Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
BREAKING : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸೂಸೈಡ್
ಬಾಗಲಕೋಟೆ : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ. ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು. ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಂದು ಕನ್ನಡ ಬಿಗ್ ಬಾಸ್ ಸೀಸನ್ 12ರ ಗ್ರಾಂಡ್ ಫಿನಾಲೆ ನಡೆಯಲಿದ್ದು, ಈಗಾಗಲೇ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಬಂದು ಕುಳಿತಿದ್ದಾರೆ. ಇಂದು ನಡೆಯುವ ಫಿನಾಲೆಯಲ್ಲಿ ಯಾರು ಬಿಗ್ ಬಾಸ್ ಸೀಸನ್ 12ರ ಕಪ್ ಗೆಲ್ಲಲಿದ್ದಾರೆ ಎನ್ನುವುದು ಕೆಲವೇ ಗಂಟೆಗಳಲ್ಲಿ ತಿಳಿದು ಬರಲಿದೆ. ಆದರೆ ಅದಕ್ಕೂ ಮೊದಲು ಬಿಗ್ ಬಾಸ್ ಗೆ ಮತ್ತೊಂದು ಶಾಕ್ ಎದುರಾಗಿದ್ದವು ಅರಣ್ಯ ಇಲಾಖೆ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ. ಹೌದು ಕಳೆದ ಕೆಲವು ವಾರಗಳ ಹಿಂದೆ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯೊಂದರಲ್ಲಿ ಕಂಟೆಸ್ಟೆಂಟ್ ಒಬ್ಬರು ರಣಹದ್ದು ಇರುವಂತಹ ಫೋಟೋವೊಂದನ್ನು ತೋರಿಸಿದ್ದರು. ಆಗ ಕಿಚ್ಚ ಸುದೀಪ್ ಇದಕ್ಕೆ ಪ್ರತಿಕ್ರಿಯಿಸಿ, ಹೊಂಚು ಹಾಕಿ ಸಂಚು ಮಾಡಿ ಸರಯಾದ ಸಮಯಕ್ಕೆ ಲಬಕ್ ಎಂದು ಹಿಡಿಯುತ್ತದೆ ಎಂದಿದ್ದರು. ಇದಕ್ಕೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಸುದೀಪ್ ಅವರು ರಣಹದ್ದುಗಳ ಕುರಿತು ತಪ್ಪಾಗಿ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಅರಣ್ಯ ಇಲಾಖೆಯ…
ಬೆಂಗಳೂರು : ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಹೆತ್ತ ಮಗಳನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯದಲ್ಲಿ ಮರ್ಯಾದಾ ಹತ್ಯೆ ಹಾಗೂ ಸಂಬಂಧಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಕಾನೂನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಾನ್ಯ ಎಂಬ ಯುವತಿಯು ಪರಿಶಿಷ್ಟ ಜಾತಿಯ ಹುಡುಗನನ್ನು ಮದುವೆಯಾದ ಕಾರಣ ಆಕೆಯ ತಂದೆ ಮತ್ತು ಸಂಬಂಧಿಕರು ಭೀಕರವಾಗಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆಯು ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಹಾಗಾಗಿ ಈ ಹೊಸ ಕಾನೂನ ಪ್ರಕಾರ, ಮರ್ಯಾದಾ ಹತ್ಯೆ ಆಧಾರಿತ ಅಪರಾಧ ಎಸಗುವವರಿಗೆ 10 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ.ಗಳವರೆಗೆ ದಂಡ ವಿಧಿಸುವ ಪ್ರಸ್ತಾಪ ಮಾಡಲಾಗುತ್ತಿದೆ.ಮರ್ಯಾದಾ ಹತ್ಯೆಗಳು ಮತ್ತು ಅಂತರ್ಜಾತಿ ವಿವಾಹಗಳಲ್ಲಿ ದಂಪತಿಗಳ ಮೇಲೆ ಘೋರ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ವಿವಾಹ…
ಬೀದರ್ : ಕಳೆದ ಕೆಲವು ದಿನಗಳ ಹಿಂದೆ ತಾನೆ ಗಾಳಿಪಟ ಹಾರಿಸುವಾಗ ಗಾಳಿಪಟದ ಮಾಂಜಾ (ಗಾಜು ಲೇಪಿತ ದಾರ) ಕುತ್ತಿಗೆಗೆ ಸಿಲುಕಿ ಬೈಕ್ ಸವಾರರೊಬ್ಬರು ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿತ್ತು. ಇದೀಗ ಬೀದರ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಗಾಳಿಪಟ ಹಾರಿಸುವಾಗ ಕಟ್ಟಡದ ಮೇಲಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಹೌದು ಗೆಳೆಯರೊಂದಿಗೆ ಗಾಳಿಪಟ ಹಾರಿಸಲು ಕಟ್ಟಡದ ಮೇಲೇರಿದ್ದ ಯುವಕ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಹುಮನಾಬಾದ್ನ ವಾಂಜರಿ ಬಡಾವಣೆಯಲ್ಲಿ ನಡೆದಿದೆ. ವಾಂಜರಿ ಬಡಾವಣೆಯ ನಿವಾಸಿ ಶಶಿಕುಮಾರ ಶಿವಾನಂದ ಡೊಂಗರಗಾಂವ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಬಡಾವಣೆಯ ಎಸ್.ಎಚ್.ಪಾಟೀಲ್ ಐಟಿಐ ಕಾಲೇಜ್ ಪಕ್ಕದ ಕಟ್ಟಡದ ಶೆಡ್ ಮೇಲೆ ಹತ್ತಿದ್ದರು. ಶಿವಾನಂದ ಗಾಳಿಪಟ ಹಿಡಿಯಲು ಯತ್ನಿಸುತ್ತಿದಾಗ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ತಾಯಿ ನೀಡಿದ ದೂರಿನ ಮೇರೆಗೆ ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು : ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿಗೆ ಭರ್ಜರಿ ಗೆಲುವು ಸಿಕ್ಕಿದೆ. ಅಲ್ಲದೇ ಪರಿಷತ್ ಜೆಡಿಎಸ್ ಸದಸ್ಯ ಎಸ್ ಎಲ್ ಭೋಜೇಗೌಡಗು ಜಯ ಸಿಕ್ಕಿದ್ದು NDA ಮೈತ್ರಿಕೂಟದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. 32 ಮತದಾರರಿರುವ ಚಿಕ್ಕಮಗಳೂರು ತಾಲೂಕು ಸಹಕಾರ ಸಂಘಗಳ ಕ್ಷೇತ್ರವಾಗಿದೆ. ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರಕ್ಕೆ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಸ್ಪರ್ಧೆ ಮಾಡಿದ್ದಾರೆ. ಈ ಇಬ್ಬರು ಮೈತ್ರಿ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತ ನಿರಂಜನ್ ಸ್ಪರ್ಧೆ ಮಾಡಿರುವುದು ಇವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಇದೀಗ ಸಿಟಿ ರವಿ ಮತ್ತು ಎಸ್ ಎಲ್ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿಗೆ ಭರ್ಜರಿ ಗೆಲುವು ಸಿಕ್ಕಿದೆ, ಪರಿಷತ್ ಜೆಡಿಎಸ್ ಸದಸ್ಯ ಎಸ್ ಎಲ್ ಭೋಜೇಗೌಡಗೆ ಜಯ ಸಿಕ್ಕಿದ್ದು ಮೈತ್ರಿಕೂಟದ ಕಾರ್ಯಕರ್ತರು ಸಂಭ್ರಮಿಸಿದ್ದಾರೆ
ಉತ್ತರಕನ್ನಡ : ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮ್ನಿ ವಾಹನ ಅಪಘಾತಕ್ಕೆ ಈಡಾಗಿದೆ. ರಸ್ತೆ ಬದಿ ನಿಂತಿದ್ದ ಬೋಲೋರಿ ವಾಹನಕೆ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡದ ಕುಮಟಾ ಪಟ್ಟಣದಲ್ಲಿ ಒಂದು ಘಟನೆ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಓಮ್ನಿ ಕಾರು ಚಾಲಕ ಸೇರಿದಂತೆ ನಾಲ್ವರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ಮತ್ತು ನಾಲ್ವರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜೀವ್ ಗೌಡ ನಿರೀಕ್ಷಣಾ ಮೇಲೆ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಆರೋಪಿ ರಾಜೀವ್ ಗೌಡ ಪರ ವಕೀಲ ಶಿವಶಂಕರ್ ರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ. ಅಮೃತ ಗೌಡಗೆ ರಾಜೀವ್ ಗೌಡ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ ಅಲ್ಲದೆ ಜೀವ ಬೆದರಿಕೆ ಹಾಕಿದ್ದ. ಬಳಿಕ ಅಮೃತ ಗೌಡ ತೀವ್ರವಾಗಿ ಮನನೊಂದು ರಾಜೀವ್ ಗೌಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ಕೊಟ್ಟಿದ್ದರು. ದೂರು ದಾಖಲಾಗುತ್ತಿದ್ದಂತೆ ಇತ್ತ ಕಾಂಗ್ರೆಸ್ ಮುಖಂಡ ರಾಜೇಗೌಡ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ.ಆತನ ಬಂಧನಕ್ಕಾಗಿ ಈಗಾಗಲೇ ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ದಾರೆ. ಇದೀಗ ನಿರೀಕ್ಷಣಾ ಜಾಮೀನು ಕೋರಿ…
ಬೆಂಗಳೂರು : ರಾಜ್ಯದಲ್ಲಿ ಕೆಲವು ಪೊಲೀಸ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಆದರೆ 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆಗೆ ವಾರ್ಷಿಕ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ಆಗಿದ್ದು ಇದು ಸರ್ಕಾರಕ್ಕೆ ಮಾತ್ರವಲ್ಲ ಪೊಲೀಸ್ ಇಲಾಖೆಗೂ ಕೆಟ್ಟ ಹೆಸರಾಗಿದೆ ರಾಯಚೂರಿನ ಕವಿತಾಳ ಠಾಣೆ ದೇಶದಲ್ಲಿಯೇ ಮೂರನೇ ಸ್ಥಾನ ಪಡೆದುಕೊಂಡಿದೆ. ಪೊಲೀಸ ಅಧಿಕಾರಿಗಳಿಗೆ ಗೊತ್ತಾಗದೆ ಕ್ರೈಂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಬಲಾಡ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು ನಮ್ಮಲ್ಲಿ ಕಳ್ಳತನ ಸುಳ್ಳಿಗೆ ದರೋಡೆ ಪ್ರಕರಣ ಕಡಿಮೆ ಆಗ್ತಾ ಇದೆ ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ವೆಡ್ಲಿಂಗ್ ಜಾಸ್ತಿ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಅಬಕಾರಿ ಡಿಸಿ ಜಗದೀಶ್ ನಾಯಕನ್ನು ಅರೆಸ್ಟ್ ಮಾಡಿದ್ದಾರೆ ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ ಡಿಸಿ ಜಗದೀಶ್ ನಾಯಕ್ ಅರೆಸ್ಟ್ ಆಗಿದ್ದಾರೆ. ಮೈಕ್ರೋ ಬ್ರಿವೇರಿ ಮತ್ತು ಸಿಎಲ್ಸಿಗೆ 75 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 75 ಲಕ್ಷಕ್ಕೆ ಅಬಕಾರಿ ಡಿಸಿ ಜಗದೀಶ್ ನಾಯಕ್ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನ 25 ಲಕ್ಷ ಹಣ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅಬಕಾರಿ ಡಿಸಿ ಜಗದೀಶ್ ನಾಯಕ್, ಅಬಕಾರಿ ಕಚೇರಿ ಅಧಿಕ್ಷಕ ತಮ್ಮಣ್ಣ ಹಾಗು ಅಬಕಾರಿ ಕಾನ್ಸ್ಟೇಬಲ್ ಲಕ್ಕಪ್ಪ ಗಣಿ ಎನ್ನುವವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ದಾಳಿಯ ವೇಳೆ ಅಧಿಕ್ಷಕ ತಮಣ್ಣ ಪರಾರಿಯಾಗಿದ್ದ ಬಳಿಕ ಪೊಲೀಸರು ವಯಾಲಿಕಾವಲ್ ಬಳಿ ಆತನನ್ನು ವಶಕ್ಕೆ ಪಡೆದು ವಾಪಸ್ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅಬಕಾರಿ ಡಿಸಿ ಜಗದೀಶ್ ನಾಯಕ್ ಸೇರಿದಂತೆ ಮೂವರನ್ನು…
ಬಾಗಲಕೋಟೆ : ಕೊಲೆಯಾದ ಸ್ಥಿತಿಯಲ್ಲಿ ಒಂಟಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧ ಹೊಂದಿದ ಪ್ರಿಯಕರನೆ ಮಹಿಳೆಯ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಜನವರಿ 14ರಂದು ರಾತ್ರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಪ್ರಿಯಕರ ಶ್ರೀಶೈಲ ಮಹಿಳೆಯನ್ನು ಕೊಲಗೈದು ಹಾರ್ಟ್ ಅಟ್ಯಾಕ್ ಆಗಿದೆ ಎಂದು ಬಿಂಬಿಸಿದ್ದ. ಆಸ್ಪತ್ರೆಗೆ ಸೇರಿಸಲು ಯತ್ನಿಸಿ ಕಣ್ಣೀರು ಹಾಕಿ ಶ್ರೀಶೈಲ್ ಡ್ರಾಮ ಮಾಡಿದ್ದ ಕತ್ತು ಹಿಸುಕಿ ಯಮನವ್ವ (40) ಎನ್ನುವ ಮಹಿಳೆಯನ್ನು ಶ್ರೀಶೈಲ್ ಪಾಟೀಲ್ (67) ಭೀಕರವಾಗಿ ಕೊಲೆ ಮಾಡಿದ್ದ. ಯಮನವ್ವ ಕಳೆದ 20 ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದಿದ್ದಳು. ಬಳಿಕ ಅದೇ ಗ್ರಾಮದ ಶ್ರೀಶೈಲ್ ಪಾಟೀಲ್ ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇತ್ತೀಚಿಗೆ ಯುವಕನ ಜೊತೆ ಯಮುನವ್ವ ಸಂಬಂಧ ಹೊಂದಿದ್ದಾಳೆ ಎಂದು ಭಾವಿಸಿ, ನನಗೆ ಮೋಸ ಮಾಡುತ್ತಿದ್ದಾಳೆ ಎಂದು ಶ್ರೀಶೈಲ್…














