Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಐಪಿಎಲ್ ಶುರು ಆದರೆ ಸಾಕು ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತೆ. ನಿನ್ನೆ ತಾನೇ ಬೆಂಗಳೂರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.ಇದರ ಬೆನ್ನಲ್ಲೆ ಇದೀಗ ಯಾದಗಿರಿಯಲ್ಲಿ ಇಬ್ಬರು ಬುಕ್ಕಿಗಳನ್ನು ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಸೆನ್ ಠಾಣೆಯ ಪೊಲೀಸರಿಂದ ಬುಕ್ಕಿಗಳು ಅರೆಸ್ಟ್ ಆಗಿದ್ದಾರೆ ಸುರಪುರ ತಾಲೂಕಿನ ಗ್ರಾಮದ ಶ್ರವಣ್ ಹಾಗೂ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ದೇವರಾಜ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇ ವೇಳೆ ಕಾರು ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 11 ಲಕ್ಷ ಹಣವನ್ನು ಮಾಡಿದ್ದಾರೆ ಯಾದಗಿರಿ ಸರ್ಕಾರಿ ಡಿಗ್ರಿ ಕಾಲೇಜು ಕ್ರಾಸ್ ಬಳಿ ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ದಾವಣಗೆರೆ : ವಕ್ಫ್ ಬಿಲ್ ವಿರುದ್ಧ ಬೀದಿಗೆ ಇಳಿಯುವಂತೆ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಕಬೀರ್ ಖಾನ್ ಪ್ರಚೋದನಾ ಕಾರ್ಯ ಭಾಷಣ ಮಾಡಿದ್ದಾರೆ. ದಾವಣಗೆರೆ ಪೊಲೀಸರಿಂದ ಇದೀಗ ಆರೋಪಿ ಕಬೀರ್ ಖಾನ್ ಗೆ ಹುಡುಕಾಟ ನಡೆಸುತ್ತಿದ್ದು ಈಗಾಗಲೇ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ವಕ್ಫ್ ಬಿಲ್ ವಿರುದ್ಧ ಬೀದಿಗೆ ಇಳಿದು ಪ್ರತಿಭಟನೆ ಮಾಡುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಕಬೀರ್ ಖಾನ್ ಬೀದಿಗೆ ಇಳಿಯುವಂತೆ ಪ್ರಚೋದನೆ ಭಾಷಣ ಮಾಡಿದ್ದಾರೆ. ಈ ಸಂಬಂಧ ಈಗಾಗಲೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದು, ಇನ್ನು ವಿಡಿಯೋ ಮಾಡಿದಂತ ಮಾಜಿ ಕಾರ್ಪೊರೇಟರ್ ಕಬೀರ್ ಖಾನ್ ಬಂಧನಕ್ಕೆ ಇದೀಗ ಬಲೆ ಬೀಸಿದ್ದಾರೆ.
ಬೆಂಗಳೂರು: ದಿನಾಂಕ 13.04.2025 ಭಾನುವಾರದ ನಾಳೆ ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 15:00 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ವಿಧಾನಸೌಧ, ಗಣೇಶ ದೇವಸ್ಥಾನ ಆರ್.ಎಂ.ಯು., ಮಿಲ್ಲರ್ ರಸ್ತೆ., ಜಯಮಹಲ್, ಎಂ.ಕೆ. ಬೀದಿ., ಕನ್ನಿಂಗ್ಹ್ಯಾಮ್ ರಸ್ತೆ, ಕೆಂಪ್ ರಸ್ತೆ, ಬೆನ್ಸನ್ ಟೌನ್, ಸ್ಪೆನ್ಸರ್ ರಸ್ತೆ, ಎಸ್.ಜಿ. ರಸ್ತೆ, ಆರ್.ಎಂ.ಝಡ್. ಮಿಲೇನಿಯಾ, ಬಿ & ಎಲ್ಸಿ ಆಸ್ಪತ್ರೆ, ಚಿಕ್ಕಬಜಾರ್ ರಸ್ತೆ, ಜಿನೀವಾ ಹೌಸ್, ತಿಮ್ಮಯ್ಯ ರಸ್ತೆ, ಟಾಸ್ಕರ್ ಪಟ್ಟಣ, ಪಿ.ಜಿ. ಹಳ್ಳಿ, ಹೈನ್ಸ್ ರಸ್ತೆ, ಚಂದ್ರಯ್ಯ, ಮುನೇಶ್ವರ ನಗರ, ಶಿವಾಜಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.
ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬಳಿಕವೇ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಂಡಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾರ್ಷಿಕ ಪರೀಕ್ಷೆ 2ರ ಫಲಿತಾಂಶ ಪ್ರಕಟವಾದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸಲಿದೆ. ಜತೆಗೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ 1 ಮತ್ತು 2ರ ಪೈಕಿ ಯಾವ ಪರೀಕ್ಷೆಯಲ್ಲಿ ಉತ್ತಮ ಅಂಕವಿದೆಯೋ ಅದನ್ನು ಪರಿಗಣಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಸನ್ನ . ಎಚ್ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯ ಅವಾಂತರ ಮುಂದುವರೆದಿದೆ. 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ.ಕೊಪ್ಪಳದ ಚುಕ್ಕನಕಲ್ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಇಂದು ಬೆಂಗಳೂರಿನ ಮಲ್ಲೇಶ್ವರಂ, ಮೆಜೆಸ್ಟಿಕ್, ಟೌನ್ ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಮಳೆಯಾಗಿದೆ. ಹವಮಾನ ಇಲಾಖೆ ಏ.17ರವರೆಗೆ ಮಳೆಯ ಮುನ್ಸೂಚನೆ ನೀಡಿದ್ದು, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಶುರುವಾಗಿದ್ದು, ಬಿರು ಬೇಸಿಗೆಯಿಂದ ಬಸವಳಿದಿದ್ದ ಜನತೆಗೆ ವರುಣ ತಂಪೆರಿದಿದ್ದಾನೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹವಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇದೀಗ ಬೆಂಗಳೂರಿನ ಮೆಜೆಸ್ಟಿಕ್ ಮಲ್ಲೇಶ್ವರಂ ಸೇರಿ ಹಲವೆಡೆ ಮಳೆಯಾಗುತ್ತಿದೆ. ಹೌದು ಬೆಂಗಳೂರಿನ ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಹಾಗು ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದೆ.ಅದೇ ರೀತಿ ಚಿತ್ರದುರ್ಗದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಬಿಸಿಲ ಬೆಗೆಯಿಂದ ಬಸವಳಿದಿದ್ದ ಜನರಿಗೆ ಇದೀಗ ವರುಣ ತಂಪೆರೆದಿದ್ದಾನೆ. ಮಳೆ ಆಗಮನದಿಂದ ಬಯಲು ಸೀಮೆಯ ಜನರಲ್ಲಿ ಇದೀಗ ಸಂತಸ ಮೂಡಿದೆ.
ಕೋಲಾರ : ಎರಡು ಕಾರುಗಳ ಮಧ್ಯೆ ಭೀಕರವಾದ ಅಪಘಾತ ಸಂಭವಿಸಿ, ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗೇಟನಲ್ಲಿ ನಡೆದಿದೆ. ಎರಡು ಕಾರುಗಳ ಮಧ್ಯ ಪರಸ್ಪರ ಡಿಕ್ಕಿಯಾಗಿ ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಐವರು ಗಾಯಾಳುಗಳು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು…
ಹುಬ್ಬಳ್ಳಿ : ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ವಿಜಯಪುರ ನಗರ ಶಾಸಕ ಯತ್ನಾಳ ಅವರನ್ನು ಉಚ್ಛಾಟಿಸಲಾಗಿದೆ. ಈ ಕುರಿತು ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದು, ಸೀತೆಯನ್ನು ರಾವಣ ಅಪಹರಿಸಿ ಹೇಗೆ ಕೆಟ್ಟವನಾದನೋ, ಯತ್ನಾಳ್ ಪರಿಸ್ಥಿತಿ ಹಾಗೆ ಆಗಿದೆ. ಯತ್ನಾಳ್ ಚೌಕಟ್ಟು ಮೀರಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ ಹುಬ್ಬಳ್ಳಿಯಲ್ಲಿ ಮಾತನಾಡಿದರು. ರಾವಣ ಒಳ್ಳೆಯವನಾಗಿದ್ದಕ್ಕೆ ಪರಶಿವನ ಆತ್ಮಲಿಂಗವನ್ನೇ ಪಡೆದಿದ್ದ. ಆದರೆ ಸೀತಾ ಅಪಹರಿಸಿ ರಾವಣ ಕೆಟ್ಟವನಾದ. ಯತ್ನಾಳ್ ಒಳ್ಳೆಯವರೇ ಆದರೆ ಅವರ ಬಾಯಿ ಒಂದು ಸಮಸ್ಯೆಯಾಗಿದೆ.ಯತ್ನಾಳ್ ಬಿಜೆಪಿಗೆ ಮರಳುವ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು ಎಂದು ಅವರು ತಿಳಿಸಿದರು. ನನಗೆ ಯಾರೂ ವೈರಿ ಇಲ್ಲ ಯಾರ ಜೊತೆಗೂ ವೈರತ್ವ ಇರಬಾರದು. ಮುಂದಿನ ಒಂದುವರೆ ವರ್ಷ ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುತ್ತಾರೆ. ವಿಜಯೇಂದ್ರ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದಿನ ಒಂದೂವರೆ ವರ್ಷ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮುರುಗೇಶ್…
ಹಾವೇರಿ : ಮಾನ್ಯ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯೊಂದಿಗೆ ರೈಲು ಸಂಖ್ಯೆ 20662 ಧಾರವಾಡ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಹಸಿರು ನಿಶಾನೆ ತೋರಿಸಿದರು.ಈ ಮಹತ್ವಪೂರ್ಣ ಸಂದರ್ಭದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಮತ್ತು ಬ್ಯಾಡಗಿಯ ಮಾನ್ಯ ಶಾಸಕರಾದ ಬಸವರಾಜ ನೀಲಪ್ಪ ಶಿವಣ್ಣನವರ್ ಉಪಸ್ಥಿತರಿದ್ದರು. ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ, ಹಾವೇರಿಯಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಹೆಚ್ಚುವರಿ ನಿಲುಗಡೆ ನೀಡಿದ ಕುರಿತು ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದರು. ಅವರು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಎರಡು ಎಸ್ಕಲೇಟರ್ಗಳ ಅಗತ್ಯವಿದೆ ಎಂಬುದನ್ನು ಗಮನಕ್ಕೆ ತಂದರು, ಗದಗ-ಯಾಳವಿಗಿ ಹೊಸ ಮಾರ್ಗದ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ರಾಣೆಬೆನ್ನೂರು ಮತ್ತು ಬ್ಯಾಡಗಿಯಲ್ಲಿ ಕೃಷಿ ಉತ್ಪನ್ನಗಳ ಸಾಗಣೆಗಾಗಿ ಗೂಡ್ಸ್ ಶೆಡ್ಗಳ ವಿಸ್ತರಣೆ ಅಗತ್ಯವಿದೆ ಎಂದು ಒತ್ತಾಯಿಸಿದರು. ಈ ಮನವಿಗೆ ಸ್ಪಂದಿಸಿದ ಸೋಮಣ್ಣ…