Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಇತ್ತೀಚಿಗೆ ತಾನೇ5 ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿಯಲ್ಲಿ ಶರಣಬಸವೇಶ್ವರ ರಥೋತ್ಸವದಲ್ಲಿ ಮಹಿಳೆ ಮೇಲೆ ಚಕ್ರ ಹರಿದು ಕಾಲು ಕಳೆದುಕೊಂಡ ಘಟನೆ ನಡೆದಿತ್ತು. ಇದೀಗ ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ. ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಅದ್ದೂರಿಯಾಗಿ ನಡೆಯುತ್ತಿತ್ತು. ಸಾವಿರಾರು ಭಕ್ತರು ಆಗಮಿಸಿದ್ದರು. ಜಯಘೋಷ ಹಾಕುತ್ತಾ ರಥವನ್ನು ಎಳೆಯುತ್ತಿದ್ದಾಗ ನಡೆದುಹೋಯ್ತು ದುರಂತ. ರಥ ಎಳೆಯುವ ಸಂದರ್ಭದಲ್ಲಿ ಭಕ್ತರ ನೂಕುನುಗ್ಗಲಿನಲ್ಲಿ ಮೃತ ವಿನೋದ ರೆಡ್ಡಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಚಲಿಸುತ್ತಿದ್ದ ರಥದ ಬೃಹತ್ ಚಕ್ರವು ನೇರವಾಗಿ ವಿನೋದ ರೆಡ್ಡಿ ತೊಡೆಯ ಮೇಲಿಂದ ಹರಿದು ಹೋಗಿದೆ. ಚಕ್ರದಡಿ ಸಿಲುಕಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ವಿನೋದ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಹಾಲಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಹಾಲಿ ಶಾಸಕ ಲಕ್ಷ್ಮಣ್ ಸವದಿ ಮರಳಿ ಬಿಜೆಪಿಗೆ ಬರುತ್ತಾರೆ ಎಂಬ ವದಂತಿಗಳ ಬಗ್ಗೆ ನಮ್ಮ ಕಾರ್ಯಕರ್ತರು ತಲೆಕೆಡಿಸಿಕೊಳ್ಳುವುದು ಬೇಡ. ಸದ್ಯ ಹಾಲಿ ಶಾಸಕರು ಕ್ಷೇತ್ರದಲ್ಲಿ ಅಂತದೊಂದು ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದಿದ್ದಾರೆ. ಅಥಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸವದಿ ಕ್ಷೇತ್ರದಲ್ಲಿ ಬಿಜೆಪಿಗೆ ಮರಳಿ ಬರುವ ವಾತಾವರಣ ಸೃಷ್ಟಿ ಮಾಡಿದ್ದಾರೆ. ಯಾರನ್ನೇ ಕೇಳಿದ್ರೂ ಮುಂದೆ ಸವದಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆಂದು ಹೇಳುತ್ತಿದ್ದಾರೆ. ಅಂತಹ ಪ್ರಸಂಗ ಬರುವುದಿಲ್ಲ, ಬರೋದಕ್ಕೆ ನಾವು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಸವದಿ ಬಿಜೆಪಿಗೆ ಬರುವುದಿಲ್ಲ. ಬಂದರೂ ಅವತ್ತು ದೇವರು ಯಾವ ರೀತಿ ಬುದ್ದಿ ಕೊಡುತ್ತಾನೆ. ಆ ರೀತಿ ನಾವು ಪ್ರತಿಕ್ರಿಯೆ ಕೊಡುತ್ತೇವೆ ಎಂದರು. ನಮ್ಮ ಕಾರ್ಯಕರ್ತರು ಗಟ್ಟಿಯಾಗಿ ಕೆಲಸ ಮಾಡಬೇಕು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯೇ ಗಂಡನಿಗೆ ಚಾಕು ಇರಿದು ಕೊಲೆ ಮಾಡಿದ್ದಾಳೆ, ಘಟನೆ ಸಂಭಂದ ಹೆಂಡತಿಯ ತಂದೆ, ತಾಯಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ಈ ಕೊಲೆ ನಡೆದಿದ್ದು, ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಹೆಂಡತಿ, ಅತ್ತೆ, ಮಾವನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ವರ್ಷ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಮೃತಪಟ್ಟಿದ್ದರು. ಈ ಒಂದು ಘಟನೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗಾಗಿ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಕ್ರೀಡಾಂಗಣ ಬಹಳ ಚಿಕ್ಕದಿದ್ದು ದೊಡ್ಡದಾಗಿ ನಿರ್ಮಾಣ ಮಾಡುವಂತೆ ಬೇಡಿಕೆ ಇಟ್ಟಿದ್ದರು. ಅದರ ಬೆನ್ನಲ್ಲೆ, ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ಕೆಎಸ್‌ಸಿಎ ಸಿಹಿ ಸುದ್ದಿ ಒಂದನ್ನು ನೀಡಿದೆ. ಹೌದು ನಗರದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳನ್ನು ಮರಳಿ ತಂದಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈಗ ಸ್ಟೇಡಿಯಂ ನವೀಕರಣಕ್ಕೆ ಮುಂದಾಗಿದೆ. ಕ್ರೀಡಾಂಗಣದ ಆಸನ ಸಾಮರ್ಥ್ಯವನ್ನು 20000ದಷ್ಟು ಹೆಚ್ಚಿಸಲು ಚಿಂತನೆ ನಡೆಸಿರುವ ಕೆಎಸ್‌ಸಿಎ, ಇದಕ್ಕಾಗಿ ಟೆಂಡರ್‌ನ ಆರಂಭಿಕ ಪ್ರಕ್ರಿಯೆಯನ್ನೂ ಆರಂಭಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವೆಂಕಟೇಶ್ ಪ್ರಸಾದ್, ‘ನವೀಕರಣ ಕಾರ್ಯ ಪೂರ್ಣಗೊಳಿಸಲು ನಾವು ಯಾವುದೇ ಸಮಯ ನಿಗದಿಪಡಿಸಿಲ್ಲ. ಏಕೆಂದರೆ ಇದು ದೀರ್ಘ ಪ್ರಕ್ರಿಯೆ. ಅನುಮೋದನೆ ಪಡೆಯಲು ನಾವು ಬಿಡ್ ಆಹ್ವಾನಿಸಬೇಕು ಮತ್ತು ಹಲವು ಸುತ್ತಿನ ಸಭೆ ನಡೆಸಬೇಕಿದೆ. ಅದಕ್ಕೆ…
ಬೆಂಗಳೂರು : ನಿನ್ನೆ ಹೆಬ್ಬಗೋಡಿ ಠಾಣೆ ಪೊಲೀಸರು ಕಳೆದ 12 ವರ್ಷಗಳಿಂದ ಬೆಂಗಳೂರಿನಲ್ಲಿ ಇದ್ದು ಟ್ರಕ್ಸ್ ದಂತೆ ಮಾಡುತ್ತಿದ್ದ ನೈಜೀರಿಯಾ ಏನು ಅರೆಸ್ಟ್ ಮಾಡಿದ್ದು 14 ಕೋಟಿಗೂ ಹೆಚ್ಚು ಡ್ರಗ್ಸ್ ಅನ್ನು ಜತ್ತಿ ಮಾಡಿದರು ಇದೀಗ ಬೆಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, 2 ಪ್ರತ್ಯೇಕ ಕೇಸ್ ಗಳಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿತ್ತು. ಇದರ ಮಾರುಕಟ್ಟೆ ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು. ಆರೋಪಿಯನ್ನು ತಕ್ಷಣವೇ ವಶಕ್ಕೆ ಪಡೆದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇನ್ನೊಂದು ಪ್ರಕರಣದಲ್ಲಿ, ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಮಾದಕ ವಸ್ತುವಾದ ಚರಸ್/ಹಶೀಶ್ ಸಾಗಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ವೇಳೆ ಸುಮಾರು 1.7…
ಬೆಂಗಳೂರು : ಈ ಹಿಂದೆ ದುಬೈ ನಿಂದ 14 ಕೆಜಿಗೆ ಅಧಿಕ ಚಿನ್ನಭರಣ ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇದ್ದಾರೆ. ಇದೀಗ ಇದೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ಕೋಟಿಗು ಅಧಿಕ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೌದು ಏರ್ಪೋರ್ಟ್ ನ ಟರ್ಮಿನಲ್ -2 ರ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಕಳ್ಳಸಾಗಣೆಯ ಗ್ಯಾಂಗ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಮುಂದಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು, ಐವರು ಆರೋಪಿಗಳನ್ನು ಪರಿಶೀಲನೆ ನಡೆಸಿ ಅವರಿಂದ 5 ಕೋಟಿ ಮೌಲ್ಯದ ಚಿನ್ನದ ಗಟ್ಟಿ ಹಾಗೂ ಕ್ಯಾಪ್ಸುಲ್ ಆಕಾರದ ಪ್ಯಾಕೆಟ್‌ಗಳಲ್ಲಿ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಗಡಿಯಾಚೆಗಿನ ಕಳ್ಳಸಾಗಣೆಯ ಸಿಂಡಿಕೇಟ್‌ನ ಭಾಗವಾಗಿದೆ ಎಂದು ಕಂಡು ಬಂದಿದೆ. ಇದರಲ್ಲಿ ವಿದೇಶಿಯರು-ಬಾಂಗ್ಲಾದೇಶಿ ಪ್ರಜೆಗಳು…
ಚಿಕ್ಕಮಗಳೂರು : ಇತ್ತೀಚಿಗೆ ಕೇರಳ ಮೂಲದ ಯುವತಿ ಒಬ್ಬಳು ಟ್ರೇಕ್ಕಿಂಗ್ ಗೆ ಎಂದು ಹೋದಾಗ ನಾಪತ್ತೆಯಾಗಿದ್ದಳು ಸತತ ಮೂರು ದಿನಗಳ ಬಳಿಕ ಕಾಡು ಜನರ ಸಹಾಯದಿಂದ ಶರಣ್ಯ ಪತ್ತೆಯಾಗಿದ್ದಳು ಆದರೆ ಇದೀಗ ಅದೇ ಕೇರಳ ಮೂಲದ ಅಪ್ರಾಪ್ತ ಬಾಲಕಿ ಒಬ್ಬಳು ಚಿಕ್ಕಮಂಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಹೌದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಇದೀಗ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆಗಳು ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ. ರಾತ್ರಿ ಪೂರ್ತಿ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಸಂಯುಕ್ತವಾಗಿ ಶೋಧ ಕಾರ್ಯ ನಡೆಸಿದರು. ಇಂದೂ ಡ್ರೋನ್ ಸಹಾಯದಿಂದ ಹುಡುಕಾಟ ಮುಂದುವರಿದಿದ್ದು, ಸಂಪೂರ್ಣ ಹುಲ್ಲುಗಾವಲು ಹಾಗೂ ಇಳಿಜಾರು ಪ್ರದೇಶಗಳಿಂದ ಕೂಡಿರುವ ಈ ಪ್ರದೇಶದಲ್ಲಿ…
ಧಾರವಾಡ : ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ನಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದಾದ ಬಳಿಕ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಿಗಿರುವ ಆರೋಪದ ಮೇಲೆ ಮುಫಿಸ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಧಾರವಾಡದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್‌ನ್ನು ಪೊಲೀಸರು ಬಂಧಿಸಿದ್ದಾರೆ. ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್‌ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ. ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್‌ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್‌ಗೆ ಬೀಗ ಹಾಕಿದ್ದರು. ದ್ಯ ಆರೋಪಿ ಸಾಬೀರ್‌ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್…
ಧಾರವಾಡ : ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ಗೆ ಎಲ್‍ಪಿಜಿ ಟ್ಯಾಂಕರ್ ಡಿಕ್ಕಿಯಾಗಿ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ರಾಯಪುರ ಬಡಾವಣೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕಾನ್ಸ್ಟೇಬಲ್ ಎನ್.ಎಫ್ ಸಿದ್ದಪ್ಪನವರ (52) ಮೃತರು ಎಂದು ತಿಳಿದುಬಂದಿದೆ. ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನಪ್ಪಿದ್ದಾರೆ. ಮೃತ ಸಿದ್ದಪ್ಪನವರ್ ಕುಂದಗೋಳ ತಾಲೂಕಿನ ಪಶುಪತಿಹಾಳದ ನಿವಾಸಿ. ಊಟ ಮುಗಿಸಿ ಕಚೇರಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಸಂಬಂಧಿಸಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಎರಡು ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷರ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕೇರಳ ನಂಟಿದೆ ಎಂದು ನಂಬಿರವಾಗಿ ಆರೋಪಿಸಿದ್ದಾರೆ. ಸಮೀರ್ ಮುಲ್ಲಾ ಸಹೋದರಿ ಕೇರಳಕ್ಕೆ ಹೋಗಿದ್ದಾಳೆ. ಆಕೆ ಕೇರಳಕ್ಕೆ ಹೋಗಿದ್ದರ ಹಿಂದೆ ಅನೇಕ ಅನುಮಾನಗಳು ಇವೆ. ಈ ಪ್ರಕರಣದ ತನಿಖೆಯನ್ನು NIA ವಹಿಸಬೇಕು. ಪೊಲೀಸರು ದಕ್ಷರು ಆದರೆ ಸರ್ಕಾರ ಅವರ ಕೈ ಕಟ್ಟಿ ಹಾಕುತ್ತದೆ. ಹೀಗಾಗಿ ಪ್ರಕರಣದ ತನಿಖೆಯನ್ನು NIA ಗೆ ನೀಡಬೇಕು. ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ ಗಳನ್ನು ಕೈಬಿಡಬೇಕು ಇಲ್ಲದಿದ್ದರೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.














