Author: kannadanewsnow05

ಕೊಪ್ಪಳ : ನೀರಿನ ರಭಸಕ್ಕೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡ್ಯಾಂಗೆ ಭೇಟಿ ನೀಡಿ, ತ್ವರಿತವಾಗಿ ಹೊಸ ಗೇಟ್ ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದು ಟಿಬಿ ಡ್ಯಾಂ ವೀಕ್ಷಣೆ ಬಳಿಕ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಟಿ ಬಿ ಡ್ಯಾಂನ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯವು 70 ವರ್ಷಗಳಷ್ಟು ಹಳೆಯದು. 2019 ರಲ್ಲಿ ಎಡದಂಡೆ ನಾಲೆ ಏರಿ ಒಡೆದು ಹಾನಿಯಾಗಿತ್ತು. ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ನೀರು ಪೋಲಾಗಿತ್ತು. 70 ವರ್ಷಗಳ ಇತಿಹಾಸದಲ್ಲಿ ಯಾವುದೇ ಗೇಟಿಗೆ ಹಾನಿಯಾಗಿಲ್ಲ. 33 ಗೇಟ್ ಗಳ ಪೈಕಿ ವರೆಗೂ ಯಾವುದೇ ಗೇಟ್ ಹಾನಿಯಾಗಿರಲಿಲ್ಲ. ಕಾಲಕಾಲಕ್ಕೆ ಬೋರ್ಡ್ ನವರು ಗೇಟ್ ಪರಿಶೀಲಿಸಬೇಕಾಗಿತ್ತು ಎಂದರು. ಆಂಧ್ರ, ತೆಲಂಗಾಣದ ಸಚಿವರು, ಸಂಸದರು, ಶಾಸಕರು ಬಂದಿದ್ದಾರೆ. ರೈತರ ಬೆಳೆಗೆ ನೀರು ಉಳಿಸಿಕೊಡಲು ಪ್ರಯತ್ನ ನಡೆಯುತ್ತಿದೆ. ತ್ವರಿತವಾಗಿ ಹೊಸ ಗೇಟ್ ಅಳವಡಿಸುವ…

Read More

ಬೆಂಗಳೂರು : ಅವರಿಬ್ಬರದು ಎರಡು ವರ್ಷದ ಪ್ರೀತಿ ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಂದಾಗಿ ಆಗಾಗ ಇಬ್ಬರ ನಡುವೆ ಮನಸ್ತಾಪ ಉಂಟಾಗುತ್ತಿತ್ತು. ಇದರಿಂದ ಇಬ್ಬರು ದೂರವಾಗಿದ್ದರು. ಆದ್ರೆ ಬ್ರೇಕ್ ಅಪ್ ನಿಂದಾಗಿ ಮನನೊಂದ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹೌದು ಡಾರ್ಜಿಲಿಂಗ್‌ ಮೂಲದ ಲಿಖಿತ ಜಾಸ್ಮೀನ್(24) ಮೃತ ದುರ್ದೈವಿ. 10 ದಿನಗಳ ಹಿಂದೆ ತನ್ನ ಅಕ್ಕ ಕೃತಿಕ ಜಾಸ್ಮೀನ್ ಮನೆಗೆ ಬಂದಿದ್ದ ಯುವತಿ ಇಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಲಿಖಿತ ಜಾಸ್ಮೀನ್ ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇಬ್ಬರ ಪ್ರೇಮ ಚನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ಲಿಖಿತ ಜಾಸ್ಮೀನ್ ಮನನೊಂದಿದ್ದಳು. ತಂಗಿ ಒಬ್ಬಳೇ ಇದ್ದರೆ ಏನಾದ್ರು ಮಾಡಿಕೊಳ್ಳುತ್ತಾಳೆಂದು ಭಯಪಟ್ಟು ಲಿಖಿತ ಅಕ್ಕ ಕೃತಿಕ ತಂಗಿಯ ನೋವು ಮರೆಸುವ ಸಲುವಾಗಿ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿದ್ದ ತನ್ನ ಮನೆಗೆ…

Read More

ಬೆಂಗಳೂರು: ರಾಜಧಾನಿಯಲ್ಲಿ ಪ್ರತ್ಯೇಕವಾಗಿ ನಡೆದ ಮೂರು ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೊದಲನೆಯದಾಗಿ ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಆದಿಲಕ್ಷ್ಮಮ್ಮ(69) ಮೃತರು ಎಂದು ತಿಳಿದುಬಂದಿದೆ. ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತ ಸಂಬಂಧ ಬಿಬಿಎಂಪಿ ಕಸದ ಲಾರಿ ಚಾಲಕ ಮೊಹಮ್ಮದ್ ಎಂಬಾತನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೈಕ್‌ ಸವಾರ ಸಾವು ಮತ್ತೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಕೂಡ್ಲು ನಿವಾಸಿ ವೇಣುಗೋಪಾಲ್‌(53) ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೊಮ್ಮನಹಳ್ಳಿ ಜಂಕ್ಷನ್ ಬಳಿ ಈ ಒಂದು ದುರ್ಘಟನೆ ನಡೆದಿದೆ. ಸೀರೆ ವ್ಯಾಪಾರಿಯಾಗಿರುವ…

Read More

ವಿಜಯಪುರ : ಹಿಂದೂ ಧರ್ಮ ಲಿಂಗಾಯತ ಧರ್ಮ ಒಂದೇ ನಾವೆಲ್ಲರೂ ಹಿಂದೂಗಳೇ. ಹಿಂದೂ ಎಂಬುವುದು ಮಹಾಸಾಗರ. ಬೌದ್ಧ ಜೈನ್ ಸಿಖ್ ಲಿಂಗಾಯತ ವೈಷ್ಣವ ಎಂಬ ನದಿಗಳಿವೆ. ಅನೇಕ ನದಿಗಳು ಹಿಂದೂ ಎಂಬ ಮಹಾಸಾಗರದಲ್ಲಿ ವಿಲೀನವಾಗಿವೆ ಎಂದು ಹರಿಹರದ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ವಿಜಯಪುರದ ಜ್ಞಾನ ಯೋಗಾಶ್ರಮದಲ್ಲಿ ಮಾತನಾಡಿದ ಅವರು, ಶಂಕರಾಚಾರ್ಯರು, ಮಧ್ವಾಚಾರ್ಯರು, ರಾಮಾನುಜಾಚಾರ್ಯರು, ಗುರುನಾನಕರು, ಜ್ಞಾನೇಶ್ವರರು, ಬಸವಣ್ಣನವರು ಆಯಾ ಕಾಲಘಟ್ಟದಲ್ಲಿ ಅವರವರ ವಿಚಾರಧಾರೆಗಳನ್ನು ಅವರು ಹೇಳಿದರು. ಆ ವಿಚಾರಧಾರೆಗಳೆ ಧರ್ಮಗಳಾದವು ಎಂದು ಹೇಳಿದರು. ರಾಜ್ಯದಲ್ಲಿ 12ನೇ ಶತಮಾನದಲ್ಲಿ ಬಸವಣ್ಣ ಜಗತ್ತಿಗೆ ಹೊಸದನ್ನು ಕೊಟ್ಟರು. ಜಗಜ್ಯೋತಿ ಬಸವೇಶ್ವರರ ವಿಚಾರಧಾರೆಯನ್ನು ಸೀಮಿತ ಮಾಡಬಾರದು.ಯಾವುದೇ ಮಹಾಪುರುಷರ ಅನುಕರಣೆ ಮಾಡುವವರನ್ನು ಟೀಕಿಸಬಾರದು.ನಾವೇ ಶ್ರೇಷ್ಠವೆಂದು ಟೀಕಿಸಬಾರದೆಂದು ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ಒಂದು ಧರ್ಮದ ಆಚರಣೆಗಳನ್ನು ಕೀಳಾಗಿ ಕಾಣುವುದು ಒಳಿತಲ್ಲ ಮತ್ತೊಂದು ತತ್ವಗಳನ್ನು ಸ್ವಚ್ಛವಾಗಿ ಕಾಣಬಾರದು ಎಲ್ಲವೂ ಒಂದೇ ಹಿಂದೂ ಧರ್ಮ ಲಿಂಗಾಯತ ಧರ್ಮ ಎರಡು ಒಂದೇ ಎಂದು ವಿಜಯಪುರದ ಜ್ಞಾನ ಯೋಗಶ್ರಮದಲ್ಲಿ ವಚನಾನಂದ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್…

Read More

ಯಾದಗಿರಿ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಿಎಸ್ಐ ಪರಶುರಾಮ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕೂಡಲೇ ರಾಜ್ಯ ಸರ್ಕಾರ ಈ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಆಗ್ರಹಿಸಿದರು. ಮೃತ ಪರಶುರಾಮ್ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕುವ ಸಾಧ್ಯತೆ ಇದೆ. ಈ ಘಟನೆಯಲ್ಲಿ ಆಡಳಿತ ಪಕ್ಷದ ಶಾಸಕರದ್ದೇ ಕೈವಾಡ ಇರುವುದರಿಂದ ಸರ್ಕಾರ ಕ್ರಮ ಜರುಗಿಸಲು ಹಿಂದುಮುಂದು ನೋಡುತ್ತದೆ. ಸಂವಿಧಾನ, ಅಂಬೇಡ್ಕರ್ ಬಗ್ಗೆ ಸಿಎಂ ಭಾಷಣ ಮಾಡುತ್ತಾರೆ. ಅವರಿಗೇಕೆ ಈ ಕುಟುಂಬದ ರೋದನೆ ಅರ್ಥವಾಗುತ್ತಿಲ್ಲ ಎಂದು ಕಿಡಿ ಕಾರಿದರು. ಪರುಶುರಾಮ್ ಸಾವನ್ನಪ್ಪಿ ಇಂದಿಗೆ 11 ದಿನಗಳು ಕಳೆದಿವೆ. ಈ ಘಟನೆಗೆ ಕಾರಣರಾದ ಅಪರಾಧಿಗಳು ಯಾರೆಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಅವರ ಬಂಧನವಾಗಿಲ್ಲ.…

Read More

ಹಾಸನ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಆದರೆ ಯುವಕ ಎದೆಗುಂದದೆ ಚಿರತೆಯೊಂದಿಗೆ ಹೋರಾಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ಚಿರತೆಯೊಂದಿಗೆ ನವೀನ್ ಎಂಬ ಯುವಕನ ಮೇಲೆ ಏಕಾಏಕಿ ಆತನ ಮೇಲೆ ಚಿರತೆ ದಾಳಿ ಮಾಡಿದೆ. ಕೈಯಲ್ಲಿ ಕುಡುಗೋಲು ಹಿಡಿದಿದ್ದರಿಂದ ಚಿರತೆ ವಿರುದ್ಧ ಸೆಣೆಸಾಡಿದ್ದಾನೆ. ಬಳಿಕ ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿದ್ದಾರೆ. ಜನರನ್ನ ನೋಡಿದ ಚಿರತೆ ಕಾಡಿನೊಳಗೆ ಓಡಿ ಹೋಗಿದೆ. ಗಾಯಗೊಂಡ ನವೀನ್ ಅನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ನವೀನ್​ ದಾಖಲಾಗಿರುವ ಆಸ್ಪತ್ರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಗೋಪನಹಳ್ಳಿ ಕೆರಗೋಡು ಭಾಗದಲ್ಲಿ ಚಿರತೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೂಡಲೇ ಬೋನು ಇಟ್ಟು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಶಿವಮೊಗ್ಗ : ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಇವಳೆ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರದಲ್ಲಿ ನಡೆದಿದೆ. ಹೌದು ಬಂಧಿಸಲು ಹೋಗಿದ್ದಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ರೌಡಿಶೀಟರ್ ಗೆ ಗುಂಡು ಹಾರಿಸಲಾಗಿದೆ.ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ವಿನೋಬನಗರ ಪಿಎಸ್ಐ ಸುನಿಲ್ ಗುಂಡು ಹೊಡೆದಿದ್ದಾರೆ. ಆರೋಪಿ ಭವಿತ್ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಭವಿತ್ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದ್ದು, ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಭವಿತ್ ವಿರುದ್ಧ 7 ಪ್ರಕರಣಗಳು ದಾಖಲಾಗಿವೆ. ಹಲ್ಲೆಗೆ ಒಳಗದ ಕಾನ್ಸ್ಟೇಬಲ್ ಪ್ರಶಾಂತ್ ಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆದಿದ್ದು, ಇದೀಗ ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು, ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು. ಈ ಹಿಂದೆ ನಮ್ಮ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಸಾಮೂಹಿಕ ನಾಯಕತ್ವದಲ್ಲಿಯೇ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಯಡಿಯೂರಪ್ಪ‌ ಸ್ವಜನ ಪಕ್ಷಪಾತ ಮಾಡಿದ್ದಾರೆ. ಬಿಜೆಪಿಯಲ್ಲಿ ಹಿಂದೂತ್ವವೇ ಹೊರಟು ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ 12 ಜನ ಬಿಜೆಪಿ ನಾಯಕರು ಸಭೆ ನಡೆಸಿದ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಸಭೆ ನಡೆಸಿದವರು ಸಂಘಟನೆಯಲ್ಲಿದ್ದು,…

Read More

ಬೆಂಗಳೂರು : ಅನಧಿಕೃತ ಫ್ಲೈಕ್ಸ್ ಬ್ಯಾನರ್ ಅಳವಡಿಕೆ ಸಂಬಂಧ ಇದೀಗ ಹೈಕೋರ್ಟ್ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಜನದಟ್ಟಣೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಫ್ಲೇಕ್ಸ್ ಬ್ಯಾನರ್ ಅಳವಡಿಸದಂತೆ ನಿರ್ದೇಶನ ನೀಡಿದೆ. ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ಅಳವಡಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಇದೇ ವಿಚಾರವಾಗಿ ಮಾಧ್ಯಮಗಳ ವರದಿಯನ್ನು ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಆರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಪ್ರತಿಮಾ ಹೊನ್ನಾಪುರ, ನಗರದಲ್ಲಿ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಬೈಲಾ ಕರಡು ಸಿದ್ಧಪಡಿಸಲಾಗಿದೆ. ಇದಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ಎಲ್ಲ ಆಕ್ಷೇಪಣೆಗಳನ್ನು ಪರಿಗಣಿಸಿ ಅಂತಿಮವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು. ವಕೀಲ ಜಿ.ಆರ್.ಮೋಹನ್ ವಾದಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್‌ಗಳ…

Read More