Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಲಾರೆನ್ಸ್ ಬಿಷ್ನೋಯ್ ಎಂದು ಹೆಸರು ಬರೆದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಕಿಡಿಗೇಡಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ನಂದಿ ಬೆಟ್ಟದಲ್ಲಿರುವ ಟಿಪ್ಪು ಅರಮನೆಯ ಮೇಲೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯ್ ಹೆಸರು ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿಗಿರಿ ಧಾಮ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. PDLP, BNS ಸೆಕ್ಷನ್ 324 (2), 329 (3)ರ ಅಡಿ ದುಷ್ಕರ್ಮಿಗಳ ಮೇಲೆ ಕೇಸ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಎಸ್ ಪಿ ಕುಶಲ್ ಚೌಕ್ಸೆ ಸೂಚನೆಯ ಮೇರೆಗೆ ಕೇಸ್ ದಾಖಲಾಗಿದೆ. ಸದ್ಯ ಗ್ಯಾಂಗ್ ಸ್ಟರ್ ಬಿಷ್ನೋಯ್ ದೆಹಲಿಯ ತಿಹಾರ್ ಜೈಲಿನಲ್ಲಿ ಇದ್ದಾನೆ. ಅಂತಾರಾಷ್ಟ್ರೀಯ ಗ್ಯಾಂಗ್ ಸ್ಟರ್ ಆಗಿರುವ ಲಾರೆನ್ಸ್ ಬಿಷ್ನೋಯ್ ಹೆಸರನ್ನ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಕೆತ್ತಲಾಗಿತ್ತು. ದುಷ್ಕರ್ಮಿಗಳು ಒಂದು ತಿಂಗಳ…

Read More

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಸ್ತೆಯಲ್ಲಿ ವಾಹನಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಗೋರಿಪಾಳ್ಯ ಜಂಕ್ಷನ್ ನಲ್ಲಿ ನಿಂತಿದ್ದ ಎರಡು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಹಾಗೂ ಮಿನಿ ಗೂಡ್ಸ್ ವಾಹನಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಡಿಪೋ 35ಕ್ಕೆ ಸೇರಿದ KA 51 AK 6230 ಬಸ್ ಅಡಿಕೆ ಹೊಡೆದಿದೆ ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತವಾಗಿದೆ.ಕೆಆರ್ ಮಾರ್ಕೆಟ್ ಮತ್ತು ತಾವರೆಕೆರೆ ನಡುವೆ ಈ ಒಂದು ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿತ್ತು. ಪ್ರಯಾಣಿಕ ಮತ್ತು ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿದ್ದು, ತಕ್ಷಣ ಗಾಯಾಳುಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಮರಾಜಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ನೂತನ ಕಾರ್ಯಪಡೆಗೆ ಚಾಲನೆ ನೀಡಿದರು. ಹೇಗೆ ಕಾರ್ಯ ನಿರ್ವಹಿಸಲಿದೆ? ಕೇಂದ್ರ ತನಿಖಾ ಸಂಸ್ಥೆಯಾಗಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾದರಿಯಲ್ಲಿ ಕಾರ್ಯ ನಿರ್ವಹಿಸಿಸಲಿರುವ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಮಾತ್ರವಲ್ಲದೆ ಜಿಲ್ಲೆಗಳಲ್ಲಿನ ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸಲಿದೆ. ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ…

Read More

ಬೆಂಗಳೂರು : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನಲ್ಲಿ ರೋಡ್ ರೋಮಿಯೋ ಕಿರುಕುಳದಿಂದ ಅಪ್ರಾಪ್ತೆ ಬಾಲಕಿಯೊಬ್ಬಳು ಹೆಣವಾಗಿದ್ದಾಳೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಲವ್ ಹೆಸರಿನಲ್ಲಿ ಅಪ್ರಾಪ್ತ ಹಿಂದೆ ಮನೋಜ್ ಎಂಬ ಯುವಕ ಬಿದ್ದಿದ್ದ ಲೈಂಗಿಕವಾಗಿ ಬಳಸಿಕೊಳ್ಳಲು ಗ್ಯಾಂಗ್ ಒಂದು ಆಕೆಯನ್ನು ಕರೆದೊಯ್ಯುತ್ತಿತ್ತು. ಬೈಕ್ ನಲ್ಲಿ ಕರೆದೋಯ್ಯುವಾಗ ಅಪಘಾತ ಸಂಭವಿಸಿ ಅಪ್ರಾಪ್ತೆ ಸಾವನ್ನಪ್ಪಿದ್ದಾಳೆ. ಲೈಂಗಿಕವಾಗಿ ಬಳಸಿಕೊಳ್ಳಲು ಆಕೆಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುವಾಗ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. 9ನೇ ತರಗತಿ ಓದುತ್ತಿದ್ದ ಬಾಲಕಿಯ ಹಿಂದೆ ಮನೋಜ್ ಹಿಂದೆ ಬಿದ್ದಿದ್ದ ಪದೇ ಪದೇ ಕರೆ ಮಾಡಿ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಕ್ಟೋಬರ್ 24ರಂದು ಮನೋಜ್ ಕರೆದುಕೊಂಡು ಹೋಗಿದ್ದಾನೆ ಎರಡು ಬೈಕ್ಗಳಲ್ಲಿ ಹೊಸಕೋಟೆ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾನೆ. ಬಾಲಕಿ ಮನೋಜ್ ಮತ್ತು ಮತ್ತೋರ್ವ ಒಂದು ಬೈಕ್ನಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ. ಪ್ರಿಯತಮೆಗಾಗಿ ದುಬಾರಿ ಮೊಬೈಲ್‌ಗಳನ್ನು ಪ್ರಿಯಕರ ಕಳ್ಳತನ ಮಾಡಿದ್ದಾನೆ. ಕಳೆದ ವಾರ ಒಂದೇ ರಾತ್ರಿ ಎರಡು ಶೋ ರೂಮ್ಗೆ ಕನ್ನ ಹಾಕಿದ್ದಾನೆ. 30ಕ್ಕೂ ಹೆಚ್ಚು ದುಬಾರಿ ಮೊಬೈಲ್ ಗಳನ್ನ ಕಳ್ಳತನ ಮಾಡಿದ್ದಾನೆ. ಸ್ನೇಹಿತನೊಂದಿಗೆ ಸೇರಿ ಸುಮಾರು 30ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಮೊಬೈಲ್ ಕಳ್ಳತನ ಮಾಡಿದ್ದಾನೆ. ಪತಿ ಬಿಟ್ಟು ಮಹಿಳೆ ಅಸ್ಮಿತ ಕಳ್ಳನ ಜೊತೆಗೆ ಲಿವ್ ಇನ್ ರಿಲೇಶನ್ ನಲ್ಲಿ ಇದ್ದಳು ಪ್ರಿಯಕರ ತಂದುಕೊಟ್ಟ ಮೊಬೈಲ್ ಅನ್ನು ಪ್ರೇಯಸಿ ಸೇಲ್ ಮಾಡುತ್ತಿದ್ದಳು. ಪ್ರಿಯಕರ ದಿವಾಸ್ ಗೆಳೆಯ ಆರೋಹನ ಹಾಗೂ ಪ್ರೇಯಸಿ ಅಸ್ಮಿತಾಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಪ್ರಿಯಕರ ಕಳ್ಳತನ ಮಾಡಿ ಗಿಫ್ಟ್ ಕೊಡಬೇಕು ಅಂತ ಅಲ್ಲ. ಕದ್ದ ಮೊಬೈಲ್ ಗಳನ್ನ ಅಸ್ಮಿತಾಗೆ ತಂದು ಆತ ಕೊಡುತ್ತಿದ್ದ ಪ್ರೇಯಸಿ ಅಸ್ಮಿತ ಅದನ್ನು ಮಾರಾಟ ಮಾಡುತ್ತಿದ್ದಳು 30 ಲಕ್ಷದ ಒಟ್ಟು 28 ಮೊಬೈಲ್ ಹಾಗೂ ವಾಚ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವರ್ತೂರು ಪೋಲಿಸರಿಂದ…

Read More

ಧಾರವಾಡ : ಸಿದ್ದರಾಮಯ್ಯ ಜೀವನಪೂರ್ತಿ ರಾಜಕೀಯದಲ್ಲಿರಬೇಕು ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಆಗಬಾರದು. ಸಿದ್ದರಾಮಯ್ಯ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕು ಸಿಎಂ ಸಿದ್ದರಾಮಯ್ಯ ಅವರ ಅವಶ್ಯಕತೆ ರಾಜ್ಯಕ್ಕೆ ಬಹಳವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು. ಕಲಘಟಗಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಹಜ ಪ್ರಕ್ರಿಯೆ ಅದರಲ್ಲಿ ಯಾವುದೇ ಕ್ರಾಂತಿ ಇಲ್ಲ. ಪುನಾರಚನೆ ಅಂದರೆ ಕೆಲವರನ್ನು ತೆಗೆಯಬೇಕು ಮತ್ತೆ ಕೆಲವರನ್ನು ಸೇರಿಸಿಕೊಳ್ಳಬೇಕು. ಎಲ್ಲರೂ ಎಲ್ಲಾ ತ್ಯಾಗಕ್ಕೂ ಸಿದ್ಧರಿರಬೇಕು ಸಿಎಂ ಹೈಕಮಾಂಡ್ ನಿರ್ಧಾರ ಅಂದಮೇಲೆ ಅದರಲ್ಲಿ ಗೊಂದಲ ಎಲ್ಲಿದೆ? ಕೇಂದ್ರ ಸರ್ಕಾರದಲ್ಲಿ ಯಾಕೆ ಬದಲಾವಣೆ ಆಗಬಾರದು? ನಿತಿನ್ ಗಡ್ಕರಿ ಯಾಕೆ ಪ್ರಧಾನಿ ಆಗಬಾರದು?ಎಂದು ಧಾರವಾಡ ಜಿಲ್ಲೆಯ ಕಲಘಟಕಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕಳೆದ ತಿಂಗಳು ಜೀವಾವಧಿ ಶಿಕ್ಷೆ ಪ್ರಕಟಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಇದೀಗ ಜೀವಿತಾವಧಿ ಸೆರೆವಾಸ ಶಿಕ್ಷೆ ಪ್ರಶ್ನಿಸಿ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂತ್ರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿತು. ಬಳಿಕ ವಿಚಾರಣೆಯನ್ನು ನವೆಂಬರ್ 13ರ ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿತು.

Read More

ಧಾರವಾಡ: ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಹೌದು ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ. ಧಾರವಾಡದ ಹೈಕೋರ್ಟ್ ಪೀಠದಲ್ಲಿ ಪುನಃಶ್ಚೇತನ ಸೇವಾ ಸಂಸ್ಥೆ ಹುಬ್ಬಳ್ಳಿಯ ಎನ್‌ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು…

Read More

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಐದು ವರ್ಷಗಳ ಕಾಲ ಸಿಎಂ ಎಂದು ಹೇಳಿಕೆ ನೀಡಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಸಿದ್ದರಾಮಯ್ಯ ಸಿಎಂ ಆಗಿ ಆರಿಸಿದ್ದು ಎರಡುವರೆ ವರ್ಷಕ್ಕೆ ಅಲ್ಲ. ಅಧಿಕಾರ ಹಂಚಿಕೆ ಇದೆ ಎಂದು ನಮಗೆ ಯಾರು ಹೇಳಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆರಿಸಿದ್ದು ಎರಡೂವರೆ ವರ್ಷಕ್ಕೆ ಅಲ್ಲ. ಅಧಿಕಾರ ಹಂಚಿಕೆ ಇದೆ ಎಂದು ನಮಗೆ ಯಾರು ಹೇಳಿಲ್ಲ. ಅಧಿಕಾರ ಹಂಚಿಕೆ ಇದ್ದರೆ ಹೈಕಮಾಂಡ್ ನಮಗೆ ಹೇಳಲಿ. ನಾವು ಸಿಎಲ್‌ಪಿ ನಾಯಕರನ್ನು ಆಯ್ಕೆ ಮಾಡಿದಾಗ, ನಮ್ಮ ಪಕ್ಷ ಮೆಜಾರಿಟಿ ಬಂದಾಗ ಎಲ್ಲಾ ಶಾಸಕರನ್ನು ಕರೆದು ಸಿಎಲ್‌ಪಿ ನಾಯಕರನ್ನು ಆಯ್ಕೆ ಮಾಡಿದೆವು. ಅವತ್ತು ನಮಗೆ ಯಾವುದೇ ದೃಷ್ಟಿಯಿಂದ ಸಿದ್ದರಾಮಯ್ಯ ಬರಿ ಎರಡುವರೆ ವರ್ಷ ಮುಖ್ಯಮಂತ್ರಿ ಅಂತ ಹೇಳಿಲ್ಲ. ಹೈಕಮಾಂಡ್ ಅವರು ಸಹ ಸಿದ್ದರಾಮಯ್ಯ ಅವರು ಸಿಎಲ್ ಪಿ ನಾಯಕ…

Read More