Author: kannadanewsnow05

ಕೊಲ್ಕತ್ತ : ಕೊಲ್ಕತ್ತಾದಲ್ಲಿ ಇತ್ತೀಚೆಗೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ನಂತರ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆಯೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಪೊದೆಯೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಗ್ರಾಮದ ರಸ್ತೆ ಬದಿಯ ಪೊದೆಯಲ್ಲಿ ಇಂದು ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಆ ಶವದ ಮೇಲೆ ಹಲವಾರು ಗಾಯಗಳಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮೊದಲು ಶವವನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆನಂದಪುರದ ಪೊದೆಗಳ ಹಿಂದೆ ಅಪರಿಚಿತ ಮಹಿಳೆಯ ಶವವನ್ನು ಪತ್ತೆ ಮಾಡಿದ ಸ್ಥಳೀಯ ನಿವಾಸಿಗಳು ಆಕೆಯನ್ನು ಗುರುತಿಸಲು ಸಾಧ್ಯವಾಗದ ಕಾರಣ ಅವರು ಆ ಪ್ರದೇಶದವರಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದಾರೆ.ಈ ಬಗ್ಗೆ ತನಿಖೆ ಮುಂದುವರಿದಿದ್ದು,…

Read More

ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಾಗೂ ಟ್ರಾಫಿಕ್ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರ ವಹಿಸುವ ಕೆಲಸ ಆಗುತ್ತಿದೆ. ಅಲ್ಲದೆ ರೌಡಿಶೀಟರ್ ಗಳ ಬಗ್ಗೆಯೂ ಗಮನಹರಿಸುತ್ತೇವೆ.ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು ಎಂದು ತಿಳಿಸಿದರು. ಬಿಬಿಎಂಪಿಯ 63 ಉಪ ವಿಭಾಗಗಳಲ್ಲಿ ತೆರೆದ…

Read More

ಚಿಕ್ಕಬಳ್ಳಾಪುರ : ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಪ್ರಕರಣ ಘಟನೆ ಮಾಸುವ ಮುನ್ನವೇ, ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರದಲ್ಲಿ 65 ವರ್ಷದ ವೃದ್ಧೆಯ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹೌದು ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಇರ್ಫಾನ್ ಎನ್ನುವ ಯುವಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ 24 ವರ್ಷದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಈ ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಪನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಅವರು ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More

ಬೆಂಗಳೂರು : ಹಗರಣಕ್ಕೆ ಸಂಬಂಧಿಸಿದಂತೆ ಒಂದಿಲ್ಲೊಂದು ಹೊಸ ಟ್ವಿಸ್ಟ್​ಗಳು ಹೊರಬರುತ್ತಿವೆ. ಇದೀಗ ಅಕ್ರಮ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಎಂ ಸ್ಪಷ್ಟೀಕರಣ ನೀಡಿ ಬಿಡುಗಡೆಗೊಳಿಸಿದ ದಾಖಲೆ ತಿದ್ದಲಾಗಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್, ದಾಖಲೆ ತಿದ್ದುವಂತಹ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ ಎಂದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದಾಖಲೆ ತಿದ್ದುವಂತಹ ಪರಿಸ್ಥಿತಿ ಬಂದಿಲ್ಲ. ದಾಖಲೆ ತಿದ್ದುವಂತಹ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. ಮುಡಾ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಬೇರೆ ಏನೋ ಆಗಿದೆ ಅನ್ನೋದು ಅಲ್ಲ, ಏನೂ ಮಿಸ್ಟೇಕ್ ಆಗಲ್ಲವಾ ಎಂದು ಪ್ರಶ್ನಿಸಿದ್ದಾರೆ. ಜಮೀನಿಗೆ ಪರಿಹಾರ ನೀಡಿಲ್ಲ, ಅಷ್ಟೇ ವಿಸ್ತೀರ್ಣದ ಜಮೀನು ಅಂತಾ ಹೇಳಿದ್ದಾರೆ. ಅಲ್ಲಿ ವರ್ಷ ಮಿಸ್ಟೇಕ್ ಆಗಿರಬಹುದು. ಇಲ್ಲವೇ ಸಮಾನಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ. ಬಹಳ ಸ್ಪಷ್ಟವಾಗಿ ಹೇಳಿದ್ದಾರೆ, ವಿಜಯನಗರ ಲೇಔಟ್ ಅಂತಾ ಎಲ್ಲಿ ಬರೆದಿದ್ದಾರೆ. ಸಮಾನಂತರ ಜಾಗ ಅಂತಾ ಬರೆದಿದ್ದಾರೆ,…

Read More

ವಿಜಯಪುರ : ಕೇಂದ್ರ ಸಚಿವ HD ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುವ ಪರಿಸ್ಥಿತಿ ಬಂದರೆ ಬಂಧಿಸುತ್ತೇವೆ ಎಂದು ಬೆಳಿಗ್ಗೆ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಹೆಚ್‍ಡಿ ಕುಮಾರಸ್ವಾಮಿ ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದು ಟಾಂಗ್ ನೀಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಬಂಧಿಸಲು ನೂರಲ್ಲ ಒಬ್ಬ ಕಾನ್ಸ್ಟೇಬಲ್ ಸಾಕು ಎಂದು ಮತ್ತೆ ಟಾಂಗ್ ನೀಡಿದ್ದಾರೆ. ಇಂದು ವಿಜಯಪುರ ಜಿಲ್ಲೆಯ ನಿಡಗುಂದಿ ಸಮೀಪ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, HD ಕುಮಾರಸ್ವಾಮಿ ಬಂಧಿಸಲು ನೂರು ಸಿದ್ದರಾಮಯ್ಯ ಅಲ್ಲ ಒಬ್ಬ ಕಾನ್ಸ್ಟೇಬಲ್ ಸಾಕು ಎಂದು ತಿರುಗೇಟು ನೀಡಿದರು. ಅರೆಸ್ಟ್ ಮಾಡುವುದು ಯಾರು? ನಾನು ಮಾಡ್ತೀನ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಎಚ್ ಡಿ ಕುಮಾರಸ್ವಾಮಿ ಪ್ರೆಸ್ ಮೀಟ್ ಮಾಡುತ್ತಿದ್ದರ? ಕುಮಾರಸ್ವಾಮಿ ಹಿಟ್ ಅಂಡ್ ರನ್.ಯಾವ ಪ್ರಕರಣವನ್ನು HD ಕುಮಾರಸ್ವಾಮಿ ಲಾಜಿಕಲ್ ಎಂಡ್ ಗೆ…

Read More

ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪುಂಡು, ಪೋಕರಿಗಳು ಕಿತ್ತು ತಿನ್ನುವವರಿಗೆ ಪೊಲೀಸರ ಭಯ ಇಲ್ಲದಂತೆ ಆಗಿದೆ.ಕೆಲಸ ಮಾಡುವ ಡೆಲಿವರಿ ಬಾಯ್ಸ್ ಮೇಲೆ ಇದೀಗ ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ, ಹೊಡೆದು ದರೋಡೆ ಮಾಡಿರುವ ಘಟನೆ ಕೊನೆನೇ ಅಗ್ರಹಾರದ ವಿನಾಯಕ ನಗರದ ಬಿ ಬ್ಲಾಕ್ ಅಲ್ಲಿ ನಡೆದಿದೆ. ಹೌದು ನಡು ರಸ್ತೆಯಲ್ಲಿ ಡೆಲಿವರಿ ಬಾಯ್ಸ್ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ. ಒಂದೇ ಕಡೆ ಎರಡು ದರೋಡೆ ಮಾಡಿದ್ದರು ಕೂಡ ಪೊಲೀಸರು ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಆಗಸ್ಟ್ 4ರಂದು ಹಾಗೂ 20ರಂದು ಮಧ್ಯರಾತ್ರಿ ಒಂದೇ ಸ್ಥಳದಲ್ಲಿ ದರೋಡೆ ಮಾಡಲಾಗಿದೆ. ಕೋನೆನ ಅಗ್ರಹಾರದ ವಿನಾಯಕ್ ನಗರದ ಬಿ ಬ್ಲಾಕ್ ಅಲ್ಲಿ ನಡೆದಿದೆ. ಜೀವನ್ ಭೀಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬರೆದ ಪತ್ರದಿಂದಲೇ ಸತ್ಯಾಂಶ ಗೊತ್ತಾಗುತ್ತಿದೆ. ಎಂದು ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವತಃ ಸಿದ್ದರಾಮಯ್ಯನವರು ಈ ಒಂದು ಸತ್ಯಾಂಶ ಮರೆಮಾಚಿ ಸುಳ್ಳನ್ನು ಹೇಳುತ್ತಿದ್ದಾರೆ. ಮುಡಾ ಅಕ್ರಮದಲ್ಲಿ ಸಿಎಂ ಮತ್ತು ಅವರ ಕುಟುಂಬ ಭಾಗಿಯಾಗಿದೆ. 2001ರಲ್ಲಿ ಮುಡಾ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಸಿಎಂ ಬಾಮೈದ 2004ರಲ್ಲಿ ಹೇಗೆ ಕೃಷಿಭೂಮಿ ಕರಿಸುತ್ತಾರೆ? ಸಿಎಂ ಪತ್ನಿ ಪಾರ್ವತಿ ಮುಡಾಗೆ ಬರೆದಿರುವ ಪತ್ರ ಮಹತ್ವದ್ದಾಗಿದೆ. ಈ ಪತ್ರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಣೆ ನೀಡಲಿ. ಮೇಲ್ನೋಟಕ್ಕೆ ದಾಖಲೆಗಳನ್ನು ಗಮನಿಸಿದರೆ ಆರೋಪ ಸಾಬೀತಾಗುತ್ತಿದೆ ಎಂದು ಬೆಂಗಳೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದರು.

Read More

ಚಿತ್ರದುರ್ಗ : ಖಾಸಗಿ ಶಾಲೆಯಲ್ಲಿ SSLC ತರಗತಿಯಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳು ದಿಢೀರ್ ಆಗಿ ನಾಪತ್ತೆಯಾಗಿದ್ದಾರೆ. ಈ ಒಂದು ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಒಮ್ಮೆಲೇ ಕಾಣೆಯಾಗಿದ್ದನ್ನು ತಿಳಿದ ಪೋಷಕರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಹೌದು ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದ, ಡ್ರೀಮ್ ವರ್ಡ್ ಇಂಟರ್ ನ್ಯಾಷನಲ್‌ ಸ್ಕೂಲ್ ನ ಎಸ್​ಎಸ್​ಎಲ್​ಸಿ ಓದುತ್ತಿದ್ದ 6 ವಿದ್ಯಾರ್ಥಿಗಳಾದ ಶ್ರೇಯಸ್, ಧನುಷ್, ಮನು, ತರುಣ್, ಸಿದ್ದೇಶ್ ಹಾಗೂ ಯಶಸ್ ನಾಪತ್ತೆಯಾಗಿದ್ದಾರೆ. ಈ ಆರು ಜನ ವಿದ್ಯಾರ್ಥಿಗಳು, ಶಾಲೆಯ ವಸತಿ ಶಾಲೆಯಲ್ಲಿದ್ದರು. ಆದರೆ, ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಗಳಿಗಾಗಿ ಹುಡುಕಾಟ ಶುರುವಾಗಿದೆ.

Read More

ಉತ್ತರಕನ್ನಡ : ಜಿಲ್ಲೆಯ ಕಾರವಾರ ನಗರ ಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಬೀಗಿದ್ದು, ಕಾಂಗ್ರೆಸ್ ಮತ್ತೆ ಸೋಲನ್ನೊಪ್ಪಿಕೊಂಡಿದೆ. ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ 19 ಮತಗಳನ್ನು ಪಡೆದರೆ, ಕಾಂಗ್ರೆಸ್ ಕೇವಲ 14 ಮತಗಳನ್ನು ಪಡೆಯಲಷ್ಟೇ ಶಕ್ತವಾಯಿತು. ಹಾಗಾಗಿ ಕಾರವಾರ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾರವಾರ, ಅಂಕೋಲ ಹಾಲಿ ಶಾಸಕ ಸತೀಶ್ ಸೈಲ್ ಗೆ ಇದೀಗ ಭಾರಿ ಮುಖಭಂಗವಾಗಿದೆ. ಕಾರವಾರ ನಗರ ಸಭೆ ಅಧ್ಯಕ್ಷರಾಗಿ ಬಿಜೆಪಿಯ ರವಿರಾಜ್ ಅಂಕೋಲೇಕರ್ ಆಯ್ಕೆಯಾಗಿದ್ದರೆ, ಉಪಾಧ್ಯಕ್ಷರಾಗಿ ಪ್ರೀತಿ ಜೋಶಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯ ಪರ 19 ಮತಗಳು ಚಲಾವಣೆಗೊಂಡವು. ಕಾಂಗ್ರೆಸ್ ಅಭ್ಯರ್ಥಿ ಪರ ಕೇವಲ 14 ಮತ ಚಲಾವಣೆಯಾದವು. ಐದು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಈ ವೇಳೆ ನಗರಸಭೆಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಶಾಸಕಿ ರೂಪಾಲಿ ನಾಯಕ್ ಅವರು ಸನ್ಮಾನಿಸಿ ಹೂಗುಚ್ಛ ನೀಡಿ ಅಭಿನಂದಿಸಿದರು.

Read More

ಬೆಂಗಳೂರು : ಕಂಪನಿ ಒಂದಕ್ಕೆ ಗಣಿಗಾರಿಕೆಗೆ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಯಾವ ಪರಿಸ್ಥಿತಿಯಲ್ಲೂ ಬಂಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನನ್ನನ್ನು ಬಂದಿಸಲು ನೂರು ಸಿದ್ದರಾಮಯ್ಯ ಬರಬೇಕಾಗುತ್ತದೆ ಎಂದು ತಿರುಗೇಟು ನೀಡಿದರು. ಹೌದು ಸಿಎಂ ಸಿದ್ದರಾಮಯ್ಯ ಅವರು HD ಕುಮಾರಸ್ವಾಮಿ ಅವರನ್ನ ಅರೆಸ್ಟ್ ಮಾಡುತ್ತೇವೆ ಅಂತ ಎಲ್ಲವೂ ಹೇಳಿಲ್ಲ.ಆದರೆ ಅರೆಸ್ಟ್ ಮಾಡಬೇಕಾದಂತಹ ಪರಿಸ್ಥಿತಿ ಬಂದರೆ ಅರೆಸ್ಟ್ ಮಾಡುತ್ತೇವೆ. ಯಾವುದೇ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಅಂತಹ ಸನ್ನಿವೇಶ ಸದ್ಯಕ್ಕೆ ಇಲ್ಲ. ಕುಮಾರಸ್ವಾಮಿ ಪಾಪ ಭಯಪಟ್ಟಿಕೊಂಡಿದ್ದಾರೆ. ಗವರ್ನರ್ ಪ್ರಾಸಿಕ್ಯೂಷನ್ ಅನುಮತಿ ಕೊಡುತ್ತಾರೆ ಎಂದು ಭಯಪಟ್ಟಿದ್ದಾರೆ. ಅನುಮತಿ ನಾವು ಕೇಳಿಲ್ಲ ಖಾಸಗಿ ವ್ಯಕ್ತಿನು ಕೇಳಿಲ್ಲ ಅನುಮತಿ ಕೇಳಿರುವುದು SIT ಅಧಿಕಾರಿಗಳು. ಸಾಕ್ಷಿಗಳನ್ನ ಸಂಗ್ರಹಿಸಿ ಆಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದಾರೆ. ಅದರ ಅರ್ಥ ಇವರ ಮೇಲೆ ಸಾಕ್ಷಿಗಳು ಇವೆ ಅಂತ ಅರ್ಥ…

Read More