Author: kannadanewsnow05

ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಇಂದು ಹೊರಬೀಳಲಿದೆ. ಮಧ್ಯಾಹ್ನ 3.00 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. https://karresults.nic.in ಲಿಂಕ್​ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್​ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್​ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವರ್ಷ ಮೊದಲ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕ ಪಟ್ಟಿಯು (Marks Card) ಡಿಜಿಲಾಕರ್ (DigiLocker) ಮೂಲಕ ಇಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯವಿರಲಿದೆ. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅಂಕಪಟ್ಟಿಯನ್ನು ಡಿಜಿಲಾಕರ್​​ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವವರು ವಿಡಿಯೋ ಲಿಂಕ್​ https://tinyurl.com/mw84wmh9 ಮೂಲಕ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯು ಸಂಬಂಧಿತ ಕಾಲೇಜುಗಳಿಗೆ 09-04-2026ರ ಮಧ್ಯಾಹ್ನ 3.00 ಗಂಟೆಗೆ ಸಿಗಲಿದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

Read More

ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ ಆಗಿದೆ. ಜಿಲ್ಲೆಯ ಹಲವಡೆ ಮತ್ತೆ ಭೂಕಂಪನದ ಅನುಭವ ಆಗಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ. ಕಳ್ಳ ಕವಟಗಿ, ಬಾಬಾನಗರ ಬಿಜ್ಜರಗಿ, ಸೋಮದೇವರ ಹಟ್ಟಿ ಹಬನೂರು, ಟಕ್ಕಳಿಕೆ ಸೇರಿದಂತೆ ಹಲವಡೆ ಭೂಕಂಪನ ಅನುಭವ ಆಗಿದೆ. ತಿಕೋಟ ತಾಲೂಕಿನ ಗ್ರಾಮದಲ್ಲಿ ಈ ಒಂದು ಭೂಕಂಪನ ನಡೆದಿದ್ದು ಬೆಳಿಗ್ಗೆ 8:21 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅಲ್ಲದೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ ಮಹಾರ ಮಹಾರಾಷ್ಟ್ರದ ಮರಬಗಿ ತಿಕ್ಕುಂಡಿಯಲ್ಲೂ ಭೂಮಿ ಕಂಪಿಸಿವೆ.

Read More

ಬೆಂಗಳೂರು : ಕೋರ್ಟ್ ನಿಂದ ವಾರಂಟ್ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ, ಬೆಂಗಳೂರು 42ನೇ ಎಸಿಜಿಎಂ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು. 2021 ರಲ್ಲಿ ವಾಟಾಳ್ ನಾಗರಾಜ್ ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಜಿಎಂ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರನಗರ ಠಾಣೆ ಪೋಲಿಸರು ವಾಟಾಳ್ ನಾಗರಾಜ ಅವರನ್ನು ಅರೆಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲಿ ವಾರಂಟ್ ಕೊಟ್ರೆ ಮಾತ್ರ ಬನ್ನಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸ್ ವಾಹನ ಹತ್ತಲು ನಾಗರಾಜ್ ನಿರಾಕರಣೆ ಮಾಡಿದರು. ಕೊನೆಗೆ ಆಟೋ ರಿಕ್ಷಾದಲ್ಲಿ ಪೊಲೀಸರು ಕೋರ್ಟಿಗೆ ಕರೆದೋಯ್ದಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಜಾತ್ರೆಯಲ್ಲಿ ಮನೆಯ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಎಂಬ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಕುಡುಗೋಲು ಮತ್ತು ರಾಡ್ ನಿಂದ ಹೊಡೆದು ಸಂಗನಗೌಡ (50) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೆಲವು ವರ್ಷಗಳಿಂದ ಎರಡು ಕುಟುಂಬಗಳ ನಡುವೆ ವೈಷ್ಯಮ್ಯ ಇತ್ತು. ವಿರೋಧಿಗಳ ಮನೆಯ ಮುಂದೆ ಸಂಗನಗೌಡ ಪಾಟೀಲ್ ಕುಣಿಯುತ್ತಿದ್ದ. ಮನೆ ಮುಂದೆ ಕುಣಿಯ ಬೇಡ ಎಂದು ಆರೋಪಿಗಳು ಹೇಳಿದ್ದರು. ಸಂಗನಗೌಡ ಮತ್ತು ಆರೋಪಿಗಳ ನಡುವೆ ಈ ವೇಳೆ ಗಲಾಟೆಯಾಗಿ, ಗಲಾಟೆ ವಿಕೋಪಕ್ಕೆ ತಿರುಗಿ ಸಂಗನಗೌಡನ ಕೊಲೆಯಾಗಿದೆ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭೀಮಪ್ಪ ಬಳಗನ್ನವರ್, ಮಂಜುನಾಥ್ ಬಳಗನ್ನವರ್, ರುದ್ರಪ್ಪ, ವಿಜಯ್, ಸೂರಪ್ಪ, ಸಿದ್ದಪ್ಪ, ನಾಗರಾಜ್ ಮತ್ತು ಬಸವಂತಪ್ಪ ಬಂಧಿತ ಆರೋಪಿಗಳು ಘಟನೆ ಸಂಭಂದ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ತುಮಕೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರ ಎದುರೇ ದೊಡ್ಡ ಹೈಡ್ರಾಮ ನಡೆದಿದೆ. ಗೃಹ ಸಚಿವರಿಗೆ ಮನವಿ ಮಾಡುವ ವೇಳೆ ಫೇಸ್ಬುಕ್ ಲೈವ್ ಬಂದಿದ್ದಾರೆ. KRS ಪಕ್ಷದ ಮುಖಂಡ ಫೇಸ್ ಬುಕ್ ಲೈವ್ ಬಂದಿದ್ದಾನೆ ಇದನ್ನು ಗೃಹ ಸಚಿವರು ವಿರೋಧಿಸಿದ್ದಾರೆ. ಆದರೂ ಕೂಡ ಫೇಸ್ಬುಕ್ ನಲ್ಲಿ ಆತ ಲೈವ್ ಹೋಗುತ್ತಿದ್ದ ಕೆಆರ್KRS ಪಕ್ಷದ ಮುಖಂಡ ಶಾಮ್ ಸುಂದರ್ ಮನವಿ ಪತ್ರ ಸಲ್ಲಿಸಲು ಬಂದಿದ್ದರು. ಈ ವೇಳೆ ಗೃಹ ಸಚಿವರು ಗರಂ ಆಗಿದ್ದು, ಪೊಲೀಸರಿಗೆ ಏನಿದೆ ನೋಡಿ ಅಂತ ಹೇಳಿದಾಗ ತಕ್ಷಣ ಪೊಲೀಸರು ಕೆ.ಆರ್ ಪಕ್ಷದ ಮುಖಂಡರ ಶ್ಯಾಮ್ ಸುಂದರನ್ನು ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು.

Read More

ಹುಬ್ಬಳ್ಳಿ : ಕಳೆದ ಒಂದು ವಾರದಿಂದ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಹುಬ್ಬಳ್ಳಿ ಜನತೆ ಸಹಜವಾಗಿ ಬೆಚ್ಚಿಬಿದ್ದಿದ್ದಾರೆ. ಮೊದಲನೇ ಪ್ರಕರಣದಲ್ಲಿ ಸಮೀರ್ ಯುವತಿಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಇನ್ನು ಎರಡನೇ ಪ್ರಕರಣದಲ್ಲಿ ಮುಫೀಸ್ ಎಂಬಾತ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿತ್ತು. ಈ ಎರಡು ಪ್ರಕರಣಗಳು ತನಿಖೆಯಲ್ಲಿ ಇರುವಾಗಲೇ ಮತ್ತೊಂದು ಹಳೆ ಪ್ರಕರಣ ಇದೀಗ ತೆರೆದುಕೊಂಡಿದೆ. ಹೌದು ಧಾರವಾಡ ಜಿಲ್ಲೆಯ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಮನೆ ಖರೀದಿಗೆ ನೀಡಿದ್ದ 10 ಲಕ್ಷ ಹಣವನ್ನೂ ವಂಚಿಸಿದ್ದಾನೆ.  ಕೆಲಗೇರಿಯ ನಿವಾಸಿ ತಂಗೆಮ್ಮಾ (22) ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿಯ ಜೊತೆಗೆ ಓಡಿ ಹೋಗಿದ್ದು, ಈ ಬಗ್ಗೆ ಆಕೆಯ ತಾಯಿ ಮಂಜುಳಾ ಅವರೇ ಮಾಹಿತಿ ನೀಡಿದ್ದಾರೆ. ತಮ್ಮ ಮಗಳಿಗೆ ಪರಿಚಿತ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ, ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Read More

ಬೆಂಗಳೂರು : ನಾಳೆ ಮಧ್ಯಾಹ್ನ 3:00ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗಲಿದೆ. https://karresults.nic.in ವೆಬ್ಸೈಟ್ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗೆ ಎಸ್ಎಂಎಸ್ ಸಹ ಬರಲಿದೆ ಮೊಬೈಲ್ ಗೆ ಎಸ್ಎಂಎಸ್ ಮೂಲಕ ಫಲಿತಾಂಶವನ್ನು ಮಂಡಳಿ ರವಾನೆ ಮಾಡಲಿದೆ ಬಳಿಕ ಸಂಜೆ 6:15ಕ್ಕೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಲಭ್ಯ ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಫಲಿತಾಂಶದ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEAB) ಈಗಾಗಲೇ ಅಂಕಪಟ್ಟಿಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಪೂರೈಸಿದೆ. ಪರೀಕ್ಷೆಯ ಹಿನ್ನಲೆ ಪರೀಕ್ಷೆ ನಡೆದ ದಿನಾಂಕ: ಫೆಬ್ರವರಿ 28 ರಿಂದ ಮಾರ್ಚ್ 17, 2026. ಪರೀಕ್ಷಾ ಕೇಂದ್ರಗಳು: ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ಸುಗಮವಾಗಿ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ್ಲಿ ಈ ಒಂದು ಅಗ್ನಿವಗಡ ಸಂಭವಿಸಿದೆ ಸುಮಾರು 50ರಿಂದ 60 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ನಿಯಂತ್ರಣಕ್ಕೆ ಸಿಗದೆ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕು ಅರಣ್ಯಕ್ಕೆ ವ್ಯಾಪಿಸುತ್ತಿದೆ.

Read More

ನವದೆಹಲಿ : ಬಿಜೆಪಿ ಆರ್‌ಎಸ್‌ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದದ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಕಾಲೇಜು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗಮನಿಸಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಎಂದಿಗೂ ಅಸಂಬದ್ಧವಾಗಿ ಮಾತನಾಡುತ್ತಿರಲಿಲ್ಲ. ಖರ್ಗೆ ತಮ್ಮ ಸ್ಥಾನದ ಮಹತ್ವವನ್ನು ಅರಿತುಕೊಳ್ಳಬೇಕು, ರಾಹುಲ್ ಗಾಂಧಿ ಸಾಂಗತ್ಯ ಹೆಚ್ಚಾಗಿರುವ ಪರಿಣಾಮ ಹೀಗೆ ಮಾತನಾಡಿದ್ದಾರೆ ಎಂದು ಕಿಡಿ ಕಾರಿದರು. ರಾಹುಲ್ ಸಹವಾಸವನ್ನು ಕರೆಗೆ ಬಿಟ್ಟರೆ ಎಲ್ಲವೂ ಸರಿಯಾಗುತ್ತದೆ ಗುಜರಾತ್ ರಾಜ್ಯದ ಜನರು ಅವಿದ್ಯಾವಂತರು ಎಂದು ಹೇಳಿದ್ದಾರೆ ಹಾಗಾದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಜನರು ದಡ್ಡರೆ? ಉತ್ತರ ಪ್ರದೇಶ ಬಿಹಾರ ಅಸ್ಸಾಂ ರಾಜ್ಯಗಳ ಜನರು ದಡ್ಡರೆ? ಕಾಂಗ್ರೆಸ್ ಗೆ ಮತ ಹಾಕಿಲ್ಲ ಅಂದ ತಕ್ಷಣ ಅವಮಾನ ಮಾಡಬಾರದು ಎಂದು ಪ್ರಹಲಾದ ಜೋಶಿ ತಿಳಿಸಿದರು

Read More