Author: kannadanewsnow05

ಮಂಡ್ಯ : ಮುಡಾ ಹಗರಣಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್  ಪಾದಯಾತ್ರೆ ಹಮಿಕೊಂಡಿದ್ದು, ಇದೀಗ 5ನೇ ದಿನವಾದ ಇಂದು ಮಂಡ್ಯ ಜಿಲ್ಲೆಯನ್ನು ತಲುಪಿತು. ಕುಮಾರಸ್ವಾಮಿ ವಿರುದ್ಧ ಹಗರಣಗಳನ್ನು ಬಿಚ್ಚಿಡುತ್ತೇನೆ ಎಂದು ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಎಚ್ ಡಿ ಕುಮಾರಸ್ವಾಮಿ ಅವರದು ಏನೇನಿದೆಯೋ ಕೆಲವು ಬಿಚ್ಕೊಂಡು ನಿಂತ್ಕೊಳಿ ಏನು ತೊಂದರೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಇಂದು ಪಾದಯಾತ್ರೆ ಮಾಡುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಚ್ಚೆಗಳ ಬಗ್ಗೆ ಮಾತಾಡಬಾರದು ಅಂತ ಜನ ಸಲಹೆ ಕೊಡುತ್ತಾರೆ. ನಾನು ಮಾತನಾಡಬಾರದು ಅಂತಿದ್ದೆ. ನಿನ್ನೆ ಹೇಳಿಕೆ ಕುರಿತು ಒಂದು ವಿಡಿಯೋ ಪ್ಲೇ ಮಾಡಿದ್ದಾರೆ. ಅದಕ್ಕೆ ನಾನು ಸಿಡಿ ಶಿವು ಅಂತ ಹೇಳಿದ್ದು. ಎಲ್ಲೋಗುತ್ತೆ ವಿಡಿಯೋ ಬಿಡುವ ಚಾಳಿ ಎಂದು ಎಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದರು. ಹಿಂದೆ ನಿಮ್ಮ ಸಿದ್ದರಾಮಯ್ಯ ಕಾಂಗ್ರೆಸ್ ಬಗ್ಗೆ ಏನೆಲ್ಲ ಮಾತಾಡಿಲ್ಲ? ಅದನ್ನೆಲ್ಲ ಮರೆತಿದ್ದೀರಾ? ಸಿದ್ದರಾಮಯ್ಯ ರಾಜೀನಾಮೆ ಕೊಡುವುದು…

Read More

ರಾಯಚೂರು : ಅವರಿಬ್ಬರದು 5 ವರ್ಷದ ಪ್ರೀತಿ. ಆದರೆ ಯುವತಿಯು ಪ್ರೀತಿಸಿದ ಯುವಕನಿಗೆ ಕೈಕೊಟ್ಟು, ಮನೆಯವರು ನೋಡಿದ ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಹೌದು ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದ್ದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. 5 ವರ್ಷದಿಂದ ಪ್ರೀತಿಸುತ್ತಿದ್ದವಳು ಕೈಕೊಟ್ಟಿದ್ದಕ್ಕೆ ಮನನೊಂದು ಇದೀಗ ವರುಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನಂತರ ವರುಣ್ ನೇಣಿಗೆ ಶರಣಾಗಿದ್ದಾನೆ. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ. 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ. ಈ ಕ್ರಮದ ನಂತರ ಇಡೀ ದೇಶ ವಿನೇಶ್ ಜೊತೆ ನಿಂತಿದೆ. ಹೌದು ವಿನೇಶ್ ಪೊಗಟ್ ಅನರ್ಹತೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, ಪ್ಯಾರಿಸ್ ಒಲಂಪಿಕ್ಸ್‌ನ ದುರದೃಷ್ಟಕರ. ಘಟನೆಯ ನಂತರ ನನ್ನ ಹೃದಯ ಭಾರವಾಗಿದೆ. ವಿನೇಶ್ ಪೊಗಟ್ ನಿಮ್ಮ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸಮರ್ಪಣೆ ಯಾವಾಗಲೂ ರಾಷ್ಟ್ರವನ್ನು ಪ್ರೇರೇಪಿಸುತ್ತದೆ. ನೆನಪಿಡಿ, ಈ ಕ್ಷಣವು ನಿಮ್ಮ ಲೆಕ್ಕವಿಲ್ಲದಷ್ಟು ಸಾಧನೆಗಳನ್ನು ಮತ್ತು ನೀವು ಭಾರತಕ್ಕೆ ತಂದ ಹೆಮ್ಮೆಯನ್ನು ಕಡಿಮೆ ಮಾಡುವುದಿಲ್ಲ. ವಿನೇಶ್ ನೀವು ಬಲವಾಗಿ ಸದೃಢವಾಗಿರಿ. ನಾವು ನಿಮ್ಮನ್ನು ಮತ್ತು ನಿಮ್ಮ ಅದ್ಭುತ ಪ್ರಯಾಣವನ್ನು ನಂಬುತ್ತೇವೆ. ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ! ಎಂದು ಸಿಎಂ ಟ್ವೀಟ್…

Read More

ಹಾವೇರಿ: ಮಳೆಗಾಲದ ಸಂದರ್ಭದಲ್ಲಿ ಅದರಲ್ಲೂ ರೈತರು ಬಹಳ ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಇದೀಗ ಪಂಪ್​ ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ – ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಸಂಭವಿಸಿದೆ. ಹೌದು ಭತ್ತದ ಬೆಳೆಗೆ ನೀರು ಹಾಯಿಸಲು ಪಂಪ್​ ಸೆಟ್ ದುರಸ್ತಿ ಮಾಡಲು ತಂದೆ ಕರಬಸಪ್ಪ ಮಗ ದರ್ಶನ್ ಮುಂದಾಗಿದ್ದರು.ಈ ವೇಳೆ ಮೋಟಾರ್ ಆನ್​ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್​ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ತಂದೆ ಮಗನ ಸಾವಿನ ಸುದ್ದಿ ಕುಟುಂಬಕ್ಕೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಹುದೊಡ್ಡ ಸಾಕ್ಷಿ ಸಿಕ್ಕಿದ್ದು FSL ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ತನಿಖೆಯಲ್ಲಿ ಪೊಲೀಸರಿಗೆ ದರ್ಶನ್ ವಿರುದ್ದ ಮತ್ತೊಂದು ಬಹುದೊಡ್ಡ ಸಾಕ್ಷಿ ಸಿಕ್ಕಿದೆ. ದರ್ಶನ್ ಕೊಲೆಯಲ್ಲಿ ಭಾಗಿಯಾಗಿರುವ ಸಂಬಂಧ ಎಫ್ ಎಸ್ ಎಲ್ ವರದಿ ಬಂದಿದ್ದು, ರೇಣುಕಾಸ್ವಾಮಿ ದೇಹದ ರಕ್ತದ ಕಲೆಗಳು ದರ್ಶನ್ ಬಟ್ಟೆಗಳ ಮೇಲೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಮಹಜರು ವೇಳೆ ವಶಪಡಿಸಿಕೊಂಡಿದ್ದ ದರ್ಶನ್ ಬಟ್ಟೆಯನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದರು. ಎಫ್ ಎಸ್ ಎಲ್ ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ…

Read More

ಕೊಪ್ಪಳ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮೃತ ಪರಶುರಾಮ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಪರಶುರಾಮ ಪತ್ನಿಗೆ ಸರಕಾರಿ ಕೆಲಸ ಹಾಗೂ ಅವರ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದರು. ಹೌದು ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಸೋಮನಾಳ ಗ್ರಾಮದ ಮೃತ ಪರಶುರಾಮ ಮನೆಗೆ ಭೇಟಿ ನೀಡಿದ ಅವರು ಪರಶುರಾಮ್ ತಂದೆ ತಾಯಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪರಶುರಾಮ್ ಕುಟುಂಬಕ್ಕೆ ಒಟ್ಟು 50 ಲಕ್ಷ ಹಣ ನೀಡುತ್ತೇವೆ ಎಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಜಿ.ಪರಮೇಶ್ವರ್ ತಿಳಿಸಿದರು. ಪರಶುರಾಮ್ ಅವರ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ.ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಥವಾ ಜೆಸ್ಕಾಂ ನಲ್ಲಿ ಕೊಡುವಂತೆ ಕೇಳಿದ್ದಾರೆ.…

Read More

ಕೋಲಾರ : ರಾಜ್ಯದಲ್ಲಿ ಭಾರಿ ಮಳೆ ಮುಂದುವರೆದಿದ್ದು ಇದೀಗ ಕೋಲಾರದಲ್ಲಿ ಸುರಿದ ಅಪಾರ ಪ್ರಮಾಣದ ಮಳೆಯಿಂದ ಕೋಲಾರದ ಅರಹಳ್ಳಿ ರೈಲ್ವೇ ಅಂಡರ್ ಪಾಸ್, ಈ ವೇಳೆ ಕಾರದ್ದು ನೀರಿನಲ್ಲಿ ಸಿಲುಕಿ ಕಾರ್ಮಿ ಚಾಲಕ ಪರದಾಟ ನಡೆಸುವ ಘಟನೆ ನಡೆದಿದೆ. ಹೌದು ಭಾರೀ ಮಳೆಗೆ ಕೋಲಾರದ ಅರಹಳ್ಳಿ ರೈಲ್ವೇ ಅಂಡರ್ ಪಾಸ್ ತುಂಬಿಕೊಂಡಿದ್ದು, ಬಸ್, ಕಾರು ಸೇರಿದಂತೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯ ಅಂಡರ್ ಪಾಸ್​ನಲ್ಲಿ ಮಳೆಯಿಂದಾಗಿ ಸಂಪೂರ್ಣವಾಗಿ ನೀರು ತುಂಬಿ ಹರಿಯುತ್ತಿದೆ. ಕಳೆದ ಒಂದು ಗಂಟೆಯಿಂದ ಸುರಿದ ಮಳೆಗೆ ಕೋಲಾರ ನಗರದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಇದರಿಂದ ಹಲವೆಡೆ ಯುಜಿಡಿ ತುಂಬಿ ಹರಿಯುತ್ತಿದೆ. ಇನ್ನು ದಿಢೀರ್​ ಮಳೆಗೆ ವಾಹನ ಸವಾರರು ಕಂಗಾಲಾಗಿದ್ದಾರೆ.

Read More

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಆಡುಗೋಡಿ ಎಂಬಲ್ಲಿ ನಡೆದಿದೆ. ಆಡುಗೋಡಿಯ ಬಸವಣ್ಣ ಟೆಂಪಲ್ ಲೇಔಟ್ ನಿವಾಸಿ ತನಿಷಾ ಚೌಧರಿ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆದರೆ ತನಿಷಾ ಪಾಲಕರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಆಕೆಯ ಪಾಲಕರು, ಅಳಿಯ ತರುಣ್ ಚೌಧರಿ ಮತ್ತು ಆತನ ಪಾಲಕರ ವಿರುದ್ಧ ವರದಕ್ಷಿಣೆ ಹಾಗೂ ಕಿರುಕುಳ ಆರೋಪದಡಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ ಮೂಲಕ ತರುಣ್ ಚೌಧರಿ ಆಡುಗೋಡಿಯಲ್ಲಿ ಚಿನ್ನದ ಅಂಗಡಿ ಇಟ್ಟುಕೊಂಡಿದ್ದು, 2022 ರಲ್ಲಿ ರಾಜಸ್ಥಾನದ ಮೂಲದ ತನಿಷಾರನ್ನು ಮದುವೆಯಾಗಿದ್ದ. ಆರಂಭದಲ್ಲಿ ಅನ್ನೋನ್ಯವಾಗಿದ್ದ ದಂಪತಿಗಳ ನಡುವೆ ಇತ್ತೀಚೆಗೆ ಕೌಟುಂಬಿಕ ವಿಚಾರ ಹಾಗೂ ಮಕ್ಕಳಾಗದ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ತರುಣ್ ಚೌಧರಿ ಹಾಗೂ ಆತನ ಕುಟುಂಬ ಸದಸ್ಯರು ಆಕೆಗೆ ಹಿಂಸೆ ನೀಡುತ್ತಿದ್ದರು ಎಂದು ಹೇಳಲಾಗಿದೆ. ಅದರಿಂದ…

Read More

ಬೆಂಗಳೂರು : ಗೌರವಕ್ಕೆ ಧಕ್ಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇದೀಗ ಬೆಂಗಳೂರಿನ ಪರಸ್ ಗೊಯಲ್ಸ್ ಕಂಪನಿ ಮಾಲೀಕ ರೋಮನ್ ಪರಸ್ ವಿರುದ್ಧ ಪೀಣ್ಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಹೌದು ಈ ಕುರಿತಂತೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಗೆ ಮಹಿಳೆ ದೂರು ಸಲ್ಲಿಸಿದ್ದಾರೆ. ರೋಮನ್ ಗೊಯಲ್ ವಿರುದ್ಧ ಮಹಿಳಾ ಉದ್ಯೋಗಿ ದೂರು ಸಲ್ಲಿಸಿದ್ದಾರೆ. ರೋಮನ್ ಗೋಯಲ್ ಪರಸ್ ಗೋಯಲ್ ಖಾಸಗಿ ಕಂಪನಿ ಮಾಲೀಕರು ಎಂದು ಹೇಳಲಾಗುತ್ತಿದೆ. ಕಂಪನಿ ಮಾಲೀಕನ ವಿರುದ್ಧ ಕಿರುಕುಳದ ಆರೋಪದ ಅಡಿ ಇದೀಗ ಮಹಿಳೂರು ಸಲ್ಲಿಸಿದ್ದಾರೆ.ಕಂಪನಿ ಉದ್ಯೋಗಿ ಶುಭಾಂಗಿಣಿ ನಾಯರ್ ಎನ್ನುವರು ದೂರು ದಾಖಲಿಸಿದ್ದಾರೆ. ತನ್ನ ಮನೆಯ ಗೇಟ್ ಬಳಿ ಗಲಾಟೆ ಮಾಡುತ್ತಿದ್ದಾನೆಂದು ಆರೋಪಿಸಿ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಮಂಗಳೂರು : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ 13 ವರ್ಷದ ಬಾಲಕಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಜಿಲ್ಲೆಯ ಹೊರಭಾಗದ ಜೋಕಟ್ಟೆ ಎಂಬ ಸ್ಥಳದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ ಕಗ್ಗೊಲೆ ನಡೆದಿದೆ ಚಿಕಿತ್ಸೆ ಪಡೆಯಲು ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಆಕೆಯನ್ನು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More