Author: kannadanewsnow05

ಬೀದರ್ : ಸಾಮಾನ್ಯವಾಗಿ ರೈಲು ಹಳಿ ದಾಟುವಾಗ ರೈಲು ಬರುತ್ತಿದ್ದಂತೆ ಗೇಟ್ ಹಾಕುತ್ತಾರೆ. ಆದರೂ ಕೂಡ ಕೆಲವರು ಹುಂಬತನದಿಂದ ರೈಲು ಹಳಿ ದಾಟಲು ಪ್ರಯತ್ನಿಸಿ ಪ್ರಾಣ ಕಳೆದುಕೊಂಡಿರುವ ಅದೆಷ್ಟೋ ಉದಾಹರಣೆಗಳಿವೆ. ಇದೀಗ ಬೀದರ್ನಲ್ಲಿ ಇದೇ ರೀತಿ ಒಂದು ಘಟನೆ ನಡೆದಿದ್ದು, ಬೈಕ್ ಸವಾರ ರೈಲು ಹಳಿ ದಾಟಲು ಯತ್ನಿಸಿದ್ದಾನೆ. ಆದರೆ ಬೈಕ್ ಸವಾರ ಅದೃಷ್ಟವಶಾತ್ ಪ್ರಣಾಪಾಯದಿಂದ ಪರ ಆಗಿರುವ ಘಟನೆ ಬೀದರ್ ನೌಬಾದ್ ರೈಲು ಹಳಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೀದರ್ನಲ್ಲಿ ಬೈಕಿನಲ್ಲಿ ರೈಲ್ವೆ ಹಳಿ ದಾಟವಾಗ ಭಾರಿ ಅನಾಹುತ ಒಂದು ತಪ್ಪಿದೆ. ರೈಲಿನ ಕೆಳಗೆ ಬೈಕ್ ಸವಾರ ಸಿಲುಕಿಕೊಂಡು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ. ರೈಲು ಬರುತ್ತಿದ್ದಂತೆ ಬೈಕ್ ಬಿಟ್ಟು ಸವಾರ ಜೀವ ಉಳಿಸಿಕೊಂಡಿದ್ದಾನೆ. ರೈಲ್ವೆ ಹಳಿಯ ಮೇಲೆ ಬೈಕ್ ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಬೀದರ್ ನಗರದ ನೌಬಾದ್ ಬಳಿ ಈ ಒಂದು ಘಟನೆ ಸಂಭವಿಸಿದೆ.

Read More

ಹಾಸನ : ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಶಾಸಕ ಎಚ್ ಡಿ ರೇವಣ್ಣ ಆಕ್ರೋಶ ಹೊರಹಾಕಿದ್ದು ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಸರ್ವಾಧಿಕಾರಿ ಅಂತೆ ವರ್ತಿಸುತ್ತಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಜಿಲ್ಲೆಯ ಜನ ಜಿಲ್ಲಾಧಿಕಾರಿಯನ್ನು ಸರಿ ಮಾಡುತ್ತಾರೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸನಾಂಬೆ ಜಾತ್ರೆಯಲ್ಲಿ ಹಾಸನ ಎಡಿಎಲ್ ಆರ್ ನನ್ನ ಜೊತೆಗೆ ಬಂದಿದ್ದರು. ಸಂಶುದ್ದಿನ್ ನನ್ನ ಜೊತೆ ನಡೆದುಕೊಂಡು ಬಂದರು. ಇದೇ ಕಾರಣಕ್ಕೆ ಸಂಶುದ್ದೀನ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಎಂಎಲ್ಎ ಜೊತೆ ಮಾತನಾಡಬಾರದ? ಪ್ರಮಾಣಿಕ ಅಧಿಕಾರಿ ಸಂಶುದ್ದಿನ್ ಮಾಡಿದ ತಪ್ಪಾದರೂ ಏನು? ಮುಸ್ಲಿಮರು ವೋಟ್ ಹಾಕದಿದ್ದರೆ ಕಾಂಗ್ರೆಸ್ 136 ಸ್ಥಾನ ಗೆಲ್ಲುತ್ತಿರಲಿಲ್ಲ. ಆದರೆ ರಾಜ್ಯದಲ್ಲಿ ಮುಸ್ಲಿಮರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದರು

Read More

ಬೆಂಗಳೂರು : ಯುಡಿಆರ್ ಕೇಸ್ ಪ್ರತಿ ನೀಡಲು ಲಂಚಕ್ಕೆ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳಂದೂರು ಠಾಣೆಯ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿಯನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಳಿಸಿ, ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬಿಪಿಸಿಎಲ್ ನಿವೃತ್ತ ಅಧಿಕಾರಿ ಶಿವಕುಮಾರ್ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿ ಲಂಚ ಕೇಳಿದ್ದಾರೆ ಎನ್ನುವ ಆರೋಪ ಮಾಡಿದ್ದರು. ವರದಿ ನೀಡುವಂತೆ ಕಮಿಷನರ್ ಸೀಮಂತ ಕುಮಾರ್ ಸೂಚನೆ ನೀಡಿದರು. ಕಮಿಷನರ್ ಗೆ ವೈಟ್ ಫೀಲ್ಡ್ ಡಿಸಿಪಿ ಪರಶುರಾಮ್ ಈ ಕುರಿತು ವರದಿ ಸಲ್ಲಿಸಿದರು. ಡಿಸಿಪಿ ವರದಿ ಆಧಾರದ ಮೇಲೆ ಪಿಐ ಪರಮೇಶ್ ರೊಟ್ಟಿ ಸಸ್ಪೆಂಡ್ ಮಾಡಿ ಸೀಮಂತ ಕುಮಾರ್ ಸಿಂಗ್ ಅದೇಶಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸುದ್ದು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. MDMA ಮತ್ತು ಇತರೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಾರು 75 ಲಕ್ಷ ಮೌಲ್ಯದ 752 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮಲ್ಲೇಶ್ವರಂ ಪೊಲೀಸ್ರು ಸಹ ಗಾಂಜಾ ಮಾರುತಿದೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತರಿಂದ 80,000 ಮೌಲ್ಯದ 885 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ರೈಲ್ವೆ ಬಳಿ ಮೆಟ್ಟಿಲುಗಳ ಮೇಲೆ ಗಾಂಜಾ ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಮತ್ತೊಂದು ಪ್ರಕರಣದಲ್ಲಿ ವೀಡ್ ಆಯಿಲ್ ಮಾರುತಿದವನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಹಾಡಹಗಲೇ ಚಾಕುವಿನಿಂದ ಕತ್ತು ಕೊಯ್ದು ಪ್ರಾವಿಜನ್ ಸ್ಟೋರ್ ಮಾಲೀಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಈ ಒಂದು ಕೊಲೆ ನಡೆದಿದ್ದು, ಪ್ರಾವಿಜನ್ ಸ್ಟೋರ್ ಇಟ್ಟುಕೊಂಡಿದ ಮಾಲೀಕ ಮಾದೇಶ್ (40) ನನ್ನು ಬೀಕರವಾಗಿ ಕೊಲೆ ಮಾಡಲಾಗಿದೆ. ಗನ್, ಚಾಕು ಸಮೇತ ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ. ಬೈಕ್ ನಲ್ಲಿ ಗನ್ ಮತ್ತು ಚಾಕು ಸಮೇತವಾಗಿ ಮನೆಗೆ ಹಂತಕರು ಎಂಟ್ರಿ ಕೊಟ್ಟಿದ್ದಾರೆ. ಚಾಕುವಿನಿಂದ ಇರಿದು ಮಾದೇಶನನ್ನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪಡಿಸಲು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಕಡ್ಡಾಯಕ್ಕೆ ಇತ್ತೀಚೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತೆರವುಗೊಳಿಸುವಂತೆ ರಾಜ್ಯ ಸರ್ಕಾರವು ದ್ವಿದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ಗೀತಾ ಕೆ.ಬಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಈ ಕುರಿತು ಇಂದು ವಿಚಾರಣೆ ನಡೆಯಿತು. ಸುಮಾರು ಒಂದು ಗಂಟೆ ಕಾಲ ನಡೆದ ವಾದ ಪ್ರತಿವಾದದ ಬಳಿಕ ತೀರ್ಪು ಕಾಯ್ದಿರಿಸಿ ಪೀಠ ಆದೇಶಿಸಿದೆ. ಸರ್ಕಾರಿ ರಸ್ತೆ ಇರುವುದು ಸಾರ್ವಜನಿಕರ ಓಡಾಟಕ್ಕೆ. ಹೀಗಾಗಿ ಅದು ಸಾರ್ವಜನಿಕರಿಗೆ ಉಪಯೋಗವಾಗಬೇಕು. ಖಾಸಗಿಯವರು ಕಾರ್ಯಕ್ರಮ ಮಾಡಲು ಬೇರೆ ಕಡೆ ಸ್ಥಳ ಬಾಡಿಗೆ ಪಡೆದು ಕಾರ್ಯಕ್ರಮ ಮಾಡಬಹುದು. ಸಾರ್ವಜನಿಕ ಆಸ್ತಿಗಳನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ಆದೇಶ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ. ಇದರಲ್ಲಿ ಕಾಯ್ದೆ 19ಎ…

Read More

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ಸಿನ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದಂತಹ ಹೆಚ್ ವೈ ಮೇಟಿ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ ವೈ ಮೇಟಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಅವರು ನಿಧನರಾಗಿದ್ದಾರೆ. ಹೆಚ್ ವೈ ಮೇಟಿ ನಿಧನದ ಸುದ್ದಿ ತಿಳಿದು ತಕ್ಷಣ ಮೈಸೂರು ನಿಂದ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ಶಾಸಕ ಮೇಟಿ ಅವರನ್ನು ಭೇಟಿಯಾಗಿದ್ದೆ. ಮೇಟಿ ಗುಣಮುಖರಾಗುತ್ತಾರೆ ಎಂದು ವೈದ್ಯರು ಹೇಳಿದ್ದರು. ಅತ್ಯಂತ ನಿಷ್ಠಾವಂತ ಹಾಗೂ ನನಗೆ ಬಹಳ ಆಪ್ತರಾಗಿದ್ದರು. ಮೇಟಿ ಬಹಳ ನಿಯತ್ತಾಗಿದ್ದ ಮನುಷ್ಯ ನನಗೆ ಬಹಳ ಲಾಯಲ್ ಆಗಿ ಇದ್ದ ರಾಜಕಾರಣಿ ನಾನು ಭೇಟಿ ಮಾಡಿದ್ದಾಗ ಮೇಟಿ ಚೆನ್ನಾಗಿ ಮಾತನಾಡಿದ್ದ ಎಷ್ಟು ಬೇಗ ಸಾಯುತ್ತಾರೆ. ನನಗಿಂತಲೂ ಅವರು ದೊಡ್ಡವರು. ಎಚ್ ವೈ ಮೇಟಿ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ…

Read More

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಹಾಗು ಮಾಜಿ ಸಚಿವ ಎಚ್ ವೈ ಮೇಟಿ (79) ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ ವೈ ಮೇಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ನಾಳೆ ಹುಟ್ಟೂರಿನಲ್ಲಿ ಎಚ್ ವೈ ಮೇಟಿ ಅಂತ್ಯಕ್ರಿಯೆ ನೆರವೇರಲಿದೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಲಿಂಗಾಯತ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ. ಮೇಟಿ ಅಂತ್ಯಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬಾಗಲಕೋಟೆಗೆ ತೆರಳಲಿದ್ದಾರೆ. ಇಂದು ರಾತ್ರಿ 8 ಗಂಟೆ ವೇಳೆ ಮೃತದೇಹ ಶಿಫ್ಟ್ ಮಾಡಲಾಗುತ್ತದೆ. ಬಾಗಲಕೋಟೆಗೆ ರವಾನೆ…

Read More

ಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗಲಿದೆ ಎಂದು ಈಗಾಗಲೇ ಕೆಲವು ನಾಯಕರು ಹೇಳಿಕೆ ನೀಡಿದ್ದಾರೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದರೆ, ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕತ್ವ ದಾಳ ಉರುಳಿಸಿದ್ದಾರೆ. ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ವೆಂಕಟೇಶ ಗುರೂಜಿ ಹೇಳಿದ್ದು ಏನೆಂದರೆ, ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್‌ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್‌ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ…

Read More

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ (79) ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ ವೈ ಮೇಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ರಾಜಕೀಯದಲ್ಲಿ ನಡೆದುಬಂದ ಹಾದಿ ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018…

Read More