Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ರಾಜ್ಯದಲ್ಲಿ ಅತ್ಯಾಚಾರ ಕೊಲೆ ಪ್ರಕರಣಗಳ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆಯುತ್ತಿವೆ? ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮರು ಪ್ರಶ್ನಿಸಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವಾಗಿ ರಾಜ್ಯದಲ್ಲಿ ಎಲ್ಲಿ ರೇಪ್ & ಕೊಲೆ ಹಲವಾರು ಪ್ರಕರಣಗಳು ಆಗುತ್ತಿವೆ? ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದ್ದ ಕೊಲೆ ಪ್ರಕರಣಗಳಿಗಿಂತಲೂ ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿದೆ. ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಮಹತ್ವದ ಜಾತಿ ಗಣತಿ ಜಾರಿ ಸಂಬಂಧ ಜಟಾಪಟಿ ನಡೆಯುತ್ತಿದ್ದರೆ, ಇನ್ನೊಂದು ಕಡೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ನಾನು 2028 ರಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು 2028ರ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮಹಾನ್ ನಾಯಕ ಅಲ್ಲ. ಈಗ ಸಿಎಂ ಕ್ಯಾಂಡಿಡೇಟ್ ಅಲ್ಲ. ಆದರೆ 2028ಕ್ಕೆ ಮುಖ್ಯಮಂತ್ರಿಯಾಗುವ ಆಸೆಯನ್ನು ಇಟ್ಟುಕೊಂಡಿದ್ದೇನೆ. ಈಗ ನಾನೇನು ಒತ್ತಡ ಹಾಕುತ್ತಿಲ್ಲ ನಮ್ಮದೇನಿದ್ದರೂ 2028ಕ್ಕೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಇನ್ನು ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮುಂದೂಡಿದ ವಿಚಾರವಾಗಿ, ಮಾತನಾಡಿದ ಸತೀಶ್ ಜಾರಕಿಹೊಳಿ, ಈ ವಿಷಯದ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಕೆಲವರು ತಮ್ಮ ಅಭಿಪ್ರಾಯ ಹೇಳುತ್ತಿದ್ದಾರೆ. ತರಾತುರಿ ಇಲ್ಲ ಎಲ್ಲರ ಅಭಿಪ್ರಾಯ ಪಡೆದು ಜಾತಿಗಣತಿ ಜಾರಿ ಮಾಡಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು. ಇನ್ನು ರಾಮನಗರ…
ಮೈಸೂರು : ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸೊಸೆಗೆ ಮಕ್ಕಳು ಆಗಿಲ್ಲ ಎಂಬ ಕಾರಣಕ್ಕೆ ಕಲ್ಲಿನಿಂದ ಜಜ್ಜಿ ಅತ್ತೆ ಸೊಸೆಯನ್ನು ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಇದೀಗ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಗೃಹಿಣಿ ಒಬ್ಬರು ಮಕ್ಕಳಾಗದಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಂಜನಗೂಡು ತಾಲ್ಲೂಕಿನ ಕರಳಪುರದಲ್ಲಿ ಶ್ರೀಕಾಂತ ಅವರ ಮಡದಿ ಮಹಾದೇವಿ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.4 ವರ್ಷಗಳ ಹಿಂದೆ ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವ ಶೆಟ್ಟಿ ಅವರ ಮಗಳು ಮಹಾದೇವಿಯನ್ನು ಕರಳಪುರ ಗ್ರಾಮದ ದೇವಶೆಟ್ಟಿ ಅವರ ಮಗ ಶ್ರೀಕಾಂತನೊಡನೆ ವಿವಾಹವಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಸುನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣಕನ್ನಡ : ನಿನ್ನೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರು ಸಾವನ್ನಪ್ಪಿದ್ದರು. ಇದೀಗ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದ್ದು, ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಪತ್ನಿಯ ಸೀಮಂತದ ದಿನದಂದೆ ಸಾವನ್ನಪ್ಪಿದ ಪತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ತಿಳಿದುಬಂದಿದೆ. ನಿನ್ನೆ ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಡರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸೂತಕ ಆವರಿಸಿದೆ.
ಹಾವೇರಿ : ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬೇಲ್ ಸಿಕ್ಕ ಕೂಡಲೇ ಪ್ರಕರಣದ ಆರೋಪಿಗಳಿಂದ ರೋಡ್ ಶೋ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ರೋಡ್ ಶೋ ನಡೆದಿದೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳಿಂದ ಇದೀಗ ರೋಡ್ ಶೋ ನಡೆಸಲಾಗಿದೆ. ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೂ ಇದೀಗ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20 ಕ್ಕೂ ಹೆಚ್ಚು ಹಿಂಬಾಲಕರ ಜೊತೆಗೆ ಮೆರವಣಿಗೆ ನಡೆಸಿದ್ದಾರೆ. ಕಳೆದ 2024 ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ಬೇಲ್ ಪಡೆದುಕೊಂಡು ಹೊರಬಂದ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. ರೋಡ್ ಶೋ ನಡೆಸಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲ್ ಷರತ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಇಂದು ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಪ್ರಮುಖ ಆರೋಪಿಗಳಲ್ಲಿ…
ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿರುವ ವಿಶಾಖಪಟ್ಟಣಂನಲ್ಲಿರುವ ಉಕ್ಕಿನ ಸ್ಥಾವರಕ್ಕೆ ಬೆಂಕಿ ಬಿದ್ದಿದೆ. ವಿಶಾಖಪಟ್ಟಣಂ ನಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಇದುವರೆಗೂ ನಿಖರವಾದ ಕಾರಣ ಇನ್ನು ಗೊತ್ತಾಗಿಲ್ಲ. ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ, ವಿಶೇಷವಾಗಿ ಉಕ್ಕು ಕರಗುವ ಕೇಂದ್ರ -2 (SMS-2) ವಿಭಾಗದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆ ತಿಳಿದ ಬಳಿಕ ತಕ್ಷಣ ತುರ್ತು ಸೇವೆಗಳು, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದು ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ತಾಯಿ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ತಾಯಿ ಆಸ್ಮ ಬಾನು (30) ಹಾಗೂ ಮಹಮ್ಮದ್ ಕಬೀರ್ (3) ಮೃತ ದುರ್ದೈವಿಗಳು. ಇನ್ನು ಪತಿ ಖಲಂದರ್ ಪಾಶಾ ಮತ್ತು ಮತ್ತು ಇನ್ನೊರ್ವ ಮಗು ಪ್ರಾಣಾಯಾಪಾಯದಿಂದ ಪಾರಾಗಿದ್ದಾರೆ.ತರೀಕೆರೆಯ ಬುಕ್ಕಂಬೂದಿಯಿಂದ ಸಾಗರಕ್ಕೆ ತೆರಳುತ್ತಿರುವಾಗ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ವೇಗವಾಗಿ ಖಾಸಗಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ತಕ್ಷಣ ತಾಯಿ ಮಗವನ್ನು ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಗೃಹಲಕ್ಷ್ಮಿ ಹಣ ನಾವು ತಿಂಗಳಿಗೆ ಹಾಕುತ್ತೇವೆ ಅಂತ ಯಾವತ್ತಾದರೂ ಹೇಳಿದ್ದೆವಾ? ನೀವು ಟ್ಯಾಕ್ಸ್ ಕಟ್ಟುತ್ತಿದ್ದರೆ, ಅದರಂತೆ ಗೃಹಲಕ್ಷ್ಮಿ ಹಣ ನೀಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಮಧ್ಯೆ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಗೃಹಲಕ್ಷ್ಮಿ ಸಂಘ ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಗುಂಪುಗಳನ್ನು ರಚಿಸುವ ಶಕ್ತಿ ಸಂಬಂಧ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಗೃಹಲಕ್ಷ್ಮಿ ಸಂಘವನ್ನು ರಚಿಸಲಾಗುವುದು ಎಂದರು. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು…
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಿತು. ಈ ಒಂದು ಸಚಿವ ಸಂಪುಟದಲ್ಲಿ ಮೆಟ್ರೋ 3ನೇ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಇದೀಗ ಅನುಮತಿ ನೀಡಿದೆ. ಈ ವಿಚಾರವಾಗಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಮೆಟ್ರೋ ವಿಚಾರವಾಗಿ ಮೂರನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ 40,424 ಕೋಟಿ ರೂ.ಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಮಾಡುತ್ತಿದ್ದೇವೆ ಎಂದು ಹೇಳಿದರು. ಬಳಿಕ ಬೆಂಗಳೂರಿನಲ್ಲಿ ಅನೇಕ ಸಂಘ ಸಂಸ್ಥೆಗಳು, ದೇವಾಲಯಗಳು ಬಿಡಿಎ ವ್ಯಾಪ್ತಿಯಲ್ಲಿ ನಿವೇಶನ ತೆಗೆದುಕೊಂಡಿದ್ದು, ಅವರಿಗೆ ಒನ್ ಟೈಮ್ ಇನ್ವೆಸ್ಟ್ ಬೆನಿಫಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. 125 ದಿನಗಳ ಒಳಗಾಗಿ ಅವರು ಬಾಕಿಯಿರುವ ತೆರಿಗೆ ಪಾವತಿಸಿದರೆ ಬಡ್ಡಿ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು. ಇನ್ನು ಟನಲ್ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಟೆಂಡರ್ ಕರೆಯುವ ಬಗ್ಗೆ…
ಬೆಂಗಳೂರು : ಸಾಮಾನ್ಯವಾಗಿ ಪ್ರವಾಸಕ್ಕೆ ಹೋದಾಗ ಅರಣ್ಯ ಪ್ರದೇಶಗಳಲ್ಲಿ ರಸ್ತೆಯ ಮೇಲೆ ಆಗಾಗ ಕಾಡುಪ್ರಾಣಿಗಳು ಕಂಡುಬರುತ್ತವೆ. ಈ ವೇಳೆ ಪ್ರಯಾಣಿಕರು ಅವುಗಳ ಫೋಟೋ ತೆಗೆದುಕೊಳ್ಳುವುದು ಅಥವಾ ಅವುಗಳ ಸಮೀಪ ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತಹ ಅಪಾಯಕಾರಿ ಕೆಲಸಕ್ಕೆ ಮುಂದಾಗುತ್ತಾರೆ. ಹಾಗಾಗಿ ಇನ್ಮುಂದೆ ವನ್ಯಜೀವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು ಅವುಗಳ ಜೊತೆಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಹೌದು ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.…














