Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡದ ಆಟಗಾರರಿಗೆ ಬೆಂಗಳೂರಿನ ವಿಧಾನಸೌಧದ ಬಳಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಳೆದ ಜೂನ್ 4ರಂದು ಈ ಒಂದು ಸಮಾರಂಭ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ವಿಚಾರಣೆ ನಡೆಸಲಿದೆ. ಹೌದು ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ ನಡೆಸಲಿದೆ ನ್ಯಾ.ವಿ ಕಾಮೇಶ್ವರರಾವ್ ಹಾಗು ನ್ಯಾ. ಸಿಎಂ ಜೋಶಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಸರ್ಕಾರಕ್ಕೆ ಹೈಕೋರ್ಟ್ ಸಾಲು ಸಾಲು ಪ್ರಶ್ನೆ ಕೇಳಿತ್ತು. ಹಾಗಾಗಿ ಇಂದು ಮುಚ್ಚಿದ ಲಕೋಟೆಯಲ್ಲಿ ಸರ್ಕಾರ ಹೈಕೋರ್ಟಿಗೆ ಉತ್ತರ ನೀಡಲಿದೆ. ವಿಜಯೋತ್ಸವ ಆಚರಣೆಗೆ ನಿರ್ಧರಿಸಿದವರು ಯಾರು? ಪ್ರಕ್ರಿಯೆ ಹೇಗಿತ್ತು? ಟ್ರಾಫಿಕ್ ನಿಯಂತ್ರಿಸಲು ಅನುಸರಿಸಿದ ಕ್ರಮಗಳೇನು? ಜನರ ಗುಂಪನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳೇನು? ಸ್ಥಳದಲ್ಲಿ ಒದಗಿಸಿದ್ದ ವೈದ್ಯಕೀಯ ಮತ್ತು…
ಬೆಂಗಳೂರು : 2025 ಹೊಸ ವರ್ಷ ಆರಂಭವಾದಾಗಿನಿಂದ ಸರ್ಕಾರ KSRTC ಪ್ರಯಾಣದ ದರ, ಮೆಟ್ರೋ ಟಿಕೆಟ್ ಪ್ರಯಾಣದ ದರ ಹಾಗು ಹಾಲಿನ ದರ ಏರಿಕೆ ಮಾಡಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲೇ ಆಟೋ ಪ್ರಯಾಣದ ದರ 18 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ರಾಜ್ಯದ ಜನತೆ ಹಲವು ಬೆಲೆ ಏರಿಕೆಗಳಿಂದ ತತ್ತರಿಸಿರುವ ನಡುವೆಯೇ ಆಟೋ ಪ್ರಯಾಣ ದರ ಕೂಡ ಏರಿಕೆಯಾಗುವ ಸಾಧ್ಯತೆಯಿದೆ. ಆಟೋರಿಕ್ಷಾ ದರವು ಈಗಿರುವ 30 ರೂ.ಗಳಿಂದ 36 ರೂ.ಗಳಿಗೆ ಮತ್ತು ನಂತರದ ಪ್ರತಿ ಕಿಲೋಮೀಟರ್ ಶುಲ್ಕವು 15 ರೂ.ಗಳಿಂದ 18 ರೂ.ಗಳಿಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಗಳೂರು ನಗರ ಡಿಸಿ ಕಚೇರಿಯ ಮೂಲಗಳ ಪ್ರಕಾರ, ಪರಿಷ್ಕೃತ ದರಗಳು ರೂ 36 ಮತ್ತು ರೂ 18 ಆಗಿದ್ದು, ಬೆಂಗಳೂರು ನಗರ ಡಿಸಿ ಜಗದೀಶ ಜಿ ಅವರ ಅನುಮೋದನೆಗಾಗಿ ಕಾಯುತ್ತಿವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ತನಿಖೆಯ…
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ವೀಕ್ಷಕರು ಅಂದುಕೊಂಡತೇ ಹನುಮಂತ ಗೆದ್ದು ಬೀಗಿದ್ದಾನೆ. ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಕ್ಕೆ ಖುಷಿಯಾಗಿದ್ದಾರೆ. ಎಲ್ಲ ಖುಷಿ ಖುಷಿಯಾಗಿರುವಾಗಲೇ ಕಿಚ್ಚ ಸುದೀಪ್ ಅಭಿಮಾನಿಗಳು ಮಾತ್ರ ಬೇಸರದಲ್ಲಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುವುದು ಇದೇ ಕೊನೆ ಎಂದು ಈಗಾಗಲೇ ಹೇಳಿದ್ದಾರೆ. ಹೌದು ಬಿಗ್ ಬಾಸ್ 11 ಸೀಸನ್ ಬಳಿಕ ಕಿಚ್ಚ ಸುದೀಪ್ ಅವರು ವಿದಾಯ ಹೇಳಿದ್ದು, ಅಭಿಮಾನಿಗಳು ತೀವ್ರ ನೋವಿನಲ್ಲಿದ್ದಾರೆ. ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡ್ಬೇಕು ಎಂದು ಅಭಿಮಾನಿಗಳು ಬಹಿರಂಗವಾಗಿ ಹೇಳಿಕೆ ನೀಡಿದ್ದು, ಇದೀಗ ಬಿಗ್ ಬಾಸ್ ಕನ್ನಡ 12 ಶೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆರಂಭವಾಗಿದೆ. ಕಲರ್ಸ್ ಕನ್ನಡ ಫಿನಾಲೆಯಲ್ಲಿದ್ದ ಮೊದಲ ಮೂವರು ಸ್ಪರ್ಧಿಗಳನ್ನು ಇಟ್ಟುಕೊಂಡು ಪತ್ರಿಕಾಗೋಷ್ಠಿಯನ್ನು ನಡೆಸಿತ್ತು. ಅದರಲ್ಲಿ ಮುಂದಿನ ಸೀಸನ್‌ಗೆ ಯಾರು ಹೋಸ್ಟ್ ಅನ್ನೋ ಚಿಕ್ಕದೊಂದು ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಸೀಸನ್ ಬಗ್ಗೆ ಕಲರ್ಸ್ ಕನ್ನಡ ಕೊಟ್ಟ ಸುಳಿವು ನೀಡಿತ್ತು.…
ಚಿಕ್ಕಬಳ್ಳಾಪುರ : ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ತಿಳಿಸಿದರು. ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು. ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು…
ಚಿಕ್ಕಬಳ್ಳಾಪುರ : ಜೂನ್ 11: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು. ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ…
ಹೈದ್ರಾಬಾದ್ : ಖ್ಯಾತ ಗಾಯಕಿ ಮಂಗ್ಲಿ ಅವರ ಹುಟ್ಟು ಹಬ್ಬದ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ವಿದೇಶಿ ಮದ್ಯ, ಗಾಂಜಾ ಸೇವನೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಹೌದು ಮಂಗ್ಲಿ ಹುಟ್ಟು ಹಬ್ಬದ ಪಾರ್ಟಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ದಾಳಿ ಮಾಡಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಗ್ಲಿ ಬರ್ತ್ಡೇ ಹಿನ್ನೆಲೆ ಹಲವರಿಗೆ ಮಾದಕ ದ್ರವ್ಯ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಚೆವೆಲ್ಲ ತ್ರಿಪುರ ರೆಸಾರ್ಟ್ ನಲ್ಲಿ ಮಂಗ್ಲಿ ಬರ್ತಡೇ ಪಾರ್ಟಿ ನಡೆಯುತ್ತಿತ್ತು ಹಲವರು ಗಾಂಜಾ ಸೇವನೆ ಮಾಡಿರುವುದು ಬಯಲಾಗಿದೆ. ಅಲ್ಲದೇ ವಿದೇಶಿ ಮದ್ಯವನ್ನು ಪೊಲೀಸರು ವಶಕೆಕ್ ಪಡೆದುಕೊಂಡಿದ್ದಾರೆ.
ಬಳ್ಳಾರಿ : ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಚುನಾವಣೆ ವೇಳೆ ಭಾರೀ ಹಣ ಖರ್ಚು ಮಾಡಿರುವ ಆರೋಪದ ಮೇಲೆ ಇ ತುಕರಾಂ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು. ಇನ್ನು ಕಾಂಗ್ರೆಸ್ ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ.ಇದೀಗ ವಿಜಯಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೇಣುಕಾ ಸಾವನ್ನಪ್ಪಿದ್ದಾರೆ. ಹೌದು ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ. ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಹಲ್ಲೆಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.…
ಕಲಬುರ್ಗಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಸಂಸದ ಇ ತುಕಾರಾಮ ಹಾಗೂ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪನಿ ಗಣೇಶ್ ಹಾಗೂ ಡಾ. ಶ್ರೀನಿವಾಸ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೆ ವಿಚಾರವಾಗಿ ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಮೊದಲಿನಿಂದಲೂ ಸಿಟ್ಟಿದೆ. ಇಡಿ ದಾಳಿಯ ಮೂಲಕ ಕಾಂಗ್ರೆಸ್ ಇಬ್ಬಾಗ ಮಾಡಬೇಕು ಎಂಬ ಉದ್ದೇಶವಿದೆ. ಟಾರ್ಚರ್ ಕೊಟ್ಟರೆ ಪಕ್ಷ ಇಬ್ಬಾಗ ಆಗುತ್ತೆ ಅನ್ನೋ ಉದ್ದೇಶ ಇರಬೇಕು. ಆದರೆ ಅದು ಸಾಧ್ಯವಿಲ್ಲದ ಮಾತು ಎಂದರು. ಯಾವ ಕಾರಣಕ್ಕೆ ದಾಳಿಯಾಗಿದೆ ಅನ್ನೋದು ಇಡಿಯವರಿಗೆ ಗೊತ್ತಿದೆ. ಇಡಿ ಅಧಿಕಾರಿಗಳ ದಾಳಿ ಇದೇನು ಹೊಸದಲ್ಲ. ಚುನಾವಣೆ ಸಮಯದಲ್ಲಿ ಎಲ್ಲಾ ಪಕ್ಷಗಳ ಹಣ ಸೀಸ್ ಮಾಡಿದ್ದರು. ಇಡೀ ಜತ್ತಿ ಮಾಡಿದ್ದ ಹಣ ಎಲ್ಲಿ ಹೋಯಿತು? ಯಾರಿಗೂ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸಂಸದ ಇ ತುಕಾರಾಂಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಬಳ್ಳಾರಿಯ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಇದರ ಬೆನ್ನಲ್ಲೇ ತುಕಾರಾಮಗೆ ಮತ್ತೊಂದು ಶಾಕ್ ನೀಡಿರುವ ಇಡಿ ಅಧಿಕಾರಿಗಳು, ಬೆಂಗಳೂರಿನ ನಿವಾಸದ ಮೇಲು ದಾಳಿ ಮಾಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಇರುವಂತಹ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬೆಳಿಗ್ಗೆಯಿಂದಲೇ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕೇವಲ ಸಂಸದ ತುಕಾರಾಂ ಅಲ್ಲದೆ ಕಾಂಗ್ರೆಸ್ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಗಣೇಶ್ ಹಾಗೂ ಡಾ. ಶ್ರೀನಿವಾಸ್ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.












