Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ಹಗರಣ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಭಾರಿ ಸಂಚಲನ ಮೂಡಿಸಿದ್ದು, ಇದರ ಮಧ್ಯ ಯಾದಗಿರಿಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿಯೊಬ್ಬರು ಕೆಲಸ ಮಾಡಿಸಿಕೊಂಡು ಬಿಲ್ ಪಾವತಿಸದೆ ಸತಾಯಿಸಿದ್ದಕ್ಕೆ, ಮನನೊಂದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರದಲ್ಲಿ ನಡೆದಿದೆ. ಹೌದು ದೇವಾಪುರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮ ಪಂಚಾಯಿತಿ ಪಿಡಿಓ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಲಸ ಮಾಡಿಸಿಕೊಂಡು ಹಣ ಪಾವತಿಸದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನನೊಂದು ವಿಶೇಷ ಸೇವಿಸಿ ಯಲ್ಲಪ್ಪ ಅರಳಗುಂಡಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚರಂಡಿ ಸ್ವಚ್ಛತೆ ಹಾಗೂ ಇನ್ನಿತರ ಕಾರ್ಯ ಯಲ್ಲಪ್ಪ ಮಾಡಿಸಿದ್ದ. ದೇವಾಪುರ ಗ್ರಾಮ ಪಂಚಾಯಿತಿ ಪಿಡಿಓ ದೇವೇಂದ್ರಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಸೂಚನೆಯಂತೆ ಯಲ್ಲಪ್ಪ ಕೆಲಸ ಮಾಡಿಸಿದ್ದ. ಸುಮಾರು 1.5 ಲಕ್ಷ ರೂಪಾಯಿ ಖರ್ಚು…
ಬೆಂಗಳೂರು : ಬೆಂಗಳೂರಿನ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಕೊಂಡು ಜೈಲು ಪಾಲಾಗಿದ್ದ ನಟಿ ಹೇಮಾ ಇದೀಗ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದು, ತನಗೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ. ಮಾಧ್ಯಮಗಳು ನನ್ನನ್ನು ಬ್ಲಾಕ್ಮೇಲ್ ಮಾಡಿದ್ದಾರೆ. ಸೆಟಲ್ಮೆಂಟ್ಗೆ ಬನ್ನಿ ಎಂದು ಕರೆದರು. ಕೆಲವು ದೊಡ್ಡವರೇ ಕರೆ ಮಾಡಿ ಸಂಧಾನಕ್ಕೆ ಕರೆದರು ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. ಹೌದು ತೆಲುಗು ಚಿತ್ರರಂಗದ ನಟಿ ಹೇಮಾ ಕೊಲ್ಲ ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದಿದ್ದರು. ಈ ಪಾರ್ಟಿಯಲ್ಲಿ ನಟಿ ಹೇಮಾ ಡ್ರಗ್ಸ್ ಸೇವಿಸಿದ್ದರು ಎಂಬ ಆರೋಪದ ಮೇಲೆ ಬೆಂಗಳೂರು ಪೊಲೀಸರು ಹೇಮಾ ಅವರನ್ನು ಬಂಧಿಸಿದ್ದರು. ನಟಿ ಹೇಮಾಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು, ಬಳಿಕ ಜಾಮೀನು ಪಡೆದು ನಟಿ ಹೊರಬಂದರು. ಪ್ರಕರಣ ನಡೆದು ಸುಮಾರು ಎರಡು ತಿಂಗಳ ಬಳಿಕ ಈಗ ನಟಿ ಹೇಮಾ ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದು ಮಾಧ್ಯಮಗಳ ಮೇಲೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ತಾವು…
ಉತ್ತರಖಂಡ : ಕೋಲ್ಕತ್ತಾದ ಟ್ರೈನಿ ವೈದ್ಯೇಯ ಮೇಲೆ ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಇದೀಗ ಉತ್ತರಖಂಡನಲ್ಲಿ ಬಸ್ ನಲ್ಲಿಯೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ದೆಹಲಿಯಿಂದ ಡೆಹ್ರಾಡೂನ್ಗೆ ತೆರಳಿದ ಸರ್ಕಾರಿ ಬಸ್ನೊಳಗೆ ಬಸ್ ನಿಲ್ದಾಣದಲ್ಲಿಯೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯವೊಂದು ಇಡೀ ದೇಶವೇ ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ. ಹದಿಹರೆಯದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉತ್ತರಾಖಂಡದ ಹರಿದ್ವಾರದ ಬುಗ್ಗವಾಲಾ ನಿವಾಸಿಗಳಾದ ಧರ್ಮೇಂದ್ರ ಕುಮಾರ್ (32) ಮತ್ತು ರಾಜ್‌ಪಾಲ್ (57), ಹರಿದ್ವಾರದ ಭಗವಾನ್‌ಪುರ ನಿವಾಸಿ ದೇವೇಂದ್ರ (52), ಪಟೇಲ್ ನಗರದ ನಿವಾಸಿ ರಾಜೇಶ್ ಕುಮಾರ್ ಸೋಂಕರ್ (38), ನವಾಬ್‌ಗಂಜ್ ನಿವಾಸಿ ರವಿಕುಮಾರ್ (34) ಎಂದು ಗುರುತಿಸಲಾಗಿದೆ.ಇದರಲ್ಲಿ ಬಸ್ ನ ಡ್ರೈವರ್ ಮತ್ತು ಕಂಡೆಕ್ಟರ್ ಕೂಡ ಇದಾರೆ. ಆಗಸ್ಟ್ 12ರಂದು…
ಉತ್ತರಕನ್ನಡ : ನಾಳೆ ಕಾರವಾರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಂಕೋಲಾ ಹಾಗೂ ಕಾರವಾರ ಹಾಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಗೋವಾ ರೆಸಾರ್ಟ್ ರಾಜಕಾರಣ ನಡೆಯುತ್ತಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಜಿ ಶಾಸಕಿ ರೂಪಾಲಿ ನಾಯಕ್ ಪ್ರತಿಷ್ಠೆ ಕಣವಾದ ಈ ಒಂದು ಚುನಾವಣೆಯು, ತಮ್ಮ ಸದಸ್ಯರನ್ನು ಉಳಿಸಿಕೊಂಡು ಇತರರನ್ನು ಸೆಳೆಯಲು ಯತ್ನಿಸಲಾಗುತ್ತಿದೆ. ಕಾಂಗ್ರೆಸ್ ಬಿಜೆಪಿಯಿಂದ ಗೋವಾ ರೆಸಾರ್ಟ್ ರಾಜಕಾರಣ ನಡೆಯುತ್ತಿದೆ. ತಮ್ಮ ಸದಸ್ಯರನ್ನು ಗೋವಾ ರೆಸಾರ್ಟ್ ನಲ್ಲಿರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. 31 ಸದಸ್ಯರ ಬಲದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಸಭೆಯು, ಕಳೆದ ಬಾರಿ ಬಿಜೆಪಿ ಗೆದ್ದಂತೆ ಅಧಿಕಾರ ಹಿಡಿಯಲು ಕಾಂಗ್ರೆಸ್ ಈ ಬಾರಿ ಯತ್ನಿಸುತ್ತಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 4 ಇನ್ನು, ಐವರು ಪಕ್ಷೇತರದವರಾಗಿದ್ದಾರೆ.ಬಿಜೆಪಿ ಜೊತೆಗೆ ಇರುವ ಜೆಡಿಎಸ್ ನಾಲ್ವರು ಪಕ್ಷೇತರರು ಬಿಜೆಪಿಗೆ ಸಂಸದ ಕಾಗೇರಿ ಎಂಎಲ್ಸಿ ಗಣಪತಿ ಉಳ್ವೆಕರ್ ಬೆಂಬಲವಿದೆ.…
ಬೆಂಗಳೂರು : ವೈದ್ಯಕೀಯ ಸಿಬ್ಬಂದಿ ಮತ್ತು ಮಹಿಳೆಯರ ರಕ್ಷಣೆಗೆ ಮುಂದಾಗಿದೆ. ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳಲು ವೈದ್ಯಕೀಯ ಕ್ಷೇತ್ರದಲ್ಲಿ ಭದ್ರತೆ, ಭರವಸೆ ಮೂಡಿಸಲು ಇಂದು ವಿಧಾನಸೌಧದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಟಾಸ್ಕ್ಫೋರ್ಸ್ ತಂಡ ರಚಿಸಲು ತೀರ್ಮಾನಿಸಲಾಗಿದೆ. ಹೌದು ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದಿಂದ ಎಚ್ಚೆತ್ತುಕೊಂಡ ಕರ್ನಾಟಕ ಆರೋಗ್ಯ ಇಲಾಖೆಯು, ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆ ಮತ್ತು ಭದ್ರತೆಗಾಗಿ ಫಿಗರ್ದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ಆರಂಭ ಸಚಿವ ದಿನೇಶ್ ಗುಂಡೂರಾವ್ ವಿಧಾನಸೌಧದಲ್ಲಿ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಮಹಿಳೆಯರ ಭದ್ರತೆಗೆ ಸಿಸಿಟಿವಿ, ಎಮರ್ಜೆನ್ಸಿ ಕಾಲ್, ಪ್ಯಾನಿಕ್ ಬಟನ್, ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕ ಇಟ್ಟುಕೊಳ್ಳುವ ಬಗ್ಗೆ ಸಲಹೆ ನೀಡಲಾಗಿದೆ. ಕಾನೂನುಗಳನ್ನು ಅಧ್ಯಯನ ಮಾಡಿ ಅದರ ಜೊತೆಗೆ ಸಮಿತಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಇನ್ನೊಂದು ತಿಂಗಳಲ್ಲೇ ಟಾಸ್ಕ್ ಫೋರ್ಸ್ ಟೀಂ ರಚನೆ ಮಾಡಲು ತೀರ್ಮಾನ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ತೀವ್ರ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೋರಡಿಸಿದೆ. ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಸಿಎಂ ಬೆಂಬಲಕ್ಕೆ ನಿಂತಿದ್ದು, ನೀವು ಎದೆಗುಂದಬೇಡಿ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಕೂಡ ಸಿಎಂ ಸಿದ್ರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಪರವಾಗಿ ಪಕ್ಕದ ರಾಜ್ಯದ ಮುಖ್ಯಮಂತ್ರಿಗಳು ಅವರ ಬೆನ್ನಿಗೆ ನಿಂತಿದ್ದಾರೆ. ಕೇರಳ, ತಮಿಳುನಾಡು, ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ, ಚರ್ಚಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಅಲ್ಲದೆ ರಾಜ್ಯಪಾಲರ ನಿರ್ಧಾರ ಹಾಗೂ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಕಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣಕನ್ನಡ : ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರಂತಗಳ ಮೇಲೆ ದುರಂತಗಳು ಸಂಭವಿಸುತ್ತಿವೆ. ಹೌದು, ನಿವೃತ್ತ ಶಿಕ್ಷಕನೊಬ್ಬನರನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಲೆ ಗ್ರಾಮದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದ್ದು. ಮಾರಕಸ್ತ್ರಗಳಿಂದ ಕೊಚ್ಚಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆ ಆವರಣದಲ್ಲಿ ಎಸ್ ಪಿ ಬಾಲಕೃಷ್ಣ ಭಟ್ (73) ಭೀಕರವಾಗಿ ಹತ್ಯೆ ಮಾಡಲಾಗಿದೆ.ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.
ಯಾದಗಿರಿ : ಬಲವಂತವಾಗಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಇದೀಗ ಪೊಲೀಸರು ವಶಕ್ಕೆ ಪಡಿಸಿಕೊಂಡಿರುವ ಘಟನೆ ಯಾದಗಿರಿ ನಗರದ ಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ. ಹೌದು ಬೆಂಗಳೂರು ಮೂಲದ ಮಹಿಳೆಯರಾದ ರೇಚಲ್ ರಾಬರ್ಟ್ ಹಾಗೂ ಕರುಣಾ ಅವರು, ಮತಾಂತರಕ್ಕೆ ಮುಂದಾಗಿದ್ದರು. ಇನ್ನೀಬ್ಬರು ಮಹಿಳೆಯರು ಪರಾರಿಯಾಗಿದ್ದಾರೆ. ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸಿದ್ದಾರೆ.ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ ಮುಂದಾದ ಇಬ್ಬರು ಕ್ರಿಶ್ಚಿಯನ್ ಮಹಿಳೆಯರನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ಭೂಮಿ ಮೇಲೆ ದೇವರು ಅಂತ ಇದ್ದರೆ ಯೇಸುಕ್ರಿಸ್ತ ಒಬ್ಬನೆ. ನಿಮ್ಮ ದೇವರುಗಳು ನಿಮಗೆ ರಕ್ಷಣೆ ನೀಡುವುದಿಲ್ಲ. ನಿಮ್ಮ ಹಿಂದೂ ಧರ್ಮ ತ್ಯಜಿಸಿ, ಕ್ರೈಸ್ತ ಧರ್ಮಕ್ಕೆ ಬನ್ನಿ. ನಿಜವಾದ ದೇವರು ಯೇಸುಕ್ರಿಸ್ತನನ್ನು ಅನುಸರಿಸಲು ಹಿಂದು ಧರ್ಮ ತ್ಯಜಿಸಿ ಮತಾಂತರಗೊಳ್ಳಿ. ಎಂದು ಹೀಗೆ ನಮ್ಮ ಮನೆಗೆ ಬಂದು ನಮ್ಮನ್ನು ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರಚೋದನೆ ಮಾಡಿದ್ದಾರೆ.ಎಂದು ಸಾರ್ವಜನಿಕರು ಪೊಲೀಸರಿಗೆ ಅಗ್ರಹಿಸಿದ್ದಾರೆ.
ಬೆಂಗಳೂರು : ಮೊದಲು ಹುಡುಗನನ್ನು ಭೀಕ್ಷಾಟನೆಗೆ ಇಳಿಸಿ ನಂತರ ಆತನಿಗೆ ಲಿಂಗ ಪರಿವರ್ತನೆ ಮಾಡಿಕೊಳ್ಳಲು ಒತ್ತಾಯ ಮಾಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಪುಲಿಕೇಶಿ ನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹುಡುಗನೊಬ್ಬನನ್ನು ತೃತೀಯ ಲಿಂಗಿಗಳು ಕರೆದುಕೊಂಡು ಮೊದಲು ಬಿಕ್ಷಾಟನೆಗೆ ತಳ್ಳುತ್ತಾರೆ. ಅದಾದ ಬಳಿಕ ಲಿಂಗ ಪರಿವರ್ತನೆ ಮಾಡಿಕೋ ಎಂದು ಒತ್ತಾಯ ಮಾಡಿರುತ್ತಾರೆ. ಭೀಕ್ಷಾಟನೆ ಸಮಯದಲ್ಲಿ ಕೇವಲ 2000 ನೀಡುತ್ತಿದ್ದರು. ಅದಾದ ಬಳಿಕ ಲಿಂಗ ಪರಿವರ್ತನೆ ಮಾಡಿಕೊಂಡರೆ ಇನ್ನೂ ಹೆಚ್ಚಿನ ಹಣ ನೀಡುವುದಾಗಿ ಅವರು ಆಮಿಷ ಒಡ್ಡಿದ್ದರು. ಇದಕ್ಕೆ ಹುಡುಗನ ವಿರೋಧಿಸಿದಾಗ, ಆತನ ಮೇಲೆ ಹಲ್ಲೆ ನಡೆಸಿದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಘಟನೆಗೆ ಸಂಬಂಧಪಟ್ಟಂತೆ ಐವರ ವಿರುದ್ಧ ‘FIR’ ದಾಖಲಾಗಿದೆ.
ದಕ್ಷಿಣಕನ್ನಡ : ಇಂದಿನ ಮಕ್ಕಳ ಮನಸು ಬಹಳ ಸೂಕ್ಷ್ಮ. ಆದ್ದರಿಂದ ಪೋಷಕರಾದವರು ಅತ್ಯಂತ ಎಚ್ಚರಿಕೆಯಿಂದ ಅವರ ಜೊತೆ ನಡೆದುಕೊಳ್ಳುವುದು ಒಳಿತು.ಯಾಕೆಂದರೆ ಕೇವಲ ಮೊಬೈಲ್ ನಲ್ಲಿ ಹೆಚ್ಚು ಮಾತಾಡ್ಬೇಡ ಎಂದು ತಾಯಿ ಬುದ್ಧಿ ಹೇಳಿದಕ್ಕೆ ಮನನೊಂದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೌದು ಮೊಬೈಲ್‌ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿಯ ಮೇಲೆ ಮುನಿಸಿಕೊಂಡ ಬಾಲಕಿ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ರಾಜ್ಯದ ಕುಟುಂಬದ ಬಾಲಕಿ ನೀಲಮ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್‌ನ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ಎಂಬವರು ತನ್ನ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಕೊಂಬೆಟ್ಟಿ ಮಾರು ಎಂಬಲ್ಲಿ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ರವಿವಾರ ರಾತ್ರಿ ನೀಲಮ್ ಮೊಬೈಲ್‌ನಲ್ಲಿ ಸಂಬಂಧಿಕಳೊಂದಿಗೆ ವಿಡಿಯೋ ಕರೆ…