Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮುಂಬೈ : ಮಹಾರಾಷ್ಟ್ರದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಆದರೆ ಬಿಜೆಪಿಗೆ ಉದ್ದಾಕ್ರೆ ಹಣ ಇದೀಗ ಟಕ್ಕರ್ ಕೊಡುತ್ತಿದೆ. ಏಷ್ಯಾದ ಅತಿದೊಡ್ಡ ಪಾಲಿಕೆ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡ ಸಾಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ 224 ವಾರ್ಡ್ ಗಳ ಪೈಕಿ ಬಿಜೆಪಿ 83 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಮೈತ್ರಿ 10 , ಶಿವಸೇನೆ ಮೈತ್ರಿ 67 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕತರ್ನಾಕ್ ಕಳ್ಳಿಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳ್ಳತನ ಮಾಡುವ ವೇಳೆ ಹುಡುಗರ ರೀತಿ ಬಟ್ಟೆ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಈಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುವುದು ಪತ್ತೆಯಾಗಿತ್ತು. ಸಿಸಿಟಿವಿ ಬೆನ್ನತ್ತಿ ಆರೋಪಿಗಳನ್ನು ವಶಕ್ಕೆ ಪಡೆದ ವೇಳೆ ಅದು ಹುಡುಗರಲ್ಲ, ಹುಡುಗಿಯರು ಎನ್ನುವುದು ಪತ್ತೆಯಾಗಿದೆ. ಕಳ್ಳತನ ಎಸಗಿದ ಶಾಲು ಮತ್ತು ನೀಲು ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಟ್ಯಾನರಿ ರಸ್ತೆಯ‌ ನಿವಾಸಿಗಳಾಗಿದ್ದು ಹುಡುಗರ ರೀತಿ ಪ್ಯಾಂಟ್ ಶರ್ಟ್, ಟೋಪಿ ಹಾಕಿಕೊಂಡು ಬೈಕಿನಲ್ಲಿ ಓಡಾಡುತ್ತಿದ್ದರು. ನಿರ್ಜನ ಪ್ರದೇಶದ ಮನೆಗಳಲ್ಲಿ ಹಾಡುಹಗಲೇ ಕಳ್ಳತನ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ‌.

Read More

ಕೋಲಾರ : ಕೋಲಾರದಲ್ಲಿ ಘೋರ ದುರಂತ ಸಂಭವಿಸಿದ್ದು, ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ಸಂಭವಿಸಿದ್ದು, ಕೋಲಾರ ತಾಲೂಕಿನ ಬುಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಚಾಲಕನನ್ನ ಆಂಧ್ರಪ್ರದೇಶ ಮೂಲದ ಡ್ರೈವರ್ ಷಣ್ಮುಗಂ (45) ಎಂದು ತಿಳಿದುಬಂದಿದೆ. ಗ್ರಾಮದ ಚೌಡಪ್ಪ ಎಂಬುವವರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಇಂದು ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಷಣ್ಮುಗಂ ಸಾವನ್ನಪ್ಪಿದ್ದರೆ.

Read More

ಬೆಳಗಾವಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾದಯಾತ್ರೆ ವಿಚಾರವಾಗಿ ಬಿಜೆಪಿ ನಾಯಕರಲ್ಲಿ ಗೊಂದಲ ಇದೆ. ಈ ವಿಚಾರವಾಗಿ ಮಾಜಿ ಸಚಿವ ಬಿ ಶ್ರೀರಾಮಲು ಹೇಳಿಕೆಯನ್ನು ನಾನು ಗಮನಿಸಿದ್ದೇನೆ . ಪಾದಯಾತ್ರೆಗೆ ನನ್ನ ವೈಯಕ್ತಿಕ ವಿರೋಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಪಾದಯಾತ್ರೆ ಮಾಡಿದಾಗ ಗೊಂದಲ ಸೃಷ್ಟಿಯಾಗಿತ್ತು. ಈಗ ಆ ರೀತಿಯ ಗೊಂದಲಕ್ಕೆ ಅವಕಾಶ ಕೊಡಬಾರದು. ಏನೇ ನಿರ್ಧಾರ ತೆಗೆದುಕೊಂಡರು ಕೇಂದ್ರದ ಗಮನಕ್ಕೆ ತರಬೇಕು ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಳಿಕ ಕೇಂದ್ರ ನಾಯಕರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಬೆಳಗಾವಿಯಲ್ಲಿ ವಿಜಯೇಂದ್ರ ಹೇಳಿಕೆ ನೀಡಿದರು.

Read More

ಬೆಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೃಷ್ಣಪ್ಪ ಲೇಔಟ್ ನಲ್ಲಿ ನಿನ್ನೆ ಸಂಜೆ ಒಂದು ಘಟನೆ ನಡೆದಿದೆ. ಬೆಂಕಿ ಹಚ್ಚಿಕೊಂಡು ತಾಯಿ ಸೀತಾ (29) ಸಾವನ್ನಪ್ಪಿದ್ದರೆ, ಪುತ್ರಿ ಸೃಷ್ಟಿಗೆ (4) ಗಂಭೀರವಾದ ಗಾಯಗಳಾಗಿವೆ. ಘಟನೆಯಲ್ಲಿ ತಾಯಿ ಸೀತಾ ಸಾವನಪ್ಪಿದ್ದಾರೆ. ಗಾಯಗೊಂಡ ಸೃಷ್ಟಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ. ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮುಟ್ಟಿದ್ದೆಲ್ಲವೂ ಯಶಸ್ಸಿಗೆ ಪರಿಹಾರ. ಸಾಮಾನ್ಯ ಜನರಿಗೆ ಹತ್ತು ಬಾರಿ ಪ್ರಯತ್ನಿಸಿದರೆ ಒಮ್ಮೆ ಯಶಸ್ಸು ಸಿಗುತ್ತದೆ. ಜೀವನದಲ್ಲಿ ಬಹಳ ಬೇಗ ಪ್ರಗತಿ ಹೊಂದಲು. ಜೀವನದಲ್ಲಿ ಸೋಲು ಇರಬಾರದು. ಖ್ಯಾತಿಯ ಉತ್ತುಂಗಕ್ಕೆ ಹೋಗಲು. ಫೇಮಸ್ ಆಗಬೇಕು ಎನ್ನುವವರು ಹತ್ತು ಬಾರಿ ಪ್ರಯತ್ನಿಸಿದರೆ ಎಂಟು ಬಾರಿಯಾದರೂ ಯಶಸ್ವಿಯಾಗಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…

Read More

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ ಅವರಿಗೆ ನೀಡಿದ್ದಾರೆ. ಹೌದು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್‌ಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು. ನೊಬೆಲ್ ಸಮಿತಿಯ ನಿಯಮದಂತೆ ಪ್ರಶಸ್ತಿಯನ್ನು ವರ್ಗಾಯಿಸಲು ಸಾಧ್ಯವಿಲ್ಲವಾದರೂ, ಮಚಾದೊ ಅವರ ಈ ನಡೆ ವೆನೆಜುವೆಲಾಗೆ ಅಮೆರಿಕದ ಬೆಂಬಲ ಬಲಪಡಿಸಲು ರೂಪಿಸಿದ ರಾಜಕೀಯ ತಂತ್ರ ಎಂದು ವಿಶ್ಲೇಷಿಸಲಾಗಿದೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾದೊ ನಿರಾಕರಿಸಿದರು.…

Read More

ಚಾಮರಾಜನಗರ : ಚಿರತೆಯೊಂದು ದನ ಕರುಗಳನ್ನು ಬೇಟೆಯಾಡುತ್ತಿದ್ದ ಬಿಸತ್ತ ವ್ಯಕ್ತಿ ಅದಕ್ಕೆ ವಿಷ ಹಾಕಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಚಾಮರಾಜನಗರ ಬಫರ್ ಅಧಿಕಾರಿಗಳು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನ ಚಾಮರಾಜನಗರ ತಾಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ( 60) ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ಇದರ ಸಾವಿಗೆ ವಿಷವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು. ಅನುಮಾನದ ಹಿನ್ನೆಲೆ ದೊರೆಸ್ವಾಮಿಯನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ. ವಿಚಾರಣೆ ವೇಳೆ ಚಿರತೆಯು ಬೇಟೆಯಾಡಿದ್ದ ಮಾಂಸಕ್ಕೆ ವಿಷ ಬೆರೆಸಿ ಜಾನುವಾರುಗಳ ಸಾವಿಗೆ ಸೇಡು ತೀರಿಸಿಕೊಂಡಿರುವುದಾಗಿ ದೊರೆಸ್ವಾಮಿ ಬಾಯಿ ಬಿಟ್ಟಿದ್ದಾನೆ. ಚಿರತೆಗೆ ವಿಷ ಹಾಕಿ ಕೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಈ ಹಿನ್ನೆಲೆ ದೊರೆಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ ಎಂಬ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಮಕ್ಕಳು ಆಗಾಗ ನೀರು ಕುಡಿಯಲು ಜ್ಞಾಪಿಸಲು ‘ನೀರಿನ ಗಂಟೆ’ (ವಾಟರ್‌ಬೆಲ್) ಬಾರಿ ಸುವ ನಿಯಮ ಜಾರಿ ಗೊಳಿಸುವಂತೆ ಪಿಎಂ ಪೋಷಣ್ ಶಕ್ತಿ ಶಾಲೆಗಳಿಗೆ ಸೂಚಿಸಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ಜೊತೆಗೆ ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್ ಅನುಷ್ಠಾನಗೊಳಿಸಲು ಸೂಚನೆ ನೀಡಿದೆ. 2022ರಲ್ಲೇ ನಿಯಮ ಜಾರಿಗೆ ಬಂದಿ ದ್ದರೂ ಸರಿಯಾಗಿ ಪಾಲನೆಯಾಗದ ಹಿನ್ನೆಲೆ ವಾಟರ್‌ಬೆಲ್ ನಿಯಮ ಜಾರಿಗೆ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಗೆ ರಾಜ್ಯ…

Read More