Author: kannadanewsnow05

ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಗೆದ್ದ ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇತ್ತೀಚಿಗೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಈ ಒಂದು ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ದುರಂತಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು. ಹೌದು ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಇದೀಗ ಚುರುಕುಗೊಂಡಿದೆ. ಎಮ್ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಲ್ತುಳಿತದ ದುರಂತದ ಸ್ಥಳದಲ್ಲಿ ಸಿಐಡಿ ತಂಡ ಸ್ಥಳ ಮಹಜರು ನಡೆಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲಿನ ಸಿಸಿ ಕ್ಯಾಮೆರಾ ಹಾಗೂ ದೃಶ್ಯಾವಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟೇಡಿಯಂನ ಎಲ್ಲಾ ಗೇಟ್ಗಳಲ್ಲಿ ಸಿಐಡಿ ಪರಿಶೀಲನೆ ನಡೆಸಿದೆ. ಸ್ಟೇಡಿಯಂ ಅಧಿಕಾರಿಗಳಿಂದಸಿಐಡಿ ತಂಡ ಮಾಹಿತಿ ಪಡೆದುಕೊಂಡಿದ್ದಾರೆ. ಸಿಐಡಿ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿಯಿಂದ ಸ್ಟೇಡಿಯಂ ಸುತ್ತಮುತ್ತಲು ಪರಿಶೀಲನೆ ನಡೆಸಲಾಯಿತು. ದುರಂತ ನಡೆದ ಸ್ಥಳದಲ್ಲಿ ಪರಿಶೀಲಿಸಿ ಸೇಡಿ…

Read More

ರಾಯಚೂರು : ಇತ್ತೀಚಿಗೆ ಬೀಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ರಾಯಚೂರಿನಲ್ಲಿ ಏಕಾಏಕಿ 15 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಗಾಯಗೊಂಡ 8 ಜನರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಗಂಗಾನಿವಾಸ ಹಾಗೂ ಟ್ಯಾಂಕ್ ಬಂಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಹುಚ್ಚುನಾಯಿ ಕಡಿತ ಶಂಕೆ ಎದುರಾಗಿದ್ದು, ಗಾಯಾಳುಗಳು ಆತಂಕಗೊಂಡಿದ್ದಾರೆ. ಓರ್ವ ಬಾಲಕ ಸೇರಿದಂತೆ ಗಾಯಗೊಂಡ ಎಂಟು ಜನರನ್ನು ನಗರದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಸಿಕ್ಕಸಿಕ್ಕವರ ಕೈ, ಕಾಲಿಗೆ ಹಾಗೂ ಮೈ ಮೇಲೆ ಎಗರಿ ಗಾಯಗೊಳಿಸಿವೆ. ಲಿಂಗಪ್ಪ, ಶರಣಪ್ಪ, ರಮೇಶ್, ಮೊಹಮದ್ ಗೌಸ್ ಸೇರಿ 15 ಜನರು ಗಾಯಗೊಂಡಿದ್ದು, ಪಾಲಿಕೆ ವಿರುದ್ದ ಗಾಯಾಳುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪಾದಚಾರಿಗಳ ಮೇಲೆ ನಾಯಿಗಳ ಹಿಂಡು ದಾಳಿ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಬೀದಿ ನಾಯಿಗಳನ್ನು ಹಿಡಿದು ಸ್ಥಳಾಂತರ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ‌.

Read More

ಮಧ್ಯಪ್ರದೇಶ : ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಓವರ್ಟೇಕ್ ಮಾಡುವಾಗ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬದ ಐವರು ಸಾವನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಇಂಥದ್ದೇ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಸಿಮೆಂಟ್ ಸಾಗಿಸಿತ್ತಿದ್ದ ಟಿಪ್ಪರ್ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ. ಮೇಘನಗರದ ಶಿವಗಢ ಮಹುದಾ ಗ್ರಾಮದ ನಿವಾಸಿಗಳಾದ ಮುಖೇಶ್ (40), ಸಾವ್ಲಿ (35), ವಿನೋದ್ (16), ಪಾಯಲ್ (12), ಮಾಧಿ (38), ವಿಜಯ್ ಭರು ಬಮಾನಿಯಾ (14), ಕಾಂತಾ (14), ರಾಗಿಣಿ (9), ಮತ್ತು ಅಕಾಲಿ (35) ಮೃತರೆಂದು ಗುರುತಿಸಲಾಗಿದೆ. ಪಾಯಲ್ ಸೋಮ್ಲಾ (19) ಮತ್ತು ಆಶು (5) ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆಯ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆಗೆ ಕಡೆ ತಿರುಗುತ್ತಿದ್ದಾಗ ಟಿಪ್ಪರ್ ನಿಯಂತ್ರಣ ತಪ್ಪಿ…

Read More

ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಆದರೆ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೂ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ಆರ್ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಇನ್ನು ಇದೇ ವೇಳೆ ಅಭಿನಂದನಾ ಕಾರ್ಯಕ್ರಮ…

Read More

ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ನಿನ್ನೆ ಅಹಮದಾಬಾದ್ ನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ನಡೆದ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿ ಮೊದಲ ಬಾರಿಗೆ ಚೊಚ್ಚಲ ಕಪ್ ಎತ್ತಿ ಹಿಡಿಯಿತು. ಹಾಗಾಗಿ ಆರ್‌ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ ಮೇಲೆ ಈಗಾಗಲೇ ಸಿಬ್ಬಂದಿಗಳು ವೇದಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ. ಸರ್ಕಾರದಿಂದ ಆರ್‌ಸಿಬಿ ಆಟಗಾರರಿಗೆ ಗೌರವ ನೀಡಲು ಸಿದ್ಧತೆ ನಡೆಸಿದೆ ಅಭಿನಂದನೆ ಸಲ್ಲಿಕೆಗೆ ಭರದ ಸಿದ್ಧತೆ ನಡೆಸುತ್ತಿದೆ. ಸಂಜೆ 5 ಗಂಟೆಗೆ ಗೆ ವಿಕ್ಟರಿ ಪರೇಡ್ಡಿಯಲ್ಲಿದ್ದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿಕ್ಟರಿ ಪರೇಡನಲ್ಲಿ ಯಾವುದೇ ಸಮಸ್ಯೆ ಆಗಬಾರದು ಎಂದು ಡಿಜಿ ಮತ್ತು ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೆತ್…

Read More

ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ನಿನ್ನೆ ಅಹಮದಾಬಾದ್ ನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ನಡೆದ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿ ಮೊದಲ ಬಾರಿಗೆ ಚೊಚ್ಚಲ ಕಪ್ ಎತ್ತಿ ಹಿಡಿಯಿತು. ಇದೀಗ ಸಿಎಂ ಸಿದ್ದರಾಮಯ್ಯ ಆರ್‌ಸಿಬಿಐ ಎಲ್ಲಾ ಆಟಗಾರರಿಗೆ ಹಾಗೂ ಅಭಿಮಾನಿಗಳಿಗೂ ಕೂಡ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ತಂಡದ ಎಲ್ಲಾ ಆಟಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಅಭಿಮಾನಿಗಳಿಗೂ ಕೂಡ ಅಭಿನಂದನೆ ಸಲ್ಲಿಸುತ್ತೇನೆ. ಆರ್ ಸಿ ಬಿ ಇದುವರೆಗೂ ಐಪಿಎಲ್ ಕಪ್ ಗೆದ್ದಿರಲಿಲ್ಲ ಆದರೆ 18ನೇ ಆವೃತ್ತಿಯಲ್ಲಿ ಕಪ್ ಗೆದ್ದಿದ್ದಾರೆ. ಸಂಜೆ 4 ಗಂಟೆಗೆ ಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಎಲ್ಲಾ ಆಟಗಾರರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Read More

ಬೆಳಗಾವಿ : ನಿನ್ನೆ ಮೊಟ್ಟಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 18ನೇ ಆವೃತ್ತಿಯ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಹಾಗಾಗಿ ಆರ್‌ಸಿಬಿ ಅಭಿಮಾನಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಬೆಳಗಿನ ನಸುಕಿನ ಜಾವದವರೆಗೂ ಸಂಭ್ರಮಾಚರಣೆ ಮಾಡಿದ್ದಾರೆ. ಅದೇ ರೀತಿ ಬೆಳಗಾವಿಯಲ್ಲಿ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿಯ ಕಟ್ಟಾ ಅಭಿಮಾನಿ ಡ್ಯಾನ್ಸ್ ಮಾಡುತ್ತಲೇ, ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆರ್ ಸಿ ಬಿ ಗೆದ್ದ ಬಳಿಕ ಸಂಭ್ರಮಾಚರಣೆಯ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟ್ಟಾ ಅಭಿಮಾನಿಯಾಗಿದ್ದ ಮಂಜುನಾಥ್ ಈರಪ್ಪ ಕಂಬಾರ್ (28) ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರ್‌ಸಿಬಿ ಗೆಲವು ಸಂಭ್ರಮಾಚರಣೆಯ ವೇಳೆ ಕುಣಿಯುತ್ತಲೇ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ. ಮೃತ ಮಂಜುನಾಥ ಕೆ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಹುಚ್ಚು ಅದರಲ್ಲೂ ಐಪಿಎಲ್ ಅಂತ ಬಂದರೆ ಆರ್ ಸಿ ಬಿ ಆತನ ನೆಚ್ಚಿನ ತಂಡವಾಗಿತ್ತು. ಅಲ್ಲದೆ…

Read More

ಬೆಂಗಳೂರು : 17 ವರ್ಷಗಳ ವನವಾಸ ದ ಬಳಿಕ ಅವಮಾನ, ಟ್ರೊಲ್ ಎಲ್ಲವನ್ನು ಸಹಿಸಿಕೊಂಡು ಇದೀಗ ಐಪಿಎಲ್ 18ನೇ ಆವೃತ್ತಿಯಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದಿದೆ. 2025ರ ಐಪಿಎಲ್​ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಸನ್ಮಾನಿಸಲಿದ್ದಾರೆ. ಹೌದು ಚೊಚ್ಚಲ ಬಾರಿಗೆ ಐಪಿಎಲ್‌ ಚಾಂಪಿಯನ್​ ಪಟ್ಟ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರನ್ನು ಬರಮಾಡಿಕೊಳ್ಳಲು ತವರಿನ ಅಭಿಮಾನಿಗಳು ಸಜ್ಜಾಗಿದ್ದಾರೆ. ಆರ್‌ಸಿಬಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ತಂಡದ ಆಟಗಾರರು, ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿಗೆ ಸನ್ಮಾನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಅಹಮದಾಬಾದ್‌‌ನಿಂದ ಆರ್‌ಸಿಬಿ ಆಟಗಾರರು ನಿರ್ಗಮಿಸಿದ್ದು, ಮಧ್ಯಾಹ್ನ 1:30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಆರ್‌ಸಿಬಿ ತಂಡದ ಆಟಗಾರರು, ತರಬೇತುದಾರರು, ವ್ಯವಸ್ಥಾಪಕರು ಸೇರಿದಂತೆ ತಂಡದ ಸದಸ್ಯರನ್ನು ಸನ್ಮಾನಿಸಲಿದ್ದಾರೆ. ಬಳಿಕ ಆರ್‌ಸಿಬಿ ತಂಡದ ಆಟಗಾರರು ವಿಧಾನಸೌಧದಿಂದ…

Read More

ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ತಂಡ ಇದೀಗ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟಿದ್ದು, ಮಧ್ಯಾಹ್ನ 1: 30 ಗಂಟೆ ಸುಮಾರಿಗೆ ಬೆಂಗಳೂರಿಗೆ ಆರ್‌ಸಿಬಿ ತಂಡ ಆಗಮಿಸಲಿದೆ. ಅಲ್ಲದೆ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರಿಗೆ ವಿಕ್ಟರಿ ಪರೇಡ್ ನಡೆಸಲಿದೆ. ಇನ್ನು ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ಕರ್ನಾಟಕಕ್ಕೆ ಆರ್‌ಸಿಬಿ ಯುವಕರು ಹೆಮ್ಮೆ, ಗೌರವ ತಂದಿದ್ದಾರೆ. ನಾನು ಕೂಡ ನಿನ್ನೆ ನಡೆದಂತಹ ಫೈನಲ್ ಪಂದ್ಯವನ್ನು ನೋಡಿದ್ದೇನೆ. ಆರ್ಸಿಬಿ ತಂಡದ ಆಟಗಾರರು ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹಾಗಾಗಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡುವ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ಹಾಗು ಪೊಲೀಸ್ ಕಮಿಷನರ್ ಜೊತೆಗೆ ಮಾತನಾಡುತ್ತೇನೆ. ಟ್ರಾಫಿಕ್ ಕಂಟ್ರೋಲ್ ಮಾಡೋದೆಲ್ಲ ಇರುತ್ತದೆ ಎಂದು ತಿಳಿಸಿದರು.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯ ಎಸ್ ಬಿಐ ಬ್ಯಾಂಕ್ ಬಳಿ ಇಂದು ಮುಂಜಾನೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ನಗರದ ಚಾಮರಾಜಪೇಟೆ ಕಾಲೊನಿಯ ಶ್ರೀಕಾಂತ್ (29) ಎಂದು ತಿಳಿದುಬಂದಿದೆ. ಮೃತ ಶ್ರೀಕಾಂತ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರು. ವಿವಾಹಿತರಾದ ಶ್ರೀಕಾಂತ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಶವದ ಬಳಿ ರಕ್ತಸಿಕ್ತವಾದ ಕಲ್ಲು ದೊರೆತಿದೆ. ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ‌ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More