Author: kannadanewsnow05

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐತಿಹಾಸಿಕ ಜಯ ದಾಖಲಿಸಿದ್ದು, 18 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಹೌದು ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 190 ರನ್ ಕಲೆಹಾಕಿತ್ತು. ಅಂತೆಯೇ ಪಂಜಾಬ್ ಗೆ ಗೆಲ್ಲಲು 191 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಕೇವಲ 6 ರನ್ ಅಂತರದಲ್ಲಿ ವಿರೋಚಿತ ಗೆಲುವು ಕಂಡಿತು. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ! ಇತ್ತ ಗೆಲುವು ಖಚಿತವಾಗುತ್ತಿದ್ದಂತೆಯೇ ಮೈದಾನದಲ್ಲಿ ವಿರಾಟ್…

Read More

ಬೆಂಗಳೂರು : ಪಂಜಾಬ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್​ಸಿಬಿ ಐಪಿಎಲ್​ ಚಾಂಪಿಯನ್ಸ್​ ಟ್ರೋಫಿಗೆ ಮುತ್ತಿಟ್ಟಿದೆ. ಆರ್​ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಈ ನಡುವೆ ನಿನ್ನೆ ನಡೆದ ಮ್ಯಾಚ್ ಗು ಮುನ್ನ RCB ಅಭಿಮಾನಿಗಳು ಒಂದು ಲೆಕ್ಕಾಚಾರ ಹಾಕಿಕೊಂದಿದ್ರು. ಏನಪ್ಪಾ ಅದು ಅಂದ್ರೆ ನಿನ್ನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನಲು 18ರ ಲೆಕ್ಕಾಚಾರವನ್ನು ಮುಂದಿಟ್ಟಿದ್ದರು . ಈ ಲೆಕ್ಕಾಚಾರವು ಆರ್​ಸಿಬಿ ಪರವಿರುವುದರಿಂದ ಕೊನೆಗೂ ರಾಯಲ್ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಾದ್ರೆ ಅಂತಹ ಲೆಕ್ಕಾಚಾರ ಏನು ಅಂತೀರಾ ಮುಂದೆ ಓದಿ ಅಂದರೆ ಈ ಬಾರಿ ನಡೆಯುತ್ತಿರುವುದು 18ನೇ ಸೀಸನ್​ನ ಐಪಿಎಲ್. ವಿರಾಟ್ ಕೊಹ್ಲಿಯ ಜೆರ್ಸಿ ನಂಬರ್ 18. ಅಲ್ಲದೆ ಕೊಹ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಾರಂಭಿಸಿ 18 ವರ್ಷಗಳಾಗಿವೆ. ಅತ್ತ ಆರ್​ಸಿಬಿ ಅಭಿಮಾನಿಗಳ ಕಪ್ ಗೆಲ್ಲುವ ಕಾಯುವಿಕೆ…

Read More

ಬೆಂಗಳೂರು : ನಿನ್ನೆ ರಾತ್ರಿ ಪಂಜಾಬ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್​ಸಿಬಿ ಐಪಿಎಲ್​ ಚಾಂಪಿಯನ್ಸ್​ ಟ್ರೋಫಿಗೆ ಮುತ್ತಿಟ್ಟಿದೆ. ಆರ್​ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಹೌದು ತಡ ರಾತ್ರಿ ಬೆಂಗಳೂರಿನ MG ರೋಡ್​, ಚರ್ಚ್​​ಸ್ಟ್ರೀಟ್​, ವಿಜಯನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚರ್ಚ್​ಸ್ಟ್ರೀಟ್​ನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ಪಬ್ ಮತ್ತು ಹೋಟೆಲ್​ಗಳಲ್ಲಿ ಡಿಜೆ ಸಾಂಗ್​ಗೆ ಅಭಿಮಾನಿಗಳು ಸಕತ್​ ಸ್ಟೆಪ್​​ ಹಾಕುತ್ತಿದ್ದಾರೆ. ಈ ಸಲ ಕಪ್​ ನಮ್ದು, ಜೈ ಆರ್​ಸಿಬಿ ಎಂದು ಘೋಷಣೆಗಳನ್ನು ಕೂಗಿದರು. https://twitter.com/NareshB07879501/status/1929965041379619018?t=t-dOuzXunfaVTcCWIdyvpQ&s=19

Read More

ಬೆಂಗಳೂರು : ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 8ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಕಳೆದ ಎರಡು ವಾರದಿಂದ ಭಾರಿ ಮಳೆಯಾದ ಹಿನ್ನಲೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೀಗ ಜೂ.8ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದೆ.

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭಾರಿ ಅಪಘಾತವನ್ನು ಸಂಭವಿಸಿದ್ದು, ಚಲಿಸುತ್ತಿದ್ದ ಸರ್ಕಾರಿ ಬಸ್ ವೀಲ್ ಬೋಲೆಂಡ್ ತುಂಡಾಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ 49 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಿರ್ಜಾಂ ಸಮೀಪ ಖಂಡಗಾರ ಕ್ರಾಸ್ ನಲ್ಲಿ ಸರ್ಕಾರಿ ಬಸ್ ಅಪಘಾತಕ್ಕೆ ಈಡಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು ವ್ಯಾಪ್ತಿಯ ಖಂಡಕರ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೊನ್ನಾವರದಿಂದ ಕೆಎಸ್ಆರ್ಟಿಸಿ ಬಸ್ ದಾಂಡೇಲಿಗೆ ತೆರಳುತ್ತಿತ್ತು. ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ವ್ಹಿಲ್ ಬೋಲೆಂಡ್ ಕಟ್ಟಾಗಿದೆ. ರಸ್ತೆಯ ಎಡಬದಿಯಿಂದ ಡಿವೈಡರ್ ದಾಟಿ ಬಲಬದಿಯ ಗುಡ್ಡಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಗುಡ್ಡಕ್ಕೆ ಡಿಕ್ಕಿ ಹೊಡೆದ ರಬ್ಬಸಕ್ಕೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. KA 25 3411 ಸಂಖ್ಯೆಯ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

Read More

ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಈಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಮಂಗಳೂರು ಸಿಸಿಬಿ ಪೊಲೀಸರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಜಪೇ ಶಾಂತಿಗುಡ್ಡೆ ನಿವಾಸಿಯಾದ ಅಬ್ದುಲ್ ರಜಾಕ್ ನನ್ನು ಇದೀಗ ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಮುಖ ಆರೋಪಿಗಳ ಜೊತೆ ಸೇರಿದ್ದ ಎನ್ನುವ ಆರೋಪ ಕೇಳಿ ಬಂದಿದೆ ಆರೋಪಿಗಳು ತಲೆಮರೆಸಿಕೊಳ್ಳಲು ಈತನೇ ಸಹಾಯ ಮಾಡಿದ್ದ ಎನ್ನಲಾಗಿದೆ. ಪ್ರಮುಖ ಆರೋಪಿ ಮುಜಾಮಿಲ್ ತಂದೆ ಅಬ್ದುಲ್ ರಜಾಕ್ ಎಂದು ತಿಳಿದುಬಂದಿದೆ.ಮುಜಾಮಿಲ್ ಮಗಳ ಗಂಡ ನೌಷಾದ್ ಜೊತೆ ಸೇರಿ ಸುಹಾಸ ಕೊಲೆಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

Read More

ದಕ್ಷಿಣಕನ್ನಡ : ಇತ್ತೀಚಿಗೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ಇದೀಗ ತಲೆಮರಿಸಿಕೊಂಡಿದ್ದ ಮತ್ತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಹೌದು ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೇಜಾಕ್ಷ ಮತ್ತು ಅಭಿನ್ ರೈ ಎನ್ನುವ ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Read More

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆ ಆಗುತ್ತದೆ ಎಂಬ ಆತಂಕದಲ್ಲಿ ತನ್ನ ಗಂಡ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪದಡಿ ಆರೋಪಿ ಚೈತ್ರಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಚೈತ್ರಾ ಎಂದು ತಿಳಿದುಬಂದಿದೆ.ಕೆರಳೂರು ಗ್ರಾಮದ ಗಜೇಂದ್ರ ಅವರು 11 ವರ್ಷಗಳ ಹಿಂದೆ ಚೈತ್ರಾಳನ್ನು ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. 3 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಗಂಜೇಂದ್ರ ಅವರೊಂದಿಗೆ ಜಗಳ ತೆಗೆಯುತ್ತಿದ್ದ ಚೈತ್ರಾ, ಗಂಡ, ಮಕ್ಕಳಿಗೆ ಬೈಯುತ್ತಿದ್ದಳು. ಈ ಮಧ್ಯೆ ಚೈತ್ರಾಳಿಗೆ, ಪುನೀತ್ ಎಂಬಾತನ ಜೊತೆ ಅನೈತಿಕ ಸಂಬಂಧ ಬೆಳೆದಿತ್ತು. ಈ ವಿಚಾರವನ್ನು ಚೈತ್ರಾಳ ತಂದೆ- ತಾಯಿಗೆ ತಿಳಿಸಿದ್ದು, ರಾಜಿ ಪಂಚಾಯ್ತಿ ಮಾಡಲಾಗಿತ್ತು. 2024 ರಿಂದ ಚೈತ್ರಾಳಿಗೆ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು. ಇದಕ್ಕೆ ಗಂಡ, ಮಕ್ಕಳು, ಅತ್ತೆ, ಮಾವ ತೊಂದರೆ ಆಗುತ್ತಾರೆ ಎಂದು…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು ಪೈಪ್ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಮತ್ತು ಅವರ ಸಿಟಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ನಡೆದಿದೆ. ಹೌದು ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನಪ್ಪಿದ್ದಾರೆ. ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ಚೇತನ್ ಜಾಧವ (35) ಎನ್ನುವವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಚೇತನ್ ಜಾಧವ್ ಮೃತ ದುರ್ದವಿ ಎಂದು ತಿಳಿದು ಬಂದಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಗುತ್ತಿಗೆಯನ್ನು L&T ಕಂಪನಿ ಗುತ್ತಿಗೆ ಪಡೆದಿದ್ದು, ಅದರ ನಿರ್ಲಕ್ಷದಿಂದ ದುರಂತ ಸಂಭವಿಸಿದೆ. ಮುಂಜಾಗ್ರತ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಸುತ್ತಿದೆ ಎಂದು ಕಂಪನಿಯ ವಿರುದ್ಧ ಆರೋಪ ಕೇಳಿ ಬಂದಿದೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಇಂದು ವಿವಿಧ ಕಾಮಗಾರಿಗಳ ಬಿಲ್ ಪಾಸ್ ಮಾಡುವ ಬಗ್ಗೆ ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಜೆಸ್ಕಾಂ ಇಂಜಿನಿಯರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದೆ. ಹೌದು ವಿದ್ಯುತ್ ಹೆಚ್ಚುವರಿ ಟಿಸಿ, ಲೈನ್ ಮೈಂಟೆನನ್ಸ್ ಹೊಸ ಟಿಸಿಗಳು ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳು ಪಾಸ್ ಮಾಡೋದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೆಸ್ಕಾಂ ಇಂಜಿನಿಯರ್‌ರೊಬ್ಬರು ಇನ್ನು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಶೇಖರ್ ಬಹುರೂಪಿ ಎಂಬಾತರೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದುಬಂದಿದೆ. ಜೇವರ್ಗಿಯ ಕಾಂಟ್ರಾಕ್ಟರ್ ಸಾಯಬಣ್ಣ ಪೂಜಾರಿ ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ಚುರುಕು ಕಾರ್ಯಾಚರಣೆಯಲ್ಲಿ ಆರೋಪಿ ಇಂಜಿನಿಯ‌ರ್ ಶೇಖ‌ರ್ ಅವರನ್ನು 2 ಲಕ್ಷ ರೂಪಾಯಿ ಹಣ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು…

Read More