Author: kannadanewsnow05

ಯಾದಗಿರಿ : ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಮಂಜುಳಾ ಗೂಳಿಯವರನ್ನು ಶುಕ್ರವಾರವಷ್ಟೇ ಬದಲಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನಿಲೋಫರ್ ಬಾದಲ್‌ ಎಂಬುವರನ್ನು ಆಯ್ಕೆ ಮಾಡಲಾಗಿತ್ತು. ವಿರೋಧದ ಮಧ್ಯೆಯೂ ಪತ್ನಿಯ ಸ್ಥಾನಕ್ಕೆ ನಿಲೋಫರ್ ಬಾದಲ್‌ರನ್ನು ಆಯ್ಕೆ ಮಾಡಿದ್ದಕ್ಕೆ ಮಂಜುಳಾ ಅವರ ಪತಿ, ಪಿಯು ಉಪನ್ಯಾಸಕನಾಗಿರುವ ಶಂಕರ್ ಗೂಳಿ ಆಕ್ರೋಶಗೊಂಡಿದ್ದ. ಹೀಗಾಗಿ, ಶಂಕರ್‌ ಗೂಳಿ ರೌಡಿಶೀಟರ್‌ ಬಾಪುಗೌಡ ಅಗತೀರ್ಥ ಎಂಬಾತನ ಜೊತೆಗೂಡಿ ಶನಿವಾರ ಬೆಳಗಿನ ಜಾವ ನಗರದ ಕನಕದಾಸ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಪೆಟ್ರೋಲ್ ಸುರುವಿ, ಬೆಂಕಿಯಿಟ್ಟಿದ್ದಾನೆ. ಘಟನೆಯಿಂದಾಗಿ ಕಚೇರಿಯ ಕಿಟಕಿ, ಬಾಗಿಲು, ಎಸಿ, ಸೋಫಾ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ರಾತ್ರಿ ವೇಳೆ ಬೆಂಕಿ ಹಚ್ಚಿದ್ದರಿಂದ ಯಾವುದೇ ಪ್ರಾಣ ಹಾನಿ…

Read More

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ 6 ಜಿಲ್ಲೆಗಳಲ್ಜ್ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಕಲಬುರಗಿ : ರಾಜ್ಯ ವಿಧಾನಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ 150-160 ಸ್ಥಾನ ಗೆಲ್ಲುತ್ತೆ ಎಂದು ಖಾಸಗಿ ಸಮೀಕ್ಷೆಯೊಂದು ಹೇಳಿದೆ ಎಂದು ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಛಲವಾದಿ ನಾರಾಯಣ ಸ್ವಾಮಿ ಯವರ ಗೃಹಬಂಧನ ಖಂಡಿಸಿ, ಬಿಜೆಪಿ ಹಮ್ಮಿಕೊಂಡಿದ್ದ ಕಲಬುರಗಿ ಚಲೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿ ತಗೊಂಡಿವೆ. ಹೀಗಾಗಿ, ಜನ ಬೇಸರಗೊಂಡಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಆಪರೇಷನ್ ಸಿಂದೂರದ ಬಗ್ಗೆ ಇಡೀ ಜಗತ್ತೆ ಮೆಚ್ಚಿದೆ. ಆದರೆ, ಕಾಂಗ್ರೆಸ್ ನವರು ಮಾತ್ರ ಅಪಸ್ತರದ ಮಾತನಾಡುತ್ತಿದ್ದಾರೆ.’ನಮ್ಮ ಪಾಕಿ ಸ್ತಾನ’ ಅಂತ ಎಐసిసి ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಯವರೇ ಹೇಳುತ್ತಾರೆ. ಇದನ್ನು ಪ್ರಶ್ನೆ ಮಾಡಿದ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಈ ಅವಮಾನ ಮಾಡೋ ದಾ? ಎಂದು ಪ್ರಶ್ನಿಸಿದರು.ಅಧಿಕಾರ ಶಾಶ್ವತ ಅಲ್ಲ ಪ್ರಿಯಾಂಕ್ ಖರ್ಗೆಯವರೇ, ದರ್ಪ, ಸೊಕ್ಕು ಮುರಿಯುವ ಕೆಲಸ ಈ ಭಾಗದ ಜನ ಮಾಡ್ತಾರೆ.…

Read More

ತುಮಕೂರು : ತುಮಕೂರಲ್ಲಿ ಘೋರ ದುರಂತ ನಡೆದಿದ್ದು, ಮನೆ ಹತ್ತಿರ ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಹಿಂಡೊಂದು ತಲೆಯ ಚರ್ಮ ಹಾಗೂ ಕರುಳಿನ ಭಾಗ ಹೊರಗೆ ಬರುವಂತೆ ದಾಳಿ ನಡೆಸಿದ್ದು, 6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ. ಅಯ್ಯನಬಾವಿ ನಿವಾಸಿ ದಿವ್ಯಾ (6) ಮೃತ ಮಗು ಎಂದು ತಿಳಿದುಬಂದಿದೆ. ಮಹಲಿಂಗಯ್ಯ ಅವರ ಮಗಳು ಎಂದಿನಂತೆ ಮನೆ ಹತ್ತಿರ ಆಟವಾಡುತ್ತಿದ್ದ ಸಮಯದಲ್ಲಿ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಮಗುವನ್ನು ಕಿತ್ತು ತಿನ್ನಲು ಯತ್ನಿಸಿವೆ. ಪರಿಣಾಮ ಮಗುವಿನ ತಲೆಯ ಚರ್ಮ, ಹೊಟ್ಟೆಯಲ್ಲಿನ ಕರಳು ಆಚೆ ಬಂದಿವೆ. ಮಗುವಿನ ಮುಖ, ಕೈ, ಕಾಲು ತೊಡೆ ಭಾಗಗಳನ್ನ ನಾಯಿಗಳು ಕಿತ್ತು ಹಾಕಿವೆ. ರಕ್ತದ ಮಡುವಿನಲ್ಲಿ ಬಿದ್ದು ಚೀರಾಡುತ್ತಿದ್ದ ಮಗುವನ್ನ ಕಂಡ ಸಾರ್ವಜನಿಕರು ನಾಯಿಗಳ ಹಿಂಡನ್ನು ಓಡಿಸಿ ಕೂಡಲೇ ತಿಪಟೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾಸನ ಮೆಡಿಕಲ್‌ ಕಾಲೇಜು…

Read More

ಬೆಂಗಳೂರು : ಇಂದು ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC) ನಡೆಯಲಿದೆ. ಹೀಗಾಗಿ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಸಂಚಾರ ಒಂದು ಗಂಟೆ ಮುಂಚಿತವಾಗಿ ಅಂದರೆ 6 ಗಂಟೆಗೆ ಆರಂಭವಾಗಲಿದೆ. ಹೌದು ಇಂದು ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ. ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭ ಆಗುತ್ತಿತ್ತು. ಇಂದು ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ. ನಾಲ್ಕು ಟರ್ಮಿನಲ್ ಗಳಾದ ವೈಟ್ ಫೀಲ್ಡ್, ಚಲ್ಲಘಟ್ಟ, ಮಾದಾವರ ಹಾಗೂ ರೇಷ್ಮೆ ಸಂಸ್ಥೆಯಿಂದ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳು ಸಂಚಾರ ಆರಂಭಿಸಲಿದೆ. ನೇರಳೆ ಹಸಿರು ಎರಡು ಮಾರ್ಗದಲ್ಲೂ ಕೂಡ ಬೆಳಗ್ಗೆ 6 ಗಂಟೆಯಿಂದಲೇ ಸಂಚಾರ ಆರಂಭಿಸಲಾಗಿದೆ.

Read More

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಅಲ್ಲದೇ ನಿನ್ನೆ ಬೆಂಗಳೂರಲ್ಲಿ ಕೊರೊನ ಸೊಂಕಿಗೆ ವೃದ್ಧರೊಬ್ಬರರು ಬಲಿಯಾಗಿದ್ದಾರೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್​ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ.…

Read More

ಬೆಂಗಳೂರು : ರಾಜ್ಯಕ್ಕೆ ಕೊರೊನಾ ಮತ್ತೆ ಒಕ್ಕರಿಸಿದೆ. ರಾಜ್ಯಾದ್ಯಂತ 38 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 32 ಬೆಂಗಳೂರಿನಲ್ಲಿವೆ. ವಿಜಯನಗರ, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಕಾಲಿಟ್ಟಿದೆ. ಕೊರೊನಾದಿಂದ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೌದು ನಿನ್ನೆ ಬೆಂಗಳೂರಿನಲ್ಲಿ ವೈಟ್ ಫೀಲ್ಡ್ ನ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ.ನಿನ್ನೆ ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್​ ಗುಂಡೂರಾವ್​ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ಇಂದಿನಿಂದ ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ…

Read More

ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ 6 ವರ್ಷದ ಬಾಲಕಿ ಇದೀಗ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ. ಹೌದು ಬೀದಿ ನಾಯಿಗಳ ದಾಳಿಯಿಂದ ನವ್ಯಾ (6) ಎಂಬ ಬಾಲಕಿ ಸಾವನಪ್ಪಿದ್ದಾಳೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ಬಾಲಕಿಯ ಮೇಲೆ ಏಕಾಏಕಿ ದಾಳಿ ನಡೆಸಿವೆ. ದಾಳಿಯ ವೇಳೆ ಬಾಲಕಿಯ ತಲೆ ಹಾಗೂ ಹೊಟ್ಟೆ ಭಾಗವನ್ನು ಕಚ್ಚಿ ಎಳೆದಾಡಿವೆ. ಬಾಲಕಿಯ ಮುಖ, ಕೈ, ಕಾಲು ಮತ್ತು ತೊಡೆ ಭಾಗವನ್ನು ಬೀದಿ ನಾಯಿಗಳು ಕಿತ್ತು ಹಾಕಿವೆ. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.  ಚಿಕಿತ್ಸೆ ಫಲಿಸದೆ ನವ್ಯ ಸಾವನ್ನಪಿದ್ದಾಳೆ. ಈ ಕುರಿತು ತಿಪಟೂರು ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ಬರುವ ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿಪಕ್ಷದ ನಾಯಕರು ಸೇರಿ ಇನ್ನು ಮೂರ್ನಾಲ್ಕು ಶಾಸಕರ ಜೊತೆಗೆ ಚರ್ಚಿಸುತ್ತೇನೆ. ಎಲ್ಲರ ಸಲಹೆ ಪಡೆದು ಸಂಪುಟದಲ್ಲಿ ಪ್ರಸ್ತಾಪಿಸಿ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದರು.

Read More

ಕೊಡಗು : ರಾಜ್ಯದಲ್ಲಿ ಇದೀಗ ಒಂದು ಕಡೆ ವರುಣ ಅಬ್ಬರಿಸುತ್ತಿದ್ದು ಭಾರಿ ಮಳೆ ಆಗುತ್ತಿರುವುದರಿಂದ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ. ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಮತ್ತು ಭಾರಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಹೌದು ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮನೆಯ ಹಿಂಭಾಗ ಪಾತ್ರ ತೊಳೆಯುತ್ತಿದ್ದ ವೇಳೆ ಗೌರಿ (60) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮರ ಬಿದ್ದಿದ್ದರಿಂದ ಗಾಯಗೊಂಡಿದ್ದ ಗೌರಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.

Read More