Subscribe to Updates
Get the latest creative news from FooBar about art, design and business.
Author: kannadanewsnow05
ಕೋಲಾರ : ಬಾರ್ ಮಾಲೀಕರೊಬ್ಬರ ಬಳಿ 20 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್ಐ ಹಾಗು ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿಎಸ್ಐ ಅರ್ಜುನ್ ಗೌಡ ಹಾಗೂ ಕಾನ್ಸ್ಟೇಬಲ್ ಸುರೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಬಾರ್ ಮಾಲೀಕ ಪ್ರಶಾಂತ್ ಬಳಿ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ 20,000 ಲಾಂಚ ಸ್ವೀಕರಿಸುವಾಗ ಪಿಎಸ್ಐ ಅರ್ಜುನ್ ಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಅರ್ಜುನನನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯಲಿರುವ ಸಂಸದ ಇ ತುಕಾರಾಂ ಹಾಗೂ ಕಾಂಗ್ರೆಸ್ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಗಣೇಶ ನಿವಾಸದ ಮೇಲೆ ಈಡಿಯಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಪಿಎ ಗೋವರ್ಧನ ನಿವಾಸದ ಮೇಲು ದಾಳಿ ಮಾಡಿರುವ ಇಡಿ ಅಧಿಕಾರಿಗಳು ಇದೀಗ ಬೆಂಗಳೂರಿನ ಶಾಸಕರ ಭವನದಲ್ಲಿರುವ ಬಿ.ನಾಗೇಂದ್ರ ಕೊಠಡಿಯಲ್ಲೂ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಮಾಜಿ ಸಚಿವ ನಾಗೇಂದ್ರರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ ಶಾಸಕರ ಭವನದಲ್ಲಿ ನಾಗೇಂದ್ರ ಕೊಠಡಿಯಲ್ಲಿ ಇಡಿ ಅಧಿಕಾರಿಗಳು ಇದೀಗ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ
ಮಂಡ್ಯ : ನಿನ್ನೆ ಮಂಡ್ಯ ಜಿಲ್ಲೆಯ ನಂಜನಗೂಡು ತಾಲೂಕಿನ ಕೂತ್ತುನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, CET ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರಿಂದ ಮನನೊಂದ ತಾಯಿಯು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಕೊತ್ತನಹಳ್ಳಿ ಗ್ರಾಮದ ಜಯರಾಮ ಅವರ ಪತ್ನಿ ಮಹಾದೇವಮ್ಮ (45), ಮಗಳು ಪ್ರಿಯಾ (20) ಆತ್ಮಹತ್ಯೆಗೆ ಶರಣಾದವರು.ಪ್ರಿಯಾ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದು, ಸಿಇಟಿ, ಎನ್‌ಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಳು. ಮಗಳನ್ನು ತುಂಬಾ ಪ್ರೀತಿಸುತ್ತಿದ್ದ ತಾಯಿ ಮಹಾದೇವಮ್ಮ ಮಗಳ ಸಾವನ್ನು ಕಂಡು ಆಕೆಯೂ ಸಹ ಮಗಳ ಶವದ ಪಕ್ಕದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿಯಲ್ಲಿ ಸಂಸದ ಇ ತುಕಾರಾಂ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ತುಕಾರಾಂ ಅವರ ಪಾತ್ರ ಇದೆ ಎಂಬ ಕಾರಣಕ್ಕೆ ಇಡಿ ಅಧಿಕಾರಿಗಳು ಇ ತುಕಾರಾಂ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ಶಾಸಕರಾದ ನಾರಾ ಭರತ್ ರೆಡ್ಡಿ ಮತ್ತು ಕಂಪ್ಲಿ ಗಣೇಶ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೇ ಮಾಜಿ ಸಚಿವ ನಾಗೇಂದ್ರ ಪಿ ಎ ಗೋವರ್ಧನಗು ಇಡಿ ಶಾಕ್ ನೀಡಿದೆ. ಸಂಡೂರಿನಲ್ಲಿರುವ ಸಂಸದ ತುಕಾರಾಂ ಮನೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇತ್ತೀಚಿಗೆ ಅವರು ಬೇಲ್ ಮೇಲೆ…
ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಸುರತ್ಕಲ್ ಕಡೆ ಬರುತ್ತಿದ್ದಾಗ ಬೈಕಂಪಾಡಿ ಬಳಿ ಹೆದ್ದಾರಿಯಲ್ಲಿ ಇದ್ದ ಹೊಂಡಕ್ಕೆ ಸ್ಕೂಟರ್ ಸಿಲುಕಿ ಪಲ್ಟಿಯಾದ ವೇಳೆ ಟ್ಯಾಂಕರ್ ಹರಿದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಸುರತ್ಕಲ್ ಸಮೀಪದ ಆಶ್ರಯ ಕಾಲನಿ ನಿವಾಸಿ ಅಶ್ರಫ್ (36) ಎಂದು ತಿಳಿದುಬಂದಿದೆ. ಮೂಲ್ಕಿಯ ಶಾಹಿಲ್ (35) ಗಂಭೀರ ಗಾಯಗೊಂಡು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕಂಪಾಡಿ ಸಮೀಪ ಹೆದ್ದಾರಿಯಲ್ಲಿ ಆಗಿರುವ ಹೊಂಡಕ್ಕೆ ಸ್ಕೂಟರ್‌ನ ಟೈಯರ್ ಸಿಲುಕಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಬಿದ್ದ ಅಶ್ರಫ್ ಅವರ ಮೇಲೆ ಹಿಂದಿನಿಂದ ಬಂದ ಟ್ಯಾಂಕರ್ ಚಲಿಸಿದ್ದರಿಂದ ಮೃತಪಟ್ಟರು. ಸುರತ್ಕಲ್‌ನಲ್ಲಿ ಪರಿಚಿತರಾಗಿದ್ದ ಇವರು ಹೂ ವ್ಯಾಪಾರ, ಹೊಟೇಲ್ ಮತ್ತಿತರ ವ್ಯವಹಾರ ನಡೆಸುತ್ತಿದ್ದರು. ಅವರು ಕೊರೊನಾ ಸಂದರ್ಭ ಕಿಟ್ ವಿತರಿಸಿ ಹಲವರಿಗೆ ನೆರವಾಗಿದ್ದರು. ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿಯಲ್ಲಿ ಸಂಸದ ಇ ತುಕಾರಾಂ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ತುಕಾರಾಂ ಅವರ ಪಾತ್ರ ಇದೆ ಎಂಬ ಕಾರಣಕ್ಕೆ ಇಡಿ ಅಧಿಕಾರಿಗಳು ತುಕಾರಾಂ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ಶಾಸಕರಾದ ನಾರಾ ಭರತ್ ರೆಡ್ಡಿ ಮತ್ತು ಕಂಪ್ಲಿ ಗಣೇಶ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಮಾಜಿ ಸಚಿವ ನಾಗೇಂದ್ರ ಪಿ ಎ ಗೋವರ್ಧನಗು ಇಡಿ ಶಾಕ್ ನೀಡಿದೆ. ಸಂಡೂರಿನಲ್ಲಿರುವ ಸಂಸದ ತುಕಾರಾಂ ಮನೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರಂಭದ ಮೇಲೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿತ್ತು ಇತ್ತೀಚಿಗೆ ಅವರು ಮೇಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು ಇದೀಗ ಸಂಸದ ತುಕಾರಾಂ…
ವಿಜಯಪುರ : ವಿಜಯಪುರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಹಿಡಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ. ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ. ಹಲ್ಲಿಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಇಂಡಿ ಪಟ್ಟಣ ಪೊಲೀಸರು ಭೇಟಿ ನೀಡಿ…
ಮಂಡ್ಯ : ಮಂಡ್ಯದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೊಮ್ಮೂರು ಅಗ್ರಹಾರ ಗ್ರಾಮದ ಬಳಿ 12 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮುರು ಅಗ್ರಹಾರದಲ್ಲಿ ಗಾಂಜಾ ಸಾಗಿಸುತ್ತಿದ್ದ ಇರ್ಶಾದ್ ಮತ್ತು ಅಕ್ಬರ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಬಕಾರಿ ಡಿಸಿ ನಾಗಶಯ ನೇತೃತ್ವದಲ್ಲಿ ದಾಳಿ ನಡೆಸಿ 12 ಕೆಜಿ ಗಾಂಚಾವನ್ನು ಜಪ್ತಿ ಮಾಡಿಕೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಆರೋಪಿಗಳು ಗಾಜಾ ಸಾಗಿಸುತ್ತಿದ್ದರು ಎನ್ನಲಾಗಿದೆ.
ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹನುಮೇನಹಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಕುಸುಮ್-ಸಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಪ್ರವಾಸ ಕೈಗೊಂಡಿದ್ದು, ಹನುಮೇನಹಳ್ಳಿಯಲ್ಲಿ ಸೌರ ವಿದ್ಯುತ್ ಘಟಕ ನಿರ್ಮಾಣಗೊಂಡಿದ್ದು 20 ಮೆಗಾ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಗೊಂಡಿದೆ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಕುಸುಮ್-ಸಿ ಯೋಜನೆ ಬೆಳಿಗ್ಗೆ 10:30 ಕ್ಕೆ ಸಿಎಂ ಸಿದ್ದರಾಮಯ್ಯ ಸೌರ ವಿದ್ಯುತ್ ಘಟಕವನ್ನು ಉದ್ಘಾಟಿಸಲಿದ್ದಾರೆ. ಗೌರಿಬಿದನೂರಿಗೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ವೇದಿಕೆ, ಹೆಲಿಪ್ಯಾಡ್ ಮತ್ತು ಸೌರ ಘಟಕದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. 800 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸುತ್ತಾರೆ. ಹೀಗಾಗಿ, ಬಂಧನಕ್ಕೆ ಅವಕಾಶ ನೀಡಬಾರದು. ಇದೆಲ್ಲವೂ ರಾಜಕೀಯ ಪ್ರೇರಿತ ಪ್ರಕರಣ ಎಂದರು. ಇದಕ್ಕೆ ಆಕ್ಷೇಪಿಸಿದ್ದ ಸಂತ್ರಸ್ತೆ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯವು ಮುನಿರತ್ನ ಮತ್ತು ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಕಸ್ಟಡಿಗೆ ತನಿಖೆ ನಡೆಸಬೇಕಾದ ಅಗತ್ಯವಿದೆ. ಮುನಿರತ್ನ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಹೀಗಾಗಿ, ರಕ್ಷಣೆ ನೀಡಬಾರದು ಎಂದು ವಾದ ಮಂಡಿಸಿದರು.













