Author: kannadanewsnow05

ಬೆಂಗಳೂರು : ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್​ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್​ ಕಾರ್ಯಕರ್ತರು ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು. ಈ ವಿಚಾರವಾಗಿ ಚಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಹೌದು ಇತ್ತೀಚಿಗೆ ಚಿತಾಪುರಕ್ಕೆ ಭೇಟಿ ನೀಡಿದಾಗ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಇದರಿಂದ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಕೆರಳಿದ್ದು, ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು.ಅಲ್ಲದೇ ಅವರ ಕಾರಿನ ಮೇಲೆ ಬಣ್ಣ ಎರಚಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಚಲವಾದಿ ನಾರಾಯಣಸ್ವಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ದೂರು ನೀಡಿದ್ದಾರೆ. ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಾಜಕ್ಕೆ ಮನವಿ ಪ್ರಿಯಾಂಕ್ ಖರ್ಗೆ ಅವರನ್ನು…

Read More

ಬಾಗಲಕೋಟೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಾಕಿದ್ದವನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಮೊಹಮ್ಮದ್ ಅಜೀಜ್ ರೋಣ (27) ಎನ್ನುವ ಆರೋಪಿಯನ್ನು ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ತಾಲೂಕಿನ ಕಲಾದಗಿ ಪಟ್ಟಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಫೋಟೋ ಎಡಿಟ್ ಮಾಡಿ ಅವಹೇಳನಕಾರಿಯಾಗಿ ಆರೋಪಿ ಮೊಹಮ್ಮದ್ ಪೋಸ್ಟ್ ಮಾಡಿದ್ದ. ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಎಡಿಟ್ ಮಾಡಿ ಪೋಸ್ಟ್ ಹಾಕಿದ್ದ. ಮೊಹಮ್ಮದ್ ಅಜೀಜ್ ಪ್ರಧಾನ ಮಂತ್ರಿ ಮೋದಿ ಜೈಲಿನಲ್ಲಿ ಬಂಧಿಸಿದ ರೀತಿಯಲ್ಲಿ ಎಡಿಟ್ ಮಾಡಿದ್ದ. ಅಷ್ಟೆ ಅಲ್ಲದೇ ಓವೈಸಿ ಪೊಲೀಸ್ ಅಧಿಕಾರಿ ವೇಷದಲ್ಲಿ ಕೂತಿರುವ ರೀತಿ ಎಡಿಟ್ ಮಾಡಿದ್ದ. ಈ ಹಿನ್ನೆಲೆ ಕಲಾದಗಿ ಪೊಲೀಸರು ಆರೋಪಿ ಮೇಲೆ ಸುಮೋಟೋ ಕೇಸ್ ಹಾಕಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಅಜೀಜ್ ಕಲಾದಗಿ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಸಂಬಂಧ ತಪ್ಪು ಮಾಹಿತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಅಮಿತ್ ಮಾಳವಿಯ ವಿರುದ್ಧದ FIR ಗೆ ಹೈ ಕೋರ್ಟ್ ತಡೆ ನೀಡಿದೆ.ಮಧ್ಯಂತರ ತಡೆ ನೀಡಿ ನ್ಯಾಯಾಧೀಶರಾದ ಎಸ್ ರಾಚಯ್ಯ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ FIR ದಾಖಲಾಗಿತ್ತು. ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಸಂಬಂಧ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ FIR ದಾಖಲಿಸಲಾಗಿತ್ತು. ಇಂದು ವಿಚಾರಣೆ ವೇಳೆ ಪೊಲೀಸರು FIR ತಿದ್ದುಪಡಿ ಮಾಡಿದ್ದಾರೆ. ಸೆಕ್ಷನ್ ತಿದ್ದುಪಡಿ ಮಾಡಿ ಜಾಮೀನು ರಹಿತ ಕೇಸ್ ಹಾಕಿದ್ದಾರೆ. ಹಾಕಿರುವ ಸೆಕ್ಷನ್ ಗಳು ಅನ್ವಯವಾಗುವುದಿಲ್ಲವೆಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದರು. ಬಳಿಕ ಅಮಿತ್ ಮಾಳವಿಯ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ.

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಇಂದು ರಾಜ್ಯದಲ್ಲಿ ಒಂದೇ ದಿನ ಮೂವರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್ ಚಾಲಕ, ಹಾಸನದಲ್ಲಿ ಬಾತ್ ರೂಂನಲ್ಲಿ ಕುಸಿದುಬಿದ್ದು ಯುವತಿ ಸಾವನ್ನಪ್ಪಿದ್ದರೆ, ಕೊಡಗಿನಲ್ಲಿ ಅರಣ್ಯ ಅಧಿಕಾರಿ ಒಬ್ಬರು ಸಾವನ್ನಪ್ಪಿದ್ದಾರೆ. ನಿಂತಲ್ಲೇ ಕ್ಯಾಬ್ ಚಾಲಕ ಕುಸಿದುಬಿದ್ದು ಸಾವು! ಮೊದಲನೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಾಡನೂರಿನ ಕೆ.ಆರ್ ಅಭಿಷೇಕ್ ಎನ್ನುವ ಯುವಕ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಇಂದು ಬಸವೇಶ್ವರನಗರದಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಅಭಿಷೇಕ್ ಸಾವನಪ್ಪಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಸಹ ಮಾರ್ಗ ಮಧ್ಯದಲ್ಲಿ ಅಭಿಷೇಕ್ ಉಸಿರು ಚೆಲ್ಲಿದ್ದಾನೆ. ಬಾತ್ ರೂಂನಲ್ಲೆಕುಸಿದುಬಿದ್ದು ಯುವತಿ ಸಾವು! ಇನ್ನು ಹಾಸನದಲ್ಲಿ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ…

Read More

ಬೆಂಗಳೂರು : ಕೆ ಎಸ್ ಡಿ ಎಲ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರು ಆಯ್ಕೆ ಆಗಿದ್ದಾರೆ. ಪರಭಾಷೆ ನಟಿ ತಮನ್ನಾ ಆಯ್ಕೆಗೆ ಇದೀಗ ಕರ್ನಾಟಕ ರಕ್ಷಣಾ ವೇದಿಕೆ ಅಸಮಾಧಾನ ಹೊರಹಾಕಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಈ ಕುರಿತು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ತಮನ್ನಾ ಗೆ 6.20 ಕೋಟಿಯಷ್ಟು ವ್ಯಯಿಸಿರುವುದು ಆಕ್ಷೇಪಾರ್ಹ. ಈ ಹಣವನ್ನು ಕನ್ನಡಿಗರ ಒಳಿತಿಗಾಗಿ ಬಳಕೆ ಮಾಡಬಹುದಿತ್ತು. ಕೂಡಲೇ ತಮನ್ನಾ ಆಯ್ಕೆಯನ್ನು ಸರ್ಕಾರ ಹಿಂಪಡೆಯಬೇಕು. ಕನ್ನಡ ಜನಪ್ರಿಯ ನಟ ನಟಿಯರನ್ನೆ ರಾಯಭಾರಿಯನ್ನಾಗಿ ಮಾಡಿ. ಕನ್ನಡಿಗರ ಭಾವನೆಗೆ ಧಕ್ಕೆ ಎಂದು ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಭಾರಿಯಾಗಿ ತಮನ್ನಾ ಆಯ್ಕೆಗೆ ಸಚಿವ ಎಂ.ಬಿ ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದು, ಕನ್ನಡ ಚಲನಚಿತ್ರೋದ್ಯಮದ ಬಗ್ಗೆ KSDL ಗೆ ಗೌರವವಿದೆ ಕೆಲವು ಕನ್ನಡ ಚಲನಚಿತ್ರಗಳು ಸ್ಪರ್ಧೆಯನ್ನು ನೀಡುತ್ತಿವೆ. ಬಾಲಿವುಡ್ ಚಲನಚಿತ್ರಗಳಿಗೂ ಸ್ಪರ್ಧೆಯನ್ನು ನೀಡುತ್ತಿವೆ. ಮೈಸೂರು ಸ್ಯಾಂಡಲ್ ಕರ್ನಾಟಕದಲ್ಲಿ ಉತ್ತಮ ಬ್ರಾಂಡ್. ಕರ್ನಾಟಕ ಮಾರುಕಟ್ಟೆಯಿಂದ ಹೊರಗೆ ಪರಿಚಯಿಸಬೇಕು ಹೀಗಾಗಿ ತಮನ್ನಾ ಅವರನ್ನು ಆಯ್ಕೆ ಮಾಡಲಾಗಿದೆ…

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ರಸ್ತೆಯ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಯುವಕ ಸಾಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಾಂಡೆಭಾಗದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾಂತೇಶ್ ಬಾನಾವಳಿಕರ್ (28) ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅವರ್ಸಾದ ದಾಂಡೆಭಾಗ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅಂಗಡಿಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಒಂದು ದುರಂತ ನಡೆದಿದೆ.ಘಟನೆ ಕುರಿತಂತೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆ ಆಗುತ್ತಿದ್ದು ಇದುವರೆಗೂ ಮಹಾ ಮಳೆಗೆ ಹಲವರು ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನ ಕೋರಮಂಗಲದ ಪ್ರಿಂಟೋ ಜಂಕ್ಷನ್ ಬಳಿಯ 60 ಅಡಿ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ದ್ವಿಚಕ್ರ ವಾಹನ ಸವಾರರ ಮೇಲೆ ಮರದ ಕೊಂಬೆ ಬಿದ್ದು, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಮೂಡಲ ಗಿರಿಯಪ್ಪ (48) ಎಂದು ಗುರುತಿಸಲಾಗಿದೆ. ಗಾಯಗೊಂಡವರು ರಮೇಶ್ ಎಂದು ತಿಳಿದುಬಂದಿದೆ. ಇವರಿಬ್ಬರೂ ಆಡುಗೋಡಿಯ ನಿವಾಸಿಗಳಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.ಮಧ್ಯಾಹ್ನ 2.45ರ ಸುಮಾರಿಗೆ ಗಿರಿಯಪ್ಪ ಮತ್ತು ರಮೇಶ್ ಕೋರಮಂಗಲ 5ನೇ ಬ್ಲಾಕ್‌ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮರದ ಕೊಂಬೆ ಗಿರಿಯಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳು ರಮೇಶ್ ಅವರನ್ನು ರಕ್ಷಿಸಿ, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ರಮೇಶ್ ನೀಡಿರುವ ದೂರಿನ ಆಧಾರದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು,…

Read More

ಕೊಪ್ಪಳ : ಕೊಪ್ಪಳದಲ್ಲಿ ಇಂದು ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಇಂದು ಲಾರಿಯಿಂದ ಪೈಪ್ ಇಳಿಸುವಾಗ ಪೈಪ್ ಗಳು ಕಾರ್ಮಿಕರ ಮೇಲೆ ಬಿದ್ದಿವೆ. ಈ ವೇಳೆ ಪೈಪ್ ಗಳ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿಯ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೆ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಎಂದು ವಿಧಾನ ಸೌಧದಲ್ಲಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Read More

ಕೋಲಾರ : ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆ, ಪತಿಯೊಬ್ಬ ತನ್ನ ಸಹಚರರ ಜೊತೆಗೂಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಪ್ರಶಾಂತನಗರದಲ್ಲಿ ಈ ಒಂದು ಕೊಲೆ ಘಟನೆ ನಡೆದಿದೆ. ಇರ್ಫಾನ್ ಹಾಗೂ ಆತನ ಸಹಚರರಿಂದ ಅಮೀನ್ (30) ಎನ್ನುವ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಅಮೀನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವನು ಎಂದು ತಿಳಿದುಬಂದಿದೆ. ಇರ್ಫಾನ್ ಪತ್ನಿ ಹುಸ್ನಾ ಜೊತೆಗೆ ಅಮಿನ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗುತ್ತಿದೆ. ಈ ವಿಚಾರವಾಗಿ ಹುಸ್ನಾ ಅಕ್ಕ ರಾಜಿ ಪಂಚಾಯಿತಿಯ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಮಚ್ಚಿನಿಂದ ಕೊಚ್ಚಿ ಇರ್ಫಾನ್ ಮತ್ತು ಸಹಚರರು ಅಮೀನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More