Author: kannadanewsnow05

ಬೆಂಗಳೂರು : ಸದ್ಯಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿದಂತೆ ಇತ್ಯಾದಿ ಸಲಕರಣೆಗಳನ್ನು ಸಂಗ್ರಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೊರೋನ ನಿಯಂತ್ರಣ ಕುರಿತು ಸಭೆ ನಡೆಯಿತು. ಸಭೆಯವಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಯಸ್ಸಾದವರು, ಗರ್ಭಿಣಿಯರು, ಹೃದ್ರೋಗ ಹಾಗು ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿವಾರ ಅಥವಾ ಅಗತ್ಯವಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿ ಪರಿಶೀಲನೆ ಮಾಡಿ. ಕೋವಿಡ್ ಸೋಂಕು ಹೆಚ್ಚಳ ಬಗ್ಗೆ ಪರಿಶೀಲಿಸಿ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಂಡು ಬಂದರೆ, ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಕಳುಹಿಸುವುದನ್ನು ನಿಲ್ಲಿಸಿ. ಎಲ್ಲಾ ಆಸ್ಪತ್ರೆಗಳಲ್ಲೂ…

Read More

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಕಲ್ಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ FIR ದಾಖಲಾಗಿದೆ. ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಎನ್ ರವಿಕುಮಾರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದು, ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ. ಜಿಲ್ಲಾಧಿಕಾರಿ ಅತ್ಯಂತ ಗೌರವ ಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿ ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ಕೇಂದ್ರದಿಂದ ಮಾರ್ಗಸೂಚಿ ಬಂದ ಬಳಿಕ ಕೋವಿಡ್ ಲಸಿಕೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಬಳಿಕ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು. ಕೊರೊನ ನಿಯಂತ್ರಣ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರದ ಅಭಿಪ್ರಾಯ ಪಡೆದು ವ್ಯಾಕ್ಸಿನ ನೀಡಲಾಗುತ್ತದೆ. ಕೋವಿಡ್ ಲಕ್ಷಣ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿ ಕೂಡ ಈ ಕುರಿತು ಗಮನ ಹರಿಸಬೇಕು. ಟೆಸ್ಟಿಂಗ್ ವಿಚಾರದಲ್ಲಿ ಹಳೆಯ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲ ಕ್ರಮಗಳನ್ನು ನಾವು ತೆಗೆದುಕೊಳ್ಳುತ್ತೇವೆ. ವ್ಯಾಕ್ಸಿನ್ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕೇಂದ್ರದ ಅಭಿಪ್ರಾಯ ಪಡೆದು ವರದಿ ನೀಡಲು ತಿಳಿಸಿದ್ದಾರೆ. ವೈದ್ಯರು ಸಿಬ್ಬಂದಿಗೂ ರಜೆ ಮೇಲೆ ಹೋಗದಂತೆ ಸೂಚನೆ ನೀಡಿದ್ದಾರೆ. ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡುವ ಅಗತ್ಯವಿಲ್ಲ. ಸೋಂಕಿನ ಲಕ್ಷಣ ಇರುವವರೆಗೆ ಮಾತ್ರ ಟೆಸ್ಟ್ ಮಾಡುತ್ತೇವೆ. ವಿದೇಶದಿಂದ ಬಂದವರಿಗೆ…

Read More

ಮೈಸೂರು : ಈಗಾಗಲೇ ಮುಂಗಾರು ಪೂರ್ವದಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮೈಸೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ನಾಳೆಯೂ ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಾಳೆಯೂ ರಜೆ ನೀಡಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ನಾಳೆಯೂ ಮೈಸೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗುತ್ತಿದೆ ಎಂದು ಲಕ್ಷ್ಮಿಕಾಂತ್ ರೆಡ್ಡಿ ಅವರು ತಿಳಿಸಿದ್ದಾರೆ.

Read More

ಕಲಬುರ್ಗಿ : ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಕಲ್ಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ FIR ದಾಖಲಾಗಿದೆ. ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳ ನಿಂದನೆ, ಎಸ್ ಸಿ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಮೇ 24ರಂದು ಬಿಜೆಪಿ ಪ್ರತಿಭಟನೆಯಲ್ಲಿ ರವಿಕುಮಾರ್ ಈ ಒಂದು ಹೇಳಿಕೆ ನೀಡಿದ್ದರು. ಡಿಸಿ ಫೌಜಿಯಾ ತರುನ್ನಮ್ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸಿಪಿಐ ಚಂದ್ರಶೇಖರ್, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್ ವಿರುದ್ಧ ನಿಂದನೆ ಆರೋಪದ ಅಡಿ ದೂರು ನೀಡಿದ್ದಾರೆ. ಎಸ್ ಸಿ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ . ಹಾಗಾಗಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ  ಸ್ಟೇಷನ್ ಬಜಾರ್…

Read More

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಎಂಟ್ರಿ ಆಗಿದ್ದು ಈಗಾಗಲೇ ಬೆಂಗಳೂರಲ್ಲಿ ಒಂದೇ ಕಡೆಗೆ ಸುಮಾರು 71 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಇದೀಗ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೊರೋನಾ ತಡೆಗಟ್ಟುವ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕೋವಿಡ್ ಹೆಲ್ಪ್ಲೈನ್ ತೆರೆಯಿರಿ. ಕಳೆದ ಬಾರಿ ಆದಂತೆ ಈ ಬಾರಿ ಯಾವುದೇ ಸಮಸ್ಯೆ ಆಗಬಾರದು. ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಿ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read More

ಜಮಖಂಡಿ : ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಂಕನವಾಡಿ ಗ್ರಾಮದ ಕಲ್ಲಪ್ಪ ದೊರೆಪ್ಪ ಅಂಬಿ (65 ) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಗುಹೇಶ್ವರ ನಡುಗೆ ಮೇವು ತರಲು ತೆರಳುತ್ತಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರು ಈಜುತ್ತಾ ಕೃಷ್ಣಾ ನದಿ ದಾಟಲು ಕಲ್ಲಪ್ಪ ದೊರೆಪ್ಪ ಅಂಬಿ ಮುಂದಾಗಿದ್ದಾರೆ. ನದಿ ಮಧ್ಯದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೈ ಸೋತು ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಮನೆಯಲ್ಲಿದ್ದ 40 ವರ್ಷದ ಒಂಟಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಮನೆಯಲ್ಲಿ ಇದ್ದಂತಹ ಮಹಿಳೆ ಲತಾ ಎನ್ನುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲತಾ ಅವರನ್ನು ಹತ್ಯೆಗೈದಿ ದರೋಡೆ ನಡೆಸಲಾಗಿದೆ. ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ದುಷ್ಕರ್ಮಿಗಳು, ಪರಾರಿಯಾಗಿದ್ದಾರೆ. ಹೋಲ್ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎನ್ನುವವರ ಪತ್ನಿ ಲತಾ ಅವರ ಕೊಲೆಯಾಗಿದೆ. ಲತಾ ಅವರನ್ನು ಕೊಲೆಗೈದು ದುಷ್ಕರ್ಮಿಗಳು 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ನವದೆಹಲಿ : ವೈರಿ ಪಾಕಿಸ್ತಾನದ ಪರ ಗೂಢಚಾರಿಕೆ ಮಾಡುತ್ತಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವ್ಲಾಗರ್ ಜ್ಯೋತಿ ಮಲ್ಹೋತ್ರಾಗೆ ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಹರಿಯಾಣದ ಹಿಸಾರ್ ಕೋರ್ಟ್ ಆದೇಶ ಹೊರಡಿಸಿದೆ. 9 ದಿನಗಳ ಪೊಲೀಸ್ ಕಸ್ಟಡಿ ಬಳಿಕ ಜ್ಯೋತಿ ಮಲ್ಹೋತ್ರಾಳನ್ನು ಇಂದು ಹರಿಯಾಣದ ಹಿಸಾರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಗಾಗಲೇ ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ಜ್ಯೋತಿಯನ್ನು ವಿಚಾರಣೆಯನ್ನು ನಡೆಸಲಾಗಿದೆ. ಇಂದು ಜ್ಯೋತಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನಕೆ ನೀಡಿ ಕೋರ್ಟ್ ಆದೇಶಿಸಿದೆ. ಗೂಢಚರ್ಯೆಯ ಶಂಕೆಯ ಮೇಲೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಬಂಧಿಸಲ್ಪಟ್ಟ 12 ಜನರಲ್ಲಿ ಮಲ್ಹೋತ್ರಾ ಕೂಡ ಒಬ್ಬಳಾಗಿದ್ದಾಳೆ. ಈ 12 ಜನರು ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಮೇ 16 ರಂದು ಅಧಿಕೃತ ರಹಸ್ಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿ ಬಂಧಿಸಲಾಯಿತು. ನವೆಂಬರ್ 2023 ರಿಂದ ಪಾಕಿಸ್ತಾನಿ ಹೈಕಮಿಷನ್‌ನ ಉದ್ಯೋಗಿ ಎಹ್ಸಾನ್-ಉರ್-ರಹೀಮ್ ಅಲಿಯಾಸ್…

Read More

ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೇಕೆ ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದ್ದು ಯುವಕ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗುರುಪುರ ಎಂಬ ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಹರೀಶ್ (28) ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಹರೀಶ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಹರೀಶ್ ಸಾವನಪ್ಪಿದ್ದಾನೆ. ಮೈಸೂರು ಜಿಲ್ಲೆಯ ನಾಗಪುರದ 5ನೇ ಬ್ಲಾಕ್ ನಲ್ಲಿ ಈ ಒಂದು ಘಟನೆ ನಡೆದಿದೆ.

Read More