Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ರಾತ್ರಿ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್ಸಿಬಿ ಇದೀಗ ಚೊಚ್ಚಲ ಕಪ್ ಗೆದ್ದು ಬೀಗಿದೆ. ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ ನಡೆಯಲಿದೆ. ಹೌದು ತೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್‌ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್ ಬಸ್ ನಲ್ಲಿ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಆರ್‌ಸಿಬಿ ರ‍್ಯಾಲಿ ನಡೆಸಲಾಗುತ್ತೆ. ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ಅವರಿಗೆ ಆರ್‌ಸಿಬಿ ಬಾಯ್ಸ್ ರ‍್ಯಾಲಿ ನಡೆಸಲಿದ್ದಾರೆ. ಇಂದು ಸಂಜೆ 3.30ಕ್ಕೆ ವಿಜಯಯಾತ್ರೆಗೆ ಪ್ಲಾನ್ ಕೂಡ ಮಾಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು : ನಿನ್ನೆ ರಾತ್ರಿ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಹೌದು ತಡ ರಾತ್ರಿ ಬೆಂಗಳೂರಿನ MG ರೋಡ್, ಚರ್ಚ್ಸ್ಟ್ರೀಟ್, ವಿಜಯನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚರ್ಚ್ಸ್ಟ್ರೀಟ್ನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ಪಬ್ ಮತ್ತು ಹೋಟೆಲ್ಗಳಲ್ಲಿ ಡಿಜೆ ಸಾಂಗ್ಗೆ ಅಭಿಮಾನಿಗಳು ಸಕತ್ ಸ್ಟೆಪ್ ಹಾಕುತ್ತಿದ್ದಾರೆ. ಈ ಸಲ ಕಪ್ ನಮ್ದು, ಜೈ ಆರ್ಸಿಬಿ ಎಂದು ಘೋಷಣೆಗಳನ್ನು ಕೂಗಿದರು. https://twitter.com/zoo_bear/status/1929961461314400358?t=IrMHEiPkMesGF4kGLQAA8Q&s=19
ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಆಕಾಶ್ (26) ಮತ್ತು ಮಂಗಳೂರು ಮೂಲದ ಅಫಲ್ (26) ಎಂದು ತಿಳಿದುಬಂದಿದೆ. ಮಣಿ ಮತ್ತು ಕಾಸಿಂ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ. ಮಂಗಳವಾರ ಮುಂಜಾನೆ ಸುಮಾರು 1.30ಕ್ಕೆ ಬಿಜಿಎಸ್ ಮೇಲೇತುವೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಸವಾರರಾದ ಕೆ.ಪಿ.ಅಗ್ರಹಾರ ನಿವಾಸಿ ಆಕಾಶ್ ಡ್ರೈಂಡರ್ ಮೆಕ್ಯಾನಿಕ್ ಕೆಲಸ ಮತ್ತು ವಿಜಯನಗರ ನಿವಾಸಿ ಅಫೂಲ್ ಬಟ್ಟೆ ಅಂಗಡಿಯಲ್ಲಿ ಕೆಲಸಮಾಡುತ್ತಿದ್ದರು. ಆಕಾಶ್ ಮತ್ತು ಮಣಿ ರಾತ್ರಿ ಊಟ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟಿದ್ದರು. ಬಿಜಿಎಸ್ ಮೇತುವೆ ಗಣೇಶ ದೇವಸ್ಥಾನದ ಬಳಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಮುಂದೆ…
ಮಂಗಳೂರು : ಕಳೆದ ಹಲವು ದಿನಗಳಿಂದ ಹೃದಯಘಾತದಿಂದ ಅನೇಕರು ಸಾವನ್ನಪ್ಪುತ್ತಿದ್ದಾರೆ. ಇದೀಗ ಮಂಗಳೂರಿನಲ್ಲಿ ಆಟೋ ಚಲಿಸುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕೊಕ್ಕಡದಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಶರತ್ ಕುಮಾರ್ ಕೆ (36) ಎಂದು ತಿಳಿದುಬಂದಿದೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು. ಸ್ಥಳೀಯರು ಕೂಡಲೇ ವಿಷಯ ಗಮನಿಸಿ ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು.
ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೌದು ಶಿವಮೊಗ್ಗದಲ್ಲಿ RCB ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ಜೋರಾಗಿತ್ತು ಎಲ್ಲೆಡೆ ಪಟಾಕಿ ಸಿಡಿಸಿ, ಯುವಕರು ಕುಣಿದು ಕೊಪ್ಪಳಿಸುತ್ತಿದ್ದರು. ಆದರೆ ಸೆಲೆಬ್ರೇಶನ್ ವೇಳೆ ಆರ್ಸಿಬಿ ಅಭಿಮಾನಿಯೊಬ್ಬ ಸಾವನಪ್ಪಿದ್ದಾನೆ. ಬೈಕ್ನಲ್ಲಿ ಸೆಲೆಬ್ರೇಶನ್ ಮಾಡುವ ವೇಳೆ ಅಪಘಾತ ಸಂಭವಿಸಿದೆ 2 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ್ದಾನೆ. ಅಪಘಾತದಲ್ಲಿ ಅಭಿ ಎನ್ನುವ ಯುವಕ ದುರ್ಮರಣ ಹೊಂದಿದ್ದಾನೆ.ಘಟನೆ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡದ ಈ ಸಾಧನೆ ಕುರಿತು ಮಾಜಿ ಮಾಲೀಕ ವಿಜಯ್ ಮಲ್ಯ ತಂಡಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ. ಹೌದು ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ರಂಗಳ ಭರ್ಜರಿ ಗೆಲುವು ದಾಖಲಿಸಿ ಸ್ವಚ್ಛದ ಐಪಿಎಲ್ ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿತು. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್ಸಿಬಿ ಇದೀಗ ಆ ಒಂದು ಬರವನ್ನು ನೀಗಿಸಿಕೊಂಡಿದೆ. ಇನ್ನು ಆರ್ಸಿಬಿ ಕಪ್ ಗೆದ್ದ ಬೆನ್ನಲ್ಲೇ ಮಾಜಿ ಮಾಲಿಕ ವಿಜಯ ಮಲ್ಯ ಮಹತ್ವದ ಸಂದೇಶ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ’18 ವರ್ಷಗಳ ನಂತರ ಆರ್‌ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಪಂದ್ಯಾವಳಿಯಾದ್ಯಂತ ಅದ್ಭುತ ಅಭಿಯಾನ. ಅತ್ಯುತ್ತಮ ತರಬೇತಿ ಮತ್ತು ಸಹಾಯಕ…
ಬೆಂಗಳೂರು : ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ” Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ‘ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ‘ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ.…
ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡುತ್ತಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಮಂಜೂರಾತಿ ಹುದ್ದೆಗಳಿಗೆ ಅನುಗುಣವಾಗಿ 2025-26ನೇ ಸಾಲಿಗೆ 4,689 ಅತಿಥಿ ಉಪನ್ಯಾಸಕ ರನ್ನು ನೇಮಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಹೌದು ಅತಿಥಿ ಉಪನ್ಯಾಸಕರಿಗೆ ಮಾಸಿಕ 14 ಸಾವಿರ ವೇತನ ನಿಗದಿಪಡಿಸಲಾಗಿದೆ. ಅತಿಥಿ ಉಪನ್ಯಾಸಕ ರಿಗೆ ವಾರದಲ್ಲಿ 10 ಗಂಟೆಗಳ ಕಾರ್ಯಭಾರ ನಿರ್ವಹಿಸಲು ಮಾತ್ರ ಅನುಮತಿ ನೀಡಬೇಕು. ಯಾವುದೇ ಕಾಲೇಜಿನಲ್ಲಿ 10/12 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ಇದ್ದಲ್ಲಿ ಮಾತ್ರ ಇಬ್ಬರು ಅತಿಥಿ ಉಪನ್ಯಾ ಸಕರನ್ನು ನೇಮಿಸಿಕೊಳ್ಳಬಹುದು. ವಿಷಯದಲ್ಲಿ ಬೋಧನೆಗೆ ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಮುಂದೆ ಬಂದರೆ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಕಾಲೇಜಿನ ಪ್ರಾಚಾರ್ಯರು ಮತ್ತು ಹಿರಿಯ ಉಪನ್ಯಾಸಕರ ಸಮಿತಿ ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.ಆಯಾ ಜಿಲ್ಲಾ ವ್ಯಾಪ್ತಿಯ ಪಿಯು ಕಾಲೇಜುಗಳಲ್ಲಿ ಕಡಿಮೆ ಕಾರ್ಯ ಭಾರ ಹೊಂದಿರುವ ವಿಷಯಗಳಿಗೆ ಉಪ ನ್ಯಾಸಕರನ್ನು ಜಿಲ್ಲೆಯ ಇತರೆ ಕಾಲೇ ಜುಗಳಲ್ಲಿ ಖಾಲಿ…
ಬೆಂಗಳೂರು : ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಗುಜರಾತಿನ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಪಂಜಾಬ್ ವಿರುದ್ಧ 6 ರನ್ ಗಳ ಗೆಲುವು ಸಾಧಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಹಿನ್ನೆಲೆ ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಭಾರಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆಯ ವೇಳೆ ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಗಳ ರಾತ್ರಿ ನಡೆದ ಘಟನೆಯಾಗಿದ್ದು, ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಸಂಭ್ರಮಾಚರಣೆ ಮಾಡುತ್ತಾ ಯುವಕ ಬಾರ್ ಗೆ ತೆರಳುತ್ತಿರುವಾಗ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.ಆದರೆ ಚಾಕು ಇರಿತಕ್ಕೆ ಒಳಗಾಗಿರುವ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಯುವಕ ಪ್ರತಿರೋಧ ತೋರಿದ ಬಳಿಕ ಘಟನಾ ಸ್ಥಳದಿಂದ ದುಷ್ಕರ್ಮಿಗಳ ಗ್ಯಾಂಗ್ ಪರಾರಿಯಾಗಿದೆ. ತಕ್ಷಣ ಹಲ್ಲೆಗೆ ಒಳಗಾದಂತಹ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಪೀಣ್ಯ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಕಳೆದ 17 ವರ್ಷಗಳಿಂದ ಐಪಿಲ್ ಟ್ರೊಫಿ ಬರ ಎದುರಿಸುತ್ತಿದ್ದ RCB ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ RCB ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ RCB ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೆ ಇದೆ. ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಂತಿಮವಾಗಿ ಐಪಿಎಲ್‌ಗೆ ಹೊಸ ಚಾಂಪಿಯನ್ ಸಿಕ್ಕಿತು. ಪಂಜಾಬ್ ಕಿಂಗ್ಸ್ ಕೂಡ ಉತ್ತಮವಾಗಿ ಆಡಿದರೂ ಆರ್‌ಸಿಬಿ ಸಾಂಘೀಕ ದಾಳಿಯ ಮುಂದೆ ಮಂಡಿಯೂರಿತು. 17 ವರ್ಷಗಳ ಟ್ರೋಫಿ ಬರವನ್ನು ನೀಗಿಸಿಕೊಂಡ ಬಳಿಕ ಭಾವುಕರಾದ ವಿರಾಟ್ ಕೊಹ್ಲಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದರು.ಬನ್ನಿ ಕೊಹ್ಲಿ ಏನು ಹೇಳಿದ್ದಾರೆ ಅನ್ನೋದನ್ನ ತಿಳಿಯೋಣ. ವಿರಾಟ್ ಕೊಹ್ಲಿ ಹೇಳಿದ್ದೇನು? ಕರ್ನಾಟಕದ ದತ್ತು ಪುತ್ರ ವಿರಾಟ್ ಕೊಹ್ಲಿ ಐಪಿಎಲ್ ಆರಂಭವಾದಾಗಿನಿಂದಲೂ ಅಂದರೆ ಕಳೆದ 18 ವರ್ಷಗಳಿಂದ ಆರ್‌ಸಿಬಿಯ…














