Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಜಯಪುರದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ.ಇದೀಗ ವಿಜಯಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೇಣುಕಾ ಸಾವನ್ನಪ್ಪಿದ್ದಾರೆ. ಹೌದು ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ. ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಹಲ್ಲೆಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.…
ಕಲಬುರ್ಗಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಸಂಸದ ಇ ತುಕಾರಾಮ ಹಾಗೂ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪನಿ ಗಣೇಶ್ ಹಾಗೂ ಡಾ. ಶ್ರೀನಿವಾಸ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೆ ವಿಚಾರವಾಗಿ ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಮೊದಲಿನಿಂದಲೂ ಸಿಟ್ಟಿದೆ. ಇಡಿ ದಾಳಿಯ ಮೂಲಕ ಕಾಂಗ್ರೆಸ್ ಇಬ್ಬಾಗ ಮಾಡಬೇಕು ಎಂಬ ಉದ್ದೇಶವಿದೆ. ಟಾರ್ಚರ್ ಕೊಟ್ಟರೆ ಪಕ್ಷ ಇಬ್ಬಾಗ ಆಗುತ್ತೆ ಅನ್ನೋ ಉದ್ದೇಶ ಇರಬೇಕು. ಆದರೆ ಅದು ಸಾಧ್ಯವಿಲ್ಲದ ಮಾತು ಎಂದರು. ಯಾವ ಕಾರಣಕ್ಕೆ ದಾಳಿಯಾಗಿದೆ ಅನ್ನೋದು ಇಡಿಯವರಿಗೆ ಗೊತ್ತಿದೆ. ಇಡಿ ಅಧಿಕಾರಿಗಳ ದಾಳಿ ಇದೇನು ಹೊಸದಲ್ಲ. ಚುನಾವಣೆ ಸಮಯದಲ್ಲಿ ಎಲ್ಲಾ ಪಕ್ಷಗಳ ಹಣ ಸೀಸ್ ಮಾಡಿದ್ದರು. ಇಡೀ ಜತ್ತಿ ಮಾಡಿದ್ದ ಹಣ ಎಲ್ಲಿ ಹೋಯಿತು? ಯಾರಿಗೂ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸಂಸದ ಇ ತುಕಾರಾಂಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಬಳ್ಳಾರಿಯ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಇದರ ಬೆನ್ನಲ್ಲೇ ತುಕಾರಾಮಗೆ ಮತ್ತೊಂದು ಶಾಕ್ ನೀಡಿರುವ ಇಡಿ ಅಧಿಕಾರಿಗಳು, ಬೆಂಗಳೂರಿನ ನಿವಾಸದ ಮೇಲು ದಾಳಿ ಮಾಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಇರುವಂತಹ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬೆಳಿಗ್ಗೆಯಿಂದಲೇ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕೇವಲ ಸಂಸದ ತುಕಾರಾಂ ಅಲ್ಲದೆ ಕಾಂಗ್ರೆಸ್ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಗಣೇಶ್ ಹಾಗೂ ಡಾ. ಶ್ರೀನಿವಾಸ್ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ ನಾರಾಯ ಭರತ ರೆಡ್ಡಿ ಕಂಪ್ಲಿ ಗಣೇಶ್, ಡಾ. ಶ್ರೀನಿವಾಸ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಸಂಸದ ಮತ್ತು ಶಾಸಕರ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪನ್ನು ಬೆಂಬಲಿಸಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಣವನ್ನು ಲೋಕಸಭೆ ಚುನಾವಣೆಗೆ ಅಕ್ರಮವಾಗಿ ವರ್ಗಾವಣೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಜೈಲುವಾಸ ಅನುಭವಿಸಿ ಇತ್ತೀಚಿಗೆ ಬಿಡುಗಡೆಯಾಗಿದ್ದರು. ಈಗ ಇಂದು ಸಂಸದ ಇ ತುಕಾರಾಂ ಶಾಸಕರಾದಂತಹ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್…
BREAKING : ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು
ಹೈದ್ರಾಬಾದ್ : ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ರದ್ದುಗೊಳಿಸಿದೆ. ಈ ಮೂಲಕ ಹಲವು ಷರತ್ತು ವಿಧಿಸಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದೆ ಹೌದು ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಕುರಿತು ತೆಲಂಗಾಣ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಗಾಲಿ ಜನಾರ್ದನ ರೆಡ್ಡಿ, ಬಿ.ವಿ. ಶ್ರೀನಿವಾಸ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಗಳ ಜೊತೆಗೆ ಗಾಲಿ ಜನಾರ್ದನ ರೆಡ್ಡಿ ಪ್ರತ್ಯೇಕವಾಗಿ ಸಲ್ಲಿಸಿರುವ ಜೈಲು ಶಿಕ್ಷೆಯ ಅರ್ಜಿಗಳ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ನಿನ್ನೆ ಜನಾರ್ದನ ರೆಡ್ಡಿ ಪರವಾಗಿ ಹಿರಿಯ ವಕೀಲರಾದ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರ ಕೊಲೆ ನಡೆದಿದ್ದು, ಕೇವಲ ಮೊಬೈಲ್ ವಿಚಾರಕ್ಕೆ ಜಗಳ ಉಂಟಾಗಿ ಸ್ವಂತ ಅಣ್ಣನ ಮಗನನ್ನೇ ಚಿಕ್ಕಪ್ಪನೊಬ್ಬ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿರಾಗುಟ್ಟಹಳ್ಳಿಯಲ್ಲಿ ಚಿಕ್ಕಪ್ಪ ಅಣ್ಣನ ಮಗನ ತಲೆ ಮೇಲೆ ಕಲ್ಲು ಹಾಕಿ ಸಾಯಿಸಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಗ್ರಾಮದ ಸುನಿಲ್ (29) ಎಂದು ತಿಳಿದುಬಂದಿದೆ. ಅವರ ಚಿಕ್ಕಪ್ಪ ರಮೇಶ್ ಕೊಲೆ ಮಾಡಿರುವ ಆರೋಪಿ. ರಮೇಶ್ ಮೊಬೈಲ್ ಅನ್ನು ಸುನಿಲ್ ತೆಗೆದುಕೊಂಡಿದ್ದು ಮತ್ತೆ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 8 ರಂದು ಭಾನುವಾರ ಇಬ್ಬರ ನಡುವೆ ಜಗಳವಾಗಿತ್ತು. ರಾತ್ರಿ ಮಲಗಿದ್ದಾಗ ಸುನಿಲ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.ತೀವ್ರವಾಗಿ ಗಾಯಗೊಂಡಿದ್ದ ಸುನಿಲ್ಗೆ ಬಟ್ಲಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ…
ಕಲಬುರ್ಗಿ : ನಿನ್ನೆ ತಾನೆ ಕಲ್ಬುರ್ಗಿಯ ಶಹಾಬಜಾರ್ ನಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ಈ ಘಟನೆ ಮಾಸುವ ಮುನ್ನವೇ ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹೌದು ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ರೌಡಿಶೀಟರ್ ಬರ್ಬರ ಕೊಲೆಯಾಗಿದೆ. ಸುಧಾಕರ್ (32) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ
ಕೋಲಾರ : ಬಾರ್ ಮಾಲೀಕರೊಬ್ಬರ ಬಳಿ 20 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್ಐ ಹಾಗು ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿಎಸ್ಐ ಅರ್ಜುನ್ ಗೌಡ ಹಾಗೂ ಕಾನ್ಸ್ಟೇಬಲ್ ಸುರೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಬಾರ್ ಮಾಲೀಕ ಪ್ರಶಾಂತ್ ಬಳಿ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ 20,000 ಲಾಂಚ ಸ್ವೀಕರಿಸುವಾಗ ಪಿಎಸ್ಐ ಅರ್ಜುನ್ ಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಅರ್ಜುನನನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯಲಿರುವ ಸಂಸದ ಇ ತುಕಾರಾಂ ಹಾಗೂ ಕಾಂಗ್ರೆಸ್ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಗಣೇಶ ನಿವಾಸದ ಮೇಲೆ ಈಡಿಯಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಪಿಎ ಗೋವರ್ಧನ ನಿವಾಸದ ಮೇಲು ದಾಳಿ ಮಾಡಿರುವ ಇಡಿ ಅಧಿಕಾರಿಗಳು ಇದೀಗ ಬೆಂಗಳೂರಿನ ಶಾಸಕರ ಭವನದಲ್ಲಿರುವ ಬಿ.ನಾಗೇಂದ್ರ ಕೊಠಡಿಯಲ್ಲೂ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಮಾಜಿ ಸಚಿವ ನಾಗೇಂದ್ರರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ ಶಾಸಕರ ಭವನದಲ್ಲಿ ನಾಗೇಂದ್ರ ಕೊಠಡಿಯಲ್ಲಿ ಇಡಿ ಅಧಿಕಾರಿಗಳು ಇದೀಗ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ
ಮಂಡ್ಯ : ನಿನ್ನೆ ಮಂಡ್ಯ ಜಿಲ್ಲೆಯ ನಂಜನಗೂಡು ತಾಲೂಕಿನ ಕೂತ್ತುನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, CET ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರಿಂದ ಮನನೊಂದ ತಾಯಿಯು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಕೊತ್ತನಹಳ್ಳಿ ಗ್ರಾಮದ ಜಯರಾಮ ಅವರ ಪತ್ನಿ ಮಹಾದೇವಮ್ಮ (45), ಮಗಳು ಪ್ರಿಯಾ (20) ಆತ್ಮಹತ್ಯೆಗೆ ಶರಣಾದವರು.ಪ್ರಿಯಾ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದು, ಸಿಇಟಿ, ಎನ್‌ಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಳು. ಮಗಳನ್ನು ತುಂಬಾ ಪ್ರೀತಿಸುತ್ತಿದ್ದ ತಾಯಿ ಮಹಾದೇವಮ್ಮ ಮಗಳ ಸಾವನ್ನು ಕಂಡು ಆಕೆಯೂ ಸಹ ಮಗಳ ಶವದ ಪಕ್ಕದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.













