯೆಗೆ ಚುನಾವಣಾ ಆಯೋಗ ಕಳೆದ ಡಿಸೆಂಬರ್ ನಲ್ಲಿಯೇ ಚಾಲನೆ ನೀಡಿದೆ. ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಪೂರ್ವಭಾವಿಯಾಗಿ 2002ರ ಮತ್ತು 2025ರ ಮತದಾರರ ಪಟ್ಟಿಯನ್ನು ಹೋಲಿಕೆ ಮಾಡಲಾಗುತ್ತಿದೆ. ರಾಜ್ಯದ 5.547 ಕೋಟಿ ಮತದಾರರ ಪೈಕಿ 3.05 ಕೋಟಿ ಮತದಾರರ ವಿವರಗಳು ತಾಳೆಯಾಗಿವೆ ಎಂದು ತಿಳಿದು ಬಂದಿದೆ. ಈಎಸ್‌ಐಆರ್‌ಪೂರ್ವಭಾವಿಪ್ರಕ್ರಿಯೆಯ ಭಾಗವಾಗಿಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆಹೋಗಿಮತದಾರರ ವಿಳಾಸ ಪಟ್ಟಿ ಪರಿಶೀಲನೆ ನಡೆಸಲಿದ್ದಾರೆ. ಮೃತಪಟ್ಟವರು, ಬದಲಾದವರು. ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಹೊಂದಿರುವವರ ವಿವರವನ್ನು ಕಲೆ ಹಾಕುತ್ತಾರೆ. ಅರ್ಹ ದಾಖಲೆಗಳನ್ನು ಒದಗಿಸಿದವರು ಮತದಾರರ ಪಟ್ಟಿಯಲ್ಲಿ ಉಳಿಯುತ್ತಾರೆ. ಇದರಿಂದ ಅರ್ಹ ಮತದಾರರ ಸಂಖ್ಯೆ ಅಂದಾಜು ಸಿಗಲಿದೆ. ಈ ಮಾಸಾಂತ್ಯದ ವೇಳೆ ಎಸ್‌ಐಆರ್ ಪೂರ್ವ ಪ್ರಕ್ರಿಯೆ…

Read More

ಬೆಂಗಳೂರು : ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಎನ್ನುವಂತೆ ಬಾಕಿ ಇದ್ದಂತ ಎರಡು ತಿಂಗಳ ಹಣವನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ರಾಜಕೀಯದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂಬುದಾಗಿ ಟೀಕಿಸಿದಂತ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮನವಾಗಿ ತಲುಪುತ್ತಿವೆ ಎಂದರು. ಎಷ್ಟೋ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ. ಇದರಿಂದ ಮಹಿಳೆಯರ ಜೀವನ ಉತ್ತಮಗೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂಬುದಾಗಿ ತಿಳಿಸಿದರು.

Read More