Author: kannadanewsnow05

ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ…

Read More

ವಿಜಯಪುರ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪ್ರಿಯ ನಾಯಕರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬಳಿಕ ರಾಜ್ಯದಲ್ಲಿ ಮತ್ತೋರ್ವ ಜನಪ್ರಿಯ ನಾಯಕ ಎಂದರೆ ಅದು ನಾನು ಎಂದು ವಿಜಯಪುರದಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಈ ಒಂದು ಹೇಳಿಕೆ ನೀಡಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಚ್ಚಾಟನೆಯ ಬಳಿಕ ನನ್ನ ಜನಪ್ರಿಯತೆ ಉತ್ತುಂಗಕ್ಕೆ ಏರಿದೆ. ಯತ್ನಾಳ್ ಮುಖ್ಯಮಂತ್ರಿ ಆದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ನೆಮ್ಮದಿಯ ಜೀವನ ಮಾಡಬಹುದೆಂಬ ವಾತಾವರಣ ಜನರಲ್ಲಿದೆ ಎಂದು ಬಿಜೆಪಿ ಉಚ್ಛಾಟಿಕ ಶಾಸಕ ಯತ್ನಾಳ್ ಹೇಳಿಕೆ ನೀಡಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಬಳಿಕ ನಾನೇ ಜನಪ್ರಿಯ ನಾಯಕ. ಈ ಕುರಿತು ಗುಪ್ತಚರ ವರದಿ ಸಿದ್ದರಾಮಯ್ಯ ಅವರ ಬಳಿಗೆ ಇದೆ. ನಾನು ಬಿಜೆಪಿ ತತ್ವ ಸಿದ್ಧಾಂತ ಬಿಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾನೇ. ವಿಜಯಪುರದ ಬಿಜೆಪಿ ಅಭ್ಯರ್ಥಿ ಆಗಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ ಮುಂದಿನ ಚುನಾವಣೆಯಲ್ಲಿ ವಿಜಯಪುರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ತಿಳಿಸಿದರು.

Read More

ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಳಿಕ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯು ಇದೀಗ ಶಾಸಕರಾದಂತಹ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ. ವಿಜಯಪುರ ಶಾಸಕ ಯತ್ನಾಳ್ ಅವರು, ವಿಜಯಪುರದ ಬಿಜೆಪಿ ಅಭ್ಯರ್ಥಿಯಾಗಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ 2028ರ ವಿಧಾನಸಭಾ ಚುನಾವಣೆಗೆ ವಿಜಯಪುರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯಪುರ ಬಿಜೆಪಿ ಅಭ್ಯರ್ಥಿ ಆಗಲು ಕೆಲವರ ಯತ್ನ ನಡೆಯುತ್ತಿದೆ. ಈ ವಿಚಾರವಾಗಿ ಶಾಸಕ ಯತ್ನಾಳ ಕಿಡಿಕಾರಿದ್ದು, ಮುಂದಿನ ಚುನಾವಣೆಯಲ್ಲಿ ನಾನೇ ಬಿಜೆಪಿಯ ಅಭ್ಯರ್ಥಿ ಎಂದು ಶಾಸಕ ಬಸನಗೌಡ ಪಾಟೀಲ ಭವಿಷ್ಯ ನುಡಿದಿದ್ದಾರೆ. ನಾನೇ ಬಿಜೆಪಿಯ ಅಭ್ಯರ್ಥಿ, ಅವರಿಗೆ ಬಿಳಿ ಬಟ್ಟೆ ಬಿಚ್ಚಿಡಿ ಎಂದು ಹೇಳಿ. ಮೊದಲು ಜೀನ್ಸ್ ಪ್ಯಾಂಟ್ ಹಾಕಿಕೊಂಡು ಓಡಾಡುತ್ತಿದ್ದರು. ಈಗಲೂ ಜೀನ್ಸ್ ಪ್ಯಾಂಟ್ ಧರಿಸಿ ಓಡಾಡಿ ಎಂದು ಹೇಳಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ತಮ್ಮದೇ ಪಕ್ಷದವರಿಗೆ ತಿರುಗೇಟು ನೀಡಿದ್ದಾರೆ.

Read More

ದಕ್ಷಿಣಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ ಯುವಕನ ಹತ್ಯೆಗೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ. ಹೌದು ದಕ್ಷಿಣ ಕನ್ನಡದಲ್ಲಿ ಯುವಕನನ್ನು ಹತ್ಯೆಗೈಯಲು ಯತ್ನಿಸಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವಕನೊಬ್ಬನನ್ನು ಹತ್ಯೆಗೆ ಯತ್ನಿಸಲಾಗಿದೆ. ಪಿಕಪ್ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ. ಕಾಂಬೋಡಿಯ ಇರಾಕೋಡಿ ಬಳಿ ವಾಹನ ಚಾಲಕ ಹನೀಫ್ ಮೇಲೆ ಹಲ್ಲೆ ನಡೆಸಲಾಗಿದೆ. ಹನೀಫ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಕೊಳತ್ತಮಜಲು ನಿವಾಸಿ ಹನೀಫ್ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ. ಚಾಲಕ ಹನೀಫ್ ಮರಳು ಅನ್ಲೋಡ್ ಮಾಡುತ್ತಿದ್ದಾಗ ದಾಳಿ ಮಾಡಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರಿಂದ ತಲ್ವಾರ್ ನಿಂದ ಹನೀಫ್ ಮೇಲೆ ದಾಳಿ ನಡೆದಿದೆ. ಹನೀಫ್ ಜೊತೆಗಿದ್ದ ರಹಿಮ್ ಮೇಲು ಹಳೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ…

Read More

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. ಈ ವಿಚಾರವಾಗಿ st ಸೋಮಶೇಖರ್ ಅವರು ಪ್ರತಿಕ್ರಿಯೆ ನೀಡಿ, ಡಿಸಿಎಂ ಅಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ಎಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್ ಡಿಕೆ ಶಿವಕುಮಾರ್ ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಸಹಕಾರ ಕ್ಷೇತ್ರದಲ್ಲಿ ನಾನು ಬೆಳೆಯಲು ಡಿಕೆ ಶಿವಕುಮಾರ್ ಕಾರಣ. ಉತ್ತರಹಳ್ಳಿ ಟಿಕೆಟ್ ಸಿಗಲು ಡಿಕೆ ಶಿವಕುಮಾರ್ ಅವರೇ ಕಾರಣ. ಮಲ್ಲಿಕಾರ್ಜುನ ಖರ್ಗೆ ಜಿ. ಪರಮೇಶ್ವರ್ ಯಶವಂತಪುರದ ಕ್ಷೇತ್ರದ ಟಿಕೆಟ್ ಕೊಡಿಸಿದರು. ಹಿಂದೆ ಕಾಂಗ್ರೆಸ್ ನಲ್ಲಿದ್ದ ಕಾರಣಕ್ಕೆ ಅನುದಾನ ಕೇಳುವ ಕೆಲಸ ಮಾಡಿದೆ. ಅದರಿಂದಾಗಿ ಇವರು ಪಕ್ಷಕ್ಕೆ ಮುಜುಗರ ಆಗುತ್ತೆ ಎನ್ನುವುದಾದರೆ, ರೇಪ್ ಏಡ್ಸ್ ಇಂಜೆಕ್ಷನ್ ಯಾವುದು ಮುಜುಗರ ಅಲ್ಲವೇ? ಕ್ಷೇತ್ರದ ವಿಚಾರ ಸರಿಪಡಿಸದಿದ್ದರೆ ಪಕ್ಷದಲ್ಲಿ…

Read More

ಬೆಂಗಳೂರು : ಬಿಜೆಪಿಯವರು ಮೋಸ್ಟ್ ಕರಪ್ಟ್ ಪೀಪಲ್ಸ್ ಆನ್ ಅರ್ಥ್ ಎಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಬೆಳೆದಿದ್ದರೆ ಅದಕ್ಕೆ ಬಿಜೆಪಿ ಮತ್ತು RSS ಕಾರಣ ಎಂದು ಗಂಭಿರವಾಗಿ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮೋಸ್ಟ ಕರಪ್ಟ್ ಪೀಪಲ್ ಆನ್ ಅರ್ಥ್. ಯಾರಾದರೂ ಬಹಳ ಭ್ರಷ್ಟರು ಇದ್ದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯಲ್ಲಿ. ಇವತ್ತು ರಾಜ್ಯದಲ್ಲಿ ಇಷ್ಟೊಂದು ಮಟ್ಟದಲ್ಲಿ ಭ್ರಷ್ಟಾಚಾರ ಬೆಳೆಯುವುದಕ್ಕೆ ಬಿಜೆಪಿ ಆರ್ ಎಸ್ ಎಸ್ ಕಾರಣ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಷ್ಟು ಕಾಲ ಭ್ರಷ್ಟಾಚಾರ ಬೆಳೆದಿಲ್ಲ. ಬಿಜೆಪಿಯವರು ಬಂಡವಾಳ ಶಾಹಿಗಳು ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರ ಬೆಳೆಯಿತು. ಬಿಜೆಪಿಯವರು ಮೋಸ್ಟ್ ಕರೆಕ್ಟ್ ಪೀಪಲ್ಸ್ ಒನ್ ಅರ್ಥ್ ಎಂದು ತೀವ್ರ ವಾಗ್ದಾಳಿ ನಡೆಸಿದರು.

Read More

ವಿಜಯಪುರ : ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ರಕ್ಷಿಸಲು ಬಿಎ ವಿಜಯೇಂದ್ರ ಯತ್ನಿಸಿದ್ದರು ಎಂದು ಹೊಸ ಬಾಂಬ್ ಸಿಡಿಸಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಚಾಟಿಸಿದಂತೆ ಎಸ್ ಟಿ ಸೋಮಶೇಖರ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಉಚ್ಛಾಟಿಸಲಾಗಿದೆ. ಇವರಿಬ್ಬರನ್ನು ರಕ್ಷಿಸಲು ಬಿ.ವೈ ವಿಜಯೇಂದ್ರ ಬಹಳವಾಗಿ ಯತ್ನಿಸಿದ್ದರು. ಎಸ್ ಟಿ ಸೋಮಶೇಖರ್ ಹೆಬ್ಬಾರ್ ಬಿವೈ ವಿಜಯೇಂದ್ರಗೆ ಬಹಳ ಆತ್ಮೀಯರಾಗಿದ್ದರು. ಆದರೆ ಬಿ ವೈ ವಿಜಯೇಂದ್ರ ಪ್ರಯತ್ನ ವಿಫಲ ಆಗಿದೆ. ಕೇವಲ ಯತ್ನಾಳರನ್ನು ಹೊರಹಾಕಬೇಕು ಅಂತ ಪಿತೂರಿ ನಡೆಸಲಾಗಿತ್ತು. ಆದರೆ ಈಗ ಇಬ್ಬರನ್ನು ಉಚ್ಚಾಟಿಸಿದ ಕೇಂದ್ರೀಯ ಶಿಸ್ತು ಸಮಿತಿ ಬಿವೈ ವಿಜಯೇಂದ್ರಗೆ ಸಂದೇಶ ನೀಡಿದೆ.

Read More

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ, ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.ಈ ವಿಚಾರವಾಗಿ ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. 2028ರ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಇನ್ನೂ 10 ರಿಂದ 12 ಸೀಟುಗಳು ಖಾಲಿ ಆಗುತ್ತವೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕವಾದ ಹೇಳಿಕೆ ನೀಡಿದರು. ಈ ವಿಚಾರವಾಗಿ ಬೆಂಗಳೂರಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಬೆಳಿಗ್ಗೆ 10:30ಕ್ಕೆ ಮೊಬೈಲ್ ನೋಡ್ತಾ ಇದ್ದೆ ಅವಾಗ ನನಗೆ ನೋಟಿಸ್ ಬಂದಿತ್ತು. ಉಚ್ಚಾಟನೆ ಮಾಡಿ ಹೈಕಮಾಂಡ್ ಒಳ್ಳೆಯ ನಿರ್ಧಾರ ಮಾಡಿದೆ. ಅಮಾವಾಸ್ಯೆಯ ದಿನ ಒಳ್ಳೇದು ಮಾಡಿದ್ದಾರೆ ಸಂತೋಷ. ಚುನಾವಣೆ ವೇಳೆ ಬಿಜೆಪಿಯ ಇನ್ನೂ 10-12 ಸೀಟ್ ಖಾಲಿ ಆಗಲಿವೆ. ಚುನಾವಣೆ ಘೋಷಣೆ ಆದಾಗ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಉದ್ಘಾಟನೆಗೂ ಮುನ್ನ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿತ್ತು. ಪಕ್ಷ…

Read More

ಉತ್ತರಕನ್ನಡ : ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಉಚ್ಚಾಟನೆ ವಿಚಾರವಾಗಿ, ನನ್ನ ಸೋಲಿಸಲು ಹುನ್ನಾರ ಮಾಡಿದವರನ್ನು ಬಿಟ್ಟು ನನ್ನನ್ನು ಉಚ್ಚಾಟಿಸಲಾಗಿದೆ. ಪಕ್ಷ ಯಾವುದೇ ನಿರ್ಣಯ ತೆಗೆದುಕೊಂಡರು ನಾನು ಸ್ವಾಗತ ಮಾಡುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶಾಸಕ ಶಿವರಾಂ ಅಬ್ಬಾರ್ ಪ್ರತಿಕ್ರಿಯೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಉಚ್ಚಾಟನೆ ಮಾಡಿರುವ ಆದೇಶದ ಪ್ರತಿ ತಲುಪಿದೆ. ಕೆಲವರು ಅನೇಕ ತಪ್ಪು ಮಾಡಿದ ಬಳಿಕ ಉಚ್ಚಾಟನೆ ಮಾಡಿದರು. ಕೆಲವರು ತಪ್ಪು ಮಾಡಿದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನಾನು ತಪ್ಪೇ ಮಾಡಿಲ್ಲ ಉಚ್ಚಾಟನೆಯನ್ನು ಯಾಕೆ ನಿರೀಕ್ಷಿಸಲಿ? ನನ್ನ ಸೋಲಿಸಲು ಹುನ್ನಾರ ಮಾಡಿದರು. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಾನು ಶಾಸಕ ಆಗಬಾರದು ಅಂತ ಇದ್ದರೆ ಬಿಫಾರಂ ಕೊಡಬಾರದಿತ್ತು. ಬಿಫಾರಂ ಕೊಟ್ಟು ಸೋಲಿಸುವ ಕೆಲಸ ಮಾಡಿದ್ದು ಎಷ್ಟು ಸರಿ? ಇದು ಚಿಕ್ಕ ವಿಷಯ ಅಂತ ತಿಳಿದುಕೊಳ್ಳಬೇಡಿ. ನನ್ನನ್ನು ಸೋಲಿಸಲು ಹುನ್ನಾರ ಮಾಡಿದವರನ್ನು ಉಚ್ಚಾಟಿಸುವ ಬದಲು ಇನ್ನಷ್ಟು ಎತ್ತರದ ಸ್ಥಾನ…

Read More

ಬೆಂಗಳೂರು : ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದರೆ ವಾಹನ ಟೋಯಿಂಗ್ ಆರಂಭಿಸುವುದಿಲ್ಲ ಎಂದು ಇಂದು ಬೆಳಿಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದರು. ಅದಾದಮೇಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭಿಸಲಾಗುತ್ತದೆ ಎಂದು ಸಹ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರುವಾಗಲಿದೆ. ಟೋಯಿಂಗ್‌ ಆರಂಭದ ಬಗ್ಗೆ ಕೆಲ ದಿನಗಳಿಂದಲೇ ಚರ್ಚೆ ನಡೆಯುತ್ತಿತ್ತು. ಈಗ ಸರ್ಕಾರವೇ ಅಧಿಕೃತವಾಗಿ ಟೋಯಿಂಗ್‌ ಆರಂಭವಾಗುವ ಬಗ್ಗೆ ತಿಳಿಸಿದೆ. ಬಾಡಿಗೆ ಟೋಯಿಂಗ್ ವಾಹನ ಬಳಸದೇ ಇಲಾಖೆಯ ವಾಹನ ಬಳಸಿಕೊಂಡು ಟೋಯಿಂಗ್ ನಡೆಸಲು ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

Read More