Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ನೀರು ಶುದ್ದೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಈ ಒಂದು ಅವಘಡ ಸಂಭವಿಸಿದೆ. ನೀರು ಶುದ್ದೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿ ಈ ಒಂದು ದುರಂತ ಸಂಭವಿಸಿದೆ ಅಸ್ವಸ್ಥಗೊಂಡವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಸ್ವಸ್ಥರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅಸ್ವಸ್ಥರಿಗೆ ವೈದ್ಯರು ಆಕ್ಸಿಜನ್ ಪೂರೈಸಿ, ಚಿಕಿತ್ಸೆ ನೀಡುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಒಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾದಂತಹ ಹಲವು ಸ್ಪೋಟಕವಾದಂತಹ ಮಾಹಿತಿಗಳು ಬಹಿರಂಗವಾಗಿವೆ. ಇದೀಗ ನಾನು ದರ್ಶನ್ ಸಲುಗೆಯಿಂದ ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದೆವು ಎಂಬ ಪವಿತ್ರಾಗೌಡ ಸ್ವಇಚ್ಛಾ ಹೇಳಿಕೆ ಬಯಲಾಗಿದೆ. ಹೌದು ಸದ್ಯ ದರ್ಶನ್ ಗೆ ವರ್ಷದವರಾಗಿದ್ದು, ಈತನೊಂದಿಗೆ ನಟಿ ಪವಿತ್ರಾ ಗೌಡ (33) ಬರೋಬ್ಬರಿ 14 ವರ್ಷ ಚಿಕ್ಕವಳಾಗಿದ್ದರೂ ಕಳೆದ 10 ವರ್ಷಗಳಿಂದ ಲೀವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು ಸಂಸಾರ ಮಾಡುತ್ತಿದ್ದಾರೆ. ಇತ್ತ ಪತ್ನಿ ವಿಜಯಲಕ್ಷ್ಮಿ ಇದ್ದರೂ ಸಹ ದರ್ಶನ್ ಪವಿತ್ರ ಗೌಡ ಜೊತೆಗೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿ ಇದ್ದರು. ಅದಕ್ಕಾಗಿಯೇ ದರ್ಶನ್ ಮನೆಯಿಂದ ಸುಮಾರು 1 ಕಿಮೀ ದೂರದಲ್ಲಿ ಪ್ರತ್ಯೇಕ ಮನೆಯನ್ನು ಖರೀದಿಸಿ 2018ರಿಂದ ಸಂಸಾರ ಮಾಡಿಕೊಂಡಿದ್ದೆವು ಎಂದು ನಟಿ ಪವಿತ್ರಾಗೌಡ ಸ್ವಇಚ್ಛಾ ಹೇಳಿಕೆಯಲ್ಲಿ ವಿವರಿಸಿದ್ದು ಬಹಿರಂಗವಾಗಿದೆ. ನಾನು ಮತ್ತು ದರ್ಶನ್ ಸಲುಗೆಯಿಂದ ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದೆವು. ದರ್ಶನ್…
ಬೆಂಗಳೂರು : ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಪೋಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಇದೀಗ ಚಾರ್ಟ್ ಶೀಟ್ ನಲ್ಲಿನ ಮತ್ತೊಂದು ಸ್ಫೋಟಕ ವಾದಂತ ವಿಷಯ ಬಹಿರಂಗವಾಗಿದ್ದು, ಕೊಲೆಯಾದ ರೇಣುಕಾ ಸ್ವಾಮಿ ಕೇವಲ ಪವಿತ್ರಾಗೌಡ ಅಷ್ಟೇ ಅಲ್ಲದೆ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಹಲವು ನಟಿಯರಿಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಯಲಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿರುವ ಒಂದೊಂದು ವಿಷಯಗಳು ಕೂಡ ಆಘಾತಕಾರಿ ಯಾಗಿವೆ. ರೇಣುಕಾ ಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುವುದರಿಂದ ಹಿಡಿದು, ನಟ ದರ್ಶನ್ ಹಾಗೂ ಎಲ್ಲಾ ಆರೋಪಿಗಳು ಅರೆಸ್ಟ್ ಆಗುವವರೆಗೂ, ಹಾಗೂ ಹೇಗೆ ಕೊಲೆ ಆಯ್ತು ಎಂಬುದರ ಪ್ರತಿಯೊಂದು ಅಂಶವನ್ನು ಪೊಲೀಸರು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ಕೊಲೆಯಾದ ರೇಣುಕಾ ಸ್ವಾಮಿ ಕೇವಲ ಪವಿತ್ರ ಗೌಡ ಅಷ್ಟೇ ಅಲ್ಲದೆ…
ರಾಮನಗರ : ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತ್ತಾಗಿದೆ ಎಂಬುದು ಇತ್ತೀಚಿಗೆ ರಾಜ್ಯದಲ್ಲಿ ದಿನಂಪ್ರತಿ ನಡೆಯುವ ಘಟನೆಗಳೇ ಉದಾಹರಣೆಯಾಗಿವೆ. ಇದರ ಬೆನ್ನಲ್ಲೆ ಇದೀಗ ರಾಮನಗರ ಜಿಲ್ಲೆಯಲ್ಲಿ ಮಹಿಳೆಯೊಂದಿಗೆ ಬಿಜೆಪಿ ಮಂಡಲ ಅಧ್ಯಕ್ಷ ಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ಮಹಿಳೆಯ ಜೊತೆ ಬಿಜೆಪಿ ಮಂಡಲ ಅಧ್ಯಕ್ಷ ಅಸಭ್ಯವಾಗಿ ವರ್ತಿsiರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣದ ಬಿಜೆಪಿ ಮುಖಂಡನ ವಿರುದ್ಧ ಇದೀಗ ದೂರು ದಾಖಲಾಗಿದೆ.ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯ ಮಂಡಲ ಅಧ್ಯಕ್ಷನ ವಿರುದ್ಧ ಮಹಿಳೆ ಠಾಣೆಗೆ ದೂರು ನೀಡಿದ್ದಾಳೆ. ಬಿಜೆಪಿ ಮಂಡಲ ಅಧ್ಯಕ್ಷ ಟಿಎಸ್ ರಾಜು ವಿರುದ್ಧ ಇದೀಗ ದೂರು ದಾಖಲಾಗಿದೆ. ಚನ್ನಪಟ್ಟಣ ಗ್ರಾಮಾಂತರ ಮಂಡಲ ಅಧ್ಯಕ್ಷ ಟಿಎಸ್ ರಾಜು ವಿರುದ್ಧ ತೂಬಿನಕೆರೆ ಗ್ರಾಮದ ಪೂಜಾ ಎಂಬುವವರಿಂದ ದೂರು ಸಲ್ಲಿಕೆಯಾಗಿದೆ. ಗಣೇಶನ ಮೆರವಣಿಗೆ ನೋಡಿ ಮನೆಗೆ ತೆರಳುವಾಗ ಈ ಒಂದು ಘಟನೆ ನಡೆದಿದೆ. ಹಿಂದಿನಿಂದ ಬಂದು ಅವಾಚ್ಯ ಪದಗಳಿಂದ…
ಯಾದಗಿರಿ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಹಲವರು ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಎಂಬ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ, ಇದೀಗ ನನಗೂ ಸಿಎಂ ಆಗುವ ಆಸೆ ಇದೆ. ಆದರೆ, ಹೈಕಮಾಂಡ್ ಹೇಳಬೇಕು, ಇಲ್ಲಿ ಕುರ್ಚಿ ಖಾಲಿ ಇರಬೇಕು ಅಂದಾಗ ಇದೆಲ್ಲ ಸಾಧ್ಯವೆಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್ ಸಿಡಿಸಿದರು. ಯಾದಗಿರಿಯಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಯಾದಗಿರಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪುರ, ನನಗೂ ಸಿಎಂ ಆಗುವ ಆಸೆ ಇದೆ ಕಾಂಗ್ರೆಸ್ನಲ್ಲಿ 136 ಶಾಸಕರಿದ್ದಾರೆ. ಮಂತ್ರಿ, ಮುಖ್ಯಮಂತ್ರಿಯಾಗುವ ಆಸೆ ಎಲ್ಲರಿಗೂ ಇರುತ್ತದೆ. ಇದು ನಿರ್ಧಾರ ಆಗುವುದು ಹೈಕಮಾಂಡ್ನಲ್ಲಿ. ಸದ್ಯಕ್ಕೆ ಮಾತ್ರ ಕುರ್ಚಿ ಖಾಲಿ ಇಲ್ಲ ಎಂದರು. 2022ರಲ್ಲಿ ಮುಡಾದಲ್ಲಿ ಒಂದೇ ದಿನ 848 ನಿವೇಶನ ಹಂಚಲಾಗಿದೆ ಎಂದು ಎಲ್ಲ ಪತ್ರಿಕೆಗಳಲ್ಲಿ ಬಂದಿದೆ. ಆ…
ಬೆಂಗಳೂರು : ಅತ್ಯಾಚಾರ ಪ್ರಕರಣ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ನ್ಯಾಯಾಲಯಕ್ಕೆ ಸುಮಾರು 1632 ಪುಟಗಳ ಮತ್ತೊಂದು ಚಾರ್ಜ್ ಶೀಟ್ ಅನ್ನು ಸಲ್ಲಿಸಲಾಗಿದೆ. ಹೌದು ಬೆಂಗಳೂರಿನ 42ನೇ ಎಸಿಎಮ್ಎಂ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅವರು ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎಸ್ಐಟಿ ಅಧಿಕಾರಿಗಳು 1,632 ಪುಟಗಳ ಚಾರ್ಟನ್ನು ಸಲ್ಲಿಸಿದ್ದಾರೆ.ಅಲ್ಲದೆ 113 ಸಾಕ್ಷಿಗಳನ್ನು ಒಳಗೊಂಡಂತಹ ಈ ಚಾರ್ಜ್ ಶೀಟ್ ತನಿಖಾಧಿಕಾರಿ ಶೋಭಾ ಅವರಿಂದ ಕೋರ್ಟಿಗೆ ಸಲ್ಲಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆ, ರೇಪ್ ಕೇಸ್ ಸಂಬಂಧ ಈ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸೆ.12ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಜಿ.ಅರುಣ್, ಎಸ್‌ಐಟಿಯು ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದೀಗ ಮತ್ತೊಮ್ಮೆ ಜಾಮೀನು…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದರ ಮಧ್ಯ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸರ್ಕಾರ & ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರನ್ನು ದಾಖಲಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಅಕ್ರಮವಾಗಿ 14 ಸೈಟ್ ಹಂಚಿಕೆ ವಿಚಾರದ ಕುರಿತು ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮತ್ತೊಮ್ಮೆ ದೂರು ನೀಡಿದ್ದಾರೆ. 2023ರ ನ.03 ರಂದು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ವರದಿಯನ್ನು ಮುಚ್ಚಿಡಲಾಗಿದೆ ಎಂದು ನೇರವಾಗಿ ಸಿಎಂ ವಿರುದ್ಧ ಆರೋಪ ಮಾಡಿದ್ದಾರೆ. ಈ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರಿ ಅಧಿಕಾರಿಗಳು ಹಿಂಪಡೆದುಕೊಳ್ಳದೇ ಸುಮ್ಮನಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.…
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಬಹಿರಂಗವಾಗಿದ್ದು, ಕರ್ನಾಟಕ ಬಿಜೆಪಿ ಕಚೇರಿಯನ್ನು ಉಗ್ರರು ಸ್ಪೋಟಿಸುವ ಪ್ಲಾನ್ ಮಾಡಿಕೊಂಡಿದ್ದರು ಎಂಬ ಆಘಾತಕಾರಿ ವಿಷಯ ಉಲ್ಲೇಖವಾಗಿದೆ. ಹೌದು ಬಿಜೆಪಿ ಕಚೇರಿ ಸ್ಪೋಟಗೊಳಿಸುವ ಪ್ಲಾನ್ ವಿಫಲವಾದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಕಚೇರಿ ಸ್ಫೋಟೋಗೊಳಿಸಲು ಪ್ಲಾನ್ ಮಾಡಲಾಗಿತ್ತು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡೋಕು ಮುಂಚೆ ಅದೇ ದಿನ ಬಿಜೆಪಿ ಕಚೇರಿ ಸ್ಪೋಟಗೋಳಿಸಲು ಪ್ಲಾನ್ ಮಾಡಲಾಗಿದೆ ಎಂಬ ಅಂಶ ಎನ್ಐಎ ಸಲ್ಲಿಸಿದ್ದ ನಾಲ್ವರು ಆರೋಪಿಗಳ ವಿರುದ್ಧ ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 Aಅಡಿ ಪ್ರಾಜೆಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ವೇಳೆ ಎಫ್ ಐ ಆರ್ ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ಅಗತ್ಯವಿದೆ, ಆದರೆ 17 ಎ ಅಡಿ ಅನುಮತಿಗೆ ಪ್ರಾಥಮಿಕ ತನಿಖೆ ಆಗಿರಬೇಕೆಂದಿಲ್ಲ. ವಿಚಾರಣೆ ತನಿಖೆಗೂ ಮುನ್ನ 17ಎ ಅನುಮತಿ ಬೇಕಲ್ಲವೇ? ಎಂದು…
ಚಿಕ್ಕಮಗಳೂರು : ಇತ್ತೀಚಿಗೆ ರಾಜ್ಯದ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಲಾಗುತ್ತಿದ್ದು, ಕೇರಳದ ಹೇಮಾ ಸಮಿತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 153ಕ್ಕೂ ಹೆಚ್ಚು ನಟ, ನಟಿಯರು ಮನವಿ ಮಾಡಿಕೊಂಡಿದ್ದಾರೆ. ಇದೀಗ, ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ಇಲ್ಲವೆಂದರೆ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದೆ. ಹೌದು ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ನಟಿಯರು ಹಾಗೂ ಸಹ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಆರೋಪದ ಬೆನ್ನಲ್ಲಿಯೇ ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಕೊಪ್ಪ ಮಹಿಳಾ ಪೇದೆಗಳು ತಮ್ಮ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳದ ಕುರಿತು ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದು, ಪಿಎಸ್ಐ ಬಸವರಾಜು ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತು ತಮಗೆ ಆಗುತ್ತಿರುವ ದೌರ್ಜನ್ಯ ಕುರಿತು ತನಿಖಾಧಿಕಾರಿಗಳಿಗೆ ಮಹಿಳಾ ಪೇದೆಗಳು. ಮಾಹಿತಿ ನೀಡಿದ್ದಾರೆ.ತನಿಖಾಧಿಕಾರಿಗಳಿಂದ ಚಿಕ್ಕಮಗಳೂರು ಎಸ್ ಪಿ ಬಸವರಾಜುಗೆ ಪ್ರಕರಣದ…