Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತದೆ. ಪ್ರತಿವರ್ಷ ಈ ಒಂದು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ. ನಿನ್ನೆ ತಾನೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದರು. ಇದೀಗ ಹೋರಿ ತಿವಿದು ಮತ್ತೊರ್ವ ಯುವಕ ಸಾವನ್ನಪ್ಪಿದ್ದಾನೆ. ಹೌದು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮತ್ತೊಂದು ದುರಂತವಾಗಿದ್ದು ಹಾವೇರಿ ಜಿಲ್ಲೆಯಲ್ಲಿ ಹೋರಿ ತೀವಿದು ಮತ್ತೊಬ್ಬ ಯುವಕ ಸಾವನಪ್ಪಿದ್ದಾನೆ. ತಿಳುವಳ್ಳಿ ಗ್ರಾಮದಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ.ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೋರಿ ತೆಗೆದು ಭರತ್ (22) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಹೋರಿ ಹಬ್ಬ ನೋಡಲು ಹೋಗಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ.
ಬೆಂಗಳೂರು : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯಾಗಿರುವ ಪತಿ ಮಹೇಂದ್ರ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 29ನೇ ACMM ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಲ್ಲಿ ಕೃತಿಕಾ ರೆಡ್ಡಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪಾಪಿ ಪತಿ ಮಹೇಂದ್ರ ಕೃತಿಕಾಳನ್ನು ಕೊಂದ ನಂತರ ವಾಟ್ಸ್ ಅಪ್ ನಲ್ಲಿ ‘i have killed krutika’ ಎಂದು ಮೆಸೇಜ್ ಮಾಡಿರೋದು ಬೆಳಕಿಗೆ ಬಂದಿದೆ. ಇದೀಗ ಆರೋಪಿಪತಿಯನ್ನು ಪೊಲೀಸರು ಬೆಂಗಳೂರಿನ 29 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದು ವಿಚಾರಣೆ ಬಳಿಕ ಜಡ್ಜ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಪ್ರಕರಣ ಹಿನ್ನೆಲೆ? ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ…
ಬೆಂಗಳೂರು : ಬಿಗ್ ಬಾಸ್ ಮನೆಗೆ ಪರಿಸರ ನಿಯಮ ಉಲ್ಲಂಘನೆಯಿಂದ ಬೀಗ ಜಡಿದ ಕೇಸ್ ಮಾಸೋ ಮುನ್ನವೇ, ಇದೀಗ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.ಈ ಸಂಬಂಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಎಂಬುವರು ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಶ್ವಿನಿಗೌಡ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದೂರಿನಲ್ಲಿ ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ. ಅಷ್ಟಕ್ಕೂ ಅಶ್ವಿನಿ ಗೌಡ ಅಂದಿದ್ದಾದ್ರು ಏನು ಇಲ್ಲಿದೆ ವಿಡಿಯೋ https://twitter.com/ColorsKannada/status/1979012661393133821?t=lVrnhfvq-nOWR0d_-nfZMw&s=19
ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ 2 ಕೋಟಿ 50 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ ಇಬ್ಬರು ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ. 1 ಕೆಜಿ 47 ಗ್ರಾಂ MDMA ಕ್ರಿಸ್ಟಲ್ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಬ್ಬಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡ್ಯೂರೋ ಮ್ಯೂಚೆಲ್, ಇಬ್ಯು ಸ್ಯಾಮ್ಯೂಯೇಲ್ ಚೆಕುಮೂವ ಬಂಧಿತ ವಿದೇಶಿ ಪ್ರಜೆಗಳು ಎಂದು ತಿಳಿದುಬಂದಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಬೆಳಗಾವಿ : ಪತಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆ ಅನ್ನೋದು ಲೆಕ್ಕಿಸದೆ ಪತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡ ಗ್ರಾಮದಲ್ಲಿ ನಡೆದಿದೆ. ಹೌದು ಗಂಡನ ಅನೈತಿಕ ಸಂಬಂಧವನ್ನು ಪತ್ನಿ ರಾಜಶ್ರೀ ಪ್ರಶ್ನೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದಕ್ಕೆ ಗಂಡನ ಸಂಬಂಧಿಕರು ರಾಜಶ್ರೀ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. 4 ದಿನಗಳ ಹಿಂದೆ ಇದೆ ವಿಷಯಕ್ಕೆ ಇಬ್ಬರ ಮಧ್ಯ ಗಲಾಟೆ ಆಗಿತ್ತು. ಪತ್ನಿ ರಾಜಶ್ರೀ ಹಾಗು ಆಕೆಯ ತಾಯಿಯ ಮೇಲೆ ಹಲ್ಲೆ ನಡೆದಿದೆ. ಪತಿ ರಾಕೇಶ್ ಹಾಗು ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಒಳಗಾದ ರಾಜಶ್ರೀ ಹಾಗು ತಾಯಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆಯಾಗೋದಾಗಿ ನಂಬಿಸಿ, ಯುವಕ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ವೇಳೆ ಮತಾಂತರ ಆಗಲ್ಲ ಎಂದಿದ್ದಕ್ಕೆ ಮದ್ವೆಗೆ ಇದೀಗ ಯುವಕ ನಿರಾಕರಣೆ ಮಾಡಿದ್ದಾನೆ. ಈ ವೇಳೆ ಯುವಕ ಮತ್ತೊರ್ವ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಈ ಕುರಿತು ಪ್ರಿಯಕರ ಮೊಹಮ್ಮದ್ ಇಶಾಕ್ ವಿರುದ್ಧ ದೂರು ನೀಡಲಾಗಿದೆ. ಸಂತ್ರಸ್ತ ಯುವತಿ ದೂರು ದಾಖಳಿಸಿದ್ದಾಳೆ. ಬೆಂಗಳೂರಿನ HSR ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಸಿದ್ದು, ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್ಪಿ ಸಭೆ ಕರೆಯುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಹೈಕಮಾಂಡ್ ಸಂದರ್ಭ ಬಂದಾಗ ಸಿಎಲ್ಪಿ ಕರೆಯುತ್ತಾರೆ. ಆಗ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್ಗೆ ವರದಿ ಕೊಡುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ. ಇದನ್ನು ಶಾರ್ಟ್ ಕಟ್ ಆಗಿ ಹೇಗೆ ಮಾಡುತ್ತಾರೆ ಹೇಳಿ?. ನಾನು, ಸತೀಶ್, ಮಹದೇವಪ್ಪ ಕಾಫಿ ಕುಡಿಯುಲು ಸೇರಿದ್ವಿ. ಇದರ ಹಿಂದೆ ಬೇರೆ ಏನೂ ಇಲ್ಲ ಎಂದರು. ನಮ್ಮ ಸುತ್ತೋಲೆಯಲ್ಲಿ ಆರ್‌ಎಸ್‌ಎಸ್ ಪದ ಬಂದಿಲ್ಲ. ಆರ್‌ಎಸ್‌ಎಸ್ ಅನ್ನು ಇಟ್ಕೊಂಡು ಆದೇಶ ಮಾಡಿಲ್ಲ. ಇದು ಎಲ್ಲರಿಗೂ ಅನ್ವಯವಾಗುತ್ತದೆ. ಸಂಘರ್ಷ ಆಗಬಾರದು ಅಂತ ನಿಯಮ ಹಾಕಿದ್ದೇವೆ. ಶಾಲಾ, ಕಾಲೇಜಿಗೆ ತೊಂದರೆ ಆಗಬಾರದು. 2013ರಲ್ಲಿ…
ಹಾವೇರಿ : ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಪ್ರತಿವರ್ಷ ದೀಪಾವಳಿಯಂದು ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿ ಬಲಿಪಾಡ್ಯಮಿಯಂದು ದನ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸುತ್ತದೆ. ಈ ವೇಳೆ ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖರ್ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಾಸನ : ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನ ಅಧಿದೇವತೆ, ಐತಿಹಾಸಿಕ ಹಾಸನಾಂಬೆ ದರ್ಶನ ಸಂಪನ್ನಗೊಂಡಿದೆ. ನಿನ್ನೆ ಸಂಜೆ 5 ಗಂಟೆಗೆ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಬಂದ್ ಆಗಿದ್ದು, ಕೊನೇ ಕ್ಷಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಓಡೋಡಿ ಬಂದು ದೇವರ ದರ್ಶನ ಪಡೆದರು. ಇನ್ನು ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ಅದ್ದೂರಿಯಾಗಿ ತೆರೆ ಬಿದ್ದಿದೆ. ಹಾಸನಾಂಬೆ ಗರ್ಭಗುಡಿಯ ಬಾಗಿಲನ್ನು ಕ್ಲೋಸ್ ಮಾಡಲಾಗಿದೆ. ದೇಗುಲದಲ್ಲಿ ದೀಪ ಇಟ್ಟು ಅರ್ಚಕರು ಬಾಗಿಲು ಮುಚ್ಚಿದ್ದಾರೆ. ದೇವಿಯ ಅಲಂಕಾರ ತೆರವಾದ ಬಳಿಕ ವಿಶ್ವರೂಪದ ದರ್ಶನ ಆಗಲಿದೆ. ವಿಶ್ವರೂಪದ ಕ್ಷಣದ ಬಳಿಕ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಯಿತು. ಅಕ್ಟೋಬರ್ 9 ರಿಂದ ಭಕ್ತರಿಗೆ ಹಾಸನಾಂಬೆ ದೇವಿ ದರ್ಶನ ನೀಡಿದ್ದಳು. ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಈವರೆಗೆ ಒಟ್ಟು 26 ಲಕ್ಷ ಜನರು ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿತ್ತು.…
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…













