Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್  ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇದೀಗ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದು, ಇದರ ವಿರುದ್ಧ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆಯೆ ಕಾಂಗ್ರೆಸ್ ಕಾರ್ಯಕರ್ತ ನಿಗೆ ಹೃದಯಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಐ ಸುದ್ದಿಗೋಷ್ಠಿ ನಡೆಯುತ್ತಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಹೃದಯಘಾತ ಸಂಭವಿಸಿದ್ದು, ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆ ಸಿಕೆ ರವಿಚಂದ್ರನ್ ಎನ್ನುವ ಕಾರ್ಯಕರ್ತನಿಗೆ ಹರದೆಯಾಘಾತವಾಗಿದೆ. ಕೂಡಲೇ ಕಾಂಗ್ರೆಸ್ ಕಾರ್ಯಕರ್ತ ಸಿಕೆ ರವಿಚಂದ್ರನ್ ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಾಧ್ಯ ಸಾವನಪ್ಪಿದ್ದಾನೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದಲ್ಲಿ, ಸಿಎಂ ಪರ ವಕೀಲ ಅಭಿಷೇಕ್ ಮನುಸಿಂಗ್ವಿ ಅವರು ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶ ನೀಡುವ ಹಾಗಿಲ್ಲ. ಆದರೆ ರಾಜ್ಯಪಾಲರು ವಿಚಾರರಹಿತವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ವಾದಿಸಿದರು. ಹೌದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. ಈ ವೇಳೆ ತುಷಾರ್ ಮೆಹ್ತಾ ಅವರು ನಾಳೆ ಅರ್ಜಿಯ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದಾಗ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು. ರಾಜ್ಯಪಾಲರ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸೇಮಿಸಿದರೆ ಅವರಿಗೆ ಪ್ರಾಸಿಕ್ಯೂಷನ್ ಗ್ರೂಪ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇದೀಗ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದು, ಬೆಂಗಳೂರಲ್ಲಿ ಸುದ್ದಿಗೋಷ್ಠಿಯ ವೇಳೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತನಿಗೆ ಹೃದಯಘಾತವಾಗಿದೆ. ಹೌದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಹೃದಯಘಾತ ಸಂಭವಿಸಿದ್ದು, ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆ ರವಿಚಂದ್ರನ್ ಎನ್ನುವ ಕಾರ್ಯಕರ್ತನಿಗೆ ಹರದೆಯಾಘಾತವಾಗಿದೆ. ಕೂಡಲೇ ಕಾಂಗ್ರೆಸ್ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಡಿಸಿಎಂ ಡಿಕೆ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿಕೆಶಿ ಅಷ್ಟೆ ನಿಂತಿಲ್ಲ ಕಟ್ಟ ಕಡೆಯ ಕಾರ್ಯಕರ್ತರ ರಕ್ಷೆಯು ಇದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರಿಂದ ಇಂದು ಪ್ರತಿಭಟನೆ ನಡೆಯುತ್ತಿದ್ದು, ಜನರಿಂದ ಜನರಿಗೋಸ್ಕರ ಬಂದ ಸರ್ಕಾರ ಇದು.ಈ ಸರ್ಕಾರಕ್ಕೆ ಪ್ರಮಾಣ ಬೋಧನೆ ಮಾಡಿದ್ದು ಇದೇ ಗವರ್ನರ್. ಈಗ ಯಾಕೆ ಒಳಸಂಚು ನಡೆಸುತ್ತಿದ್ದೀರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು ನಿಮಗೆ ಯಾರಾದರೂ ತನಿಖೆ ಮಾಡಿ ವರದಿ ಕೊಟ್ಟಿದ್ದಾರಾ? ಯಾವುದಾದರೂ ಅಧಿಕಾರಿ ತನಿಖಾ ವರದಿ ಕೊಟ್ಟಿದ್ದಾರ? ಜನತಾದಳದ ಅಗ್ರಗನ್ಯ ನಾಯಕ ನವರಂಗಿ ನಕಲಿ ಸ್ವಾಮಿ, ಬರಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಕೂಡ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ, ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕೆಂದು ಲೋಕಾಯುಕ್ತಕ್ಕೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.‌ ಹೌದು ಭ್ರಷ್ಟಾಚಾರ, ಅಧಿಕಾರ ದುಬರ್ಳಕೆ, ನಕಲಿ ದಾಖಲಾತಿ ಸೃಷ್ಟಿ ಹಿನ್ನೆಲೆಯಲ್ಲಿ ಮುಡಾದಿಂದ 14 ನಿವೇಶನಗಳನ್ನು ಪಡೆದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಬೇಕೆಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಮುಡಾ ಹಗರಣದಲ್ಲಿ ಈಗಾಗಲೇ ರಾಜ್ಯಪಾಲರು ಆಗಸ್ಟ್ 17ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಂತೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರಿನಲ್ಲಿ…

Read More

ಬೆಂಗಳೂರು : ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಯಾವ ತಪ್ಪನ್ನೂ ಎಸಗಿಲ್ಲ ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಶ್ರೀ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು…

Read More

ನವದೆಹಲಿ : ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದ ಸ್ಟಾರ್ ರೆಸ್ಲರ್‌ ವಿನೇಶ್ ಫೋಗಟ್ ಭಾರತಕ್ಕೆ ಮರಳಿದ ಬಳಿಕ ಚಿನ್ನದ ಪದಕ ಪಡೆದಿದ್ದಾರೆ. ಏನಿದು ಅನರ್ಹತೆಗೊಂಡರು ಸಹ ಚಿನ್ನದ ಪದಕ ಹೇಗೆ ಸಿಕ್ತು ಅಂತ ನೀವು ಒಂದು ಕ್ಷಣ ಶಾಕ್ ಗೆ ಒಳಗಾಗಿರಬಹುದು. ಆದರೆ ಚಿನ್ನದ ಪದಕ ಸಿಕ್ಕಿದ್ದು ಸತ್ಯ ಹೇಗೆ ಅಂತತಿಳ್ಕೊಬೇಕಾ ಪೂರ್ತಿ ಓದಿ. ಶನಿವಾರ ಭಾರತಕ್ಕೆ ಮರಳಿದ ಫೋಗಟ್‌ಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿತು. ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಈ ವೇಳೆ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು. ರೋಡ್‌ಶೋನಲ್ಲಿ ದೊಡ್ಡ ಗುಂಪು ಅವಳನ್ನು ಹಿಂಬಾಲಿಸಿತು. ದೆಹಲಿಯಿಂದ ಬಾಳಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನ ಸನ್ಮಾನಿಸಿದರು, 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ ತೆಗೆದುಕೊಂಡಿತು. ಬಳಿಕ ಅವರ ಹುಟ್ಟೂರು…

Read More

ಬೆಂಗಳೂರು : ಮಹಿಳೆ ಹಾಗೂ ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯ ಪೊಲೀಸರು ಇಬ್ಬರು ರೌಡಿಶೀಟರ್ ಗಳು ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ರೌಡಿ ಶೀಟರ್ ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿಶೀಟರ್ ಗಳಾದ ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನ, ಸೌಮ್ಯ, ಪ್ರತಾಪ್, ಜತಿನ್ ವಿಜ್ಞೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶನನ್ನು ಚಂದ್ರ ಲೇಔಟ್ ಠಾಣೆಯ ಪೊಲೀಸರು ಇದೀಗ ಬಂಧಿಸಿದ್ದಾರೆ. ಕಳ್ಳತನ ಪ್ರಕರಣದಲ್ಲಿ ತಾಯಿ ಮಗ ಬಂಧಿಯಾಗಿದ್ದರು. ಈ ಬಗ್ಗೆ ತಿಳಿದುಕೊಂಡು ಗೊತ್ತಿದ್ದವರಿಂದಲೇ ತಾಯಿ ಮಗನನ್ನು ಅಪಹರಿಸಲಾಗಿದೆ.ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ ಮಗನಿಗೆ ಬೆದರಿಕೆ ಹಾಕಿದ್ದಾರೆ. ಹಣ ನೀಡದಿದ್ದರಿಂದ ಈ ವೇಳೆ ಆರೋಪಿಗಳು ತಾಯಿ ಮಗನನ್ನು ಅಪಹರಿಸಿದ್ದಾರೆ. ಆಗಸ್ಟ್ 13ರಂದು ರೌಡಿಶೀಟರ್ ಗಳು ತಾಯಿ ಮಗನನ್ನು ಅಪಹರಿಸಿದ್ದಾರೆ. ಇಬ್ಬರನ್ನು ಪರಿಚಯಸ್ಥ ಪ್ರತಾಪ್ ಎನ್ನುವವರ…

Read More

ಕೊಪ್ಪಳ : ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ನ ಗೇಟ್ ತಾತ್ಕಾಲಿಕ ಅಳವಡಿಕೆ ಯಶಸ್ವೀಯಾದ ಹಿನ್ನೆಲೆಯಲ್ಲಿ, ಗೇಟ್ ಅಳವಡಿಕೆಗೆ ಹಗಲಿರುಳು ಶ್ರಮಿಸಿದ ಸಿಬ್ಬಂದಿಗಳಿಗೆ ಡ್ಯಾಂ ಆವರಣದಲ್ಲಿ ಶಾಸಕ ಗಣೇಶ್ ಸನ್ಮಾನಿಸಿದರು. ಹೌದು ತುಂಗಭದ್ರಾ ಡ್ಯಾಮ್ ನ 19ನೇ ಕ್ರಸ್ಟ್ ಗೇಟ್ ನೀರಿನ ರಭಸದಿಂದ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರು ತುಂಗಭದ್ರ ಡ್ಯಾಮ್ ನಿಂದ ಹರಿದು ಹೋಗಿತ್ತು. ಈ ವೇಳೆ ಕಳೆದ ಕೆಲವು ದಿನಗಳಿಂದ ನಿರಂತರ ಶ್ರಮದಿಂದ ಒಟ್ಟು 5 ಎಲಿಮೆಂಟ್  ಯಶಸ್ವಿಯಾಗಿ ಎಲ್ಲ ಸಿಬ್ಬಂದಿಗಳು ಅಳವಡಿಸಿದ್ದಾರೆ. ಹಾಗಾಗಿ ಟಿಬಿ ಡ್ಯಾಂನ ಆವರಣದಲ್ಲಿ ಎಲ್ಲ ಸಿಬ್ಬಂದಿಗಳಿಗೆ ಶಾಸಕ ಗಣೇಶ್ ಅವರಿಂದ ಸನ್ಮಾನಿಸಲಾಯಿತು. ಶಾಸಕ ಗಣೇಶ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಅಲ್ಲದೆ ಕೊಟ್ಟ ಮಾತಿನಂತೆ ಕಾರ್ಮಿಕರಿಗೆ ತರ ತಲಾ 50000 ಬಹುಮಾನ ನೀಡಲಾಯಿತು. ಕವರ್ ನಲ್ಲಿ ಹಣವಿಟ್ಟು ಸಚಿವ ಜಮೀರ್ ಅಹ್ಮದ್ ಕಾರ್ಮಿಕರಿಗೆ ಬಹುಮಾನ ವಿತರಿಸಿದರು. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜಮೀರ್ ಸೂಚನೆ ಮೇರೆಗೆ ಶಾಸಕ ಗಣೇಶನ…

Read More

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಅತ್ಯಾಚಾರವೆಸಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ನಡೆದಿದೆ. 10ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್​ನಲ್ಲಿ ಫಾಲೋ ಮಾಡಿದ ಆರೋಪಿ, ಆಕೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಸ್ಪಂದಿಸದಿದ್ದಾಗ ಹೇಳಿದಂತೆ ಕೇಳದಿದ್ದರೆ ನಿನ್ನ ತಾಯಿಯನ್ನು ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ. ಆಗ ಭಯಗೊಂಡ ಬಾಲಕಿ ಆತ ಕರೆದೆಡೆಗೆ ಹೋಗಿದ್ದಾಳೆ. ಬಳಿಕ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಂಜನಗೂಡು ಪಟ್ಟಣದ ಯುವಕನೇ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈತ 15 ವರ್ಷದ ಅಪ್ರಾಪ್ತೆಗೆ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಫೋಟೋಗಳನ್ನು ಬಾಲಕಿಯು ಓದುತ್ತಿರುವ ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದ ಎನ್ನಲಾಗಿದೆ.ಅಲ್ಲದೆ, ಅಪ್ರಾಪ್ತೆಯ ಅಶ್ಲೀಲ ಫೋಟೋಗಳನ್ನು ಸೆರೆಹಿಡಿದುಕೊಂಡು, ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದಾನೆ. ತದನಂತರ, ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನು ಕರೆಯಿಸಿ ಮಾಹಿತಿ ನೀಡಿದ್ದಾರೆ. ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು,…

Read More