Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಗಾಂಜಾ ಮತ್ತಿನಲ್ಲಿ ಪುಂಡನೋರ್ವ ಕರ್ತವ್ಯನಿರತ ಪೊಲೀಸರ ಮೇಲೆಯೇ ಡ್ರ್ಯಾಗರ್ನಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಬೇಲೂರು -ಹಿರೇಮಗಳೂರು ರಸ್ತೆಯಲ್ಲಿ ಘಟನೆ ನಡೆದಿದೆ. ಹೌದು ಸಗನೀಪುರದ ಕೌಶಿಕ್ ಎಂಬುವವ ಪುಂಡಾಟ ನಡೆಸಿದ್ದು, ಎಣ್ಣೆ-ಗಾಂಜಾ ದಾಸನಾಗಿದ್ದ ವ್ಯಕ್ತಿ. ಗಾಂಜಾ ಸೇವಿಸಿ ಮತ್ತಿನಲ್ಲಿ ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ರಾಡು ಡ್ರ್ಯಾಗರ್ನಿಂದ ಇರಿದು ಹಲ್ಲೆ ಮಾಡುತ್ತಿದ್ದ ಪಾತಕಿ. ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಆತಂಕ ಸೃಷ್ಟಿಸಿದ್ದ. ಈ ವೇಳೆ ಸ್ಥಳೀಯರು ಆತನ ಪುಂಡಾಟಕ್ಕೆ ಬೆಟ್ಟಿ ಬಿದ್ದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಅವರ ಮೇಲು ಈತ ಹಲ್ಲೆ ನಡೆಸಲು ಮುಂದಾಗಿದ್ದ, ಈ ವೇಳೆ ಪೆಟ್ರೋಲ್ ಬಂಕಿ ನಿಂದ ಸಿಬ್ಬಂದಿಗೆ ಚಾಕುವಿನಿಂದ ಇರದಿದ್ದಾನೆ ಎನ್ನಲಾಗಿದೆ.ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಇದೀಗ ಬೆಂಗಳೂರಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು,ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ತಿಳಿಸಿದರು. ಪಾದಯಾತ್ರೆಯ ನಾಲ್ಕನೇ ದಿಂನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1,200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1,95,000 ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ ಎಂದು ವಿಜಯೇಂದ್ರ ಟೀಕಿಸಿದರು. ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್…
ಕೋಲಾರ : ಕೋಲಾರದಲ್ಲಿ ದುಷ್ಕರ್ಮಿಗಳು ಹಾಡು ಹಗಲೇ ಒಂದು ಕೋಟಿಗೂ ಅಧಿಕ ಹಣವನ್ನು ದರೋಡೆ ಮಾಡಿರುವ ಘಟನೆ ನಡೆದಿದ್ದು ಕಾರಿನ ಗಾಜು ಒಡೆದು ಸುಮಾರು 1.60 ಲಕ್ಷ ಹಣವನ್ನು ದೋಚಿರುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದೆ. ಹೌದು ಕಾರಿನ ಗಾಜು ಒಡೆದು 1.60 ಲಕ್ಷ ಹಣವನ್ನು ದೋಚಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಬಸ್ ಡಿಪೋ ಎದುರುಗಡೆ ಕಾರು ನಿಲ್ಲಿಸಿದಾಗ ದರೋಡೆ ಮಾಡಲಾಗಿದೆ. ಬೆಂಗಳೂರಿನ ಗೋಪಾಲಕೃಷ್ಣ ಎಂಬುವರ ಹಣ ದರೋಡೆ ಮಾಡಿದ ಖದೀಮರು, ಗೋಪಾಲಕೃಷ್ಣ ಅವರು ಪ್ಲೈವುಡ್ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ. ಈ ವೇಳೆ ಸ್ಥಳೀಯ ಮಳಿಗೆಗಳಲ್ಲಿ ಕಲೆಕ್ಷನ್ ಮಾಡಿ ಹಣ ಇಟ್ಟಿದ್ದರು. ಮಧ್ಯಾಹ್ನ ಊಟಕ್ಕೆ ಕಾರು ನಿಲ್ಲಿಸಿ ಹೋದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದು, ಇದೀಗ ಥಾವರ್ ಚೆಂದ್ ಗೆಹ್ಲೋಟ್ ಅವರು ದೆಹಲಿಯಿಂದ ವಾಪಸ್ ಬರುತ್ತಿದ್ದಂತೆಯೇ ಅಬ್ರಾಹಂ ರಾಜ್ಯಪಾಲರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ,ನಾನು ಹಾಕಿದ ಪ್ರಾಸಿಕ್ಯೂಷನ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಕೊಟ್ಟಿದ್ದರು. ಆದ್ರೆ, 3 ಗಂಟೆ ಕ್ಯಾಬಿನೆಟ್ ಸಭೆ ನಡೆಸಿ ಗರ್ವನರ್ ನೋಟಿಸ್ ಕೊಟ್ಟಿದ್ದು ತಪ್ಪು ಅಂತಾರೆ. ಟಿ. ಜೆ ಅಬ್ರಹಾಂ ಸರಿಯಿಲ್ಲ ಅಂತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಸರಿಯಿದೆ, ಆದರೆ ಟಿ.ಜೆ ಅಬ್ರಹಂ ಸರಿಯಲ್ಲ ಅಂತಾರೆ. ನನ್ನ ಬಳಿ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ರು ಎಂದರು. ಸಾಕಷ್ಟು ವಿವರಣೆ ಕೊಟ್ಟಿದ್ದೇನೆ. ಆದಷ್ಟು ಶೀಘ್ರದಲ್ಲಿ ರಾಜ್ಯಪಾಲರು ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ಎರಡನೇ ಶೋಕಾಸ್ ನೊಟೀಸ್…
ಧಾರವಾಡ : ಕಳೆದ ಜನೆವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ 19 ಆರೋಪಿಗಳ ಪೈಕಿ 10 ಮಂದಿಗೆ ಇಂದು ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಆರೋಪಿಗಳಾದ ಇಮ್ರಾನ್ ಜೇಕಿನಕಟ್ಟಿ (ಎ-5), ರೆಹಾನ್ ವಾಲೀಕಾರ (ಎ-6), ಮುಫೀದ್ ಓಣಿಕೇರಿ (ಎ-9), ಇಬ್ರಾಹಿಂ ಬಂಕಾಪುರ (ಎ-10), ಇಸ್ಮಾಯಿಲ್ ಹುಬ್ಬಳ್ಳಿ (ಎ-12), ನಿಯಾಜ್ ದರ್ಗಾ (ಎ- 14), ಮತ್ತು ಮೊಹಮ್ಮದ್ ಸಾದಿಕ್ ಕುಸನೂರ್ (ಎ-16), ಇಸ್ಮಾಯಿಲ್ ಓಣಿಕೇರಿ (ಎ-17), ಆಸಿಫ ಖಾನ್ ಪಯಾನ್ ಖಾನವರ್ (ಎ-18), ಮುಜಾಮಿಲ್ ಇಮ್ಮುಸಾಬನವರ್ (ಎ-19) ಎಂಬವರಿಗೆ ಜಾಮೀನು ಮಂಜೂರಾಗಿದೆ. ಜನವರಿ 11ರಂದು ಹಾನಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 19 ಆರೋಪಿಗಳ ಪೈಕಿ 10 ಮಂದಿಗೆ 2 ಲಕ್ಷ ರೂ ಶ್ಯೂರಿಟಿಗಳೊಂದಿಗೆ ಜಾಮೀನು ಮಂಜೂರಾಗಿದೆ.ವಿಚಾರಣೆಗೆ ನಿಯಮಿತವಾಗಿ ಹಾಜರಿರಬೇಕು. ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ. ಇನ್ನು, ಪ್ರಕರಣದ 7 ಪ್ರಮುಖ ಆರೋಪಿಗಳಿಗೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ಅಬ್ರಹಾಂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಟಿಜೆ ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹಲ್ಚಲ್ ಎದ್ದಿದೆ. ಇನ್ನು ರಾಜ್ಯಪಾಲರು ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ ಆಗಿದ್ದು. ಇದರ ಬೆನ್ನಲ್ಲೇ ಸಾಮಾಜಿ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇನ್ನೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿದೆ. ಆದ್ರೆ, ಇದೀಗ ರಾಜ್ಯಪಾಲರು ನಿರ್ಣಯ ಅಂಗೀಕಾರ ಧಿಕ್ಕರಿಸಿ ಸಿಎಂ…
ಯಾದಗಿರಿ : ಯಾದಗಿರಿ ಪಿಎಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಸಿಐಡಿ ಅಧಿಕಾರಿಗಳು ಕೇಸ್ ಫೈಲ್ ಪಡೆದಿದ್ದಾಗಿ ಪೊಲೀಸರು ತಿಳಿಸಿದರು ಆದರೆ ಎಫ್ಎಸ್ಎಲ್ ವರದಿ ಬರುವವರೆಗೂ ನಾವು ಕೆ ಎಸ್ ಫೈಲ್ ಪಡೆಯುವುದಿಲ್ಲ ಎಂದು ಹೇಳಿ ಅಧಿಕಾರಿಗಳು ತಿಳಿಸಿದ್ದಾರೆ. ಹೌದು ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗಾಗಿ ಸಿಐಡಿ ಗೆ ವಹಿಸಿತ್ತು. ಈ ವೇಳೆ ಸಿಐಡಿ ಅಧಿಕಾರಿಗಳು ಎಫ್ ಎಸ್ ಎಲ್ ಬರೋವರೆಗೂ ಕೆಸ್ ಫೈಲ್ ಪಡೆಯಲ್ಲ ಎಂದಿದ್ದಾರೆ. ಎಫ್ ಎಸ್ ಎಲ್ ವರದಿ ಜೊತೆ ಕೇಸ್ ಫೈಲ್ ನೀಡಿ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರಣಕ್ಕಾಗಿ ಪೊಲೀಸರು ಎಫ್ ಎಸ್ ಎಲ್ ವರದಿ ತಂದುಕೊಡಲು ಮುಂದಾಗಿದ್ದಾರೆ. ಎಫ್ ಎಸ್ ಎಲ್ ವರದಿ ತರಲು ಡಿವೈಎಸ್ಪಿ ಹಂತದ ಅಧಿಕಾರಿಯನ್ನು ಇದೀಗ sp ಅವರು ಕಳುಹಿಸಿದ್ದಾರೆ. ಸಾಮಾನ್ಯವಾಗಿ ಎಫ್ ಎಸ್ ಎಲ್ ವರದಿ ಬರಲು 15 ದಿನಗಳು…
ಶಿವಮೊಗ್ಗ : ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ, ಅವಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, 4 ಲಕ್ಷ ರೂಪಾಯಿ ಪಡೆದುಕೊಂಡು ವಂಚನೆ ಮಾಡಿದ ಹಿನ್ನೆಲೆಯಲ್ಲಿ ಇದೀಗ ಶಿವಮೊಗ್ಗದ ಜಿಲ್ಲಾ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಮೋಸ ಜೊತೆಗೆ ಸಂತ್ರಸ್ತೆಯಿಂದ 4 ಲಕ್ಷ ರೂ. ಹಣ ಪಡೆದು ಹಿಂದಿರುಗಿಸದೆ ವಂಚಿಸಿರುವ ಆರೋಪದ ಮೇಲೆ ಬಂಧನವಾಗಿದೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ.ಏಳೆಂಟು ತಿಂಗಳಿಂದ ಮಹಿಳೆ ಜೊತೆ ನಿರಂತರ ಸಂಪರ್ಕದಲ್ಲಿದ್ದ ಶರತ್, ಸಂತ್ರಸ್ತ ಮಹಿಳೆಯು ಮದುವೆಯಾಗು ಎಂದು ಒತ್ತಾಯಿಸಿದ್ದಾಳೆ. ನನಗೆ ಹಣಕಾಸಿನ ಸಮಸ್ಯೆ ಇದೆ. ಅದು…
ಬೆಂಗಳೂರು : ಬೆಂಗಳೂರಿನ ಸಿಎಂ ಕಾನ್ವೆನ್ಶನ್ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ “ಜಿ” ಸಿರೀಸ್ನ ಕಾರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಂದಿದ್ದರು. ಈ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬಸನಗೌಡ ಪಾಟೀಲ ಆಕ್ರೋಶ ಹೊರಹಾಕಿದ್ದಾರೆ. ಹೌದು ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ “ಜಿ” ಸಿರೀಸ್ನ ಕಾರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಬಂದಿರುವ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ “ಜಿ” ಸಿರೀಸ್ನ ಕಾರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಬಂದಿರುವ ವಿಡಿಯೋವನ್ನು ಶಾಸಕ ಯತ್ನಾಳ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಡಿಯೋವನ್ನು ಶಾಸಕ ಯತ್ನಾಳ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಪ್ರತಿಕ್ರಿಯೆ ನೀಡಿದ ಆವರು,…
ಬೆಳಗಾವಿ : ಮುಡಾ 50-50 ಸ್ಕೀಂ ತೆಗೆದುಕೊಂಡು ಬಂದವರೇ ಬಿಜೆಪಿಯವರು. ಅದನ್ನು ರದ್ದು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯ ಕಳಂಕ ರಹಿತ ರಾಜಕಾರಣಿ, ಅವರಿಗೆ ಕಪ್ಪುಮಸಿ ಬಳಿಯಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿ ಕಾರಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ. ಶೋಷಿತ ವರ್ಗದವರ ದೊಡ್ಡ ಧ್ವನಿಯಾದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳನ್ನು ಮುಗಿಸಲು ಹೇಡಿತನದ ರಾಜಕೀಯ ಮಾಡುತ್ತಿದ್ದಾರೆ ಎಂದರು. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಯಾವುದೇ ತಪ್ಪಿಲ್ಲ. ಮುಡಾ ನಿವೇಶನಗಳು ಜೆಡಿಎಸ್ ಶಾಸಕರಿಗೂ ಹಂಚಿಕೆಯಾಗಿದೆ. ಅದಕ್ಕೆ ಹೋರಾಟದಿಂದ ಹಿಂದೇಟು ಹಾಕಿದ್ದ ಜೆಡಿಎಸ್ಗೆ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಜೆಡಿಎಸ್ ಪಾಲ್ಗೊಂಡಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ರಾಜ್ಯಕ್ಕೆ ಅನ್ಯಾಯವಾದಾಗಲೆಲ್ಲ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದಾರೆ.…