Author: kannadanewsnow05

ಕೋಲಾರ : ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಲ್ಲೆಡೆ ಮೆರವಣಿಗೆ ನಡೆಯುತ್ತಿದ್ದು, ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದ್ದು, ಕ್ಲಾಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು ಕೋಲಾರ ನಗರದ ಕ್ಲಾಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಸ್ತ್ರಗಳಿಂದ ಹಲ್ಲೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸಯ್ಯದ್ ಸೈಫ್, ಹುಸೇನ್ ಕಾಶಿಪ್, ಖಾಲಿಲ್ ಅಹ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೈಯದ್ ವಸಿಂ ಪಾಷಾ ಹಾಗೂ ತಾಹಿರ್ ಗುಂಪಿನಿಂದ ಈ ಒಂದು ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಕೋಲಾರ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈದ್ ಪ್ರಯುಕ್ತ ಟ್ರಾಫಿಕ್ ಜಾಮ್ ಅಲ್ಲದೆ ಕೋಲಾರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ವಾಹನ…

Read More

ಶಿವಮೊಗ್ಗ : ಬಿ.ವೈ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆಗೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದು, ಯಾರು ಏನೇ ಹೇಳಿದರು ಬಿಜೆಪಿ ರಾಜ್ಯಾಧ್ಯಕ್ಷ ನಾನೇ ಎಂದು ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ಏನೇ ಹೇಳಿದರೂ ಕಾರ್ಯಕರ್ತರು ನನ್ನನ್ನು ಒಪ್ಪಿದ್ದಾರೆ ಎಂದು ಅವರು ತಿಳಿಸಿದರು. ನಾನು ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಯಾರು ಏನೇ ಮಾತನಾಡಿದರೂ ವಿಜಯೇಂದ್ರನೇ ರಾಜ್ಯಾಧ್ಯಕ್ಷ. ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪಕ್ಷದ ಹೈಕಮಾಂಡ್, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಜೆಪಿ ನಡ್ದ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಗಲಭೆ ನಡೆದಿದೆ. ಪೆಟ್ರೋಲ್ ಬಾಂಬ್ ಹಾಕಿ ಅಂಗಡಿಗಳನ್ನು ಸುಟ್ಟುಹಾಕಿದ್ದಾರೆ. ಪಾಂಡವಪುರದಲ್ಲಿನ…

Read More

ಬೆಂಗಳೂರು : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ದಾಳಿ ನಡೆಸಿ ಗಲಭೆ ಸೃಷ್ಟಿಸಿರುವ ಈ ಘಟನೆ ಹಿಂದೆ ನಿಷೇಧಿತ ಸಂಘಟನೆಗಳು ಹಾಗೂ ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂಶಯವಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಭೇದಿಸುವುದು ಕಷ್ಟವಾದ ಕಾರಣ ಎನ್‌ಐಎ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದು ಸರಕಾರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ ಎಂದರು. ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್‌, ಈಗ…

Read More

ಮಂಗಳೂರು : ಒಂದು ಕಡೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ, ಚಪ್ಪಲಿ ಎಸೆದ ಪ್ರಕರಣ ಇಡೀ ರಾಜ್ಯದಲ್ಲಿ ಕೋಮು ಗಲಭೆಗೆ ಸಾಕ್ಷಿಯಾಗಿದ್ದರೆ, ಇದೀಗ ಮಂಗಳೂರಿನಲ್ಲಿ ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಹಿಂದೂಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ ಕಾಟಿಪಳ್ಳ 3ನೇ ಬ್ಲಾಕ್​​ನಲ್ಲಿರುವ ಅನ್ಯ ಕೋಮಿನ ಪ್ರಾರ್ಥನಾ ಮಂದಿರದ ಸಮೀಪ ಕಲ್ಲು ತೂರಾಟ ನಡೆಸಿದ್ದ ಪ್ರಕರಣ ಸಂಬಂಧ ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ ವೇಳೆಗೆ ಹಬ್ಬದ ಪ್ರಯುಕ್ತ ಪ್ರಾರ್ಥನಾ ಮಂದಿರಕ್ಕೆ ದೀಪಾಲಂಕಾರ ಮಾಡಿ, ಒಳಗಡೆ ಕಾರ್ಯಕರ್ತರೆಲ್ಲ ಕೆಲಸ ಮಾಡಿಕೊಂಡಿದ್ದ ಸಮಯದಲ್ಲಿ ರಾತ್ರಿ 9-50 ಗಂಟೆ ಸುಮಾರಿಗೆ ಕಲ್ಲು ತೂರಾಟ ನಡೆಸಲಾಗಿದೆ.ಎರಡು ಬೈಕ್‌ಗಳಲ್ಲಿ ಜನತಾ ಕಾಲೋನಿಯ ಸ್ಮಶಾನದ ಕಡೆಯಿಂದ ಬಂದು ಮಂದಿರದ ಹಿಂಭಾಗದ ರಸ್ತೆಯ ಕಡೆಯಿಂದ ಕಲ್ಲು ಬಿಸಾಡಿದ್ದಾರೆ. ಈ ಕುರಿತಂತೆ ಕೆ.ಹೆಚ್. ಅಬ್ದುಲ್ ರಹಿಮಾನ್ ಎಂಬವರು ಪೊಲೀಸರಿಗೆ…

Read More

ಕಲಬುರಗಿ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲುತೂರಾಟ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾಗಮಂಗಲ ಶಾಂತವಾಗಿದೆ. ಘಟನೆಯಲ್ಲಿ ಯಾರಿಗೆ ನಷ್ಟವಾಗಿದೆ ಅವರಿಗೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಪೊಲೀಸರ ವೈಫಲ್ಯ ಇದೆ ಅಂದಿದ್ದಕ್ಕೆ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಾಗಮಂಗಲ ಶಾಂತವಾಗಿದೆ. ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಅಂಗಡಿಗಳು ಬೇಕರಿಗಳು ಸೇರಿದಂತೆ ಎಲ್ಲೆಲ್ಲಿ ಏನೇನು ನಷ್ಟ ಆಗಿದೆ ಅದಕ್ಕೆ ಪರಿಹಾರ ಕೊಡತಕ್ಕಂತ ಕೆಲಸ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Read More

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಬಿಜೆಪಿ ಭ್ರಷ್ಟ ಪಕ್ಷ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ ಎಂದು ಗಂಭೀರವಾದ ಆರೋಪ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪ ಅವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ…

Read More

ಚಿತ್ರದುರ್ಗ : ನಾಗಮಂಗಲ ಗಲಭೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಚಿತ್ರದುರ್ಗದಲ್ಲಿ ಈದ್ ಮಿಲಾದ್ ಸಂದರ್ಭದಲ್ಲಿ ಕೆಲವು ಮುಸ್ಲಿಮರು ಪ್ಯಾಲೆಸ್ತೆನ್ ಪರ ಘೋಷಣೆ ಹೋಗಿರುವ ಘಟನೆ ನಡೆದಿದೆ. ಹೌದು ಈದ್ ಮಿಲಾದ ಮೆರವಣಿಗೆ ವೇಳೆ ಪ್ಯಾಲೇಸ್ತೇನ್ ಪರ ಘೋಷಣೆ ಕೂಗಿದ್ದು, ಚಿತ್ರದುರ್ಗ ನಗರದ ಗಾಂಧೀಜಿ ವೃತ್ತದ ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೇನ್ ಪರ ಘೋಷಣೆ ಕೂಗಲಾಯಿತು. ಪ್ಯಾಲೆಸ್ತೇನ್ ಜಿಂದಾಬಾದ್ ಎಂದು ಘೋಷಣೆ ಕೆಲವರು ಕೂಗಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಹುಬ್ಬಳ್ಳಿ : ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸರ್ಕಾರಿ ಅಧಿಕಾರಿಯೋರ್ವರು ಫ್ಲೈ ಓವರ್ ಕಾಮಗಾರಿಗೆ ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರು ಹುಬ್ಬಳ್ಳಿ ಪೊಲೀಸರು ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಎಂಬ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ. ಕಳೆದ ಮಂಗಳವಾರ ASI ನಾಭಿರಾಜ್ ಕರ್ತವ್ಯಕ್ಕೆ ಹೋಗುವಾಗ ಈ ವೇಳೆ ಕಾಮಗಾರಿಯ ರಾಡ್ ಬಿದ್ದು ತಲೆಗೆ ಗಂಭೀರವಾದಂತ ಗಾಯವಾಗಿತ್ತು. ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸರು, ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ. ಝಂಡು ಕನ್​ಸ್ಟ್ರಕ್ಷನ್​ ಸೂಪರ್ ವೈಸರ್​ ಹರ್ಷ ಹೊಸಗಾಣಿಗೇರ, ಲೈಸನಿಂಗ್ ಇಂಜಿನಿಯರ್ ಜಿತೇಂದ್ರ ಪಾಲ್, ಇಂಜನಿಯರ್ ಭೂಪೇಂದರ್, ನೌಕರರಾದ ಮಹಮ್ಮದ್ ಮಿಯಾ, ಅಸ್ಲಂ, ಮೊಹಮ್ಮದ್ ಹಾಜಿ, ಸಬೀಬ್, ರಿಜಾವುಲ್, ಶಮೀಮ್ ಅಲಿಯಾಸ್ ಪಿಂಟು ಶೇಕ್, ಮೊಹಮ್ಮದ್ ಆರೀಫ್ ಹಾಗೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿ ಫಿಲ್ಟರ್ ಒಬ್ಬ ಯುವಕನನ್ನು ಬೆತ್ತಲೆಗೊಳಿಸಿ ನಗ್ನವಾಗಿ ರಸ್ತೆ ಮೇಲೆ ಓಡುವಂತೆ ಹಲ್ಲೆ ನಡೆಸಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ರಾಜಗೋಪಾಲನಗರದ ರೌಡಿಶೀಟರ್ ನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಪ್ರಾಣ ಉಳಿಸಿಕೊಳ್ಳಲು ಬೆತ್ತಲೆಯಾಗಿ ಓಡಿದ ಯುವಕ ರಾಜಗೋಪಾಲನಗರದ ಯುವಕ ಅರ್ಜುನ್ ಎನ್ನುವ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಬಟ್ಟೆಯನ್ನು ಬಿಚ್ಚಿಸಿ ನಗ್ನಗೊಳಿಸಿ ಓಡುವಂತೆ ಹೇಳಿದ್ದ ರೌಡಿ ಪವನ್ ಯುವಕನನ್ನು ಬೆತ್ತಲೆ ಮಾಡಿ ರೌಡಿ ಯಿಂದ ಹಲ್ಲೆ ನಡೆಸಿದ್ದಾನೆ. ನಡು ರಸ್ತೆಯಲ್ಲಿ ಯುವಕನನ್ನು ಬೆತ್ತಲೆ ಮಾಡಿ ರೌಡಿಯಿಂದ ಹಲ್ಲೆ ನಡೆಸಲಾಗಿದೆ.ಬಟ್ಟೆ ಬಿಚ್ಚಿಸಿ ನಗ್ನವಾಗಿ ಓಡುವಂತೆ ರೌಡಿ ಪವನ್ ಹೇಳಿದ್ದ ಎನ್ನಲಾಗಿದ್ದು, ಬೇರೊಂದು ಕೇಸ್ ತನಿಖೆ ವೇಳೆ ಈ ವಿಡಿಯೋ ಬಹಿರಂಗವಾಗಿದೆ. ಪ್ರಕರಣದ ಕುರಿತು ಡಿಸಿಪಿ ಗಿರೀಶ್ ಅವರು ಪ್ರತಿಕ್ರಿಯೆ ನೀಡಿದ್ದು, ಹಲ್ಲೆಗೆ ಒಳಗಾದಂತಹ ಯುವಕನನ್ನು ಅರ್ಜುನ್ ಎಂದು ಹೇಳಲಾಗುತ್ತಿದೆ. ಬೇರೆ ಕೇಸ್ ನಲ್ಲಿ ರೌಡಿ ಶೀಟರ್ ಪವನ್ ನನ್ನು ವಿಚಾರಣೆಗೆ ಒಳಪಡಿಸಿದಾಗ…

Read More

ಬೊಮ್ಮನಹಳ್ಳಿ : ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ  ರಮ್ಯಾ,  ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ‌ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ‌ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಅವುಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಸಾರ್ವಜನಿಕರಿಂದ ಹೆಚ್ಚು ಸಕ್ರಿಯವಾಗಿ ರಸ್ತೆ…

Read More